1 Chronicles · chapter 10 · verse 14
1 Chronicles 10:14 in Kannada
ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು.
Adakke virodhavaagi nadedu kartanannu vichaarisade yakshi nigaararannu vichaarisalu avarannu hudukiddarinda kartanu avanannu konduhaaki raajyavannu isha yana maganaada daaveedana kadege tirugisidanu.
1 Chronicles 10:14 in English
- King James Version (KJV)
- And enquired not of the LORD: therefore he slew him, and turned the kingdom unto David the son of Jesse.
- World English Bible (WEB)
- and didn’t inquire of the LORD. Therefore he killed him, and turned the kingdom over to David the son of Jesse.
- American Standard Version (ASV)
- and inquired not of Jehovah: therefore he slew him, and turned the kingdom unto David the son of Jesse.
- Bible in Basic English (BBE)
- And not to the Lord: for this reason, he put him to death and gave the kingdom to David, the son of Jesse.
- Darby Translation (DBY)
- and he asked not counsel of Jehovah; therefore he slew him, and transferred the kingdom to David the son of Jesse.
- Webster's Bible (WBS)
- And inquired not of the LORD: therefore he slew him, and turned the kingdom to David the son of Jesse.
- Young's Literal Translation (YLT)
- and he inquired not at Jehovah, and He putteth him to death, and turneth round the kingdom to David son of Jesse.
Read in context
- 12ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನು ತಕ್ಕೊಂಡು ಯಾಬೇಷಿಗೆ ತಂದು ಯಾಬೇಷಿನಲ್ಲಿರುವ ಒಂದು ಏಲಾ ಮರದ ಕೆಳಗೆ ಅವರ ಎಲುಬುಗಳನ್ನು ಹೂಣಿಟ್ಟು ಏಳುದಿವಸ ಉಪವಾಸ ಮಾಡಿದರು.
- 13ಹೀಗೆಯೇ ಸೌಲನು ಕರ್ತನಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಕರ್ತನ ವಾಕ್ಯವನ್ನು ಕೈಕೊಳ್ಳದೆ,ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು.
- 14ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು.
Cross references
- 1 Samuel 15:28 1 ಸಮುವೇಲನು 15:28ಆಗ ಸಮುವೇಲನು ಅವನಿಗೆನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಕರ್ತನು ಈ ಹೊತ್ತು ಕಿತ್ತು ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟನು.
- 1 Samuel 13:14 1 ಸಮುವೇಲನು 13:14ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಕರ್ತನು ನಿನಗೆ ಆಜ್ಞಾಪಿಸಿ ದ್ದನ್ನು ನೀನು ಕೈಕೊಳ್ಳದೆ ಹೋದದರಿಂದ ಆತನು ತನ್ನ ಹೃದಯಕ್ಕೆ ಅನುಸರಣೆಯಾದ ಒಬ್ಬ ಮನುಷ್ಯ ನನ್ನು ಹುಡುಕಿ ಅವನನ್ನು ತನ್ನ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾನೆ ಅಂದನು.
- 1 Samuel 28:17 1 ಸಮುವೇಲನು 28:17ಕರ್ತನು ರಾಜ್ಯವನ್ನು ನಿನ್ನ ಕೈಯಿಂದ ತೆಗೆದುಕೊಂಡು ಅದನ್ನು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟನು.
- 1 Samuel 16:1 1 ಸಮುವೇಲನು 16:1ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು.
- 1 Samuel 28:6 1 ಸಮುವೇಲನು 28:6ಸೌಲನು ಕರ್ತನನ್ನು ಕೇಳಿಕೊಂಡಾಗ ಕರ್ತನು ಅವನಿಗೆ ಸ್ವಪ್ನಗ ಳಿಂದಲಾದರೂ ಊರೀಮಿನಿಂದಲಾದರೂ ಪ್ರವಾದಿ ಗಳಿಂದಲಾದರೂ ಪ್ರತ್ಯುತ್ತರಕೊಡಲಿಲ್ಲ.
- 1 Chronicles 12:23 1 ಪೂರ್ವಕಾಲವೃತ್ತಾಂತ 12:23ಕರ್ತನ ವಾಕ್ಯದ ಪ್ರಕಾರ ಸೌಲನ ರಾಜ್ಯವನ್ನು ದಾವೀದನ ಕಡೆಗೆ ತಿರುಗಿಸುವದಕ್ಕೆ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಯುದ್ಧಕ್ಕೆ ಆಯುಧಗಳನ್ನು ಧರಿಸಿ ಕೊಂಡು ಬಂದ ದಂಡುಗಳ ಲೆಕ್ಕವೇನಂದರೆ --
- 2 Samuel 3:9–10 2 ಸಮುವೇಲನು 3:9–10ನಾನು ಸೌಲನ ಮನೆಯಿಂದ ರಾಜ್ಯವನ್ನು ತಪ್ಪಿಸಿ ಕರ್ತನು ದಾವೀದನಿಗೆ ಆಣೆ ಇಟ್ಟ ಪ್ರಕಾರವೇ ದಾವೀದನ ಸಿಂಹಾಸನವನ್ನು ದಾನಿನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ಸ್ಥಿರಪಡಿಸುವ ಹಾಗೆ ನಾನು ಮಾಡದೆ ಇದ್ದರೆ ದೇವರು ಅಬ್ನೇರನಿಗೆ ಹೀಗೆಯೂ ಮತ್ತು ಅಧಿಕವಾಗಿಯೂ ಮಾಡಲಿ ಅಂದನು.
- Judges 10:11–16 ನ್ಯಾಯಸ್ಥಾಪಕರು 10:11–16ಕರ್ತನು ಇಸ್ರಾಯೇಲ್ ಮಕ್ಕಳಿಗೆ--ನಾನು ನಿಮ್ಮನ್ನು ಐಗುಪ್ತ್ಯರ ಕೈಯೊಳಗಿಂದಲೂ ಅಮೋರಿಯರ ಕೈಯೊ ಳಗಿಂದಲೂ ಅಮ್ಮೋನನ ಮಕ್ಕಳ ಕೈಯೊಳಗಿಂದಲೂ ಫಿಲಿಷ್ಟಿಯರ ಕೈಯೊಳಗಿಂದಲೂ ತಪ್ಪಿಸಿಬಿಡಲಿಲ್ಲವೋ? ಇದಲ್ಲದೆ ಚೀದೋನ್ಯರೂ ಅಮಾಲೇಕ್ಯರೂ ಮಾವೋನ್ಯರೂ ನಿಮ್ಮನ್ನು ಬಾಧೆಪಡಿಸುವಾಗ ನೀವು ನನಗೆ ಕೂಗಿದ್ದರಿಂದ ನಾನು ನಿಮ್ಮನ್ನು ಅವರ ಕೈಗೆ ತಪ್ಪಿಸಿ ರಕ್ಷಿಸಿದೆನು. ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿದಿರಿ; ಆದಕಾರಣ ನಾನು ನಿಮ್ಮನ್ನು ಇನ್ನು ಮುಂದೆ ಬಿಡಿಸುವದಿಲ್ಲ. ನೀವು ಹೋಗಿ ನಿಮಗೆ ನೀವೇ ಆರಿಸಿಕೊಂಡ ದೇವರುಗಳಿಗೆ ಕೂಗಿರಿ; ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ ಅಂದನು. ಇಸ್ರಾಯೇಲ್ ಮಕ್ಕಳು ಕರ್ತ ನಿಗೆ--ನಾವು ಪಾಪಮಾಡಿದೆವು; ನೀನು ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿ ತೋರುವದೆಲ್ಲಾ ನಮಗೆ ಮಾಡು. ಆದರೆ ಈಹೊತ್ತು ನಮ್ಮನ್ನು ರಕ್ಷಿಸು ಎಂದು ಬೇಡಿ ಕೊಂಡರು. ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.
- Proverbs 17:13 ಜ್ಞಾನೋಕ್ತಿಗಳು 17:13ಉಪಕಾರಕ್ಕೆ ಅಪಕಾರವನ್ನು ಮಾಡುವವನ ಮನೆ ಯಿಂದ ಕೇಡು ತೊಲಗುವದೇ ಇಲ್ಲ.
- 1 Samuel 16:11–13 1 ಸಮುವೇಲನು 16:11–13ಸಮುವೇಲನು--ನಿನಗಿರುವ ಮಕ್ಕ ಳೆಲ್ಲಾ ಇಷ್ಟೇ ಮಂದಿಯೋ? ಎಂದು ಇಷಯನನ್ನು ಕೇಳಿದನು. ಅದಕ್ಕವನು--ಇವರೆಲ್ಲರಿಗಿಂತಲೂ ಚಿಕ್ಕವ ನೊಬ್ಬನು ಉಳಿದಿದ್ದಾನೆ; ಇಗೋ, ಅವನು ಕುರಿಗಳನ್ನು ಕಾಯುತ್ತಾ ಇದ್ದಾನೆ ಅಂದನು. ಆಗ ಸಮುವೇಲನು ಇಷಯನಿಗೆ--ಅವನನ್ನು ಕರೆಯ ಕಳುಹಿಸು; ಯಾಕಂದರೆ ಅವನು ಇಲ್ಲಿಗೆ ಬರುವವರೆಗೆ ನಾವು ಕೂತುಕೊಳ್ಳಬಾರದು ಅಂದನು. ಆಗ ಇಷಯನು ಅವನನ್ನು ಕರೇಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ ಸುಂದರ ಮುಖವುಳ್ಳವ ನಾಗಿಯೂ ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಕರ್ತನು ಸಮುವೇಲನಿಗೆ--ನೀನೆದ್ದು ಇವನನ್ನು ಅಭಿಷೇಕಿಸು; ಇವನೇ ಅವನು ಅಂದನು. ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.
- Isaiah 10:15 ಯೆಶಾಯ 10:15ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು.
- Ezekiel 14:3–6 ಯೆಹೆಜ್ಕೇಲನು 14:3–6ಮನುಷ್ಯಪುತ್ರನೇ, ಈ ಮನು ಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ ತಮ್ಮ ಅಕ್ರಮವಾದ ಎಡೆತಡೆಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವರೆಲ್ಲ ರನ್ನೂ ನಾನು ವಿಚಾರಿಸಬೇಕೇ? ಆದದರಿಂದ ನೀನು ಅವರ ಸಂಗಡ ಮಾತನಾಡಿ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ಹೃದಯಗಳಲ್ಲಿ ನೆಲೆಗೊಳಿಸಿ ಅಕ್ರಮದ ಎಡೆತಡೆಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾ ದಿಯ ಬಳಿಗೆ ಬರುವ ಮನುಷ್ಯನು ಯಾವನೋ ಅವನಿಗೆ ಕರ್ತನಾದ ನಾನು ಅವರ ವಿಗ್ರಹಗಳ ಸಮೂ ಹಕ್ಕೆ ತಕ್ಕ ಹಾಗೆ ಉತ್ತರ ಕೊಡುತ್ತೇನೆ. ಹೀಗೆ ನಾನು ಇಸ್ರಾಯೇಲಿನ ಮನೆತನ ದವರನ್ನು ಅವರ ಸ್ವಂತ ಹೃದಯದಿಂದಲೇ ಸಿಕ್ಕಿಸಿ ಹಿಡಿಯುತ್ತೇನೆ. ಯಾಕಂದರೆ ಅವರೆಲ್ಲರೂ ತಮ್ಮ ವಿಗ್ರಹಗಳ ಮುಖಾಂತರ ನನಗೆ ಅನ್ಯರಾದರು. ಇಸ್ರಾಯೇಲಿನ ಮನೆತನದವರಿಗೆ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮಾನ ಸಾಂತರಪಟ್ಟು ನಿಮ್ಮ ವಿಗ್ರಹಗಳನ್ನು ಬಿಟ್ಟು ನೀವಾ ಗಿಯೇ ತಿರುಗಿ ಕೊಳ್ಳಿರಿ; ನಿಮ್ಮ ಅಸಹ್ಯವಾದವುಗಳ ನ್ನೆಲ್ಲಾ ಬಿಟ್ಟು ನಿಮ್ಮ ಮುಖಗಳನ್ನು ತಿರುಗಿಸಿರಿ.