1 Chronicles · chapter 12 · verse 37
1 Chronicles 12:37 in Kannada
ಯೊರ್ದನಿನ ಆಚೆಯಲ್ಲಿರುವ ರೂಬೇನ್ಯರಲ್ಲಿಯೂ ಗಾದನವರಲ್ಲಿಯೂ ಮನಸ್ಸೆಯ ಅರ್ಧ ಗೋತ್ರದ ಲ್ಲಿಯೂ ಯುದ್ಧಕ್ಕೆ ತಕ್ಕಂಥ ಸಕಲ ಆಯುಧಗಳನ್ನು ಧರಿಸಿಕೊಂಡವರು ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿಯು.
Yordanina aacheyalliruva roobenyaralliyoo gaadanavaralliyoo manasseya ardha gotrada lliyoo yuddhakke takkantha sakala aayudhagalannu dharisikondavaru ondu lakshada ippattu saavira mandiyu.
1 Chronicles 12:37 in English
- King James Version (KJV)
- And on the other side of Jordan, of the Reubenites, and the Gadites, and of the half tribe of Manasseh, with all manner of instruments of war for the battle, an hundred and twenty thousand.
- World English Bible (WEB)
- On the other side of the Jordan, of the Reubenites, the Gadites, and of the half-tribe of Manasseh, with all kinds of instruments of war for the battle: one hundred twenty thousand.
- American Standard Version (ASV)
- And on the other side of the Jordan, of the Reubenites, and the Gadites, and of the half-tribe of Manasseh, with all manner of instruments of war for the battle, a hundred and twenty thousand.
- Bible in Basic English (BBE)
- From the other side of Jordan, there were a hundred and twenty thousand of the Reubenites and the Gadites and the men of the half-tribe of Manasseh, armed with every sort of instrument of war.
- Darby Translation (DBY)
- And from the other side of the Jordan, of the Reubenites, and the Gadites, and of the half tribe of Manasseh, with all manner of weapons of war for battle, a hundred and twenty thousand.
- Webster's Bible (WBS)
- And on the other side of Jordan, of the Reubenites, and the Gadites, and of the half tribe of Manasseh, with all manner of instruments of war for the battle, a hundred and twenty thousand.
- Young's Literal Translation (YLT)
- And from beyond the Jordan, of the Reubenite, and of the Gadite, and of the half of the tribe of Manasseh, with all instruments of the host for battle, [are] a hundred and twenty thousand.
Read in context
- 35ದಾನನವರಲ್ಲಿ ಯುದ್ಧ ನಿಪುಣರು ಇಪ್ಪತೆಂಟು ಸಾವಿರದ ಆರುನೂರು ಮಂದಿ.
- 36ಆಶೇರನವರಲ್ಲಿ ಯುದ್ಧಕ್ಕೆ ಹೋಗಬಲ್ಲ ನಿಪುಣರು, ಸೈನ್ಯವಾಗಿ ಹೋಗುವವರು ನಾಲ್ವತ್ತು ಸಾವಿರ ಮಂದಿ.
- 37ಯೊರ್ದನಿನ ಆಚೆಯಲ್ಲಿರುವ ರೂಬೇನ್ಯರಲ್ಲಿಯೂ ಗಾದನವರಲ್ಲಿಯೂ ಮನಸ್ಸೆಯ ಅರ್ಧ ಗೋತ್ರದ ಲ್ಲಿಯೂ ಯುದ್ಧಕ್ಕೆ ತಕ್ಕಂಥ ಸಕಲ ಆಯುಧಗಳನ್ನು ಧರಿಸಿಕೊಂಡವರು ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿಯು.
- 38ಯುದ್ಧಕ್ಕೆ ಸಿದ್ಧರಾದ ಈ ಸಮಸ್ತ ಸೈನಿಕರು ದಾವೀದನನ್ನು ಸಮಸ್ತ ಇಸ್ರಾಯೇಲ್ಯರ ಮೇಲೆ ಅರಸನಾಗ ಮಾಡಲು ಪೂರ್ಣಹೃದಯದಿಂದ ಹೆಬ್ರೋನಿಗೆ ಬಂದರು. ಇದಲ್ಲದೆ ಇಸ್ರಾಯೇಲಿ ನಲ್ಲಿದ್ದ ಮಿಕ್ಕಾದವರೆಲ್ಲರೂ ದಾವೀದನನ್ನು ಅರಸ ನಾಗ ಮಾಡಲು ಒಂದೇ ಹೃದಯವುಳ್ಳವರಾಗಿದ್ದರು.
- 39ಅವರು ಅಲ್ಲಿ ದಾವೀದನ ಸಂಗಡ ಮೂರು ದಿವಸ ಇದ್ದು ತಿನ್ನುತ್ತಾ ಕುಡಿಯುತ್ತಾ ಇದ್ದರು.ಅವರ ಸಹೋದರರು ಅವರಿಗೋಸ್ಕರ ಸಿದ್ಧಮಾಡಿ ದರು.ಇದಲ್ಲದೆ ಅವರ ಬಳಿಯಲ್ಲಿದ್ದ ಇಸ್ಸಾಕಾರ್, ಜೆಬುಲೂನ್, ನಫ್ತಾಲಿಯರು ಮೊದಲುಗೊಂಡು ಎಲ್ಲರೂ ಕತ್ತೆ ಒಂಟೆ ಹೇಸರಕತ್ತೆ ಎತ್ತುಗಳ ಮೇಲೆ ರೊಟ್ಟಿಗಳನ್ನೂ ಆಹಾರವನ್ನೂ ಹಿಟ್ಟನ್ನೂ ಅಂಜೂರದ ಉಂಡೆಗಳನ್ನೂ ಒಣಗಿದ ದ್ರಾಕ್ಷೇ ಗೊನೆಗಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಎತ್ತುಗಳನ್ನೂ ಕುರಿ ಗಳನ್ನೂ ಬಹಳವಾಗಿ ತಂದರು; ಯಾಕಂದರೆ ಇಸ್ರಾ ಯೇಲಿನಲ್ಲಿ ಸಂತೋಷವಿತ್ತು.
Cross references
- Joshua 13:7–32 ಯೆಹೋಶುವ 13:7–32ಈಗ ಈ ದೇಶವನ್ನು ಒಂಭತ್ತು ಗೋತ್ರಗಳಿಗೂ ಮನಸ್ಸೆಯ ಅರ್ಧಗೋತ್ರಕ್ಕೂ ಬಾಧ್ಯತೆಗಾಗಿ ಪಾಲು ಮಾಡಿಕೊಡು. ಅವರ ಸಂಗಡ ರೂಬೇನ್ಯರೂ ಗಾದ್ಯರೂ ತಮ್ಮ ಬಾಧ್ಯತೆಯನ್ನು ಹೊಂದಿದರು. ಏನಂದರೆ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಲ್ಪಟ್ಟಿತು. ಅವುಗಳು ಯಾವವೆಂದರೆ: ಅರ್ನೋನ್ ನದೀ ತೀರದಲ್ಲಿರುವ ಅರೋಯೇರ್ ನದಿಯ ಮಧ್ಯಭಾಗ ದಲ್ಲಿರುವ ಪಟ್ಟಣವು ಮೊದಲುಗೊಂಡು ದಿಬೋನಿನ ವರೆಗೆ ಮೇದೆಬದ ಸಮನಾದ ಭೂಮಿಯೂ ಹೆಷ್ಬೋನಿನಲ್ಲಿ ಆಳಿದ ಅಮೋರಿಯರ ಅರಸನಾದ ಸೀಹೋನನಿಗೆ ಅಮ್ಮೋನಿನ ಮಕ್ಕಳ ಮೇರೆಯ ವರೆಗೂ ಇದ್ದ ಸಕಲ ಪಟ್ಟಣಗಳೂ ಗಿಲ್ಯಾದೂ ಗೆಷೂರ್ಯರ ಮಾಕತೀಯರ ಮೇರೆಯೂ ಹೆರ್ಮೋನ್ ಪರ್ವತವೆಲ್ಲವೂ ಅಷ್ಟರೋತಿನಲ್ಲಿಯೂ ಎದ್ರೈಯ ಲ್ಲಿಯೂ ಆಳಿದ ರಾಕ್ಷಸರಲ್ಲಿ ಮಿಕ್ಕಿದ್ದ ಬಾಷಾನಿನ ಅರಸನಾದ ಓಗನ ರಾಜ್ಯವೆಲ್ಲಾ ಸಮಸ್ತ ರಾಜ್ಯವಾದ ಬಾಷಾನೂ ಇವುಗಳೇ. ಮೋಶೆಯು ಇವೆಲ್ಲವುಗಳನ್ನು ಜಯಿಸಿ ಅವರನ್ನು ಹೊಡೆದು ಹೊರಡಿಸಿದ್ದನು. ಆದಾಗ್ಯೂ ಇಸ್ರಾಯೇಲ್ ಮಕ್ಕಳು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರಡಿಸಿ ಬಿಡಲಿಲ್ಲ; ಯಾಕಂದರೆ ಗೆಷೂರ್ಯರೂ ಮಾಕತೀಯರೂ ಈ ದಿನದ ವರೆಗೆ ಇಸ್ರಾಯೇಲಿನ ಮಧ್ಯದಲ್ಲಿ ವಾಸವಾಗಿದ್ದಾರೆ. ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ; ಯಾಕಂದರೆ ಅವನು ಅವರಿಗೆ ಹೇಳಿದ ಪ್ರಕಾರ ಇಸ್ರಾಯೇಲಿನ ದೇವರಾದ ಕರ್ತನ ದಹನ ಬಲಿಗಳೇ ಅವರ ಬಾಧ್ಯತೆಯಾಗಿವೆ. ಇದಲ್ಲದೆ ಮೋಶೆಯು ರೂಬೇನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆ ಯನ್ನು ಕೊಟ್ಟನು. ಅರ್ನೋನ್ ನದಿಯ ತೀರದ ಲ್ಲಿರುವ ಅರೋಯೇರ್ ನದಿಯ ಮಧ್ಯದಲ್ಲಿರುವ ಪಟ್ಟಣವು ಮೊದಲುಗೊಂಡು ಮೇದೆಬದ ಬಳಿ ಯಲ್ಲಿರುವ ಸಕಲ ಸಮನಾದ ಭೂಮಿಯೂ ಸಮನಾದ ಭೂಮಿಯಲ್ಲಿರುವ ಹೆಷ್ಬೋನು ಅದರ ಎಲ್ಲಾ ಪಟ್ಟಣಗಳಾದ ದೀಬೋನು, ಬಾಮೋತ್ಬಾಳ್, ಬೆತ್ಬಾಳ್ಮೆಯೋನ್, ಯಹಚಾ ಕೆದೇಮೋತ್, ಮೇಫಾಯತ್, ಕಿರ್ಯಾತಯಿಮ್, ಸಿಬ್ಮಾ, ತಗ್ಗಿನ ಬೆಟ್ಟದಲ್ಲಿರುವ ಚೆರೆತ್ಶಹರ್, ಬೇತ್ಪಗೋರ್, ಅಷ್ಡೊತ್ಪಿಸ್ಗಾ, ಬೇತ್ಯೆಶಿಮೋತ್, ಹರ್, ಸಮ ನಾದ ಭೂಮಿಯ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳಿದ ಸೀಹೋನನೆಂಬ ಅಮೋರಿಯರ ಅರಸನ ರಾಜ್ಯವೆಲ್ಲವೂ ಅವರ ಮೇರೆಗಳಾದವು. ಮೋಶೆಯು ಅವನನ್ನೂ ದೇಶದಲ್ಲಿ ಅವನ ಅಧಿಪತಿಗಳಾದಂಥ ಮಿದ್ಯಾನಿನ ಪ್ರಧಾನರಾದ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬವರನ್ನೂ ಕೊಂದುಹಾಕಿದನು. ಇದಲ್ಲದೆ ಇಸ್ರಾಯೇಲ್ ಮಕ್ಕಳು ಸಂಹರಿಸಿದ ಇತರರ ಸಂಗಡ ಬೆಯೋರನ ಮಗನಾದ ಬಿಳಾಮ ನೆಂಬ ಕಣಿ ಹೇಳುವವನನ್ನು ಕತ್ತಿಯಿಂದ ಕೊಂದು ಹಾಕಿದರು. ಯೊರ್ದನೂ ಅದರ ಮೇರೆಯೂ ರೂಬೇನನ ಮಕ್ಕಳ ಮೇರೆಯಾಗಿತ್ತು. ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ರೂಬೇನನ ಮಕ್ಕಳಿಗೆ ಅವರ ಗೋತ್ರಗಳ ಪ್ರಕಾರ ಬಾಧ್ಯತೆಯಾಗಿವೆ. ಇದಲ್ಲದೆ ಮೋಶೆಯು ಗಾದನ ಮಕ್ಕಳ ಗೋತ್ರ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿ ಕೊಟ್ಟನು. ಯಗ್ಜೇರ್; ಗಿಲ್ಯಾದಿನ ಸಮಸ್ತ ಪಟ್ಟಣ ಗಳೂ ರಬ್ಬಾಕ್ಕೆ ಎದುರಾಗಿರುವ ಅರೋಯೆರಿನ ವರೆಗೂ ಇರುವ ಅಮ್ಮೋನಿನ ಮಕ್ಕಳ ಅರ್ಧ ದೇಶವು; ಹೆಷ್ಬೋನಿನಿಂದ ರಾಮತ್ಮಿಚ್ಪೆ, ಬೆಟೊನೀಮ್ ಇವುಗಳ ವರೆಗೂ ಮಹನಯಿಮಿನಿಂದ ದೆಬೀರ್ ಮೇರೆಯ ವರೆಗೂ ಇರುವ ದೇಶವು; ತಗ್ಗಿನಲ್ಲಿರುವ ಬೇತ್ಹಾರಾಮ್; ಬೇತ್ನಿಮ್ರಾ, ಸುಕ್ಕೋತ್, ಚಾಫೋನ್; ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನಿಗೆ ಆಚೆಯಲ್ಲಿರುವ ಮೂಡಲ ಯೊರ್ದನಿನ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವೂ ಅವರ ಮೇರೆಗೆ ಒಳಗಾದವು. ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ಗಾದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿವೆ. ಇದಲ್ಲದೆ ಮನೆಸ್ಸೆಯ ಮಕ್ಕಳ ಅರ್ಧಗೋತ್ರಕ್ಕೆ ಮೋಶೆಯು ಅವರ ಕುಟುಂಬದ ಪ್ರಕಾರ ಸ್ವಾಸ್ತ್ಯವನ್ನು ಕೊಟ್ಟನು. ಅದು ಯಾವದಂದರೆ, ಮಹನಯಾಮಿ ನಿಂದ ಬಾಷಾನಿನ ಅರಸನಾದ ಓಗನ ಸಮಸ್ತ ರಾಜ್ಯವಾಗಿರುವ ಬಾಷಾನೆಲ್ಲವೂ ಬಾಷಾನಿನಲ್ಲಿರುವ ಯಾಯಾರಿನ ಸಮಸ್ತ ಊರುಗಳಾದ ಅರವತ್ತು ಪಟ್ಟಣಗಳೂ ಅವರ ಮೇರೆಗೆ ಒಳಗಾದವು. ಗಿಲ್ಯಾದಿ ನಲ್ಲಿ ಅರ್ಧವನ್ನೂ ಬಾಷಾನಿನಲ್ಲಿ ಅಷ್ಟರೋತ್, ಎದ್ರೈ ಎಂಬ ಓಗನ ರಾಜ್ಯದ ಪಟ್ಟಣಗಳನ್ನೂ ಮನಸ್ಸೆಯ ಮಗನಾದ ಮಾಕೀರನ ಮಕ್ಕಳಿಗೆ, ಅವರ ಕುಟುಂಬಗಳ ಪ್ರಕಾರ ಮಾಕೀರನ ಮಕ್ಕಳಲ್ಲಿ ಅರ್ಧ ಜನಕ್ಕೆ ಕೊಟ್ಟನು. ಸೂರ್ಯೋದಯದ ದಿಕ್ಕಿನಲ್ಲಿ ಯೆರಿಕೋವಿನ ಬಳಿಯಲ್ಲಿ ಹೀಗೆಯೇ ಮೋಶೆಯು ಯೊರ್ದನಿಗೆ ಆಚೆಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಬಾಧ್ಯತೆ ಯಾಗಿ ಹಂಚಿದ ದೇಶಗಳು ಇವೇ.ಆದರೆ ಲೇವಿ ಯನ ಗೋತ್ರಕ್ಕೆ ಮೋಶೆಯು ಯಾವ ಬಾಧ್ಯತೆಯನ್ನು ಕೊಡಲಿಲ್ಲ. ಇಸ್ರಾಯೇಲ್ ದೇವರಾದ ಕರ್ತನು ಅವರಿಗೆ ಹೇಳಿದ ಪ್ರಕಾರ ತಾನೇ ಅವರ ಬಾಧ್ಯತೆ.
- 1 Chronicles 5:1–10 1 ಪೂರ್ವಕಾಲವೃತ್ತಾಂತ 5:1–10ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ಕುಮಾರರು (ರೂಬೇನನು ಚೊಚ್ಚಲ ಮಗನಾಗಿದ್ದನು; ಆದರೆ ಅವನು ತನ್ನ ತಂದೆಯ ಹಾಸಿಗೆಯನ್ನು ಅಪವಿತ್ರಮಾಡಿದ್ದರಿಂದ ಅವನ ಚೊಚ್ಚಲತನದ ಹಕ್ಕು ಇಸ್ರಾಯೇಲನ ಮಗ ನಾದ ಯೋಸೇಫನ ಕುಮಾರರಿಗೆ ಕೊಡಲ್ಪಟ್ಟಿತು. ಆದದರಿಂದ ಈ ವಂಶಾವಳಿಯು ಚೊಚ್ಚಲತನದ ಪ್ರಕಾರ ಬರೆಯಲ್ಪಟ್ಟದ್ದಲ್ಲ. ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವ ನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲತನ ಯೋಸೆಫನದಾಗಿತ್ತು). ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ಕುಮಾರರು; ಹನೋ ಕನು ಫಲ್ಲೂ ಹೆಚ್ರೋನನು ಕರ್ವಿಾಯು. ಯೋವೇ ಲನ ಕುಮಾರರು; ಇವನ ಮಗನಾದ ಶೆಮಾಯನು ಇವನ ಮಗನಾದ ಗೋಗನು ಇವನ ಮಗನಾದ ಶಿವ್ಮೆಾ ಇವನ ಮಗನಾದ ವಿಾಕನು ಇವನ ಮಗ ನಾದ ರೆವಾಯನು ಇವನ ಮಗನಾದ ಬಾಳನು. ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನಿಂದ ಸೆರೆಯಾಗಿ ಒಯ್ಯಲ್ಪಟ್ಟ ಇವನ ಮಗನಾದ ಬೇರನು; ಇವನೇ ರೂಬೇನ್ಯರಲ್ಲಿ ಪ್ರಭುವಾಗಿದ್ದನು. ಇವನ ಸಹೋದರರು ತಮ್ಮ ಸಂತತಿಗಳಲ್ಲಿ ವಂಶಗಳ ವಂಶಾ ವಳಿಯನ್ನು ಲೆಕ್ಕಿಸುತ್ತಿರುವಾಗ ಅವರ ಮುಖ್ಯಸ್ಥರು ಯಾರಂದರೆ -- ಯೆಗೀಯೇಲನು, ಜೆಕರ್ಯನು, ಯೊವೇಲನ ಮಗನಾದ ಶೆಮಯನ ಮಗನಾದ ಅಜಾಜನ ಮಗನಾದ ಬೆಳವನು: ಇವನು ಅರೋ ಯೇರುನಿಂದ ಮೊದಲುಗೊಂಡು ನೆಬೋ, ಬಾಳ್ಮೆ ಯೋನ್ ವರೆಗೂ ವಾಸವಾಗಿದ್ದನು. ಗಿಲ್ಯಾದಿನ ದೇಶದಲ್ಲಿ ಅವರ ದನಕುರಿಗಳು ಹೆಚ್ಚಾದದರಿಂದ ಅವನು ಮೂಡಣ ದಿಕ್ಕಿನಲ್ಲಿ ಯೂಫ್ರೇಟೀಸ್ ನದಿ ಮೊದಲುಗೊಂಡು ಅರಣ್ಯ ಪ್ರದೇಶದ ವರೆಗೂ ವಾಸ ವಾಗಿದ್ದನು. ಸೌಲನ ದಿವಸಗಳಲ್ಲಿ ಅವರು ಹಗ್ರಿ ಯರ ಸಂಗಡ ಯುದ್ಧಮಾಡಿ ಅವರನ್ನು ಸಂಹರಿಸಿದರು; ಅವರು ಗಿಲ್ಯಾದಿನ ಸಮಸ್ತವಾದ ಮೂಡಣ ದಿಕ್ಕಿನ ಮೇರೆಯಲ್ಲಿ ತಮ್ಮ ಡೇರೆಗಳೊಳಗೆ ವಾಸವಾಗಿದ್ದರು.
- Joshua 22:1–10 ಯೆಹೋಶುವ 22:1–10ಆಗ ಯೆಹೋಶುವನು ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರ ದವರನ್ನೂ ಕರಿಸಿ ಅವರಿಗೆ-- ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ನೀವು ಕೈಕೊಂಡು ನಾನು ನಿಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನನ್ನ ಮಾತಿಗೆ ವಿಧೇಯರಾದಿರಿ. ನೀವು ಬಹಳ ದಿವಸ ಗಳಿಂದ ಇಂದಿನ ವರೆಗೂ ನಿಮ್ಮ ಸಹೋದರರನ್ನು ಕೈ ಬಿಡದೆ ನಿಮ್ಮ ದೇವರಾದ ಕರ್ತನು ಆಜ್ಞಾಪಿಸಿದ ಅಪ್ಪಣೆಯನ್ನು ಕೈಕೊಂಡಿರಿ. ಈಗ ನಿಮ್ಮ ದೇವರಾದ ಕರ್ತನು ಅವರಿಗೆ ವಾಗ್ದಾನಮಾಡಿದ ಪ್ರಕಾರ ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟನು. ಮತ್ತು ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ನಿಮಗೆ ಕೊಟ್ಟ ಸ್ವಾಸ್ತ್ಯವಾದ ನಿಮ್ಮ ದೇಶದಲ್ಲಿರುವ ನಿಮ್ಮ ಡೇರೆಗಳಿಗೆ ತಿರಿಗಿ ಹೋಗಿರಿ. ಆದರೆ ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಆಜ್ಞೆ ಯನ್ನೂ ನ್ಯಾಯಪ್ರಮಾಣವನ್ನೂ ಜಾಗ್ರತೆಯಾಗಿ ಕೈಕೊಂಡು ನಡೆದು ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನ ಆಜ್ಞೆಗಳನ್ನು ಕೈಕೊಂಡು ಆತನನ್ನು ಅಂಟಿ ಕೊಂಡು ಆತನನ್ನು ನಿಮ್ಮ ಪೂರ್ಣಹೃದಯ ದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸಿರಿ ಎಂದು ಹೇಳಿದನು. ಯೆಹೋಶುವನು ಅವರನ್ನು ಆಶೀರ್ವದಿಸಿ ಕಳುಹಿಸಿದ ಮೇಲೆ ಅವರು ತಮ್ಮ ಡೇರೆಗಳಿಗೆ ಹೋದರು. ಮನಸ್ಸೆಯ ಅರ್ಧ ಗೋತ್ರಕ್ಕೆ ಮೋಶೆಯು ಬಾಷಾನಿನಲ್ಲಿ ಸ್ವಾಸ್ತ್ಯ ಕೊಟ್ಟಿದ್ದನು. ಆದರೆ ಅವರ ಉಳಿದ ಅರ್ಧ ಗೋತ್ರಕ್ಕೆ ಯೆಹೋ ಶುವನು ಯೊರ್ದನಿನ ಪಶ್ಚಿಮಕ್ಕೆ ಅವರ ಸಹೋದರರ ನಡುವೆ ಸ್ವಾಸ್ತ್ಯವನ್ನು ಕೊಟ್ಟನು. ಇದಲ್ಲದೆ ಯೆಹೋ ಶುವನು ಅವರನ್ನು ಅವರ ಡೇರೆಗಳಿಗೆ ಕಳುಹಿಸಿ ಬಿಡುವಾಗ ಅವರನ್ನು ಆಶೀರ್ವದಿಸಿದನು. ಅವ ರೊಂದಿಗೆ ಮಾತನಾಡಿ--ನೀವು ಬಹು ಆಸ್ತಿಯುಳ್ಳವ ರಾಗಿ ಪಶುಕುರಿ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣವನ್ನು ಬಹು ಹೆಚ್ಚಾದ ವಸ್ತ್ರಗಳೊಂದಿಗೆ ಹಿಂತಿರುಗಿ ನಿಮ್ಮ ಡೇರೆಗಳಿಗೆ ಹೋಗಿ ನಿಮ್ಮ ಶತ್ರುಗಳ ಕೊಳ್ಳೆಯನ್ನು ನಿಮ್ಮ ಸಹೋದರರ ಸಂಗಡ ಹಂಚಿಕೊಳ್ಳಿರಿ ಅಂದನು. ಕರ್ತನು ಮೋಶೆಗೆ ಕೊಟ್ಟ ಮಾತಿನ ಪ್ರಕಾರ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರದವರೂ ತಾವು ವಶಮಾಡಿಕೊಂಡ ತಮ್ಮ ಸ್ವಾಸ್ತ್ಯದ ದೇಶವಾಗಿರುವ ಗಿಲ್ಯಾದ್ ದೇಶಕ್ಕೆ ಹೋಗುವದಕ್ಕೆ ಕಾನಾನ್ ದೇಶದಲ್ಲಿರುವ ಶೀಲೋ ವನ್ನೂ ಇಸ್ರಾಯೇಲ್ ಮಕ್ಕಳನ್ನೂ ಬಿಟ್ಟು ತಿರಿಗಿ ಹೋದರು. ಕಾನಾನ್ ದೇಶದಲ್ಲಿರುವ ಯೊರ್ದನಿನ ಪ್ರಾಂತ್ಯಕ್ಕೆ ಬಂದಾಗ ಅದರ ಬಳಿಯಲ್ಲಿ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರ ದವರೂ ನೋಟಕ್ಕೆ ದೊಡ್ಡದಾದ ಯಜ್ಞವೇದಿಯನ್ನು ಕಟ್ಟಿದರು.
- Joshua 14:3 ಯೆಹೋಶುವ 14:3ಮೋಶೆಯು ಯೊರ್ದನಿಗೆ ಆಚೆ ಎರಡುವರೆ ಗೋತ್ರಗಳಿಗೆ ಬಾಧ್ಯತೆಯನ್ನು ಕೊಟ್ಟಿದ್ದನು. ಆದರೆ ಲೇವಿಯರಿಗೆ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ;
- Deuteronomy 3:12–16 ಧರ್ಮೋಪದೇಶಕಾಂಡ 3:12–16ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು. ಮಿಕ್ಕ ಗಿಲ್ಯಾದನ್ನೂ ಓಗನ ರಾಜ್ಯವಾದ ಎಲ್ಲಾ ಬಾಷಾನನ್ನೂ ಮನಸ್ಸೆಯ ಅರ್ಧ ಕುಲಕ್ಕೆ ಕೊಟ್ಟೆನು; ಅರ್ಗೋಬಿನ ಸಮಸ್ತ ಸೀಮೆಯನ್ನೂ ಮಹಾಶರೀರಗಳ ದೇಶವೆಂದು ಹೇಳ ಲ್ಪಟ್ಟ ಸಮಸ್ತ ಭಾಷಾನನ್ನು ಅವರಿಗೆ ಕೊಟ್ಟೆನು. ಮನಸ್ಸೆಯ ಮಗನಾದ ಯಾಯಾರನು ಅರ್ಗೋ ಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯ ವರೆಗೆ ತಕ್ಕೊಂಡು ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನ ವರೆಗೆ ಹವ್ವೊತ್ ಯಾಯಾ ರೆಂದು ಹೆಸರಿಟ್ಟನು. ಗಿಲ್ಯಾದನ್ನು ಮಾಕೀರನಿಗೆ ಕೊಟ್ಟೆನು. ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಗಿಲ್ಯಾದ್ ಮೊದಲುಗೊಂಡು ಅರ್ನೋನ್ ನದಿಯ ವರೆಗೆ ಕೊಟ್ಟೆನು.
- Numbers 32:33–42 ಅರಣ್ಯಕಾಂಡ 32:33–42ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ ಅಮೋರಿಯರ ಅರಸ ನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸ ನಾದ ಓಗನ ರಾಜ್ಯವನ್ನೂ ಅದರ ಭೂಮಿಯನ್ನೂ ಅದರ ಮೇರೆಗಳಲ್ಲಿ ಸುತ್ತಮುತ್ತಲಿನ ಪಟ್ಟಣಗಳನ್ನೂ ಕೊಟ್ಟನು. ಆಗ ಗಾದನ ಮಕ್ಕಳು ದೀಬೋನ್, ಅಟಾರೋತ್, ಆರೋಯೇರ್, ಅಟ್ರೋತ್ಪೊ ಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ, ಬೇತ್ ಹಾರಾನ್ ಎಂಬ ಭದ್ರವಾದ ಪಟ್ಟಣಗಳನ್ನೂ ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದ್ದರು. ರೂಬೇನನ ಮಕ್ಕಳು ಹೆಷ್ಬೋನ್, ಎಲೀಯಾಲೆ, ಕಿರ್ಯಾತಯಿಮ್, ನೆಬೋ, ಬಾಳ್ಮೆಯೋನ್ ಎಂದು ಬೇರೆ ಹೆಸರು ಹೊಂದಿದ್ದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ ತಾವು ಕಟ್ಟಿದ ಪಟ್ಟಣಗಳಿಗೆ ಹೆಸರುಗಳನ್ನು ಇಟ್ಟರು. ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು. ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನಿಗೆ ಕೊಟ್ಟದ್ದರಿಂದ ಅವನು ಅದರಲ್ಲಿ ವಾಸಿ ಸಿದನು. ಆದರೆ ಮನಸ್ಸೆಯ ಮಗನಾದ ಯಾಯಾ ರನು ಹೋಗಿ, ಅವರ ನಗರಗಳನ್ನು ತಕ್ಕೊಂಡು, ಅವುಗಳಿಗೆ ಯಾಯಾರನ ನಗರಗಳೆಂದು ಹೆಸರಿಟ್ಟನು.ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು. ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು.
Original words (Hebrew)
- side · H5676עֵבֶר ʻêber
- Jordan · H3383יַרְדֵּן Yardên
- Reubenites · H7206רְאוּבֵנִי Rᵉʼûwbênîy
- Gadites · H1425גָּדִי Gâdîy
- half · H2677חֵצִי chêtsîy
- tribe · H7626שֵׁבֶט shêbeṭ
- Manasseh · H4519מְנַשֶּׁה Mᵉnashsheh
- instruments · H3627כְּלִי kᵉlîy
- war · H6635צָבָא tsâbâʼ
- battle · H4421מִלְחָמָה milchâmâh
- hundred · H3967מֵאָה mêʼâh
- twenty · H6242עֶשְׂרִים ʻesrîym
- thousand · H505אֶלֶף ʼeleph