Skip to content
ThuthiThuthiThuthi
1 Chronicles · chapter 13 of 29 · 14 verses

1 Chronicles 13 in Kannada

1 ಪೂರ್ವಕಾಲವೃತ್ತಾಂತ 13

  1. ದಾವೀದನು ಸಾವಿರ ಮಂದಿಗೂ ನೂರು ಮಂದಿಗೂ ಪ್ರಧಾನರಾದವರ ಸಂಗಡ ಮತ್ತು ಎಲ್ಲಾ ನಾಯಕರ ಸಂಗಡ ಆಲೋಚನೆ ಮಾಡಿದನು.

    And David consulted with the captains of thousands and hundreds, [and] with every leader.

  2. ಇದಲ್ಲದೆ ದಾವೀದನು ಇಸ್ರಾಯೇಲಿನ ಸಮಸ್ತ ಸಭೆಗೆ ಹೇಳಿದ್ದೇನಂದರೆ--ನಿಮಗೆ ಒಳ್ಳೆಯ ದಾಗಿ ಕಂಡರೆ ನಮ್ಮ ದೇವರಾದ ಕರ್ತನ ಅಪ್ಪಣೆ ಯಾದರೆ ಅವರು ನಮ್ಮ ಬಳಿಯಲ್ಲಿ ಕೂಡಿಬರುವ ಹಾಗೆ ಇಸ್ರಾಯೇಲಿನ ದೇಶವೆಲ್ಲಾದರಲ್ಲಿ ಉಳಿದಿ ರುವ ನಮ್ಮ ಸಹೋದರರನ್ನೂ ತಮ್ಮ ಪಟ್ಟಣ ಗಳಲ್ಲಿ ಮತ್ತು ಉಪನಗರಗಳಲ್ಲಿ ಇರುವ ಯಾಜಕ ರನ್ನೂ ಲೇವಿಯರನ್ನೂ ಎಲ್ಲಾ ಕಡೆಯಿಂದ ಕರೇ ಕಳುಹಿಸಿ

    And David said unto all the congregation of Israel, If [it seem] good unto you, and [that it be] of the LORD our God, let us send abroad unto our brethren every where, [that are] left in all the land of Israel, and with them [also] to the priests and Levites [which are] in their cities [and] suburbs, that they may gather themselves unto us:

  3. ನಮ್ಮ ದೇವರ ಮಂಜೂಷವನ್ನು ನಮ್ಮ ಬಳಿಗೆ ತಿರಿಗಿ ತರಿಸೋಣ. ಸೌಲನ ದಿವಸಗಳಲ್ಲಿ ಅದನ್ನು ವಿಚಾರಿಸಲಿಲ್ಲ ಅಂದಾಗ

    And let us bring again the ark of our God to us: for we enquired not at it in the days of Saul.

  4. ಹಾಗೆಯೇ ಮಾಡಬೇಕೆಂದು ಕೂಟದವರೆಲ್ಲರೂ ಹೇಳಿದರು. ಆ ಕಾರ್ಯವು ಸಮಸ್ತ ಜನರ ದೃಷ್ಟಿಗೆ ಯುಕ್ತವಾಗಿತ್ತು.

    And all the congregation said that they would do so: for the thing was right in the eyes of all the people.

  5. ಹೀಗೆ ದೇವರ ಮಂಜೂಷವನ್ನು ಕಿರ್ಯತ್ಯಾರೀ ಮಿನಿಂದ ತರುವದಕ್ಕೆ ದಾವೀದನು ಐಗುಪ್ತದ ಶೀಹೋರ್‌ ಮೊದಲುಗೊಂಡು ಹಮಾತಿನ ಪ್ರದೇ ಶದ ವರೆಗೆ ಇರುವ ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ದನು.

    So David gathered all Israel together, from Shihor of Egypt even unto the entering of Hemath, to bring the ark of God from Kirjath-jearim.

  6. ಆಗ ದಾವೀದನೂ ಸಮಸ್ತ ಇಸ್ರಾಯೇಲೂ ಕರ್ತನ ನಾಮ ಇಡಲ್ಪಟ್ಟ ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಕರ್ತನಾದ ದೇವರ ಮಂಜೂಷವನ್ನು ಅಲ್ಲಿಂದ ತಕ್ಕೊಂಡು ಬರಲು ಯೆಹೂದಕ್ಕೆ ಸೇರಿದ ಕಿರ್ಯತ್ಯಾರೀಮಿನ ಬಾಳಾಕ್ಕೆ ಹೋದರು.

    And David went up, and all Israel, to Baalah, [that is], to Kirjath-jearim, which [belonged] to Judah, to bring up thence the ark of God the LORD, that dwelleth [between] the cherubims, whose name is called [on it].

  7. ಅವರು ಅಬೀನಾದಾಬನ ಮನೆಯೊಳಗಿಂದ ಕರ್ತನ ಮಂಜೂ ಷವನ್ನು ತಂದು ಹೊಸ ಬಂಡಿಯ ಮೇಲೆ ಅದನ್ನು ಏರಿಸಿದರು. ಉಜ್ಜನೂ ಅಹಿಯೋವನೂ ಬಂಡಿಯನ್ನು ನಡಿಸಿದರು.

    And they carried the ark of God in a new cart out of the house of Abinadab: and Uzza and Ahio drave the cart.

  8. ಆಗ ದಾವೀದನೂ ಸಮಸ್ತ ಇಸ್ರಾ ಯೇಲ್ಯರೂ ತಮ್ಮ ಸಮಸ್ತ ಕಿನ್ನರಿ ವೀಣೆ ದಮ್ಮಡಿ ತಾಳ ತುತೂರಿಗಳಿಂದ ಬಲದಿಂದ ದೇವರ ಮುಂದೆ ಹಾಡುಗಳನ್ನೂ ಹಾಡಿದರು.

    And David and all Israel played before God with all [their] might, and with singing, and with harps, and with psalteries, and with timbrels, and with cymbals, and with trumpets.

  9. ಆದರೆ ಅವರು ಕೀದೋ ನನ ಕಣದ ಬಳಿಗೆ ಬಂದಾಗ ಉಜ್ಜನು ಮಂಜೂಷ ವನ್ನು ಹಿಡಿಯುವದಕ್ಕೆ ತನ್ನ ಕೈಯನ್ನು ಚಾಚಿದನು; ಯಾಕಂದರೆ ಎತ್ತುಗಳು ಎಡವಿದವು.

    And when they came unto the threshingfloor of Chidon, Uzza put forth his hand to hold the ark; for the oxen stumbled.

  10. ಉಜ್ಜನು ಮಂಜೂಷಕ್ಕೆ ತನ್ನ ಕೈಯನ್ನು ಚಾಚಿದ್ದರಿಂದ ಕರ್ತನ ಕೋಪವು ಅವನ ಮೇಲೆ ಉರಿಯಿತು. ಆತನು ಅವನನ್ನು ಹತಮಾಡಿದನು; ಅವನು ಅಲ್ಲಿಯೇ ದೇವರ ಮುಂದೆ ಸತ್ತನು.

    And the anger of the LORD was kindled against Uzza, and he smote him, because he put his hand to the ark: and there he died before God.

  11. ಕರ್ತನು ಉಜ್ಜನನ್ನು ಹರಿದು ಬಿಟ್ಟದ್ದರಿಂದ ದಾವೀದನಿಗೆ ಮೆಚ್ಚಿಗೆಯಾಗ ಲಿಲ್ಲ. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಪೆರೆಚ್‌ ಉಜ್ಜ ಎಂದು ಹೆಸರುಂಟು.

    And David was displeased, because the LORD had made a breach upon Uzza: wherefore that place is called Perez-uzza to this day.

  12. ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ದೇವರ ಮಂಜೂಷ ವನ್ನು ನನ್ನ ಮನೆಗೆ ತರಿಸುವದು ಹೇಗೆ ಅಂದನು.

    And David was afraid of God that day, saying, How shall I bring the ark of God [home] to me?

  13. ಹಾಗೆಯೇ ದಾವೀದನು ಮಂಜೂಷವನ್ನು ದಾವೀ ದನ ಪಟ್ಟಣಕ್ಕೆ ತನ್ನ ಬಳಿಗೆ ಸೇರಿಸಿಕೊಳ್ಳದೆ ಗಿತ್ತಿಯ ನಾದ ಒಬೇದೆದೋಮನ ಮನೆಗೆ ಸೇರಿಸಿಬಿಟ್ಟನು.ದೇವರ ಮಂಜೂಷವು ಒಬೇದೆದೋಮನ ಮನೆ ಯವರ ಸಂಗಡ ಅವನ ಮನೆಯಲ್ಲಿ ಮೂರು ತಿಂಗಳು ಇದ್ದದರಿಂದ ಕರ್ತನು ಒಬೇದೆದೋಮನ ಮನೆ ಯನ್ನೂ ಅವನಿಗಿದ್ದದ್ದೆಲ್ಲವನ್ನೂ ಆಶೀರ್ವದಿಸಿದನು.

    So David brought not the ark [home] to himself to the city of David, but carried it aside into the house of Obed-edom the Gittite.

  14. ದೇವರ ಮಂಜೂಷವು ಒಬೇದೆದೋಮನ ಮನೆ ಯವರ ಸಂಗಡ ಅವನ ಮನೆಯಲ್ಲಿ ಮೂರು ತಿಂಗಳು ಇದ್ದದರಿಂದ ಕರ್ತನು ಒಬೇದೆದೋಮನ ಮನೆ ಯನ್ನೂ ಅವನಿಗಿದ್ದದ್ದೆಲ್ಲವನ್ನೂ ಆಶೀರ್ವದಿಸಿದನು.

    And the ark of God remained with the family of Obed-edom in his house three months. And the LORD blessed the house of Obed-edom, and all that he had.

All chapters of 1 Chronicles · Kannada Bible · 1 Chronicles 13 in Tamil

Kannada Bible: Kannada Old Version, public domain.

King James Version: public domain.