1 Chronicles · chapter 16 · verse 23
1 Chronicles 16:23 in Kannada
ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ.
Samasta bhoomiye, kartanige haadiri; aatana rakshaneyannu dina dinakke saari heliri.
1 Chronicles 16:23 in English
- King James Version (KJV)
- Sing unto the LORD, all the earth; shew forth from day to day his salvation.
- World English Bible (WEB)
- Sing to the LORD, all the earth! Display his salvation from day to day.
- American Standard Version (ASV)
- Sing unto Jehovah, all the earth; Show forth his salvation from day to day.
- Bible in Basic English (BBE)
- Make songs to the Lord, all the earth; give the good news of his salvation day by day.
- Darby Translation (DBY)
- Sing unto Jehovah, all the earth; Publish his salvation from day to day.
- Webster's Bible (WBS)
- Sing to the LORD, all the earth; show forth from day to day his salvation.
- Young's Literal Translation (YLT)
- Sing to Jehovah, all the earth, Proclaim from day unto day His salvation.
Read in context
- 21ಆತನು ಯಾರಿಂದಲೂ ಅವರಿಗೆ ಅನ್ಯಾಯ ಮಾಡ ಗೊಡಿಸಲಿಲ್ಲ; ಹೌದು, ಅವರಿಗೋಸ್ಕರ ಅರಸುಗಳನ್ನು ಗದರಿಸಿದನು.
- 22ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ; ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ.
- 23ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ.
- 24ಜನಾಂಗಗಳಲ್ಲಿ ಆತನ ಘನವನ್ನೂ ಎಲ್ಲಾ ಜನಗಳಲ್ಲಿ ಆತನ ಅದ್ಭುತಗಳನ್ನೂ ಪ್ರಕಟಿಸಿರಿ.
- 25ಯಾಕಂದರೆ ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ;
Cross references
- Psalm 96:1–13 ಕೀರ್ತನೆಗಳು 96:1–13ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ. ಕರ್ತನಿಗೆ ಹಾಡಿರಿ, ಆತನ ಹೆಸರನ್ನು ಸ್ತುತಿಸಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ. ಅನ್ಯಜನಾಂಗದಲ್ಲಿ ಆತನ ಘನವನ್ನೂ ಎಲ್ಲಾ ಜನಾಂಗಗಳಲ್ಲಿ ಆತನ ಅದ್ಭುತಗಳನ್ನೂ ವಿವ ರಿಸಿರಿ. ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸ ಲ್ಪಡತಕ್ಕವನೂ ಆಗಿದ್ದಾನೆ; ಆತನಿಗೇ ಭಯಪಡ ತಕ್ಕದ್ದು. ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಕರ್ತನು ಆಕಾಶಗಳನ್ನು ನಿರ್ಮಿಸಿ ದನು. ಘನವೂ ಪ್ರಭೆಯೂ ಆತನ ಮುಂದೆ ಅವೆ; ಬಲವೂ ಸೌಂದರ್ಯವೂ ಆತನ ಪರಿಶುದ್ಧ ಸ್ಥಳದಲ್ಲಿ ಅವೆ. ಓ ಜನಾಂಗಗಳೇ, ಕರ್ತನಿಗೆ ನೀವು ಘನವನ್ನೂ ಬಲವನ್ನೂ ಸಲ್ಲಿಸಿರಿ. ಕರ್ತನಿಗೆ, ಆತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕಾಣಿಕೆ ತೆಗೆದುಕೊಂಡು ಆತನ ಅಂಗಳಗಳಿಗೆ ಬನ್ನಿರಿ. ಪರಿಶುದ್ಧತ್ವದ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ; ಸಮಸ್ತ ಭೂಮಿಯೇ, ಆತನ ಮುಂದೆ ಭಯಪಡು, ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ. ಆಕಾಶಗಳು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ ಅದರ ಪರಿಪೂರ್ಣ ತೆಯೂ ಘೋಷಿಸಲಿ. ಹೊಲವೂ ಅದರಲ್ಲಿರುವ ಸಮಸ್ತವೂ ಉತ್ಸಾಹಪಡಲಿ; ಅಡವಿಯ ಮರಗಳೆಲ್ಲಾ ಕರ್ತನ ಮುಂದೆಯೇ ಉತ್ಸಾಹಧ್ವನಿ ಮಾಡಲಿ.ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು. ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
- Psalm 71:15 ಕೀರ್ತನೆಗಳು 71:15ನನ್ನ ಬಾಯಿ ದಿನವೆಲ್ಲಾ ನಿನ್ನ ನೀತಿಯನ್ನೂ ರಕ್ಷಣೆ ಯನ್ನೂ ಪ್ರಕಟಿಸುವದು. ಅವುಗಳ ಸಂಖ್ಯೆಗಳು ನನಗೆ ತಿಳಿಯದು.
- Isaiah 51:6–8 ಯೆಶಾಯ 51:6–8ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಯಾಕಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವವು, ಭೂಮಿಯು ಹಳೆಯ ಬಟ್ಟೆಯಂತಾಗುವದು. ಅದರಲ್ಲಿ ವಾಸಿಸುವ ವರು ಅದೇ ರೀತಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವದು ಮತ್ತು ನನ್ನ ನೀತಿಯು ಎಂದಿಗೂ ರದ್ದಾಗದು. ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ. ನುಸಿಯು ಬಟ್ಟೆಯನ್ನು ತಿನ್ನುವಂತೆ ಅವರನ್ನು ತಿಂದುಬಿಡುವದು ಮತ್ತು ಹುಳವು ಅವರನ್ನು ಉಣ್ಣೆ ಯಂತೆ ತಿನ್ನುವದು; ಆದರೆ ನನ್ನ ನೀತಿಯು ಶಾಶ್ವತವಾಗಿ ರುವದು ಮತ್ತು ನನ್ನ ರಕ್ಷಣೆಯು ತಲತಲಾಂತರ ಗಳಿಗೂ ಇರುವದು.
- Isaiah 12:5 ಯೆಶಾಯ 12:5ಕರ್ತನಿಗೆ ಹಾಡಿರಿ, ಆತನು ಶ್ರೇಷ್ಠವಾದ ಕಾರ್ಯಗ ಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
- Psalm 30:4 ಕೀರ್ತನೆಗಳು 30:4ಓ ಕರ್ತನ ಪರಿಶುದ್ಧರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.
- Psalm 40:10 ಕೀರ್ತನೆಗಳು 40:10ನಿನ್ನ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಲಿಲ್ಲ; ನಿನ್ನ ನಂಬಿಕೆಯನ್ನೂ ರಕ್ಷಣೆಯನ್ನೂ ನಾನು ಪ್ರಕಟಿಸಿದ್ದೇನೆ; ನಿನ್ನ ಪ್ರೀತಿ ಕರುಣೆಗಳನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡಲಿಲ್ಲ.
- 1 Chronicles 16:9 1 ಪೂರ್ವಕಾಲವೃತ್ತಾಂತ 16:9ಆತನಿಗೆ ಹಾಡಿರಿ, ಆತನನ್ನು ಕೀರ್ತಿಸಿರಿ; ಆತನ ಅದ್ಭುತಗಳ ನ್ನೆಲ್ಲಾ ಧ್ಯಾನಿಸಿರಿ.
- Exodus 15:21 ವಿಮೋಚನಕಾಂಡ 15:21ಮಿರ್ಯಾಮಳು ಅವರಿಗೆ ಕೊಟ್ಟ ಉತ್ತರವೇನಂದರೆ--ನೀವು ಕರ್ತನಿಗೆ ಹಾಡಿರಿ, ಆತನು ಮಹಿಮೆಯಿಂದ ಜಯಿಸಿದ್ದಾನೆ; ಕುದುರೆಯನ್ನು ಸವಾರ ನನ್ನು ಸಮುದ್ರದಲ್ಲಿ ಹಾಕಿದ್ದಾನೆ ಎಂಬದು.