1 Chronicles · chapter 16 · verse 25
1 Chronicles 16:25 in Kannada
ಯಾಕಂದರೆ ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ;
Yaakandare kartanu doddavanoo bahalavaagi stutisalpadatakkavanoo;
1 Chronicles 16:25 in English
- King James Version (KJV)
- For great [is] the LORD, and greatly to be praised: he also [is] to be feared above all gods.
- World English Bible (WEB)
- For great is the LORD, and greatly to be praised. He also is to be feared above all gods.
- American Standard Version (ASV)
- For great is Jehovah, and greatly to be praised: He also is to be feared above all gods.
- Bible in Basic English (BBE)
- For the Lord is great, and greatly to be praised; and he is more to be feared than all other gods.
- Darby Translation (DBY)
- For Jehovah is great, and exceedingly to be praised; And he is terrible above all gods.
- Webster's Bible (WBS)
- For great [is] the LORD, and greatly to be praised: he also [is] to be feared above all gods.
- Young's Literal Translation (YLT)
- For great [is] Jehovah, and praised greatly, And fearful He [is] above all gods.
Read in context
- 23ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ.
- 24ಜನಾಂಗಗಳಲ್ಲಿ ಆತನ ಘನವನ್ನೂ ಎಲ್ಲಾ ಜನಗಳಲ್ಲಿ ಆತನ ಅದ್ಭುತಗಳನ್ನೂ ಪ್ರಕಟಿಸಿರಿ.
- 25ಯಾಕಂದರೆ ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ;
- 26ಆತನು ಎಲ್ಲಾ ದೇವರುಗಳ ಮೇಲೆ ಭಯಂಕರನೂ. ಯಾಕಂದರೆ ಜನಗಳ ದೇವರುಗಳೆಲ್ಲಾ ಬೊಂಬೆಗಳಾಗಿವೆ. ಆದರೆ ಕರ್ತನು ಆಕಾಶಗಳನ್ನು ಉಂಟುಮಾಡಿದನು.
- 27ಮಹಿ ಮೆಯೂ ಪ್ರಭೆಯೂ ಆತನ ಮುಂದೆ ಅವೆ. ಬಲವೂ ಆನಂದವೂ ಆತನ ಸ್ಥಳದಲ್ಲಿ ಅವೆ.
Cross references
- Jeremiah 10:6–10 ಯೆರೆಮೀಯ 10:6–10ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು. ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ. ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ. ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ ಬಂಗಾರವನ್ನು ಊಫಜಿನಿಂದಲೂ ತರುತ್ತಾರೆ; ಅದು ಕೆತ್ತನೆಯವನ ಕೆಲಸ, ಎರಕ ಹೊಯ್ಯುವವನ ಕೈಯಿಂದ ಉಂಟಾ ದದ್ದು. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ; ಅವುಗಳೆಲ್ಲಾ ಕೌಶಲ್ಯಗಾರರ ಕೆಲಸವೇ. ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು.
- Revelation 15:3–4 ಪ್ರಕಟನೆ 15:3–4ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ. ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- Psalm 89:7 ಕೀರ್ತನೆಗಳು 89:7ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
- Psalm 66:3–5 ಕೀರ್ತನೆಗಳು 66:3–5ದೇವರಿಗೆ--ನಿನ್ನ ಕೆಲಸಗಳಿಂದ ನೀನು ಎಷ್ಟು ಭಯಂಕರನಾಗಿದ್ದೀ ಎಂದು ಹೇಳಿರಿ. ನಿನ್ನ ಮಹಾಬಲದ ನಿಮಿತ್ತ ನಿನ್ನ ಶತ್ರುಗಳು ತಾವೇ ನಿನಗೆ ಅಧೀನರಾಗುವರು; ಭೂನಿವಾಸಿಗಳೆಲ್ಲ ನಿನ್ನನ್ನು ಹಾಡಿ ಆರಾಧಿಸಿ ನಿನ್ನ ನಾಮವನ್ನು ಕೀರ್ತಿಸುವರು. ಸೆಲಾ. ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಮನುಷ್ಯರ ಮಕ್ಕಳ ಕಡೆಗೆ ಆತನು ತನ್ನ ಕಾರ್ಯಗಳಲ್ಲಿ ಭಯಂಕರನಾಗಿದ್ದಾನೆ.
- Psalm 144:3–6 ಕೀರ್ತನೆಗಳು 144:3–6ಕರ್ತನೇ, ನೀನು ಮನುಷ್ಯನನ್ನು ತಿಳುಕೊಳ್ಳುವ ಹಾಗೆ ಅವನು ಎಷ್ಟರವನು? ನೀನು ಅವನನ್ನು ಲಕ್ಷಿಸುವ ಹಾಗೆ ನರಪುತ್ರನು ಎಷ್ಟರವನು? ಮನುಷ್ಯನು ವ್ಯರ್ಥತೆಗೆ ಸಮಾನನಾಗಿದ್ದಾನೆ; ಅವನ ದಿವಸಗಳು ಕಳೆದುಹೋಗುವ ನೆರಳಿನ ಹಾಗಿವೆ. ಓ ಕರ್ತನೇ, ನಿನ್ನ ಆಕಾಶಗಳನ್ನು ತಗ್ಗಿಸಿ ಇಳಿದು ಬಾ; ಬೆಟ್ಟಗಳನ್ನು ಮುಟ್ಟು; ಆಗ ಅವು ಹೊಗೆ ಹಾಯುವವು. ಮಿಂಚನ್ನು ಮಿಂಚಿಸಿ ಅವರನ್ನು ಚದರಿಸು; ನಿನ್ನ ಬಾಣಗಳನ್ನು ಎಸೆದು ಅವರನ್ನು ನಾಶಮಾಡು.
- Psalm 76:7 ಕೀರ್ತನೆಗಳು 76:7ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?
- Exodus 15:11 ವಿಮೋಚನಕಾಂಡ 15:11ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?
- Isaiah 40:12–17 ಯೆಶಾಯ 40:12–17ಸಮುದ್ರ ಸಾಗರವನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ ಆಕಾಶಗಳ ಮೇರೆಯನ್ನು ಗೇಣಿನಿಂದ ಅಳೆದವನೂ ಭೂಮಿಯ ದೂಳನ್ನು ಅಳತೆ ಮಾಡಿ ತಿಳುಕೊಂಡವನೂ ಬೆಟ್ಟಗಳ ಮಟ್ಟ ವನ್ನೂ ಗುಡ್ಡಗಳನ್ನೂ ತಕ್ಕಡಿಯಿಂದ ತೂಗಿದವನು ಯಾರು? ಕರ್ತನ ಆತ್ಮವನ್ನು ನಡಿಸಿದವನೂ ಇಲ್ಲವೇ ಆತನಿಗೆ ಆಲೋಚನಾಕರ್ತನಾಗಿ ಕಲಿಸಿದವನು ಯಾರು? ಆತನು ಯಾವನ ಆಲೋಚನೆಯನ್ನು ಪಡೆದನು. ಆತನಿಗೆ ಉಪದೇಶಿಸಿದವನೂ ನ್ಯಾಯದ ಹಾದಿ ಯನ್ನು ಕಲಿಸಿ, ತಿಳುವಳಿಕೆಯನ್ನು ಆತನಿಗೆ ಬೋಧಿಸಿ, ವಿವೇಕದ ಮಾರ್ಗವನ್ನು ತಿಳಿಸಿದವನು ಯಾರು? ಇಗೋ, ಆತನ ಎಣಿಕೆಯಲ್ಲಿ ಜನಾಂಗಗಳು ಕಪಿಲೆ ಯಿಂದುದುರುವ ಹನಿಯಂತೆಯೂ ತಕ್ಕಡಿಯಲ್ಲಿನ ದೂಳಿನ ಹಾಗೂ ಇರುತ್ತವೆ. ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಆತನು ಎತ್ತುತ್ತಾನೆ. ಲೆಬ ನೋನು ಸುಡುವದಕ್ಕೆ ಸಾಲವು ಅದರ ಮೃಗಗಳು ಬಲಿಗೆ (ಯಜ್ಞಕ್ಕೆ, ಹೋಮಕ್ಕೆ) ಸಾಲವು. ಸಕಲ ಜನಾಂಗಗಳು ಆತನ ಮುಂದೆ ಏನೂ ಇಲ್ಲದಂತಿವೆ; ಅವು ಆತನ ಎಣಿಕೆಯಲ್ಲಿ ಶೂನ್ಯವಾಗಿಯೂ ವ್ಯರ್ಥ ವಾಗಿಯೂ ಇವೆ.
- Jeremiah 5:22 ಯೆರೆಮೀಯ 5:22ನೀವು ನನಗೆ ಭಯಪಡುವದಿಲ್ಲವೋ? ನನ್ನ ಸಮ್ಮುಖದಲ್ಲಿ ನಡುಗುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ; ಸಮುದ್ರವು ದಾಟಕೂಡದ ಹಾಗೆ ಮರಳನ್ನು ನಿತ್ಯ ನೇಮಕದಿಂದ ನಾನು ಮೇರೆಯಾಗಿಟ್ಟಿದ್ದೇನೆ; ಅದರ ತೆರೆಗಳು ಎದ್ದರೂ ದಡ ವಿಾರಲಾರವು, ಘೋಷಿಸಿ ದರೂ ಅದನ್ನು ದಾಟಲಾರವು.