1 Chronicles · chapter 16 · verse 26
1 Chronicles 16:26 in Kannada
ಆತನು ಎಲ್ಲಾ ದೇವರುಗಳ ಮೇಲೆ ಭಯಂಕರನೂ. ಯಾಕಂದರೆ ಜನಗಳ ದೇವರುಗಳೆಲ್ಲಾ ಬೊಂಬೆಗಳಾಗಿವೆ. ಆದರೆ ಕರ್ತನು ಆಕಾಶಗಳನ್ನು ಉಂಟುಮಾಡಿದನು.
Aatanu ellaa devarugala mele bhayankaranoo. Yaakandare janagala devarugalellaa bombegalaagive. Aadare kartanu aakaashagalannu untumaadidanu.
1 Chronicles 16:26 in English
- King James Version (KJV)
- For all the gods of the people [are] idols: but the LORD made the heavens.
- World English Bible (WEB)
- For all the gods of the peoples are idols, but the LORD made the heavens.
- American Standard Version (ASV)
- For all the gods of the peoples are idols: But Jehovah made the heavens.
- Bible in Basic English (BBE)
- For all the gods of the nations are false gods; but the Lord made the heavens.
- Darby Translation (DBY)
- For all the gods of the peoples are idols; But Jehovah made the heavens.
- Webster's Bible (WBS)
- For all the gods of the people [are] idols: but the LORD made the heavens.
- Young's Literal Translation (YLT)
- For all gods of the peoples [are] nought, And Jehovah the heavens hath made.
Read in context
- 24ಜನಾಂಗಗಳಲ್ಲಿ ಆತನ ಘನವನ್ನೂ ಎಲ್ಲಾ ಜನಗಳಲ್ಲಿ ಆತನ ಅದ್ಭುತಗಳನ್ನೂ ಪ್ರಕಟಿಸಿರಿ.
- 25ಯಾಕಂದರೆ ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ;
- 26ಆತನು ಎಲ್ಲಾ ದೇವರುಗಳ ಮೇಲೆ ಭಯಂಕರನೂ. ಯಾಕಂದರೆ ಜನಗಳ ದೇವರುಗಳೆಲ್ಲಾ ಬೊಂಬೆಗಳಾಗಿವೆ. ಆದರೆ ಕರ್ತನು ಆಕಾಶಗಳನ್ನು ಉಂಟುಮಾಡಿದನು.
- 27ಮಹಿ ಮೆಯೂ ಪ್ರಭೆಯೂ ಆತನ ಮುಂದೆ ಅವೆ. ಬಲವೂ ಆನಂದವೂ ಆತನ ಸ್ಥಳದಲ್ಲಿ ಅವೆ.
- 28ಜನಸಂತತಿಗಳೇ, ಕರ್ತನಿಗೆ ಬಲ ಪ್ರಭಾವವನ್ನೂ ತನ್ನಿರಿ,
Cross references
- Isaiah 42:5 ಯೆಶಾಯ 42:5ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನು ಅದರಿಂದ ಉತ್ಪತ್ತಿ ಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ ಸಂಚರಿಸುವವರಿಗೆ ಆತ್ಮವನ್ನು ಕೊಡು ತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ--
- Psalm 102:25 ಕೀರ್ತನೆಗಳು 102:25ನೀನು ಪೂರ್ವಕಾಲದಲ್ಲಿ ಭೂಮಿ ಯನ್ನು ಸ್ಥಾಪಿಸಿದಿ; ಆಕಾಶಗಳು ನಿನ್ನ ಕೈ ಕೆಲಸಗಳಾ ಗಿವೆ.
- Isaiah 44:24 ಯೆಶಾಯ 44:24ನಿನ್ನನ್ನು ಗರ್ಭದಿಂದ ರೂಪಿಸಿದವನೂ ನಿನ್ನ ವಿಮೋಚಕನೂ ಆದ ಕರ್ತನು ಹೀಗನ್ನುತ್ತಾನೆ--ಎಲವನ್ನೂ ಉಂಟುಮಾಡಿದ ಕರ್ತನು ನಾನೇ. ನಾನೊ ಬ್ಬನೇ ಆಕಾಶವನ್ನು ವಿಸ್ತರಿಸಿ ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ.
- Leviticus 19:4 ಯಾಜಕಕಾಂಡ 19:4ನೀವು ವಿಗ್ರಹ ಗಳ ಕಡೆಗೆ ತಿರುಗಿಕೊಳ್ಳಬೇಡಿರಿ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ; ನಿಮ್ಮ ದೇವರಾಗಿರುವ ಕರ್ತನು ನಾನೇ.
- Isaiah 40:26 ಯೆಶಾಯ 40:26ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ; ಇಗೋ, ಇವುಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ ಅವುಗಳ ಸೈನ್ಯವನ್ನೆಲ್ಲಾ ಲೆಕ್ಕಮಾಡಿ ಹೊರಗೆ ತರು ವನು. ಆತನು ಅತಿ ಬಲಾಢ್ಯನಾಗಿರುವದರಿಂದ ಅವುಗಳೊಳಗೆ ಒಂದೂ ತಪ್ಪದು.
- Isaiah 44:9–20 ಯೆಶಾಯ 44:9–20ಕೆತ್ತಿದ ವಿಗ್ರಹವನ್ನು ಮಾಡುವವರೆಲ್ಲರೂ ವ್ಯರ್ಥ ರೇ; ಅವರ ಮನೋರಂಜಕ ವಸ್ತುಗಳು ಯಾತಕ್ಕೂ ಬಾರವು; ಅವರು ನೋಡದೆ ಇಲ್ಲವೆ ತಿಳಿಯದೆ, ನಾಚಿಕೆಗೆ ಗುರಿಯಾಗುವಂತೆ ಅವುಗಳೇ ಅವರಿಗೆ ಸ್ವಂತ ಸಾಕ್ಷಿಗಳಾಗಿರುವವು. ದೇವರನ್ನು ರೂಪಿ ಸುವವರೂ ಇಲ್ಲವೆ ಕೆತ್ತಿದ ವ್ಯರ್ಥವಾದ ವಿಗ್ರಹವನ್ನು ಎರಕ ಹೊಯ್ಯುವವರು ಯಾರು? ಇಗೋ, ಅವನ ಸಂಗಡಿಗರೆಲ್ಲಾ ನಾಚಿಕೆಗೊಳಗಾಗುವರು; ಆ ಕೆಲಸ ದವರು ಮನುಷ್ಯ ಮಾತ್ರದವರೇ; ಅವರೆಲ್ಲರೂ ಒಟ್ಟುಗೂಡಿಕೊಂಡು ನಿಂತುಕೊಳ್ಳಲಿ, ಆದರೂ ಅವರು ಭಯಪಟ್ಟು ಒಟ್ಟಿಗೆ ಲಜ್ಜೆಪಡುವರು. ಕಮ್ಮಾ ರನು ಚಿಮಟದೊಂದಿಗೆ ಬೆಂಕಿಯಲ್ಲಿ ಕೆಲಸ ಮಾಡುತ್ತಾ ಚಮಟಿಗೆಯಿಂದ ಅದನ್ನು ಬಡಿದು ರೂಪಿಸಿ ತನ್ನ ತೋಳಿನ ಬಲದಿಂದ ಕೆಲಸ ಮಾಡುತ್ತಾನೆ; ಹೌದು, ಅವನು ಹಸಿದು ಬಲಹೀನನಾಗಿದ್ದರೂ ನೀರು ಕುಡಿ ಯದೆ ದಣಿಯುತ್ತಾನೆ. ಬಡಗಿಯು ನೂಲನ್ನು ಹಿಡಿದು ಗೆರೆ ಎಳೆದು ಬಾಚಿಯಿಂದ ಸಮಮಾಡಿ, ಕೈವಾರದಿಂದ ಗುರುತಿಸಿ, ಆಮೇಲೆ ಮನುಷ್ಯನ ಆಕಾ ರಕ್ಕೆ ತಂದು ಮನೆಯಲ್ಲಿ ವಾಸಿಸ ತಕ್ಕದ್ದಾಗಲೆಂದು ಮನುಷ್ಯನ ಅಂದದಂತೆ ರೂಪಿಸುವನು. ಅರಣ್ಯದ ಮಧ್ಯದಲ್ಲಿರುವ ಮರಗಳಲ್ಲಿ ದೇವದಾರುಗಳನ್ನು ಕಡಿದು; ತುರಾಯಿ, ಅಲ್ಲೊನ್, ಮತ್ತು ಓಕ್ಮರ ಗಳನ್ನು ತನ್ನ ಬಲಕ್ಕೋಸ್ಕರ ತೆಗೆದು ಕೊಳ್ಳುವನು. ಪೀತದಾರವನ್ನು ಅವನು ನೆಡಲು ಮಳೆಯು ಅದನ್ನು ಬೆಳೆಯಿಸುವದು. ಆಗ ಅದು ಮನುಷ್ಯರು ಉರಿಸು ವದಕ್ಕಾಗುವದು; ಅದರಿಂದ ಚಳಿಕಾಯಿಸಿಕೊಳ್ಳು ವನು, ಹೌದು, ಅದನ್ನು ಬೆಂಕಿ ಹಚ್ಚಿ ರೊಟ್ಟಿ ಸುಡು ವನು; ಹೌದು, ಅವನು ಒಂದು ದೇವರನ್ನು ಮಾಡಿ ಅದಕ್ಕೆ ನಮಸ್ಕರಿಸುವನು; ಅದರಲ್ಲಿ ಒಂದು ಕೆತ್ತಿದ ವಿಗ್ರಹವನ್ನು ಮಾಡಿ, ಅದಕ್ಕೆ ಅಡ್ಡಬಿಳುವನು. ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು; ಅದರ ಇನ್ನೊಂದು ಭಾಗದಲ್ಲಿ ಮಾಂಸವನ್ನು ಉಣ್ಣುವನು; ಮಾಂಸವನ್ನು ಸುಟ್ಟು ತೃಪ್ತಿಹೊಂದುವನು; ಹೌದು, ಅವನು ಚಳಿಕಾಯಿಸಿ ಕೊಳ್ಳುತ್ತಾ--ಆಹಾ! ಬೆಂಕಿ ಯನ್ನು ಕಂಡೆ, ಬೆಚ್ಚಗಾಯಿತು ಅಂದುಕೊಳ್ಳುವನು; ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ--ನೀನೇ ನನ್ನ ದೇವರು, ನನ್ನನ್ನು ಕಾಪಾಡು ಎಂದು ಬೇಡಿಕೊಳ್ಳುವನು. ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ. ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು. ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
- Jeremiah 10:10–14 ಯೆರೆಮೀಯ 10:10–14ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು. ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು. ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು; ಆತನು ತನ್ನ ಶಬ್ದ ಮಾಡುವಾಗಲೇ ಆಕಾಶ ಗಳಲ್ಲಿ ನೀರುಗಳ ಸಮೂಹವಿರುವದು. ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏಳಮಾಡುತ್ತಾನೆ; ಮಳೆಯ ಸಂಗಡ ಮಿಂಚನ್ನು ಉಂಟು ಮಾಡುತ್ತಾನೆ; ತನ್ನ ಭಂಡಾರಗಳೊಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ. ಪ್ರತಿ ಮನುಷ್ಯನು ತನ್ನ ಜ್ಞಾನದಲ್ಲಿ ಪಶುವಾಗಿದ್ದಾನೆ; ಎರಕ ಹೊಯ್ಯುವವರೆಲ್ಲಾ ಕೆತ್ತಿದ ವಿಗ್ರಹಕ್ಕೋಸ್ಕರ ನಾಚಿಕೆಪಡುತ್ತಾರೆ; ಅವರ ಎರಕ ವಿಗ್ರಹವು ಸುಳ್ಳಾದದ್ದು; ಅವುಗಳಲ್ಲಿ ಉಸಿರು ಇಲ್ಲ.
- Acts 19:26 ಅಪೊಸ್ತಲರ ಕೃತ್ಯಗಳು 19:26ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ
- Revelation 14:7 ಪ್ರಕಟನೆ 14:7ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು.
- Psalm 115:4–8 ಕೀರ್ತನೆಗಳು 115:4–8ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ. ಅವುಗಳಿಗೆ ಬಾಯಿ ಉಂಟು; ಮಾತಾಡುವದಿಲ್ಲ; ಕಣ್ಣುಗಳುಂಟು; ನೋಡು ವದಿಲ್ಲ. ಕಿವಿಗಳುಂಟು; ಕೇಳುವದಿಲ್ಲ. ಮೂಗು ಉಂಟು; ಮೂಸುವದಿಲ್ಲ. ಕೈಗಳುಂಟು; ಮುಟ್ಟುವ ದಿಲ್ಲ. ಕಾಲುಗಳುಂಟು; ನಡೆಯುವದಿಲ್ಲ. ತಮ್ಮ ಗಂಟಲಿನಿಂದ ಮಾತನಾಡುವದಿಲ್ಲ, ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವ ರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
- 1 Corinthians 8:4 1 ಕೊರಿಂಥದವರಿಗೆ 8:4ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು.