1 Chronicles · chapter 16 · verse 8
1 Chronicles 16:8 in Kannada
ಕರ್ತನನ್ನು ಕೊಂಡಾ ಡಿರಿ, ಆತನ ಹೆಸರನ್ನು ಕರೆಯಿರಿ; ಜನಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯುವಂತೆ ಮಾಡಿರಿ.
Kartanannu kondaa diri, aatana hesarannu kareyiri; janagalalli aatana kriyegalannu tiliyuvante maadiri.
1 Chronicles 16:8 in English
- King James Version (KJV)
- Give thanks unto the LORD, call upon his name, make known his deeds among the people.
- World English Bible (WEB)
- Oh give thanks to the LORD. Call on his name. Make what he has done known among the peoples.
- American Standard Version (ASV)
- O give thanks unto Jehovah, call upon his name; Make known his doings among the peoples.
- Bible in Basic English (BBE)
- O give praise to the Lord; give honour to his name, talking of his doings among the peoples.
- Darby Translation (DBY)
- Give thanks unto Jehovah, call upon his name; Make known his acts among the peoples.
- Webster's Bible (WBS)
- Give thanks to the LORD, call upon his name, make known his deeds among the people.
- Young's Literal Translation (YLT)
- Give thanks to Jehovah, call in His name, Make known among the peoples His doings.
Read in context
- 6ಇದಲ್ಲದೆ ಯಾಜಕರಾದ ಬೆನಾಯನೂ ಯೆಹಜೀಯೇಲನೂ ದೇವರ ಒಡಂಬ ಡಿಕೆಯ ಮಂಜೂಷದ ಮುಂದೆ ಯಾವಾಗಲೂ ತುತೂರಿಗಳನ್ನು ಊದುವವರಾಗಿದ್ದರು.
- 7ಆಗ ಅದೇ ದಿವಸದಲ್ಲಿ ಕರ್ತನನ್ನು ಕೊಂಡಾಡುವದಕ್ಕೆ ದಾವೀದನು ಮೊದಲು ಆಸಾಫನಿಗೂ ಅವನ ಸಹೋದರರಿಗೂ ಈ ಸಂಗೀತವನ್ನು ಕೊಟ್ಟನು;--
- 8ಕರ್ತನನ್ನು ಕೊಂಡಾ ಡಿರಿ, ಆತನ ಹೆಸರನ್ನು ಕರೆಯಿರಿ; ಜನಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯುವಂತೆ ಮಾಡಿರಿ.
- 9ಆತನಿಗೆ ಹಾಡಿರಿ, ಆತನನ್ನು ಕೀರ್ತಿಸಿರಿ; ಆತನ ಅದ್ಭುತಗಳ ನ್ನೆಲ್ಲಾ ಧ್ಯಾನಿಸಿರಿ.
- 10ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ. ಕರ್ತನನ್ನು ಹುಡುಕುವವರ ಹೃದ ಯವು ಸಂತೋಷಿಸಲಿ.
Cross references
- Psalm 105:1–15 ಕೀರ್ತನೆಗಳು 105:1–15ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನ ಹೆಸರನ್ನು ಕರೆಯಿರಿ; ಜನ ಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯಮಾಡಿರಿ. ಆತನಿಗೆ ಹಾಡಿರಿ, ಆತನಿಗೆ ಕೀರ್ತನೆ ಹಾಡಿರಿ; ಆತನ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ. ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ; ಕರ್ತನನ್ನು ಹುಡುಕುವವರ ಹೃದಯವು ಸಂತೋಷಿಸಲಿ. ಕರ್ತನನ್ನೂ ಆತನ ಬಲವನ್ನೂ ಹುಡುಕಿರಿ. ಆತನ ಮುಖ ವನ್ನು ಯಾವಾಗಲೂ ಹುಡುಕಿರಿ. ಆತನು ಮಾಡಿದ ಆಶ್ಚರ್ಯ ಕಾರ್ಯಗಳನ್ನೂ ಆತನ ಅದ್ಭುತಗಳನ್ನೂ ಆತನ ಬಾಯಿಯ ನ್ಯಾಯಗಳನ್ನೂ ಜ್ಞಾಪಕಮಾಡಿ ಕೊಳ್ಳಿರಿ; ಆತನ ಸೇವಕನಾದ ಅಬ್ರಹಾಮನ ಸಂತತಿಯೇ, ಆತನು ಆದುಕೊಂಡ ಯಾಕೋಬನ ಮಕ್ಕಳೇ, ಆತನೇ ನಮ್ಮ ದೇವರಾದ ಕರ್ತನಾಗಿದ್ದಾನೆ; ಆತನ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಅವೆ. ತನ್ನ ಒಡಂಬಡಿಕೆಯನ್ನೂ ಸಾವಿರ ತಲಾಂತರಗ ಳಿಗೆ ಆಜ್ಞಾಪಿಸಿದ ತನ್ನ ಮಾತನ್ನೂ ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಇಸಾಕನಿಗೆ ಇಟ್ಟ ಆಣೆಯನ್ನೂ ಆತನು ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾನೆ. ಅದನ್ನು ಯಾಕೋಬನಿಗೆ ದೃಢ ಮಾಡಿದನು ಮತ್ತು ಇಸ್ರಾಯೇಲಗೆ ನಿತ್ಯ ಒಡಂಬಡಿಕೆ ಯಾಗಿ ಸ್ಥಾಪಿಸಿ ಹೇಳಿದ್ದೇನಂದರೆ-- ನಿನಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು. ಆಗ ಅವರು ಲೆಕ್ಕಕ್ಕೆ ಸ್ವಲ್ಪವಾಗಿಯೂ ಹೌದು, ಬಹಳ ಸ್ವಲ್ಪ ಮಂದಿಯಾಗಿಯೂ ಪರದೇಶಸ್ಥರಾ ಗಿಯೂ ಅದರಲ್ಲಿ ಇದ್ದರು. ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಬೇರೊಂದು ರಾಜ್ಯಕ್ಕೂ ಹೋದರು. ಮನುಷ್ಯರು ಅವರಿಗೆ ಕೇಡು ಮಾಡದಂತೆ ಆತನು ತಡೆದನು; ಹೌದು, ಅವರಿಗೋ ಸ್ಕರ ಆತನು ಅರಸುಗಳನ್ನು ಗದರಿಸಿದನು. ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ ಎಂದು ಹೇಳಿದನು.
- Isaiah 12:4 ಯೆಶಾಯ 12:4ನೀವು--ಕರ್ತನನ್ನು ಕೊಂಡಾ ಡಿರಿ; ಜನರ ಮಧ್ಯದಲ್ಲಿ ಆತನ ಹೆಸರನ್ನೆತ್ತಿ ಕ್ರಿಯೆಗ ಳನ್ನು ಪ್ರಕಟಿಸಿರಿ. ಆತನ ನಾಮವನ್ನು ಉನ್ನತೋನ್ನತ ವೆಂದು ಎತ್ತಿ ಹೇಳಿರಿ ಎಂದು ಆ ದಿನದಲ್ಲಿ ಹೇಳುವಿರಿ.
- 2 Kings 19:19 2 ಅರಸುಗಳು 19:19ಆದದ ರಿಂದ ಅವರು ಅವುಗಳನ್ನು ನಾಶಮಾಡಿದ್ದಾರೆ. ಆದರೆ ಈಗ ನಮ್ಮ ದೇವರಾದ ಕರ್ತನೇ, ನೀನೊಬ್ಬನೇ ದೇವರಾದ ಕರ್ತನಾಗಿದ್ದೀ ಎಂದು ಭೂಮಿಯ ಎಲ್ಲಾ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸು ಎಂಬದೇ.
- Psalm 145:5–6 ಕೀರ್ತನೆಗಳು 145:5–6ನಿನ್ನ ಮಹಿಮೆಯ ಘನದ ಪ್ರಭೆಯ ವಿಷಯ ವಾಗಿಯೂ ನಿನ್ನ ಅದ್ಭುತಕಾರ್ಯಗಳ ವಿಷಯ ವಾಗಿಯೂ ನಿನ್ನ ಭಯಂಕರವಾದ ತ್ರಾಣದ ವಿಷಯ ವಾಗಿಯೂ ಅವರು ಹೇಳುವರು; ನಿನ್ನ ಮಹತ್ವವನ್ನು ನಾನು ಸಾರುವೆನು.
- 1 Corinthians 1:2 1 ಕೊರಿಂಥದವರಿಗೆ 1:2ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರೂ ಪರಿಶುದ್ಧರಾಗು ವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ಅವರಿಗೂ ನಮಗೂ ಪ್ರತಿಯೊಂದು ಸ್ಥಳದಲ್ಲಿ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲರಿಗೂ
- 1 Chronicles 16:8–22 1 ಪೂರ್ವಕಾಲವೃತ್ತಾಂತ 16:8–22ಕರ್ತನನ್ನು ಕೊಂಡಾ ಡಿರಿ, ಆತನ ಹೆಸರನ್ನು ಕರೆಯಿರಿ; ಜನಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯುವಂತೆ ಮಾಡಿರಿ. ಆತನಿಗೆ ಹಾಡಿರಿ, ಆತನನ್ನು ಕೀರ್ತಿಸಿರಿ; ಆತನ ಅದ್ಭುತಗಳ ನ್ನೆಲ್ಲಾ ಧ್ಯಾನಿಸಿರಿ. ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ. ಕರ್ತನನ್ನು ಹುಡುಕುವವರ ಹೃದ ಯವು ಸಂತೋಷಿಸಲಿ. ಕರ್ತನನ್ನೂ ಆತನ ಬಲ ವನ್ನೂ ಆಶ್ರಯಿಸಿರಿ. ಆತನ ಮುಖವನ್ನು ಯಾವಾ ಗಲೂ ಹುಡುಕಿರಿ. ಆತನು ಮಾಡಿದ ಅದ್ಭುತ ಗಳನ್ನೂ ಮಹತ್ಕಾರ್ಯಗಳನ್ನು ಆತನ ನ್ಯಾಯನಿರ್ಣ ಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ. ಆತನ ಸೇವ ಕನಾದ ಇಸ್ರಾಯೇಲಿನ ಸಂತಾನವೇ, ಆತನು ಆದು ಕೊಂಡ ಯಾಕೋಬನ ಮಕ್ಕಳೇ, ಆತನೇ ನಮ್ಮ ದೇವರಾದ ಕರ್ತನಾಗಿದ್ದಾನೆ; ಆತನ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಅವೆ. ಆತನ ಒಡಂಬಡಿಕೆ ಯನ್ನು ಸಾವಿರ ತಲಾಂತರಗಳಿಗೆ ಆತನು ಆಜ್ಞಾಪಿ ಸಿದ ಮಾತನ್ನು ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸಾಕನಿಗೆ ಇಟ್ಟ ಆಣೆಯನ್ನು ಇದನ್ನು ನಿತ್ಯವೂ ಜ್ಞಾಪಕಮಾಡಿಕೊಳ್ಳಿರಿ. ಅದನ್ನು ಯಾಕೋಬನಿಗೆ ನೇಮಕವಾಗಿಯೂ ಇಸ್ರಾಯೇಲಿಗೆ ನಿತ್ಯ ಒಡಂಬಡಿಕೆಯಾಗಿಯೂ ಸ್ಥಾಪಿಸಿ ಹೇಳಿದ್ದೇನಂದರೆ--ನಿನಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯ ತೆಯ ಪಾಲಾಗಿ ಕೊಡುವೆನು. ಆಗ ನೀವು ಸ್ವಲ್ಪ ಮಂದಿಯಾಗಿಯೂ ಪರದೇಶಸ್ಥರಾಗಿಯೂ ಅದರಲ್ಲಿ ಇದ್ದಿರಿ. ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಮತ್ತೊಂದಕ್ಕೂ ಹೋಗುತ್ತಿದ್ದರು. ಆತನು ಯಾರಿಂದಲೂ ಅವರಿಗೆ ಅನ್ಯಾಯ ಮಾಡ ಗೊಡಿಸಲಿಲ್ಲ; ಹೌದು, ಅವರಿಗೋಸ್ಕರ ಅರಸುಗಳನ್ನು ಗದರಿಸಿದನು. ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ; ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ.
- 1 Chronicles 16:34 1 ಪೂರ್ವಕಾಲವೃತ್ತಾಂತ 16:34ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು;ಆತನ ಕೃಪೆಯು ಯುಗಯುಗಕ್ಕೂ ಅವೆ.
- Acts 9:14 ಅಪೊಸ್ತಲರ ಕೃತ್ಯಗಳು 9:14ಇಲ್ಲಿಯೂ ನಿನ್ನ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಪ್ರಧಾನಯಾಜಕರಿಂದ ಹೊಂದಿದ್ದಾನೆ ಅಂದನು.
- 1 Kings 8:43 1 ಅರಸುಗಳು 8:43ಅವನು ಬಂದು ಈ ಮಂದಿರದ ಕಡೆಗೆ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲ್ಯರ ಹಾಗೆ ಭೂಲೋಕದಲ್ಲಿರುವ ಸಮಸ್ತರು ನಿನಗೆ ಭಯಪಡುವದಕ್ಕಾಗಿ ನಿನ್ನ ಹೆಸರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಮನೆಯು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದೆ ಎಂದು ಅವರು ತಿಳಿಯುವ ಹಾಗೆಯೂ ನಿನ್ನ ನಿವಾಸವಾಗಿರುವ ಪರಲೋಕದಿಂದ ಕೇಳಿ ಪರದೇಶಸ್ಥನು ನಿನಗೆ ಕೂಗಿದ ಪ್ರಕಾರ ಮಾಡು.
- Psalm 67:2–4 ಕೀರ್ತನೆಗಳು 67:2–4ಆಗ ನಿನ್ನ ಮಾರ್ಗವೂ ನಿನ್ನ ರಕ್ಷಣೆಯ ಸ್ವಸ್ಥತೆಯೂ, ಭೂಮಿಯಲ್ಲಿ, ಎಲ್ಲಾ ಜನಾಂಗಗಳಿಗೆ ತಿಳಿಯಲ್ಪಡು ವದು. ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ. ಜನರೆಲ್ಲಾ ನಿನ್ನನ್ನು ಕೊಂಡಾಡಲಿ. ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ.
- Psalm 78:3–6 ಕೀರ್ತನೆಗಳು 78:3–6ಅವುಗಳನ್ನು ಕೇಳಿ ತಿಳಿದಿದ್ದೇವೆ; ನಮ್ಮ ತಂದೆಗಳು ನಮಗೆ ವಿವರಿಸಿದರು. ನಾವು ಕರ್ತನ ಸ್ತೋತ್ರಗಳನ್ನೂ ಆತನ ತ್ರಾಣವನ್ನೂ ಆತನು ಮಾಡಿದ ಅದ್ಭುತಗಳನ್ನೂ ವಿವರಿಸುತ್ತಾ ಅವರ ಮಕ್ಕಳಿಗೆ, ಮುಂದಿನ ವಂಶಕ್ಕೆ ಮರೆಮಾಡುವದಿಲ್ಲ. ಆತನು ಯಾಕೋಬನಲ್ಲಿ ಸಾಕ್ಷಿ ಯನ್ನು ಸ್ಥಾಪಿಸಿ ಇಸ್ರಾಯೇಲಿನಲ್ಲಿ ನ್ಯಾಯಪ್ರಮಾಣವನ್ನು ಇಟ್ಟು ಮುಂದಿನ ವಂಶವು ಅಂದರೆ ಹುಟ್ಟುವ ದಕ್ಕಿರುವ ಮಕ್ಕಳು ತಿಳಿದು, ಎದ್ದು, ತಮ್ಮ ಮಕ್ಕಳಿಗೆ ವಿವರಿಸಲಾಗಿ