1 Chronicles · chapter 16 · verse 9
1 Chronicles 16:9 in Kannada
ಆತನಿಗೆ ಹಾಡಿರಿ, ಆತನನ್ನು ಕೀರ್ತಿಸಿರಿ; ಆತನ ಅದ್ಭುತಗಳ ನ್ನೆಲ್ಲಾ ಧ್ಯಾನಿಸಿರಿ.
Aatanige haadiri, aatanannu keertisiri; aatana adbhutagala nnellaa dhyaanisiri.
1 Chronicles 16:9 in English
- King James Version (KJV)
- Sing unto him, sing psalms unto him, talk ye of all his wondrous works.
- World English Bible (WEB)
- Sing to him. Sing praises to him. Tell of all his marvelous works.
- American Standard Version (ASV)
- Sing unto him, sing praises unto him; Talk ye of all his marvellous works.
- Bible in Basic English (BBE)
- Let your voice be sounded in songs and melody; let all your thoughts be of the wonder of his works.
- Darby Translation (DBY)
- Sing unto him, sing psalms unto him; Meditate upon all his wondrous works.
- Webster's Bible (WBS)
- Sing to him, sing psalms to him, talk ye of all his wonderous works.
- Young's Literal Translation (YLT)
- Sing ye to Him, sing psalms to Him, Meditate on all His wonders.
Read in context
- 7ಆಗ ಅದೇ ದಿವಸದಲ್ಲಿ ಕರ್ತನನ್ನು ಕೊಂಡಾಡುವದಕ್ಕೆ ದಾವೀದನು ಮೊದಲು ಆಸಾಫನಿಗೂ ಅವನ ಸಹೋದರರಿಗೂ ಈ ಸಂಗೀತವನ್ನು ಕೊಟ್ಟನು;--
- 8ಕರ್ತನನ್ನು ಕೊಂಡಾ ಡಿರಿ, ಆತನ ಹೆಸರನ್ನು ಕರೆಯಿರಿ; ಜನಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯುವಂತೆ ಮಾಡಿರಿ.
- 9ಆತನಿಗೆ ಹಾಡಿರಿ, ಆತನನ್ನು ಕೀರ್ತಿಸಿರಿ; ಆತನ ಅದ್ಭುತಗಳ ನ್ನೆಲ್ಲಾ ಧ್ಯಾನಿಸಿರಿ.
- 10ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ. ಕರ್ತನನ್ನು ಹುಡುಕುವವರ ಹೃದ ಯವು ಸಂತೋಷಿಸಲಿ.
- 11ಕರ್ತನನ್ನೂ ಆತನ ಬಲ ವನ್ನೂ ಆಶ್ರಯಿಸಿರಿ. ಆತನ ಮುಖವನ್ನು ಯಾವಾ ಗಲೂ ಹುಡುಕಿರಿ.
Cross references
- Colossians 3:16 ಕೊಲೊಸ್ಸೆಯವರಿಗೆ 3:16ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
- Psalm 96:1–3 ಕೀರ್ತನೆಗಳು 96:1–3ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ. ಕರ್ತನಿಗೆ ಹಾಡಿರಿ, ಆತನ ಹೆಸರನ್ನು ಸ್ತುತಿಸಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ. ಅನ್ಯಜನಾಂಗದಲ್ಲಿ ಆತನ ಘನವನ್ನೂ ಎಲ್ಲಾ ಜನಾಂಗಗಳಲ್ಲಿ ಆತನ ಅದ್ಭುತಗಳನ್ನೂ ವಿವ ರಿಸಿರಿ.
- James 5:13 ಯಾಕೋಬನು 5:13ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ.
- Psalm 98:1–4 ಕೀರ್ತನೆಗಳು 98:1–4ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಆತನು ಅದ್ಭುತಗಳನ್ನು ಮಾಡಿದ್ದಾನೆ; ಆತನ ಬಲಗೈಯೂ ಪರಿಶುದ್ಧತೋಳೂ ಆತನಿಗೆ ಜಯ ವನ್ನು ತಂದಿವೆ. ರ್ತನು ತನ್ನ ರಕ್ಷಣೆಯನ್ನು ತಿಳಿಯ ಮಾಡಿದ್ದಾನೆ; ತನ್ನ ನೀತಿಯನ್ನು ಜನಾಂಗಗಳ ದೃಷ್ಟಿಗೆ ಬಹಿರಂಗವಾಗಿ ಪ್ರಕಟಮಾಡಿದ್ದಾನೆ. ತನ್ನ ಕರುಣೆ ಯನ್ನೂ ಸತ್ಯತೆಯನ್ನೂ ಇಸ್ರಾಯೇಲಿನ ಮನೆಗೋಸ್ಕರ ಜ್ಞಾಪಕ ಮಾಡಿಕೊಂಡಿದ್ದಾನೆ; ಭೂಮಿಯ ಕೊನೆಗಳೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡಿವೆ. ಸಮಸ್ತ ಭೂಮಿಯೇ; ಕರ್ತನಿಗೆ ಉತ್ಸಾಹಧ್ವನಿ ಮಾಡಿರಿ, ಗಟ್ಟಿಯಾದ ಧ್ವನಿಯಿಂದ ಸಂತೋಷಿಸಿ ಕೀರ್ತಿಸಿರಿ.
- Psalm 95:1–2 ಕೀರ್ತನೆಗಳು 95:1–2ಬನ್ನಿರಿ, ಕರ್ತನಿಗೆ ಉತ್ಸಾಹ ಧ್ವನಿಮಾಡುವಾ ನಮ್ಮ ರಕ್ಷಣೆಯ ಬಂಡೆಗೆ ಜಯಧ್ವನಿ ಮಾಡೋಣ. ಸ್ತೋತ್ರದಿಂದ ಆತನ ಸನ್ನಿಧಿಯ ಮುಂದೆ ಬಂದು ಕೀರ್ತನೆಗಳಿಂದ ಆತನಿಗೆ ಆನಂದದ ಧ್ವನಿಮಾಡೋಣ.
- Matthew 26:30 ಮತ್ತಾಯನು 26:30ತರುವಾಯ ಅವರು ಕೀರ್ತನೆ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೋದರು.
- Psalm 40:10 ಕೀರ್ತನೆಗಳು 40:10ನಿನ್ನ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಲಿಲ್ಲ; ನಿನ್ನ ನಂಬಿಕೆಯನ್ನೂ ರಕ್ಷಣೆಯನ್ನೂ ನಾನು ಪ್ರಕಟಿಸಿದ್ದೇನೆ; ನಿನ್ನ ಪ್ರೀತಿ ಕರುಣೆಗಳನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡಲಿಲ್ಲ.
- Psalm 71:17 ಕೀರ್ತನೆಗಳು 71:17ಓ ದೇವರೇ, ನನ್ನ ಯೌವನದಿಂದ ನನಗೆ ನೀನು ಕಲಿಸಿದ್ದೀ; ಈ ವರೆಗೂ ನಿನ್ನ ಅದ್ಭುತ ಕಾರ್ಯಗಳನ್ನು ತಿಳಿಸುವೆನು.
- Ephesians 5:19 ಎಫೆಸದವರಿಗೆ 5:19ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ.
- Psalm 145:4–6 ಕೀರ್ತನೆಗಳು 145:4–6ತಲಾಂತರಕ್ಕೆ ಇನ್ನೊಂದು ತಲಾಂತರವು ನಿನ್ನ ಕೆಲಸಗಳನ್ನು ಪ್ರಕಟಿಸುತ್ತದೆ; ನಿನ್ನ ಪರಾಕ್ರಮಗಳನ್ನು ತಿಳಿಸುತ್ತಾರೆ. ನಿನ್ನ ಮಹಿಮೆಯ ಘನದ ಪ್ರಭೆಯ ವಿಷಯ ವಾಗಿಯೂ ನಿನ್ನ ಅದ್ಭುತಕಾರ್ಯಗಳ ವಿಷಯ ವಾಗಿಯೂ ನಿನ್ನ ಭಯಂಕರವಾದ ತ್ರಾಣದ ವಿಷಯ ವಾಗಿಯೂ ಅವರು ಹೇಳುವರು; ನಿನ್ನ ಮಹತ್ವವನ್ನು ನಾನು ಸಾರುವೆನು.
- Malachi 3:16 ಮಲಾಕಿಯ 3:16ಆಗ ಕರ್ತನಿಗೆ ಭಯಪಡುವವರು ಒಬ್ಬರ ಸಂಗಡಲೊಬ್ಬರು ಆಗಾಗ್ಗೆ ಮಾತಾಡಿಕೊಂಡರು; ಕರ್ತನು ಕಿವಿಗೊಟ್ಟು ಅದನ್ನು ಕೇಳಿದನು; ಇದಲ್ಲದೆ ಕರ್ತನಿಗೆ ಭಯಪಡುವವರಿಗೋಸ್ಕರವೂ ಆತನ ಹೆಸರನ್ನು ನೆನಸುವವರಿಗೋಸ್ಕರವೂ ಆತನ ಮುಂದೆ ಜ್ಞಾಪಕದ ಪುಸ್ತಕವು ಬರೆಯಲ್ಪಟ್ಟಿತು.
- Psalm 145:12 ಕೀರ್ತನೆಗಳು 145:12ಮನುಷ್ಯನ ಮಕ್ಕಳಿಗೆ ಆತನ ಪರಾಕ್ರಮ ಕ್ರಿಯೆಗಳನ್ನೂ ಆತನ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು.