1 Chronicles · chapter 17 · verse 5
1 Chronicles 17:5 in Kannada
ನಾನು ಐಗುಪ್ತದಿಂದ ಇಸ್ರಾ ಯೇಲಿನ ಮಕ್ಕಳನ್ನು ಬರಮಾಡಿದ ದಿವಸ ಮೊದಲು ಗೊಂಡು ಇಂದಿನ ವರೆಗೂ ಮನೆಯಲ್ಲಿ ವಾಸಮಾಡದೆ ಡೇರೆಯಿಂದ ಡೇರೆಗೂ ಗುಡಾರದಿಂದ ಗುಡಾರಕ್ಕೂ ಹೋಗುತ್ತಿದ್ದೆನು.
Naanu aiguptadinda israa yelina makkalannu baramaadida divasa modalu gondu indina varegoo maneyalli vaasamaadade dereyinda deregoo gudaaradinda gudaarakkoo hoguttiddenu.
1 Chronicles 17:5 in English
- King James Version (KJV)
- For I have not dwelt in an house since the day that I brought up Israel unto this day; but have gone from tent to tent, and from [one] tabernacle [to another].
- World English Bible (WEB)
- for I have not lived in a house since the day that I brought up Israel to this day, but have gone from tent to tent, and from one tent to another.
- American Standard Version (ASV)
- for I have not dwelt in a house since the day that I brought up Israel, unto this day, but have gone from tent to tent, and from [one] tabernacle [to another].
- Bible in Basic English (BBE)
- For from the day when I took Israel up, till this day, I have had no house, but have gone from tent to tent, and from living-place to living-place.
- Darby Translation (DBY)
- for I have not dwelt in a house since the day that I brought up Israel to this day; but I have been from tent to tent, and from [one] tabernacle [to another].
- Webster's Bible (WBS)
- For I have not dwelt in a house since the day that I brought up Israel to this day; but have gone from tent to tent, and from [one] tabernacle [to another] .
- Young's Literal Translation (YLT)
- for I have not dwelt in a house from the day that I brought up Israel till this day, and I am from tent unto tent: and from the tabernacle,
Read in context
- 3ಅದೇ ರಾತ್ರಿಯಲ್ಲಿ ಕರ್ತನ ವಾಕ್ಯವು ನಾತಾನನಿಗೆ ಉಂಟಾಗಿ ಹೇಳಿದ್ದೇನಂದರೆ--
- 4ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ--ಕರ್ತನು ಹೀಗೆ ಹೇಳು ತ್ತಾನೆ--ನಾನು ವಾಸವಾಗಿರಲು ನೀನು ಮನೆಯನ್ನು ನನಗೆ ಕಟ್ಟಿಸಬೇಡ.
- 5ನಾನು ಐಗುಪ್ತದಿಂದ ಇಸ್ರಾ ಯೇಲಿನ ಮಕ್ಕಳನ್ನು ಬರಮಾಡಿದ ದಿವಸ ಮೊದಲು ಗೊಂಡು ಇಂದಿನ ವರೆಗೂ ಮನೆಯಲ್ಲಿ ವಾಸಮಾಡದೆ ಡೇರೆಯಿಂದ ಡೇರೆಗೂ ಗುಡಾರದಿಂದ ಗುಡಾರಕ್ಕೂ ಹೋಗುತ್ತಿದ್ದೆನು.
- 6ನಾನು ನನ್ನ ಜನರಾದ ಇಸ್ರಾಯೇ ಲ್ಯರನ್ನು ಮೇಯಿಸಲು ಆಜ್ಞಾಪಿಸಿದ ಇಸ್ರಾಯೇಲಿನ ಅಧಿಪತಿಗಳಲ್ಲಿ ಒಬ್ಬನ ಸಂಗಡಲಾದರೂ--ನೀವು ನನಗೆ ದೇವದಾರು ಮನೆಯನ್ನು ಯಾಕೆ ಕಟ್ಟಲಿಲ್ಲ ವೆಂದು ನಾನು ಸಮಸ್ತ ಇಸ್ರಾಯೇಲಿನ ಸಂಗಡ ನಡೆದ ಯಾವ ಸ್ಥಳದಲ್ಲಾದರೂ ಏನಾದರೂ ಹೇಳಿದೆನೋ?
- 7ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳ ಬೇಕಾದದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನೀನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಕುರಿಗಳ ಹಿಂದೆ ನಡೆದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು.
Cross references
- 2 Samuel 7:6 2 ಸಮುವೇಲನು 7:6ನಿಶ್ಚಯವಾಗಿ ನಾನು ಐಗುಪ್ತದಿಂದ ಇಸ್ರಾಯೇಲ್ ಮಕ್ಕಳನ್ನು ಬರಮಾಡಿದ ಕಾಲ ಮೊದಲುಗೊಂಡು ಇಂದಿನ ವರೆಗೂ ಮನೆ ಯಲ್ಲಿ ವಾಸಮಾಡದೆ ಡೇರೆಯಲ್ಲಿಯೂ ಗುಡಾರ ದಲ್ಲಿಯೂ ವಾಸಮಾಡಿಕೊಂಡಿದ್ದೆನು.
- 1 Kings 8:16 1 ಅರಸುಗಳು 8:16ನನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲು ಗೊಂಡು ನನ್ನ ನಾಮವು ಅದರಲ್ಲಿ ಇರುವ ನಿಮಿತ್ತ ಮಂದಿರವನ್ನು ಕಟ್ಟುವದಕ್ಕೆ ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ನಾನು ಆದು ಕೊಳ್ಳದೆ ನನ್ನ ಜನರಾದ ಇಸ್ರಾಯೇಲಿನ ಮೇಲೆ ಇರಲು ನಾನು ದಾವೀದನನ್ನು ಆದುಕೊಂಡೆನು ಅಂದನು.
- Isaiah 66:1–2 ಯೆಶಾಯ 66:1–2ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ? ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.
- Exodus 40:2–3 ವಿಮೋಚನಕಾಂಡ 40:2–3ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸಭೆಯ ಡೇರೆಯನ್ನು ಮತ್ತು ಗುಡಾರವನ್ನು ಎತ್ತಿ ನಿಲ್ಲಿಸು. ಮಂಜೂಷದ ಸಾಕ್ಷಿಯ ಪೆಟ್ಟಿಗೆಯನ್ನು ಒಳಗಿಟ್ಟು ಅದನ್ನು ನೀನು ತೆರೆಯಿಂದ ಮುಚ್ಚಬೇಕು.
- 2 Chronicles 2:6 2 ಪೂರ್ವಕಾಲವೃತ್ತಾಂತ 2:6ಆತನಿಗೆ ಮನೆಯನ್ನು ಕಟ್ಟಿಸಲು ಶಕ್ತಿಯನ್ನು ಹೊಂದಿ ದವನು ಯಾರು? ಆಕಾಶಗಳೂ ಆಕಾಶಾಕಾಶಗಳೂ ಆತನನ್ನು ಹಿಡಿಯಲಾರವು; ಆತನ ಮುಂದೆ ಯಜ್ಞ ವನ್ನು ಸುಡುವದಕ್ಕೆ ಹೊರತಾಗಿ ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು?
- 1 Kings 8:27 1 ಅರಸುಗಳು 8:27ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾ ಕಾಶಗಳೂ ನಿನ್ನನ್ನು ಹಿಡಿಯಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಮಂದಿರವು ಹಿಡಿಯುವದು ಹೇಗೆ?
- 1 Kings 8:4 1 ಅರಸುಗಳು 8:4ಯಾಜಕರೂ ಲೇವಿಯರೂ ಇವುಗಳನ್ನು ತಂದರು.
- 2 Samuel 6:17 2 ಸಮುವೇಲನು 6:17ಅವರು ಕರ್ತನ ಮಂಜೂಷವನ್ನು ಒಳಗೆ ತಂದು ದಾವೀದನು ಹಾಕಿಸಿದ ಗುಡಾರದೊಳಗೆ ಅದರ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ ದಾವೀದನು ಕರ್ತನ ಸನ್ನಿಧಿಯಲ್ಲಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು.
- 2 Chronicles 6:18 2 ಪೂರ್ವಕಾಲವೃತ್ತಾಂತ 6:18ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ಮನುಷ್ಯರ ಸಂಗಡ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾಕಾಶಗಳೂ ನಿನ್ನನ್ನು ಹಿಡಿಸಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಆಲಯವು ನಿನ್ನನ್ನು ಹಿಡಿಸುವದು ಹೇಗೆ?
- Acts 7:44–50 ಅಪೊಸ್ತಲರ ಕೃತ್ಯಗಳು 7:44–50ಸಾಕ್ಷೀಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದಾತನು ಅವನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸ ಬೇಕೆಂದು ನೇಮಿಸಿದ್ದನು. ತರುವಾಯ ಬಂದ ನಮ್ಮ ಪಿತೃಗಳು ಸಹ ತಮ್ಮ ಮುಂದೆ ದೇವರು ಹೊರಡಿಸಿದ ಅನ್ಯಜನಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಂಡಾಗ ಯೆಹೋಶುವನ ಕೂಡ ಆ ಗುಡಾರವನ್ನು ತಂದರು. ಅದು ದಾವೀದನ ಕಾಲದ ವರೆಗೂ ಅಲ್ಲೇ ಇತ್ತು. ದಾವೀದನು ದೇವರ ಸನ್ನಿಧಾನದಲ್ಲಿ ದಯೆ ಹೊಂದಿ ಯಾಕೋಬನ ದೇವರಿಗೋಸ್ಕರ ಆಲಯ ವನ್ನು ಕಟ್ಟಬೇಕೆಂದು ಅಪೇಕ್ಷಿಸಿದನು. ಆದರೆ ಸೊಲೊಮೋನನು ಆತನಿಗೋಸ್ಕರ ಮನೆಯನ್ನು ಕಟ್ಟಿಸಿದನು. ಆದರೂ ಮಹೋನ್ನತನು ಕೈಯಿಂದ ಕಟ್ಟಿದ ಆಲಯಗಳಲ್ಲಿ ವಾಸಮಾಡುವಾತನಲ್ಲ. ಯಾಕಂದರೆ-- ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಪೀಠ, ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ಇಲ್ಲವೆ ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವದು? ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತಲ್ಲಾ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಪ್ರವಾದಿಯು ನುಡಿದಿದ್ದಾನೆ.