1 Chronicles · chapter 19 · verse 13
1 Chronicles 19:13 in Kannada
ಧೈರ್ಯವಾಗಿರು; ನಾವು ನಮ್ಮ ಜನರಿಗೋಸ್ಕ ರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲ ಗೊಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು.
Dhairyavaagiru; naavu namma janarigoska ravoo namma devara pattanagaligoskaravoo bala gollona. Kartanu tanna drushtige uttamavaadaddannu maadali andanu.
1 Chronicles 19:13 in English
- King James Version (KJV)
- Be of good courage, and let us behave ourselves valiantly for our people, and for the cities of our God: and let the LORD do [that which is] good in his sight.
- World English Bible (WEB)
- Be courageous, and let’s be strong for our people and for the cities of our God. May the LORD do that which seems good to him.”
- American Standard Version (ASV)
- Be of good courage, and let us play the man for our people, and for the cities of our God: and Jehovah do that which seemeth him good.
- Bible in Basic English (BBE)
- Take heart, and let us be strong for our people and for the towns of our God; and may the Lord do what seems good to him.
- Darby Translation (DBY)
- Be strong, and let us shew ourselves valiant for our people, and for the cities of our God; and Jehovah will do what is good in his sight.
- Webster's Bible (WBS)
- Be of good courage, and let us behave ourselves valiantly for our people, and for the cities of our God: and let the LORD do [that which is] good in his sight.
- Young's Literal Translation (YLT)
- be strong, and we strengthen ourselves, for our people, and for the cities of our God, and Jehovah doth that which is good in His eyes.'
Read in context
- 11ಆದರೆ ಮಿಕ್ಕಾದವರು ಅಮ್ಮೋನಿಯರಿಗೆದುರಾಗಿ ವ್ಯೂಹಕಟ್ಟುವ ಹಾಗೆ ಅವರನ್ನು ತನ್ನ ಸಹೋದರನಾದ ಅಬ್ಷೈನ ಕೈಯಲ್ಲಿ ಒಪ್ಪಿಸಿಕೊಟ್ಟು ಅವನಿಗೆ--
- 12ಅರಾಮ್ಯರು ನನಗಿಂತ ಬಲವುಳ್ಳವರಾಗಿದ್ದರೆ ನೀನು ನನಗೆ ಸಹಾಯ ಮಾಡಬೇಕು; ಅಮ್ಮೋನಿಯರು ನಿನಗಿಂತ ಬಲವುಳ್ಳ ವರಾಗಿದ್ದರೆ, ನಾನು ನಿನಗೆ ಸಹಾಯ ಮಾಡುವೆನು,
- 13ಧೈರ್ಯವಾಗಿರು; ನಾವು ನಮ್ಮ ಜನರಿಗೋಸ್ಕ ರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲ ಗೊಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು.
- 14ಆಗ ಯೋವಾಬನೂ ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ಯುದ್ಧ ಮಾಡಲು ಮುಂಗೊಂಡರು.
- 15ಅವರು ಅವನ ಎದುರಿ ನಿಂದ ಓಡಿಹೋದರು. ಅರಾಮ್ಯರು ಓಡಿಹೋದದ್ದನ್ನು ಅಮ್ಮೋನಿಯರು ನೋಡಿದಾಗ ಅವರು ಹಾಗೆಯೇ ಅವನ ಸಹೋದರನಾದ ಅಬ್ಷೈನ ಎದುರಿನಿಂದ ಓಡಿಹೋಗಿ ಪಟ್ಟಣದೊಳಗೆ ಪ್ರವೇಶಿಸಿದರು. ಆಗ ಯೋವಾಬನು ಯೆರೂಸಲೇಮಿಗೆ ಬಂದನು.
Cross references
- Psalm 27:14 ಕೀರ್ತನೆಗಳು 27:14ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
- Nehemiah 4:14 ನೆಹೆಮೀಯ 4:14ನಾನು ನೋಡಿದ ತರುವಾಯ ಎದ್ದು ಶ್ರೇಷ್ಠರಿಗೂ ಅಧಿಕಾರ ಸ್ಥರಿಗೂ ಇತರ ಜನರಿಗೂ--ನೀವು ಅವರಿಗೋಸ್ಕರ ಭಯಪಡಬೇಡಿರಿ; ದೊಡ್ಡವನಾಗಿಯೂ ಭಯಂಕರ ನಾಗಿಯೂ ಇರುವ ಕರ್ತನನ್ನು ಜ್ಞಾಪಕಮಾಡಿ ಕೊಂಡು ನಿಮ್ಮ ಸಹೋದರರಿಗೋಸ್ಕರ, ಕುಮಾರ, ಕುಮಾರ್ತೆಯರಿಗೋಸ್ಕರ, ಹೆಂಡತಿಯರಿಗೋಸ್ಕರ, ನಿಮ್ಮ ಮನೆಗಳಿಗೋಸ್ಕರ ಯುದ್ಧಮಾಡಿರಿ ಅಂದೆನು.
- 2 Samuel 10:12 2 ಸಮುವೇಲನು 10:12ಬಲವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲಗೊ ಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು.
- Joshua 10:25 ಯೆಹೋಶುವ 10:25ಆಗ ಯೆಹೋಶುವನು ಅವರಿಗೆ--ಭಯ ಪಡಬೇಡಿರಿ, ನಿರುತ್ಸಾಹಗೊಳ್ಳಬೇಡಿರಿ, ಬಲಗೊಂಡು ಧೈರ್ಯವಾಗಿರ್ರಿ; ನೀವು ಯುದ್ಧಮಾಡುವ ನಿಮ್ಮ ಶತ್ರುಗಳೆಲ್ಲರಿಗೂ ಕರ್ತನು ಹೀಗೆಯೇ ಮಾಡುವನು ಅಂದನು.
- 1 Corinthians 16:13 1 ಕೊರಿಂಥದವರಿಗೆ 16:13ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
- 1 Samuel 4:9 1 ಸಮುವೇಲನು 4:9ಓ ಫಿಲಿಷ್ಟಿಯರೇ, ನೀವು ಬಲಗೊಂಡು ಧೈರ್ಯವುಳ್ಳ ಮನುಷ್ಯರಂತೆ ಇರ್ರಿ; ಇಬ್ರಿಯರು ನಿಮಗೆ ಸೇವೆಮಾಡಿದ ಪ್ರಕಾರ ನೀವು ಅವರಿಗೆ ಸೇವೆಮಾಡದ ಹಾಗೆ ಧೈರ್ಯವುಳ್ಳ ಮನುಷ್ಯರಂತೆ ಇದ್ದು ಯುದ್ಧಮಾಡಿರೆಂದು ಹೇಳಿ ಕೊಂಡರು.
- Joshua 1:7 ಯೆಹೋಶುವ 1:7ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣವೆಲ್ಲಾದರ ಪ್ರಕಾರ ನೀನು ಕೈಕೊಂಡು ನಡೆ ಯುವ ಹಾಗೆ ಬಲವಾಗಿರು, ಬಹು ಧೈರ್ಯದಿಂದಿರು, ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ ಅದನ್ನು (ನ್ಯಾಯಪ್ರಮಾಣವನ್ನು) ಬಿಟ್ಟು ಬಲ ಕ್ಕಾದರೂ ಎಡಕ್ಕಾದರೂ ತಿರುಗಬೇಡ.
- Ezra 10:4 ಎಜ್ರನು 10:4ನೀನು ಏಳು; ಯಾಕಂದರೆ ಈ ಕಾರ್ಯ ನಿನಗೆ ಸಂಬಂಧಿಸಿದೆ. ನಾವು ನಿನ್ನ ಸಂಗಡ ಇರುವೆವು; ಧೈರ್ಯದಿಂದಿರು, ಅದನ್ನು ಮಾಡು ಅಂದರು.
- Judges 10:15 ನ್ಯಾಯಸ್ಥಾಪಕರು 10:15ಇಸ್ರಾಯೇಲ್ ಮಕ್ಕಳು ಕರ್ತ ನಿಗೆ--ನಾವು ಪಾಪಮಾಡಿದೆವು; ನೀನು ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿ ತೋರುವದೆಲ್ಲಾ ನಮಗೆ ಮಾಡು. ಆದರೆ ಈಹೊತ್ತು ನಮ್ಮನ್ನು ರಕ್ಷಿಸು ಎಂದು ಬೇಡಿ ಕೊಂಡರು.
- 1 Samuel 17:32 1 ಸಮುವೇಲನು 17:32ಆಗ ದಾವೀದನು ಸೌಲನಿಗೆ--ಅವನ ನಿಮಿತ್ತ ವಾಗಿ ಯಾವನ ಹೃದಯವು ಕುಗ್ಗಬಾರದು; ನಿನ್ನ ಸೇವಕನು ಹೋಗಿ ಈ ಫಿಲಿಷ್ಟಿಯನ ಸಂಗಡ ಯುದ್ಧ ಮಾಡುವನು ಅಂದನು.
- Deuteronomy 31:6–7 ಧರ್ಮೋಪದೇಶಕಾಂಡ 31:6–7ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು. ಆಗ ಮೋಶೆಯು ಯೆಹೋಶುವನನ್ನು ಕರೆದು ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ--ಬಲ ವಾಗಿರು; ಧೈರ್ಯವಾಗಿರು; ಯಾಕಂದರೆ ನೀನು ಈ ಜನರ ಸಂಗಡ ಹೋಗಿ ಕರ್ತನು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಸೇರ ಬೇಕು; ನೀನು ಅದನ್ನು ಅವರಿಗೆ ಸ್ವಾಸ್ತ್ಯವಾಗಿ ಕೊಡ ಬೇಕು.
- 1 Samuel 14:6–12 1 ಸಮುವೇಲನು 14:6–12ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯೌವನಸ್ಥನಿಗೆ--ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿಹೋಗೋಣ ಬಾ; ಒಂದು ವೇಳೆ ದೇವರು ನಮಗೋಸ್ಕರ ಕಾರ್ಯ ನಡಿಸುವನು. ಯಾಕಂದರೆ ಅನೇಕ ಜನರಿಂದಾದರೂ ಸ್ವಲ್ಪ ಜನರಿಂದಾದರೂ ರಕ್ಷಿಸುವದಕ್ಕೆ ಕರ್ತನಿಗೆ ಯಾವ ಆಟಂಕವಿಲ್ಲ ಅಂದನು. ಅದಕ್ಕೆ ಅವನ ಆಯುಧಗಳನ್ನು ಹೊರುವವನು ಅವನಿಗೆ--ನಿನ್ನ ಹೃದಯದಲ್ಲಿ ಇರುವದನ್ನೆಲ್ಲಾ ಮಾಡು, ನಡೆ; ಇಗೋ, ನಿನ್ನ ಹೃದಯಕ್ಕೆ ಸರಿಯಾಗಿ ನಾನೂ ನಿನ್ನ ಸಂಗಡ ಇದ್ದೇನೆ ಅಂದನು. ಆಗ ಯೋನಾತಾನನುಇಗೋ, ನಾವು ಆ ಮನುಷ್ಯರ ಬಳಿಗೆ ದಾಟಿ ಹೋಗಿ ಅವರಿಗೆ ಕಾಣಿಸಿಕೊಳ್ಳುವೆವು. ಅವರು--ನಾವು ನಿಮ್ಮ ಬಳಿಗೆ ಬರುವ ವರೆಗೆ ಸುಮ್ಮನೆ ನಿಲ್ಲಿರೆಂದು ನಮ್ಮ ಸಂಗಡ ಹೇಳಿದರೆ ನಾವು ಅವರ ಬಳಿಗೆ ಹೋಗದೆ ನಮ್ಮ ಸ್ಥಳದಲ್ಲಿ ನಿಲ್ಲುವೆವು. ಒಂದು ವೇಳೆ ಅವರುನಮ್ಮ ಬಳಿಗೆ ಬನ್ನಿರಿ ಎಂದು ಹೇಳಿದರೆ ಹೋಗುವೆವು. ಕರ್ತನು ಅವರನ್ನು ನಮ್ಮ ಕೈಗೆ ಒಪ್ಪಿಸಿ ಕೊಟ್ಟನೆಂಬದಕ್ಕೆ ಇದೇ ನಮಗೆ ಗುರುತಾಗಿರುವದು ಅಂದನು. ಹಾಗೆಯೇ ಅವರಿಬ್ಬರೂ ಫಿಲಿಷ್ಟಿಯರ ಠಾಣದ ವರಿಗೆ ಕಾಣಿಸಿಕೊಂಡರು. ಆಗ ಫಿಲಿಷ್ಟಿಯರುಇಗೋ, ಗುಹೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಇಬ್ರಿಯರು ಹೊರಟು ಬರುತ್ತಾರೆಂದರು. ಠಾಣದ ಮನುಷ್ಯರು ಯೋನಾತಾನನಿಗೂ ಅವನ ಆಯುಧ ಹೊರುವವನಿಗೂ--ನಮ್ಮ ಬಳಿಗೆ ಬನ್ನಿರಿ; ನಿಮಗೆ ಕಾರ್ಯ ತೋರಿಸುತ್ತೇವೆ ಎಂದು ಪ್ರತ್ಯುತ್ತರಕೊಟ್ಟರು. ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ವನಿಗೆ--ನನ್ನ ಹಿಂದೆ ಏರಿ ಬಾ; ಕರ್ತನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಟ್ಟನು ಅಂದನು.