1 Chronicles · chapter 2 · verse 17
1 Chronicles 2:17 in Kannada
ಅಬೀಗೈಲಳು ಅಮಾಸನನ್ನು ಹೆತ್ತಳು. ಅಮಾಸನ ತಂದೆಯು ಇಷ್ಮಾಯೇಲ್ಯನಾದ ಯೇತೆರನು.
Abeegailalu amaasanannu hettalu. Amaasana tandeyu ishmaayelyanaada yeteranu.
1 Chronicles 2:17 in English
- King James Version (KJV)
- And Abigail bare Amasa: and the father of Amasa [was] Jether the Ishmeelite.
- World English Bible (WEB)
- Abigail bore Amasa; and the father of Amasa was Jether the Ishmaelite.
- American Standard Version (ASV)
- And Abigail bare Amasa; and the father of Amasa was Jether the Ishmaelite.
- Bible in Basic English (BBE)
- And Abigail was the mother of Amasa; and the father of Amasa was Jether the Ishmaelite.
- Darby Translation (DBY)
- And Abigail bore Amasa; and the father of Amasa was Jether the Ishmaelite.
- Webster's Bible (WBS)
- And Abigail bore Amasa: and the father of Amasa [was] Jether the Ishmaelite.
- Young's Literal Translation (YLT)
- And Abigail hath borne Amasa, and the father of Amasa [is] Jether the Ishmeelite.
Read in context
- 15ಐದನೆಯವನಾದ ರದ್ದೈಯನನ್ನೂ ಆರನೆಯವನಾದ ಓಚೇಮನನ್ನೂ ಏಳನೆಯವನಾದ ದಾವೀದನನ್ನೂ ಪಡೆದನು.
- 16ಅವರ ಸಹೋದರಿಗಳು ಚೆರೂಯಳು ಅಬೀಗೈಲಳು. ಚೆರೂಯಳ ಮಕ್ಕಳುಅಬ್ಷೈನು ಯೋವಾಬನು ಅಸಾಹೇಲನು ಎಂಬ ಈ ಮೂವರು.
- 17ಅಬೀಗೈಲಳು ಅಮಾಸನನ್ನು ಹೆತ್ತಳು. ಅಮಾಸನ ತಂದೆಯು ಇಷ್ಮಾಯೇಲ್ಯನಾದ ಯೇತೆರನು.
- 18ಹೆಚ್ರೋನನ ಮಗನಾದ ಕಾಲೇಬನು ತನ್ನ ಹೆಂಡ ತಿಯಾದ ಅಜೂಬಳಿಂದ ಯೆರ್ಯೋತಳನ್ನು ಪಡೆದನು. ಇವಳ ಮಕ್ಕಳು -- ಯೇಷೆರನು, ಶೋಬಾಬನು, ಅರ್ದೋನನು.
- 19ಅಜೂಬಳು ಸತ್ತ ತರುವಾಯ ಕಾಲೇಬನು ಎಫ್ರಾತಳನ್ನು ಮದುವೆಯಾದನು.
Cross references
- 2 Samuel 17:25 2 ಸಮುವೇಲನು 17:25ಅಬ್ಷಾಲೋಮನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೈನ್ಯದ ಅಧಿಪತಿಯನ್ನಾಗಿ ನೇಮಿಸಿದನು. ನಾಹಾಷನಿಗೆ ಮಗಳಾದ ಅಬೀಗೈಲಳ ಬಳಿಗೆ ಪ್ರವೇಶಿಸಿದ ಇಸ್ರಾಯೇಲ್ಯನಾದ ಇತ್ರನೆಂಬ ಹೆಸರುಳ್ಳ ಈ ಅಮಾಸನು ಒಬ್ಬ ಮಗನಾಗಿದ್ದನು. ಅಬೀಗೈಲಳು ಯೋವಾಬನ ತಾಯಿಯಾದ ಚೆರೂಯಳಿಗೆ ಸಹೋದರಿಯಾಗಿದ್ದಳು.
- 2 Samuel 20:4–12 2 ಸಮುವೇಲನು 20:4–12ಅರಸನು ಅಮಾಸನಿಗೆ--ನೀನು ಮೂರು ದಿವಸ ಗಳೊಳಗೆ ಯೆಹೂದ ಜನರನ್ನು ಕೂಡಿಸಿಕೊಂಡು ಇಲ್ಲಿ ಇರು ಅಂದನು. ಹಾಗೆಯೇ ಅಮಾಸನು ಯೆಹೂದದ ಜನರನ್ನು ಕೂಡಿಸಲು ಹೋದನು; ಆದರೆ ಅವನು ತನಗೆ ನೇಮಿಸಿದ ಕಾಲದಲ್ಲಿ ಬಾರದೆ ಆಲಸ್ಯ ಮಾಡಿದನು. ಆದದರಿಂದ ದಾವೀದನು ಅಬೀಷೈಗೆಈಗ ಅಬ್ಷಾಲೋಮನಿಗಿಂತ ಬಿಕ್ರಿಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡನ್ನು ಮಾಡುವನು. ಅವನು ತನಗೆ ಗಡಿ ಸ್ಥಳಗಳಾದ ಪಟ್ಟಣಗಳನ್ನು ಸಂಪಾ ದಿಸಿಕೊಂಡು ನಮ್ಮಿಂದ ತಪ್ಪಿಸಿಕೊಳ್ಳದ ಹಾಗೆ ನೀನು ನಿನ್ನ ಯಜಮಾನನ ಸೇವಕರನ್ನು ತಕ್ಕೊಂಡು ಹೊರಟು ಅವನನ್ನು ಹಿಂದಟ್ಟು ಅಂದನು. ಹಾಗೆಯೇ ಅವನ ಹಿಂದೆ ಯೋವಾಬನ ಜನರೂ ಕೆರೇತ್ಯರೂ ಪೆಲೇ ತ್ಯರೂ ಎಲ್ಲಾ ಪರಾಕ್ರಮಶಾಲಿಗಳೂ ಬಿಕ್ರಿಯ ಮಗ ನಾದ ಶೆಬನನ್ನು ಹಿಂದಟ್ಟಲು ಯೆರೂಸಲೇಮಿನಿಂದ ಹೊರಟರು. ಅವರು ಗಿಬ್ಯದ ಸವಿಾಪದಲ್ಲಿರುವ ದೊಡ್ಡಕಲ್ಲಿನ ಬಳಿಗೆ ಬಂದಾಗ ಅಮಾಸನು ಅವರ ಮುಂದೆ ಹೋದನು. ಆದರೆ ಯೋವಾಬನು ತಾನು ತೊಟ್ಟು ಕೊಂಡಿರುವ ಅಂಗಿಯ ಮೇಲೆ ಒಂದು ನಡು ಕಟ್ಟನ್ನು ಕಟ್ಟಿಕೊಂಡಿದ್ದನು. ಅದರಲ್ಲಿ ಒರೆಯ ಸಂಗಡ ಒಂದು ಕತ್ತಿಯು ಅವನ ನಡುವಿನಲ್ಲಿ ತೂಗುತ್ತಿತ್ತು. ಅವನು ನಡೆಯುವಾಗ ಅದು ಬಿತ್ತು. ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು. ಎರಡನೇ ಸಾರಿ ಹೊಡೆಯಲಿಲ್ಲ, ಅವನು ಸತ್ತನು. ಯೋವಾಬನೂ ಅವನ ಸಹೋದರನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿದರು. ಯೋವಾಬನ ಜನರಲ್ಲಿ ಒಬ್ಬನು ಸತ್ತವನ ಬಳಿಯಲ್ಲಿ ನಿಂತು--ಯಾವನು ಯೋವಾಬನ ಮೇಲೆ ಇಷ್ಟವುಳ್ಳವನೋ ಯಾವನು ದಾವೀದನಿಗೆ ಹೊಂದಿದವನೋ ಅವನು ಯೋವಾಬನ ಹಿಂದೆ ಹೋಗಲಿ ಅಂದನು. ಆದರೆ ಅಮಾಸನು ರಾಜ ಮಾರ್ಗದ ಮಧ್ಯದಲ್ಲಿ ರಕ್ತದೊಳಗೆ ಹೊರಳಾಡುತ್ತಾ ಇದ್ದನು. ಜನರೆಲ್ಲರು ನಿಂತಿರುವದನ್ನು ಆ ಮನುಷ್ಯನು ಕಂಡಾಗ ಅವನು ಅಮಾಸನನ್ನು ದಾರಿಯಿಂದ ಹೊಲಕ್ಕೆ ಎಳೆದು ಅವನ ಮೇಲೆ ಒಂದು ವಸ್ತ್ರವನ್ನು ಹಾಕಿದನು.
- 2 Samuel 19:13 2 ಸಮುವೇಲನು 19:13ಇದಲ್ಲದೆ ನೀವು ಅಮಾಸನಿಗೆ--ನೀನು ನನ್ನ ಎಲುಬೂ ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ ದೇವರು ನನಗೆ ಹಾಗೆಯೇ ಮಾಡಲಿ ಎಂದು ಹೇಳಿರಿ ಅಂದನು.
- 1 Kings 2:32 1 ಅರಸುಗಳು 2:32ಆಗ ಕರ್ತನು ಅವನ ತಲೆಯ ಮೇಲೆ ಅವನ ರಕ್ತಾಪರಾಧ ವನ್ನು ಬರಮಾಡುವನು. ನನ್ನ ತಂದೆಯಾದ ದಾವೀ ದನು ತಿಳಿಯದಿರುವಾಗ ಅವನು ತನಗಿಂತ ನೀತಿಯುಳ್ಳ ಉತ್ತಮರಾದ ಇಬ್ಬರ ಮೇಲೆ ಬಿದ್ದು ಅವರನ್ನು ಕತ್ತಿ ಯಿಂದ ಕೊಂದನು. ಅವರು ಯಾರಂದರೆ, ಇಸ್ರಾ ಯೇಲಿನ ಸೈನ್ಯಕ್ಕೆ ಅಧಿಪತಿಯಾಗಿದ್ದ ನೇರನ ಮಗನಾದ ಅಬ್ನೇರನೂ ಯೆಹೂದ ಸೈನ್ಯಕ್ಕೆ ಅಧಿಪತಿಯಾಗಿದ್ದ ಯೆತೆರನ ಮಗನಾದ ಅಮಾಸನೂ.
- 1 Kings 2:5 1 ಅರಸುಗಳು 2:5ಇದಲ್ಲದೆ ಚೆರೂಯಳ ಮಗನಾದ ಯೋವಾಬನು ನನಗೂ ಇಸ್ರಾಯೇಲಿನ ಸೈನ್ಯಗಳಿಗೆ ಇಬ್ಬರು ಅಧಿಪತಿಗಳಾದ ನೇರನ ಮಗನಾದ ಅಬ್ನೇರ ನಿಗೂ ಯೇತ್ರನ ಮಗನಾದ ಅಮಾಸನಿಗೂ ಏನು ಮಾಡಿದನೋ ನೀನು ಬಲ್ಲೆ. ಯಾಕಂದರೆ ಅವನು ಅವರನ್ನು ಕೊಂದು ಸಮಾಧಾನದಲ್ಲಿ ಯುದ್ಧದ ರಕ್ತ ವನ್ನು ಚೆಲ್ಲಿ ತನ್ನ ನಡುವಿನಲ್ಲಿರುವ ನಡುಕಟ್ಟಿನ ಮೇಲೆಯೂ ತನ್ನ ಪಾದಗಳಲ್ಲಿರುವ ಪಾದರಕ್ಷೆಗಳ ಮೇಲೆಯೂ ಯುದ್ಧದ ರಕ್ತವನ್ನು ಹಚ್ಚಿಕೊಂಡನು.