1 Chronicles · chapter 2 · verse 4
1 Chronicles 2:4 in Kannada
ಅವನ ಸೊಸೆಯಾದ ತಾಮಾ ರಳು ಅವನಿಗೆ ಪೆರೆಚನನ್ನೂ, ಜೆರಹನನ್ನೂ ಹೆತ್ತಳು. ಯೆಹೂದನ ಕುಮಾರರೆಲ್ಲರೂ ಐದು ಮಂದಿ.
Avana soseyaada taamaa ralu avanige perechanannoo, jerahanannoo hettalu. Yehoodana kumaararellaroo aidu mandi.
1 Chronicles 2:4 in English
- King James Version (KJV)
- And Tamar his daughter in law bare him Pharez and Zerah. All the sons of Judah [were] five.
- World English Bible (WEB)
- Tamar his daughter-in-law bore him Perez and Zerah. All the sons of Judah were five.
- American Standard Version (ASV)
- And Tamar his daughter-in-law bare him Perez and Zerah. All the sons of Judah were five.
- Bible in Basic English (BBE)
- And Tamar, his daughter-in-law, had Perez and Zerah by him. All the sons of Judah were five.
- Darby Translation (DBY)
- And Tamar his daughter-in-law bore him Pherez and Zerah. All the sons of Judah were five.
- Webster's Bible (WBS)
- And Tamar his daughter-in-law bore him Pharez and Zerah. All the sons of Judah [were] five.
- Young's Literal Translation (YLT)
- And Tamar his daughter-in-law hath borne to him Pharez and Zerah. All the sons of Judah [are] five.
Read in context
- 2ಯೆಹೂ ದನು, ಇಸ್ಸಾಕಾರನು, ಜೆಬುಲೂನನು, ದಾನನು, ಯೋಸೇಫನು, ಬೆನ್ಯಾವಿಾನನು, ನಫ್ತಾಲಿಯು, ಗಾದನು, ಆಶೇರನು.
- 3ಯೆಹೂದನ ಮಕ್ಕಳು -- ಏರನು, ಓನಾನನು, ಶೇಲಾಹನು ಈ ಮೂವರು ಅವನಿಗೆ ಶೂನನ ಮಗ ಳಾದ ಕಾನಾನ್ ದೇಶದವಳಿಂದ ಹುಟ್ಟಿದರು. ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ಸಮ್ಮುಖದಲ್ಲಿ ಕೆಟ್ಟವನಾದದರಿಂದ ಆತನು ಅವನನ್ನು ಕೊಂದುಹಾಕಿದನು.
- 4ಅವನ ಸೊಸೆಯಾದ ತಾಮಾ ರಳು ಅವನಿಗೆ ಪೆರೆಚನನ್ನೂ, ಜೆರಹನನ್ನೂ ಹೆತ್ತಳು. ಯೆಹೂದನ ಕುಮಾರರೆಲ್ಲರೂ ಐದು ಮಂದಿ.
- 5ಪೆರೆಚನ ಮಕ್ಕಳು--ಹೆಚ್ರೋನನು, ಹಾಮುಲನು;
- 6ಜೆರಹನ ಮಕ್ಕಳು ಜಿಮ್ರಿಯು, ಏತಾನನು, ಹೇಮಾನನು, ಕಲ್ಕೋಲನು, ದಾರನನು ಇವರೆಲ್ಲರು ಐದು ಮಂದಿ.
Cross references
- Matthew 1:3 ಮತ್ತಾಯನು 1:3ಯೂದನಿಂದ ತಾಮಾರಳಲ್ಲಿ ಪೆರೆಚನೂ ಜೆರಹನೂ ಹುಟ್ಟಿದರು; ಪೆರೆಚನಿಂದ ಹೆಚ್ರೋಮನು ಹುಟ್ಟಿದನು; ಹೆಚ್ರೋಮನಿಂದ ಅರಾಮನು ಹುಟ್ಟಿ ದನು;
- Genesis 38:13–30 ಆದಿಕಾಂಡ 38:13–30ಆಗ ತಾಮಾರಳಿಗೆ--ಇಗೋ, ನಿನ್ನ ಮಾವನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವದಕ್ಕೆ ತಿಮ್ನಾತಿಗೆ ಹೋಗುತ್ತಿದ್ದಾನೆ ಎಂದು ತಿಳಿಸಿದಾಗ ಆಕೆಯು ವಿಧವೆಯ ವಸ್ತ್ರಗಳನ್ನು ತೆಗೆದಿಟ್ಟು ಮುಸುಕು ಹಾಕಿ ಮುಚ್ಚಿಕೊಂಡು ತಿಮ್ನಾತಿನ ಮಾರ್ಗದಲ್ಲಿರುವ ಬಹಿರಂಗ ಸ್ಥಳದಲ್ಲಿ ಕೂತು ಕೊಂಡಳು; ಯಾಕಂದರೆ ಶೇಲಹನು ದೊಡ್ಡವನಾ ಗಿದ್ದರೂ ತನ್ನನ್ನು ಅವನಿಗೆ ಹೆಂಡತಿಯಾಗಿ ಕೊಡಲಿಲ್ಲ ವೆಂದು ನೋಡಿದಳು. ಯೆಹೂದನು ಅವಳನ್ನು ನೋಡಿದಾಗ ಅವಳು ಮುಖಮುಚ್ಚಿಕೊಂಡಿದ್ದರಿಂದ ಅವಳು ಸೂಳೆಯೆಂದು ನೆನಸಿಕೊಂಡನು. ಮಾರ್ಗ ದಿಂದ ಆಕೆಯ ಕಡೆಗೆ ತಿರುಗಿಕೊಂಡು ಅವನು--ನನ್ನನ್ನು ನಿನ್ನ ಬಳಿಗೆ ಬರಗೊಡಿಸು ಅಂದನು. (ಯಾಕಂದರೆ ಅವಳು ತನ್ನ ಸೊಸೆಯೆಂದು ಅವನಿಗೆ ತಿಳಿದಿರಲಿಲ್ಲ). ಅವಳು--ನೀನು ನನ್ನ ಬಳಿಗೆ ಬಂದರೆ ನನಗೆ ಏನು ಕೊಡುವಿ ಅಂದಳು. ಅವನು--ಮಂದೆಯಿಂದ ನಿನಗೆ ಮೇಕೆಯ ಮರಿಯನ್ನು ಕಳುಹಿ ಸುತ್ತೇನೆ ಅಂದನು. ಅವಳು--ನೀನು ಅದನ್ನು ಕಳುಹಿಸುವವರೆಗೆ ಈಡುಕೊಡುವಿಯೋ ಅಂದಳು. ಅದಕ್ಕೆ ಅವನು--ನಿನಗೆ ಕೊಡತಕ್ಕ ಈಡು ಏನು ಅಂದಾಗ ಅವಳು--ನಿನ್ನ ಮುದ್ರೆಯೂ ನಿನ್ನ ಕಡಗ ಗಳೂ ನಿನ್ನ ಕೈಯಲ್ಲಿರುವ ಕೋಲು ಅಂದಳು. ಆಗ ಅವನು ಅವುಗಳನ್ನು ಆಕೆಗೆ ಕೊಟ್ಟು ಆಕೆಯ ಬಳಿಗೆ ಹೋದನು. ಹೀಗೆ ಅವಳು ಅವನಿಂದ ಗರ್ಭಿಣಿಯಾದಳು. ತರುವಾಯ ಅವಳು ಎದ್ದು ಹೋಗಿ ಮುಸುಕನ್ನು ತೆಗೆದಿಟ್ಟು ತನ್ನ ವಿಧವೆಯ ವಸ್ತ್ರಗಳನ್ನು ಹಾಕಿಕೊಂಡಳು. ಯೆಹೂದನು ಆ ಸ್ತ್ರೀಯ ಕೈಯಿಂದ ಈಡು ತಕ್ಕೊಳ್ಳುವದಕ್ಕೆ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಿಂದ ಮೇಕೆಯ ಮರಿಯನ್ನು ಕಳುಹಿಸಿದಾಗ ಆಕೆಯು ಸಿಗಲಿಲ್ಲ. ಅದುಲ್ಲಾಮ್ಯನು ಆಕೆಯ ಊರಿನವರನ್ನು--ಬಹಿರಂಗ ಮಾರ್ಗದ ಬಳಿಯಲ್ಲಿದ್ದ ಸೂಳೆ ಎಲ್ಲಿ ಎಂದು ಕೇಳಿದಾಗ ಅವರು--ಈ ಸ್ಥಳದಲ್ಲಿ ಯಾವ ಸೂಳೆಯೂ ಇರಲಿಲ್ಲ ಅಂದರು. ಆಗ ಅವನು ಯೆಹೂದನ ಬಳಿಗೆ ತಿರಿಗಿ ಬಂದು--ಆಕೆಯು ನನಗೆ ಸಿಕ್ಕಲಿಲ್ಲ, ಇದಲ್ಲದೆ ಆ ಸ್ಥಳದ ಮನುಷ್ಯರು--ಈ ಸ್ಥಳದಲ್ಲಿ ಸೂಳೆಯು ಇರಲಿಲ್ಲ ಎಂದು ಹೇಳಿದರು. ಆಗ ಯೆಹೂದನು--ನಾವು ನಾಚಿಕೆಗೆ ಒಳಗಾಗದ ಹಾಗೆ ಅವಳು ಅದನ್ನು ತಕ್ಕೊಂಡು ಹೋಗಲಿ; ಇಗೋ, ಈ ಮೇಕೆಯ ಮರಿಯನ್ನು ನಾನು ಕಳುಹಿಸಿ ದೆನು, ಆದರೆ ಆಕೆಯು ನಿನಗೆ ಸಿಕ್ಕಲಿಲ್ಲ ಅಂದನು. ಹೆಚ್ಚುಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ--ನಿನ್ನ ಸೊಸೆಯಾದ ತಾಮಾರಳು ಜಾರತ್ವ ಮಾಡಿದ್ದಾಳೆ; ಜಾರತ್ವದಿಂದ ಗರ್ಭಿಣಿಯಾಗಿ ದ್ದಾಳೆ ಎಂದು ತಿಳಿಸಿದರು. ಆಗ ಯೆಹೂದನು--ಅವಳನ್ನು ಹೊರಗೆ ತನ್ನಿರಿ, ಅವಳು ಸುಡಲ್ಪಡಲಿ ಅಂದನು. ಆಕೆಯನ್ನು ಹೊರಗೆ ತಂದಾಗ ಆಕೆಯು ತನ್ನ ಮಾವನಿಗೆ--ಇವು ಯಾವ ಮನುಷ್ಯನವೋ ಆ ಮನುಷ್ಯನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಆದದರಿಂದ ಈ ಮುದ್ರೆಯೂ ಕಡಗಗಳೂ ಕೋಲೂ ಯಾರವೆಂದು ತಿಳಿದುಕೋ ಎಂದು ಕೇಳಿಕೊಂಡಳು. ಆಗ ಯೆಹೂದನು ಅವುಗಳನ್ನು ಗುರುತಿಸಿ--ಆಕೆಯು ನನಗಿಂತ ನೀತಿವಂತಳು, ಯಾಕಂದರೆ ನಾನು ನನ್ನ ಮಗನಾದ ಶೇಲಹನಿಗೆ ಅವಳನ್ನು ಕೊಡಲಿಲ್ಲ ಅಂದನು. ಅವನು ಮತ್ತೆ ಆಕೆಯನ್ನು ಅರಿಯಲಿಲ್ಲ. ಅವಳು ಹೆರುವ ಸಮಯದಲ್ಲಿ ಇಗೋ, ಅವಳಿ ಮಕ್ಕಳು ಆಕೆಯ ಗರ್ಭದಲ್ಲಿದ್ದರು. ಆಕೆಯು ಹೆರುವಾಗ ಒಂದು (ಮಗುವು) ತನ್ನ ಕೈಚಾಚಿತು. ಸೂಲ ಗಿತ್ತಿಯು ಆ ಕೈಗೆ ಕೆಂಪು ನೂಲನ್ನು ಕಟ್ಟಿ--ಇವನು ಮೊದಲು ಹೊರಗೆ ಬಂದನು ಅಂದಳು. ಆ ಮಗುವು ತನ್ನ ಕೈಯನ್ನು ಹಿಂದಕ್ಕೆ ಎಳೆದಾಗ ಇಗೋ, ಅವನ ಸಹೋದರನು ಹೊರಗೆ ಬಂದನು. ಆಗ ಅವಳು--ನೀನು ಛೇದಿಸಿದ್ದೇನು? ಈ ದೋಷವು ನಿನ್ನ ಮೇಲೆ ಇರಲಿ ಅಂದಳು.ಹೀಗೆ ಅವನಿಗೆ ಪೆರೆಚ್ ಎಂದು ಹೆಸರಾಯಿತು. ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು. ಹೀಗೆ ಅವನಿಗೆ ಪೆರೆಚ್ ಎಂದು ಹೆಸರಾಯಿತು. ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು.
- Numbers 26:20–21 ಅರಣ್ಯಕಾಂಡ 26:20–21ಕುಟುಂಬಗಳ ಪ್ರಕಾರ ಯೆಹೂದನ ಕುಮಾರರು; ಶೇಲಹನಿಂದ ಶೇಲಹ್ಯರ ಕುಟುಂಬ; ಪೆರೆಚನಿಂದ ಪೆರೆಚ್ಯರ ಕುಟುಂಬ; ಜೆರಹನಿಂದ ಜೆರಹೀಯರ ಕುಟುಂಬ. ಪೆರೆಚನ ಕುಮಾರರು; ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಹಾಮೂ ಲನಿಂದ ಹಾಮೂಲ್ಯರ ಕುಟುಂಬ.
- Luke 3:33 ಲೂಕನು 3:33ಇವನು ಅಮ್ಮಿನಾದಾಬನ ಮಗನು; ಇವನು ಅರಾಮನ ಮಗನು; ಇವನು ಎಸ್ರೋಮನ ಮಗನು; ಇವನು ಪೆರೆಸನ ಮಗನು; ಇವನು ಯೂದನ ಮಗನು;
- Ruth 4:12 ರೂತಳು 4:12ಈ ಹುಡುಗಿಯಿಂದ ಕರ್ತನು ನಿನಗೆ ಕೊಡುವ ಸಂತಾನದಿಂದ ನಿನ್ನ ಮನೆಯೂ ತಾಮರಳು ಯೂದ ನಿಗೆ ಹೆತ್ತ ಪೆರೆಚನ ಮನೆಯ ಹಾಗೆಯೇ ಆಗಲಿ ಅಂದರು.
- Genesis 38:11 ಆದಿಕಾಂಡ 38:11ಆಗ ಯೆಹೂದನು ತನ್ನ ಸೊಸೆಯಾದ ತಾಮಾರ ಳಿಗೆ--ನನ್ನ ಮಗನಾದ ಶೇಲಹನು ದೊಡ್ಡವನಾಗುವ ವರೆಗೆ ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿ ಇರು ಅಂದನು. ಯಾಕಂದರೆ ಇವನು ಸಹ ತನ್ನ ಸಹೋದರರ ಹಾಗೆ ಸತ್ತಾನೆಂದು ಅಂದುಕೊಂಡನು. ತಾಮಾರಳು ಹೋಗಿ ತನ್ನ ತಂದೆಯ ಮನೆಯಲ್ಲಿ ವಾಸಮಾಡಿದಳು.
- Nehemiah 11:4 ನೆಹೆಮೀಯ 11:4ಯೆರೂಸಲೇಮಿನೊಳಗೆ ಯೂದನ ಮಕ್ಕಳಲ್ಲಿಯೂ ಬೆನ್ಯಾವಿಾನನ ಮಕ್ಕಳಲ್ಲಿಯೂ ಕೆಲ ವರು ವಾಸವಾಗಿದ್ದರು.
- Numbers 26:13 ಅರಣ್ಯಕಾಂಡ 26:13ಜೆರಹನಿಂದ ಜೆರಹಿ ಯರ ಕುಟುಂಬ; ಸೌಲನಿಂದ ಸೌಲ್ಯರ ಕುಟುಂಬ.
- 1 Chronicles 9:6 1 ಪೂರ್ವಕಾಲವೃತ್ತಾಂತ 9:6ಜೆರಹನ ಕುಮಾರರಲ್ಲಿ ಯೆಯೂ ವೇಲನೂ ಅವನ ಸಹೋದರರೂ ಆರುನೂರ ತೊಂಭತ್ತು ಮಂದಿ.
- Ruth 4:18 ರೂತಳು 4:18ಪೆರೆಚನ ಸಂತತಿ ಯಾವದಂದರೆ--ಪೆರೆಚನು, ಹೆಚ್ರೋನನನ್ನು ಪಡೆದನು; ಹೆಚ್ರೋನನು ರಾಮ ನನ್ನು ಪಡೆದನು;
- Nehemiah 11:24 ನೆಹೆಮೀಯ 11:24ಇದಲ್ಲದೆ ಯೆಹೂದನ ಮಗನಾದ ಜೇರಹನ ಮಕ್ಕಳಲ್ಲಿ ಒಬ್ಬನಾಗಿರುವ ಮೆಷೇಜಬೇಲನ ಮಗನಾದ ಪೆತಹ್ಯನು ಜನರಿ ಗೋಸ್ಕರ ಸಕಲ ಕಾರ್ಯಗಳಲ್ಲಿ ಅರಸನ ಕೈ ಹತ್ತಿರ ಇದ್ದನು.
- 1 Chronicles 9:4 1 ಪೂರ್ವಕಾಲವೃತ್ತಾಂತ 9:4ಊತೈನ ಮಗನಾದ ಅವ್ಮೆಾಹೂ ದನು; ಇವನು ಒಮ್ರಿಯ ಮಗನು; ಇವನು ಇಮ್ರಿಯ ಮಗನು; ಇವನು ಬಾನೀಯನ ಮಗನು; ಇವನು ಯೆಹೂದನ ಮಗನಾದ ಪೆರೆಚನ ಸಂತಾನದವನು.