1 Chronicles · chapter 22 · verse 1
1 Chronicles 22:1 in Kannada
ಆಗ ದಾವೀದನು -- ಕರ್ತನಾದ ದೇವರ ಮನೆಯೂ ಇಸ್ರಾಯೇಲಿನ ದಹನಬಲಿ ಪೀಠವೂ ಇದೇ ಅಂದನು.
Aaga daaveedanu -- kartanaada devara maneyoo israayelina dahanabali peethavoo ide andanu.
1 Chronicles 22:1 in English
- King James Version (KJV)
- Then David said, This [is] the house of the LORD God, and this [is] the altar of the burnt offering for Israel.
- World English Bible (WEB)
- Then David said, “This is the house of the LORD God, and this is the altar of burnt offering for Israel.”
- American Standard Version (ASV)
- Then David said, This is the house of Jehovah God, and this is the altar of burnt-offering for Israel.
- Bible in Basic English (BBE)
- Then David said, This is the house of the Lord God, and this is the altar for Israel's burned offerings.
- Darby Translation (DBY)
- And David said, This is the house of Jehovah Elohim, and this is the altar of burnt-offering for Israel.
- Webster's Bible (WBS)
- Then David said, This [is] the house of the LORD God, and this [is] the altar of the burnt-offering for Israel.
- Young's Literal Translation (YLT)
- And David saith, 'This is the house of Jehovah God, and this the altar for burnt-offering for Israel.'
Read in context
- 1ಆಗ ದಾವೀದನು -- ಕರ್ತನಾದ ದೇವರ ಮನೆಯೂ ಇಸ್ರಾಯೇಲಿನ ದಹನಬಲಿ ಪೀಠವೂ ಇದೇ ಅಂದನು.
- 2ದಾವೀದನು ಇಸ್ರಾಯೇಲಿನ ದೇಶದಲ್ಲಿರುವ ಪರ ದೇಶಸ್ಥರನ್ನು ಕೂಡಿಸಲು ಹೇಳಿ ದೇವರ ಮನೆಯನ್ನು ಕಟ್ಟಿಸುವದಕ್ಕೆ ಕೆತ್ತನೆ ಕಲ್ಲುಗಳನ್ನು ಕಡಿಯುವ ಹಾಗೆ ಕುಟಿಗರನ್ನು ನೇಮಿಸಿದನು.
- 3ಇದಲ್ಲದೆ ದಾವೀದನು ಬಾಗಲುಗಳ ಕದಗಳನ್ನು ಜೋಡಿಸುವದಕ್ಕೆ ಬೇಕಾದ ಮೊಳೆಗಳಿಗೋಸ್ಕರ ಹೆಚ್ಚಾದ ಕಬ್ಬಿಣವನ್ನೂ ಲೆಕ್ಕವಿಲ್ಲ ದಷ್ಟು ಹೆಚ್ಚಾದ ತಾಮ್ರವನ್ನೂ ಸಿದ್ಧಮಾಡಿಸಿದನು;
Cross references
- 2 Chronicles 3:1 2 ಪೂರ್ವಕಾಲವೃತ್ತಾಂತ 3:1ಆಗ ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ ಕರ್ತನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ದಾವೀದನು ಸಿದ್ಧಮಾಡಿದ ಯೆಬೂಸಿ ಯನಾದ ಒರ್ನಾನನ ಕಣದಲ್ಲಿ ಕರ್ತನ ಆಲಯವನ್ನು ಕಟ್ಟಲು ಪ್ರಾರಂಭಿಸಿದನು.
- 1 Chronicles 21:18–28 1 ಪೂರ್ವಕಾಲವೃತ್ತಾಂತ 21:18–28ಆಗ ಕರ್ತನ ದೂತನು ಗಾದನಿಗೆ--ದಾವೀದನು ಹೋಗಿ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟುವ ಹಾಗೆ ದಾವೀದನಿಗೆ ಹೇಳು ಅಂದನು. ಗಾದನು ಕರ್ತನ ಹೆಸರಿನಲ್ಲಿ ಹೇಳಿದ ಮಾತಿನ ಪ್ರಕಾರ ದಾವೀದನು ಹೋದನು. ಆದರೆ ಒರ್ನಾನನು ಗೋಧಿಯನ್ನು ತುಳಿಸುತ್ತಿರು ವಾಗ ಹಿಂದಕ್ಕೆ ತಿರುಗಿ ದೂತನನ್ನು ಕಂಡದ್ದರಿಂದ ಅವನೂ ಅವನ ಸಂಗಡ ಇದ್ದ ಅವನ ನಾಲ್ಕು ಮಂದಿ ಕುಮಾರರೂ ಅಡಗಿಕೊಂಡಿದ್ದರು. ದಾವೀದನು ಒರ್ನಾನನ ಬಳಿಗೆ ಬಂದಾಗ ಅವನು ದೃಷ್ಟಿಸಿ ದಾವೀದ ನನ್ನು ಕಂಡು ಕಣದಿಂದ ಹೊರಟು ದಾವೀದನ ಮುಂದೆ ಮೋರೆ ಕೆಳಗಾಗಿ ನೆಲಕ್ಕೆ ಅಡ್ಡಬಿದ್ದನು. ಆಗ ದಾವೀದನು ಒರ್ನಾನನಿಗೆ--ಈ ಬಾಧೆಯು ಜನರನ್ನು ಬಿಟ್ಟು ಹೋಗುವ ಹಾಗೆ ನಾನು ಕರ್ತನಿಗೆ ಬಲಿ ಪೀಠವನ್ನು ಕಟ್ಟಿಸುವದಕ್ಕೆ ಈ ಕಣದ ಸ್ಥಳವನ್ನು ಪೂರ್ಣ ಕ್ರಯಕ್ಕೆ ನನಗೆ ಕೊಡು ಅಂದನು. ಒರ್ನಾನನು ದಾವೀದನಿಗೆ--ನಿನಗಾಗಿ ತಕ್ಕೋ; ಅರಸನಾದ ನನ್ನ ಒಡೆಯನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ. ಇಗೋ, ದಹನಬಲಿಗೋಸ್ಕರ ಎತ್ತುಗಳನ್ನೂ ಕಟ್ಟಿಗೆಗಳಿ ಗೋಸ್ಕರ ಹಂತಿಯ ಬಾತಿಮುಟ್ಟುಗಳನ್ನೂ ಆಹಾರದ ಅರ್ಪಣೆಗೋಸ್ಕರ ಗೋಧಿಯನ್ನೂ ಕೊಡುವದ ಲ್ಲದೆ ಸಮಸ್ತವನ್ನೂ ಕೊಡುವೆನು ಅಂದನು. ಆದರೆ ಅರಸನಾದ ದಾವೀದನು ಒರ್ನಾನನಿಗೆ--ಹಾಗಲ್ಲ, ಅದನ್ನು ಪೂರ್ಣ ಕ್ರಯಕ್ಕೆ ಕೊಂಡುಕೊಳ್ಳುತ್ತೇನೆ; ಯಾಕಂದರೆ ಕರ್ತನಿಗೋಸ್ಕರ ನಿನ್ನದನ್ನು ನಾನು ತಕ್ಕೊಳ್ಳೆನು; ಸುಮ್ಮನೆ ಬಂದ ದಹನಬಲಿಗಳನ್ನು ನಾನು ಅರ್ಪಿಸುವದಿಲ್ಲ ಅಂದನು. ಹಾಗೆಯೇ ದಾವೀದನು ಒರ್ನಾನನಿಗೆ ಆ ಸ್ಥಳಕ್ಕೋಸ್ಕರ ಆರು ನೂರು ಶೇಕೆಲ್ ತೂಕ ಬಂಗಾರವನ್ನು ಕೊಟ್ಟನು. ದಾವೀದನು ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ಕರ್ತನನ್ನು ಬೇಡಿಕೊಂಡನು. ಆಗ ಆತನು ಆಕಾಶದಿಂದ ದಹನ ಬಲಿಪೀಠದ ಮೇಲೆ ಅಗ್ನಿಯಿಂದ ಅವ ನಿಗೆ ಪ್ರತ್ಯುತ್ತರಕೊಟ್ಟನು. ಆಗ ಕರ್ತನು ದೂತನಿಗೆ ಹೇಳಿದ್ದರಿಂದ ಅವನು ತನ್ನ ಕತ್ತಿಯನ್ನು ಅದರ ಒರೆಯಲ್ಲಿ ತಿರುಗಿ ಹಾಕಿದನು. ಕರ್ತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ತನಗೆ ಪ್ರತ್ಯುತ್ತರ ಕೊಟ್ಟನೆಂದು ದಾವೀದನು ಕಂಡಾಗ ಅವನು ಅಲ್ಲಿ ಬಲಿಗಳನ್ನು ಅರ್ಪಿಸಿದನು.
- Genesis 28:17 ಆದಿಕಾಂಡ 28:17ಅವನು ಭಯಪಟ್ಟು--ಈ ಸ್ಥಳವು ಎಷ್ಟೋ ಭಯಂಕರ ವಾದದ್ದು; ಇದು ದೇವರ ಮನೆಯೇ ಹೊರತು ಬೇರೆಯಲ್ಲ; ಇದೇ ಪರಲೋಕದ ಬಾಗಿಲು ಅಂದನು.
- 2 Samuel 24:18 2 ಸಮುವೇಲನು 24:18ಅದೇ ದಿವಸದಲ್ಲಿ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸು ಅಂದನು.
- 2 Chronicles 6:5–6 2 ಪೂರ್ವಕಾಲವೃತ್ತಾಂತ 6:5–6ಆತನು ತನ್ನ ಬಾಯಿಂದ--ನನ್ನ ಜನ ರಾದ ಇಸ್ರಾಯೇಲನ್ನು ಐಗುಪ್ತದೇಶದಿಂದ ಬರ ಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವದಕ್ಕೆ ಇಸ್ರಾಯೇಲನ ಸಮಸ್ತ ಗೋತ್ರಗಳೊಳಗಿಂದ ಯಾವ ಪಟ್ಟಣವನ್ನೂ ಆದುಕೊಳ್ಳಲಿಲ್ಲ; ನನ್ನ ಜನರಾದ ಇಸ್ರಾ ಯೇಲಿನ ಮೇಲೆ ಆಳುವವನಾಗಿರಲು ನಾನು ಒಬ್ಬನ ನ್ನಾದರೂ ಆದುಕೊಳ್ಳಲಿಲ್ಲ. ಆದರೆ ನನ್ನ ಹೆಸರು ಅಲ್ಲಿ ಇರುವ ಹಾಗೆ ಯೆರೂಸಲೇಮನ್ನೂ ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ಇರಲು ದಾವೀದನನ್ನೂ ಆದುಕೊಂಡಿದ್ದೇನೆ ಎಂದು ಹೇಳಿದ್ದಾನೆ.
- 2 Kings 18:22 2 ಅರಸುಗಳು 18:22ಆದರೆ ನೀವು ನನಗೆ--ನಮ್ಮ ದೇವರಾದ ಕರ್ತನಲ್ಲಿ ಭರವಸ ವುಳ್ಳವರಾಗಿದ್ದೇವೆಂದು ಹೇಳಿದರೆ ಹಿಜ್ಕೀಯನು ಯಾವನ ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ--ಯೆಹೂದದವರಿಗೂ ಯೆರೂಸಲೇಮಿ ನವರಿಗೂ ನೀವು ಯೆರೂಸಲೇಮಿನಲ್ಲಿ ಈ ಬಲಿಪೀಠದ ಮುಂದೆ ಅಡ್ಡಬೀಳಬೇಕೆಂದು ಹೇಳಿದವನು ಅವನೇ ಅಲ್ಲವೋ?
- Psalm 78:67–69 ಕೀರ್ತನೆಗಳು 78:67–69ಆತನು ಯೋಸೇಫನ ಗುಡಾರವನ್ನು ತಿರಸ್ಕರಿಸಿ, ಎಫ್ರಾಯಾಮನ ಗೋತ್ರವನ್ನು ಆದು ಕೊಳ್ಳದೆ, ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು, ಉನ್ನತವಾದವುಗಳಂತೆಯೂ ಯುಗಯುಗಕ್ಕೂ ತಾನು ಅಸ್ತಿವಾರ ಹಾಕಿದ ಭೂಮಿಯಂತೆಯೂ ತನ್ನ ಪರಿಶುದ್ಧಾಲಯವನ್ನು ಕಟ್ಟಿದನು
- Deuteronomy 12:5–7 ಧರ್ಮೋಪದೇಶಕಾಂಡ 12:5–7ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು. ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು. ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.
- Psalm 78:60 ಕೀರ್ತನೆಗಳು 78:60ಸಿಲೋವಿನ ಗುಡಾರವನ್ನೂ ಮನುಷ್ಯರೊಳಗೆ ಆತನು ಹಾಕಿದ ಗುಡಾರವನ್ನೂ ಬಿಟ್ಟು,
- Deuteronomy 12:11 ಧರ್ಮೋಪದೇಶಕಾಂಡ 12:11ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
- John 4:20–22 ಯೋಹಾನನು 4:20–22ನಮ್ಮ ಪಿತೃಗಳು ಈ ಬೆಟ್ಟದಲ್ಲಿ ಆರಾಧಿಸಿದರು; ಆದರೆ ಜನರು ಆರಾಧಿಸತಕ್ಕ ಸ್ಥಳವು ಯೆರೂಸಲೇಮಿ ನಲ್ಲಿಯೇ ಎಂದು ನೀವು ಅನ್ನುತ್ತೀರಿ ಅಂದಳು. ಯೇಸು ಆಕೆಗೆ--ಸ್ತ್ರೀಯೇ, ನನ್ನನ್ನು ನಂಬು; ಈ ಬೆಟ್ಟದಲ್ಲಿಯಾಗಲೀ ಯೆರೂಸಲೇಮಿನಲ್ಲಿಯಾಗಲೀ ನೀವು ತಂದೆಯನ್ನು ಆರಾಧಿಸದೆ ಇರುವ ಗಳಿಗೆ ಬರುತ್ತದೆ. ನೀವು ಅರಿಯದೆ ಇರುವದನ್ನು ಆರಾಧಿ ಸುತ್ತೀರಿ; ನಾವು ಅರಿತಿರುವದನ್ನೇ ಆರಾಧಿಸುತ್ತೇವೆ; ಯಾಕಂದರೆ ರಕ್ಷಣೆಯು ಯೆಹೂದ್ಯರಿಂದಲೇ.
- Psalm 132:13–14 ಕೀರ್ತನೆಗಳು 132:13–14ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ. ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ.