1 Chronicles · chapter 22 · verse 7
1 Chronicles 22:7 in Kannada
ದಾವೀ ದನು ಹೇಳಿದ್ದೇನಂದರೆ--ನನ್ನ ಮಗನೇ, ನಾನು ನನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸ ಬೇಕೆಂಬದು ನನ್ನ ಹೃದಯದಲ್ಲಿ ಇತ್ತು.
Daavee danu heliddenandare--nanna magane, naanu nanna devaraada kartana naamakke maneyannu kattisa bekembadu nanna hrudayadalli ittu.
1 Chronicles 22:7 in English
- King James Version (KJV)
- And David said to Solomon, My son, as for me, it was in my mind to build an house unto the name of the LORD my God:
- World English Bible (WEB)
- David said to Solomon his son, “As for me, it was in my heart to build a house to the name of the LORD my God.
- American Standard Version (ASV)
- And David said to Solomon his son, As for me, it was in my heart to build a house unto the name of Jehovah my God.
- Bible in Basic English (BBE)
- And David said to Solomon, My son, it was my desire to put up a house for the name of the Lord my God.
- Darby Translation (DBY)
- And David said to Solomon, As for me, my son, I was minded to build a house unto the name of Jehovah my God.
- Webster's Bible (WBS)
- And David said to Solomon, My son, as for me, it was in my mind to build a house to the name of the LORD my God:
- Young's Literal Translation (YLT)
- and David saith to Solomon his son, 'As for me, it hath been with my heart to build a house to the name of Jehovah my God,
Read in context
- 5ಇದ ಲ್ಲದೆ ದಾವೀದನು--ನನ್ನ ಮಗನಾದ ಸೊಲೊಮೋ ನನು ಹುಡುಗನಾಗಿಯೂ ಮೃದುವಾದವನಾಗಿಯೂ ಇದ್ದಾನೆ; ಕರ್ತನಿಗೆ ಕಟ್ಟಬೇಕಾದ ಮನೆಯೂ ಸಮಸ್ತ ದೇಶಗಳಲ್ಲಿ ಕೀರ್ತಿಯಲ್ಲಿಯೂ ಸೌಂದರ್ಯದ ಲ್ಲಿಯೂ ಅಧಿಕ ಘನವಾಗಿರಬೇಕು; ನಾನು ಅದ ಕ್ಕೋಸ್ಕರ ಈಗ ಸಿದ್ಧಮಾಡುವೆನೆಂದು ಹೇಳಿದನು. ಆದದರಿಂದ ದಾವೀದನು ಸಾಯುವದಕ್ಕಿಂತ ಮುಂಚೆ ಬಹಳವಾಗಿ ಸಿದ್ಧಮಾಡಿದನು.
- 6ಆಗ ತನ್ನ ಮಗನಾದ ಸೊಲೊಮೋನನನ್ನು ಕರೇ ಕಳುಹಿಸಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಮನೆ ಯನ್ನು ಕಟ್ಟಿಸಲು ಅವನಿಗೆ ಆಜ್ಞಾಪಿಸಿದನು.
- 7ದಾವೀ ದನು ಹೇಳಿದ್ದೇನಂದರೆ--ನನ್ನ ಮಗನೇ, ನಾನು ನನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸ ಬೇಕೆಂಬದು ನನ್ನ ಹೃದಯದಲ್ಲಿ ಇತ್ತು.
- 8ಆದರೆ ಕರ್ತ ನಿಂದ ನನಗುಂಟಾದ ವಾಕ್ಯವೇನಂದರೆ--ನೀನು ಬಹು ರಕ್ತವನ್ನು ಚೆಲ್ಲಿದ್ದೀ; ಮಹಾಯುದ್ಧಗಳನ್ನು ಮಾಡಿದ್ದೀ; ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಿಸಬೇಡ; ಯಾಕಂದರೆ ನೀನು ನನ್ನ ಸಮ್ಮುಖದಲ್ಲಿ ಭೂಮಿಯ ಮೇಲೆ ಬಹಳ ರಕ್ತವನ್ನು ಸುರಿಸಿದ್ದಿ.
- 9ಇಗೋ, ಸಮಾ ಧಾನವುಳ್ಳ ಮನುಷ್ಯನಾಗಿರುವ ಒಬ್ಬ ಮಗನು ನಿನಗೆ ಹುಟ್ಟುವನು; ಸುತ್ತಲಿರುವ ಅವನ ಸಮಸ್ತ ಶತ್ರುಗಳಿಂದ ನಾನು ಅವನಿಗೆ ಸಮಾಧಾನವನ್ನು ಕೊಡುವೆನು. ಅವ ನಿಗೆ ಸೊಲೊಮೋನನೆಂಬ ಹೆಸರಾಗುವದು; ಅವನ ದಿವಸಗಳಲ್ಲಿ ನಾನು ಇಸ್ರಾಯೇಲಿಗೆ ಸಮಾಧಾನ ವನ್ನೂ ವಿಶ್ರಾಂತಿಯನ್ನೂ ಕೊಡುವೆನು.
Cross references
- Psalm 132:5 ಕೀರ್ತನೆಗಳು 132:5ನನ್ನ ಕಣ್ಣುಗಳಿಗೆ ನಿದ್ದೆಯನ್ನೂ ನನ್ನ ರೆಪ್ಪೆ ಗಳಿಗೆ ತೂಕಡಿಕೆಯನ್ನೂ ಕೊಡೆನು ಎಂಬದು.
- 2 Chronicles 6:7–9 2 ಪೂರ್ವಕಾಲವೃತ್ತಾಂತ 6:7–9ಆದಕಾರಣ ಇಸ್ರಾಯೇಲಿನ ದೇವರಾದ ಕರ್ತನ ಹೆಸರಿಗೆ ಆಲಯ ವನ್ನು ಕಟ್ಟಿಸಲು ನನ್ನ ತಂದೆಯಾದ ದಾವೀದನಿಗೆ ಮನಸ್ಸಿತ್ತು. ಆಗ ಕರ್ತನು ನನ್ನ ತಂದೆಯಾದ ದಾವೀ ದನಿಗೆ--ನನ್ನ ಹೆಸರಿಗೆ ಆಲಯವನ್ನು ಕಟ್ಟಿಸಲು ನಿನಗೆ ಮನಸ್ಸಾಗಿತ್ತಲ್ಲಾ? ನಿನಗೆ ಮನಸ್ಸಾಗಿರುವದರಿಂದ ಒಳ್ಳೇದು ಮಾಡಿದಿ. ಆದರೆ ನೀನು ಆಲಯವನ್ನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನೇ ನನ್ನ ಹೆಸರಿ ಗೋಸ್ಕರ ಆಲಯವನ್ನು ಕಟ್ಟಿಸುವನು ಅಂದನು.
- Deuteronomy 12:11 ಧರ್ಮೋಪದೇಶಕಾಂಡ 12:11ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
- 1 Kings 8:16–20 1 ಅರಸುಗಳು 8:16–20ನನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲು ಗೊಂಡು ನನ್ನ ನಾಮವು ಅದರಲ್ಲಿ ಇರುವ ನಿಮಿತ್ತ ಮಂದಿರವನ್ನು ಕಟ್ಟುವದಕ್ಕೆ ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ನಾನು ಆದು ಕೊಳ್ಳದೆ ನನ್ನ ಜನರಾದ ಇಸ್ರಾಯೇಲಿನ ಮೇಲೆ ಇರಲು ನಾನು ದಾವೀದನನ್ನು ಆದುಕೊಂಡೆನು ಅಂದನು. ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನನ್ನ ತಂದೆ ಯಾದ ದಾವೀದನಿಗೆ ಮನಸ್ಸಿತ್ತು. ಆಗ ಕರ್ತನು ನನ್ನ ತಂದೆಯಾದ ದಾವೀದನಿಗೆ--ನನ್ನ ನಾಮಕ್ಕೆ ಮಂದಿರವನ್ನು ಕಟ್ಟಬೇಕೆಂದು ನಿನಗೆ ಮನಸ್ಸಾಗಿತ್ತಲ್ಲಾ, ನೀನು ಚೆನ್ನಾಗಿ ಮಾಡಿದಿ. ಆದಾಗ್ಯೂ ಮಂದಿರವನ್ನು ನೀನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನು, ಅವನೇ ನನ್ನ ಹೆಸರಿಗಾಗಿ ಮಂದಿರವನ್ನು ಕಟ್ಟಿಸುವನು ಅಂದನು. ಈಗ ಕರ್ತನು ತಾನು ಹೇಳಿದ ವಾಕ್ಯ ವನ್ನು ಪೂರೈಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು, ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಿಸಿದ್ದೇನೆ.
- Deuteronomy 12:5 ಧರ್ಮೋಪದೇಶಕಾಂಡ 12:5ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.
- 1 Chronicles 29:3 1 ಪೂರ್ವಕಾಲವೃತ್ತಾಂತ 29:3ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ.
- 1 Kings 8:29 1 ಅರಸುಗಳು 8:29ನಿನ್ನ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀನು ಕೇಳುವ ಹಾಗೆ ಅಲ್ಲಿ ನನ್ನ ಹೆಸರಿರುವದೆಂದು ನೀನು ಹೇಳಿದ ಸ್ಥಳವಾದ ಈ ಮಂದಿರದ ಮೇಲೆ ರಾತ್ರಿ ಹಗಲು ನಿನ್ನ ಕಟಾಕ್ಷವಿರಲಿ.
- 2 Chronicles 2:4 2 ಪೂರ್ವಕಾಲವೃತ್ತಾಂತ 2:4ಇಗೋ, ನನ್ನ ದೇವರಾದ ಕರ್ತನಿಗೆ ಅದನ್ನು ಪ್ರತಿಷ್ಠೆ ಮಾಡುವದಕ್ಕೂ ಆತನ ಮುಂದೆ ಪರಿಮಳ ಧೂಪವನ್ನು ಸುಡುವದಕ್ಕೂ ನಿತ್ಯ ಸಮ್ಮುಖದ ರೊಟ್ಟಿ ಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆಗಳ ಲ್ಲಿಯೂ ಇಸ್ರಾಯೇಲಿಗೆ ನಿರಂತರವಾಗಿರಲು ನೇಮಿ ಸಿದ ನಮ್ಮ ದೇವರಾದ ಕರ್ತನ ಹಬ್ಬಗಳಲ್ಲಿಯೂ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋ ಸ್ಕರವೂ ಆತನ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.
- 2 Samuel 7:2–3 2 ಸಮುವೇಲನು 7:2–3ಅರ ಸನು ಪ್ರವಾದಿಯಾದ ನಾತಾನನಿಗೆ--ನೋಡು, ನಾನು ದೇವದಾರುಗಳ ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಮಂಜೂಷವು ತೆರೆಗಳ ಮಧ್ಯದಲ್ಲಿ ವಾಸವಾಗಿದೆ ಅಂದನು. ಆಗ ನಾತಾನನು ಅರಸ ನಿಗೆ--ನೀನು ಹೋಗಿ ನಿನ್ನ ಹೃದಯದಲ್ಲಿರುವದನ್ನೆಲ್ಲಾ ಮಾಡು; ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.
- 1 Chronicles 28:2–21 1 ಪೂರ್ವಕಾಲವೃತ್ತಾಂತ 28:2–21ಆಗ ಅರಸನಾದ ದಾವೀದನು ಎದ್ದು ನಿಂತು ಹೇಳಿದ್ದೇನಂದರೆ--ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ, ಕರ್ತನ ಒಡಂಬಡಿ ಕೆಯ ಮಂಜೂಷದ ನಿಮಿತ್ತವಾಗಿಯೂ ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಯಾದ ಮನೆಯನ್ನು ನಾನು ಕಟ್ಟಿಸಲು ಮನಸ್ಸಾಗಿದ್ದು ಕಟ್ಟುವಿ ಕೆಯ ನಿಮಿತ್ತ ಸಿದ್ಧಮಾಡಿದೆನು. ಆದರೆ ದೇವರು ನನಗೆ--ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಬೇಡ; ಯಾಕಂದರೆ ನೀನು ಯುದ್ಧದ ಮನುಷ್ಯನಾಗಿದ್ದೀ; ರಕ್ತವನ್ನು ಚೆಲ್ಲಿದ್ದೀ ಅಂದನು. ಆದರೆ ಇಸ್ರಾಯೇಲಿನ ಕರ್ತನಾದ ದೇವರು ಎಂದೆಂದಿಗೂ ಇಸ್ರಾಯೇಲಿನ ಮೇಲೆ ಅರಸನಾಗಿರಲು ನನ್ನ ತಂದೆಯ ಮನೆಯ ಸಮಸ್ತರಿಂದ ನನ್ನನ್ನು ಆದುಕೊಂಡನು. ಯಾಕಂದರೆ ನಾನು ನಾಯಕನಾಗಿರಲು ಯೆಹೂದನನ್ನೂ ಯೆಹೂ ದನ ಮನೆಯಲ್ಲಿ ನನ್ನ ತಂದೆಯ ಮನೆಯನ್ನೂ ಆದು ಕೊಂಡು ನನ್ನ ತಂದೆಯ ಕುಮಾರರಲ್ಲಿ ನನ್ನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗ ಮಾಡಲು ಚಿತ್ತ ವುಳ್ಳವನಾಗಿದ್ದನು; ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು. ಆತನು ನನ್ನ ಸಂಗಡ--ನಿನ್ನ ಮಗನಾದ ಸೊಲೊಮೋನನು ತಾನೇನನ್ನ ಮನೆಯನ್ನೂ ಅಂಗಳಗಳನ್ನೂ ಕಟ್ಟಿಸುವನು; ಅವನನ್ನು ನನಗೆ ಮಗನಾಗಿರಲು ಆದುಕೊಂಡೆನು. ನಾನು ಅವನಿಗೆ ತಂದೆಯಾಗಿರುವೆನು. ಇದಲ್ಲದೆ ಈಗಿನಂತೆ ನನ್ನ ಆಜ್ಞೆಗಳನ್ನೂ ನ್ಯಾಯಗಳನ್ನೂ ಅವನು ನಡಿಸಲು ದೃಢವಾಗಿದ್ದರೆ ಅವನ ರಾಜ್ಯವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು ಅಂದನು. ಆದ ದರಿಂದ ನೀವು ಈ ಉತ್ತಮವಾದ ದೇಶವನ್ನು ಸ್ವಾಧೀನ ಮಾಡಿಕೊಂಡು ಅದನ್ನು ನಿರಂತರದಲ್ಲಿ ನಿಮ್ಮ ತರು ವಾಯ ಇರುವ ನಿಮ್ಮ ಮಕ್ಕಳಿಗೆ ಬಾಧ್ಯತೆಯಾಗಿ ಕೊಡುವ ಹಾಗೆ ಕರ್ತನ ಸಭೆಯಾದ ಸಮಸ್ತ ಇಸ್ರಾ ಯೇಲಿನ ಸಮ್ಮುಖದಲ್ಲಿಯೂ ನಮ್ಮ ದೇವರ ಕೇಳುವಿಕೆ ಯಲ್ಲಿಯೂ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನೆಲ್ಲಾ ಹುಡುಕಿ ಕೈಕೊಳ್ಳಿರಿ. ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು. ಆದದರಿಂದ ಜಾಗ್ರತೆಯಾಗಿರು; ಯಾಕಂದರೆ ಕರ್ತನು ಪರಿಶುದ್ಧ ಸ್ಥಾನಕ್ಕೋಸ್ಕರ ಮನೆಯನ್ನು ಕಟ್ಟಿಸು ವದಕ್ಕೆ ನಿನ್ನನ್ನು ಆದುಕೊಂಡಿದ್ದಾನೆ; ನೀನು ದೃಢವಾ ಗಿದ್ದು ಅದನ್ನು ಮಾಡು ಅಂದನು. ಆಗ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ -- ದ್ವಾರಾಂಗಳದ ಮಾದರಿಯನ್ನೂ ಅದರ ಮನೆಗಳು, ಉಗ್ರಾಣಗಳು, ಮೇಲಿನ ಕೊಠಡಿ ಗಳು, ಅಂತರಂಗದ ಕೊಠಡಿಗಳು, ಕೃಪಾಸನದ ಸ್ಥಾನವು, ಕರ್ತನ ಮನೆಯ ಅಂಗಳಗಳು, ಸುತ್ತಲಿ ರುವ ಕೊಠಡಿಗಳಾದ ಕರ್ತನ ಮನೆಯ ಉಗ್ರಾಣ ಗಳು, ಪ್ರತಿಷ್ಠೆ ಮಾಡಿದವುಗಳ ಉಗ್ರಾಣಗಳು, ಆತ್ಮ ದಿಂದ ತನಗುಂಟಾದ ಇವುಗಳ ಸಮಸ್ತ ಮಾದರಿ ಯನ್ನೂ ಕೊಟ್ಟನು. ಇದಲ್ಲದೆ ಯಾಜಕರ ಲೇವಿ ಯರ ವರ್ಗಗಳಿಗೋಸ್ಕರವೂ ಕರ್ತನ ಮನೆಯ ಸೇವೆಯ ಸಮಸ್ತ ಕೆಲಸಕ್ಕೋಸ್ಕರವೂ ಕರ್ತನ ಮನೆ ಯಲ್ಲಿರುವ ಸೇವೆಮಾಡುವ ಸಮಸ್ತ ಪಾತ್ರೆಗಳಿ ಗೋಸ್ಕರವೂ ಕಟ್ಟಳೆ ಕೊಟ್ಟನು. ಸಕಲ ವಿಧವಾದ ಸೇವೆಗೆ ಸಮಸ್ತ ಬಂಗಾರದ ಸಾಮಾನುಗಳಿಗೋಸ್ಕರ ಬಂಗಾರವನ್ನೂ ಸಕಲವಿಧವಾದ ಸೇವೆಗೆ ಸಮಸ್ತ ಬೆಳ್ಳಿಯ ಸಾಮಾನುಗಳಿಗೋಸ್ಕರ ಬೆಳ್ಳಿಯನ್ನೂ ತೂಗಿ ಕೊಟ್ಟನು. ಬಂಗಾರದ ದೀಪಸ್ತಂಭಗಳಿಗೋಸ್ಕ ರವೂ ಅದರ ಬಂಗಾರದ ದೀಪಗಳಿಗೋಸ್ಕರವೂ ಒಂದೊಂದು ಸ್ತಂಭಕ್ಕೋಸ್ಕರ ತೂಕಮಾಡಿ ಕೊಟ್ಟನು. ಹಾಗೆಯೇ ಬೆಳ್ಳಿಯ ದೀಪಸ್ತಂಭಗಳಿಗೋಸ್ಕರ ದೀಪ ಸ್ತಂಭಕ್ಕೂ ಅದರ ದೀಪಗಳಿಗೂ ಒಂದೊಂದು ದೀಪ ಸ್ತಂಭದ ಕೆಲಸದ ಪ್ರಕಾರ ತೂಕಮಾಡಿ ಕೊಟ್ಟನು. ಆ ಪ್ರಕಾರವೇ ಸಮ್ಮುಖದ ರೊಟ್ಟಿಗಳ ಮೇಜುಗಳಿ ಗೋಸ್ಕರ ಒಂದೊಂದು ಮೇಜಿಗೆ ತೂಗಿಕೊಟ್ಟನು; ಬೆಳ್ಳಿಯ ಮೇಜುಗಳಿಗೋಸ್ಕರ ಹಾಗೆಯೇ ಬೆಳ್ಳಿಯನ್ನು ತೂಗಿಕೊಟ್ಟನು. ಅದೇ ಪ್ರಕಾರ ಮುಳ್ಳುಗಳೂ ಪಾತ್ರೆಗಳೂ ಹೂಜೆಗಳೂ ಇವುಗಳಿಗೋಸ್ಕರ ಚೊಕ್ಕ ಬಂಗಾರವನ್ನು ಕೊಟ್ಟನು. ಬಂಗಾರದ ಬಟ್ಟಲುಗಳಿ ಗೋಸ್ಕರ ಒಂದೊಂದು ಬಟ್ಟಲಿಗೋಸ್ಕರ ಅದರ ತೂಕವಾಗಿಯೂ ಬೆಳ್ಳಿಯ ಒಂದೊಂದು ಬಟ್ಟಲಿಗೋ ಸ್ಕರ ಅದರ ತೂಕವಾಗಿಯೂ ಕೊಟ್ಟನು. ಇದಲ್ಲದೆ ಧೂಪಪೀಠಕ್ಕೋಸ್ಕರ ಬಂಗಾರವನ್ನೂ ರೆಕ್ಕೆಗಳನ್ನೂ ಚಾಚಿಕೊಂಡು ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಮುಚ್ಚುವ ಕೆರೂಬಿಗಳ ರಥದ ಮಾದರಿಗೋಸ್ಕರ ಬಂಗಾರವನ್ನೂ ತೂಗಿಕೊಟ್ಟನು. ಕರ್ತನು ತನ್ನ ಕೈ ನನ್ನ ಮೇಲೆ ಇರಿಸಿ ಈ ಮಾದರಿಯ ಕೆಲಸಗಳನ್ನೆಲ್ಲಾ ನನಗೆ ತಿಳಿಯುವಂತೆ ಮಾಡಿದನು ಅಂದನು. ದಾವೀದನು ತನ್ನ ಮಗನಾದ ಸೊಲೊಮೋನ ನಿಗೆ ಹೇಳಿದ್ದೇನಂದರೆ--ನೀನು ಬಲಗೊಂಡು ದೃಢ ಪಟ್ಟು ಮಾಡು; ಭಯಪಡಬೇಡ, ಹೆದರಬೇಡ; ಯಾಕಂದರೆ ನನ್ನ ದೇವರಾಗಿರುವ ಕರ್ತನಾದ ದೇವರು ನಿನ್ನ ಸಂಗಡ ಇರುವನು. ಕರ್ತನ ಮನೆಯ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವ ವರೆಗೂ ಆತನು ನಿನ್ನನ್ನು ವಿಸರ್ಜಿಸುವದಿಲ್ಲ, ಕೈ ಬಿಡುವದಿಲ್ಲ.ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ. ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.
- 1 Kings 9:3 1 ಅರಸುಗಳು 9:3ಆಗ ಕರ್ತನು ಅವ ನಿಗೆ--ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ನಾನು ಕೇಳಿ ಯುಗ ಯುಗಕ್ಕೂ ನನ್ನ ಹೆಸರು ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಮಂದಿರವನ್ನು ಪರಿಶುದ್ಧ ಮಾಡಿದೆನು; ನನ್ನ ಕಣ್ಣುಗಳೂ ನನ್ನ ಹೃದಯವೂ ನಿತ್ಯವಾಗಿ ಅಲ್ಲಿ ರುವವು.
- Ezra 6:12 ಎಜ್ರನು 6:12ಇದಲ್ಲದೆ ತನ್ನ ನಾಮವನ್ನು ಇರಿಸಲು ಮಾಡಿದ ದೇವರು ಯೆರೂಸಲೇಮಿನಲ್ಲಿರುವ ದೇವರ ಈ ಆಲಯವನ್ನು ಬದಲು ಮಾಡುವದಕ್ಕೂ ಕೆಡಿಸು ವದಕ್ಕೂ ತಮ್ಮ ಕೈಯನ್ನು ಚಾಚುವ ಎಲ್ಲಾ ಅರಸುಗ ಳನ್ನೂ ಜನರನ್ನೂ ಆತನು ಕೆಡಿಸಲಿ. ದಾರ್ಯಾ ವೆಷನಾದ ನಾನು ಅಪ್ಪಣೆಕೊಟ್ಟಿದ್ದೇನೆ; ಅದು ತ್ವರೆ ಯಾಗಿ ಮಾಡಲ್ಪಡಲಿ ಎಂಬದು.