1 Chronicles · chapter 23 · verse 30
1 Chronicles 23:30 in Kannada
ಇದಲ್ಲದೆ ಉದಯಕಾಲದ ಲ್ಲಿಯೂ ಸಾಯಂಕಾಲದಲ್ಲಿಯೂ ನಿಂತು ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಕರ್ತನ ಮುಂದೆ ನಿರಂತರವಾಗಿ ಅವರಿಗೆ ಆಜ್ಞಾಪಿಸಿದ
Idallade udayakaalada lliyoo saayankaaladalliyoo nintu kartanannu kondaaduvadakkoo stutisuvadakkoo kartana munde nirantaravaagi avarige aajnyaapisida
1 Chronicles 23:30 in English
- King James Version (KJV)
- And to stand every morning to thank and praise the LORD, and likewise at even;
- World English Bible (WEB)
- and to stand every morning to thank and praise the LORD, and likewise in the evening;
- American Standard Version (ASV)
- and to stand every morning to thank and praise Jehovah, and likewise at even;
- Bible in Basic English (BBE)
- They had to take their places every morning to give praise and make melody to the Lord, and in the same way at evening;
- Darby Translation (DBY)
- and to stand every morning to thank and praise Jehovah, and likewise at even;
- Webster's Bible (WBS)
- And to stand every morning to thank and praise the LORD, and likewise at evening;
- Young's Literal Translation (YLT)
- and to stand, morning by morning, to give thanks, and to give praise to Jehovah, and so at evening;
Read in context
- 28ಕರ್ತನ ಮನೆಯ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳ ಲ್ಲಿಯೂ ಸಮಸ್ತ ಪರಿಶುದ್ಧವಾದವುಗಳನ್ನು ಪರಿಶುದ್ಧ ಮಾಡುವದರಲ್ಲಿಯೂ
- 29ಕರ್ತನ ಮಂದಿರದ ಸೇವೆಯ ಕಾರ್ಯದಲ್ಲಿ ಸಮ್ಮುಖದ ರೊಟ್ಟಿ ಅರ್ಪಣೆ ಬಲಿಯ ನಯವಾದ ಹಿಟ್ಟು ಹುಳಿ ಇಲ್ಲದ ರೊಟ್ಟಿ ಬಾಂಡ್ಲಿಯಲ್ಲಿ ಮಾಡಿದ್ದ ಎಣ್ಣೆಯಲ್ಲಿ ಕರಿದಿದ್ದಕ್ಕೋಸ್ಕರವೂ ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳಿಗೆ ನೇಮಕವಾಗಿತ್ತು.
- 30ಇದಲ್ಲದೆ ಉದಯಕಾಲದ ಲ್ಲಿಯೂ ಸಾಯಂಕಾಲದಲ್ಲಿಯೂ ನಿಂತು ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಕರ್ತನ ಮುಂದೆ ನಿರಂತರವಾಗಿ ಅವರಿಗೆ ಆಜ್ಞಾಪಿಸಿದ
- 31ಕಟ್ಟಳೆಯ ಪ್ರಕಾರವಾಗಿ ಸಬ್ಬತ್ ದಿವಸಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವದಕ್ಕೂಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು.
- 32ಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು.
Cross references
- Psalm 92:1–3 ಕೀರ್ತನೆಗಳು 92:1–3ಕರ್ತನನ್ನು ಕೊಂಡಾಡುವದೂ; ಮಹೋನ್ನತನೇ, ನಿನ್ನ ಹೆಸರನ್ನು ಕೀರ್ತಿಸುವದೂ ಬೆಳಿಗ್ಗೆ ನಿನ್ನ ಪ್ರೀತಿ ಕರುಣೆಯನ್ನೂ ಪ್ರತಿ ರಾತ್ರಿ ಯಲ್ಲಿ ನಿನ್ನ ನಂಬಿಗಸ್ತಿಕೆಯನ್ನೂ ಹತ್ತು ತಂತಿ ವೀಣೆ ಯಿಂದಲೂ ವಾದ್ಯದಿಂದಲೂ ಕಿನ್ನರಿಯ ಘನ ಸ್ವರ ದಿಂದಲೂ ತಿಳಿಸುವದು ಒಳ್ಳೇದು.
- 1 Chronicles 9:33 1 ಪೂರ್ವಕಾಲವೃತ್ತಾಂತ 9:33ಇದಲ್ಲದೆ ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ಹಾಡುಗಾರರಾಗಿದ್ದು ಸ್ವತಂತ್ರವಾಗಿ ಕೊಠಡಿ ಗಳಲ್ಲಿ ವಾಸವಾಗಿದ್ದರು; ಅವರು ರಾತ್ರಿ ಹಗಲು ಅದೇ ಕಾರ್ಯದಲ್ಲಿದ್ದರು.
- Ezra 3:10–11 ಎಜ್ರನು 3:10–11ಕಟ್ಟುವವರು ಕರ್ತನ ಮಂದಿರಕ್ಕೆ ಅಸ್ತಿವಾರ ಹಾಕುವಾಗ ಇಸ್ರಾ ಯೇಲಿನ ಅರಸನಾದ ದಾವೀದನ ಕಟ್ಟಳೆಯ ಪ್ರಕಾರ ಕರ್ತನನ್ನು ಸ್ತುತಿಸುವದಕ್ಕೆ ವಸ್ತ್ರಗಳನ್ನು ಧರಿಸಿಕೊಂಡವ ರಾಗಿ ತುತೂರಿಗಳನ್ನೂದುವ ಯಾಜಕರನ್ನೂ ತಾಳಗ ಳನ್ನು ಬಡಿಯುವ ಆಸಾಫನ ಮಕ್ಕಳಾದ ಲೇವಿಯರನ್ನೂ ಇಟ್ಟರು. ಆಗ ಅವರು ಕರ್ತನನ್ನು ಕೊಂಡಾಡಿ ಹೊಗಳಿ ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇಸ್ರಾಯೇಲಿನ ಮೇಲೆ ಉಂಟೆಂದೂ ಪರಸ್ಪರವಾಗಿ ಹಾಡಿದರು. ಅವರು ಕರ್ತನನ್ನು ಹೊಗ ಳಿದಾಗ ಕರ್ತನ ಮಂದಿರದ ಅಸ್ತಿವಾರವನ್ನು ಹಾಕುವ ನಿಮಿತ್ತ ಜನರೆಲ್ಲರು ಮಹಾಧ್ವನಿಯಿಂದ ಆರ್ಭಟಿಸಿ ದರು.
- Revelation 14:3 ಪ್ರಕಟನೆ 14:3ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡಿನಂತಿದ್ದ ಹಾಡನ್ನು ಅವರು ಹಾಡಿದರು. ಭೂ ಲೋಕದೊಳಗಿಂದ ವಿಮೋಚಿಸಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.
- 1 Chronicles 25:1–7 1 ಪೂರ್ವಕಾಲವೃತ್ತಾಂತ 25:1–7ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು. ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು. ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು. ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು. ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು. ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು. ಹೀಗೆಯೇ ಅವರ ಲೆಕ್ಕವೂ ಕರ್ತನ ಹಾಡುಗಳಲ್ಲಿ ಬೋಧಿಸಲ್ಪಟ್ಟ ಸಮಸ್ತ ಪ್ರವೀಣರ ಲೆಕ್ಕವೂ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಭತ್ತೆಂಟು ಮಂದಿಯಾಗಿದ್ದರು.
- 1 Chronicles 6:31–33 1 ಪೂರ್ವಕಾಲವೃತ್ತಾಂತ 6:31–33ಮಂಜೂಷವನ್ನು ನೆಲೆಯಾಗಿ ಇರಿಸಿದ ತರು ವಾಯ ದಾವೀದನು ಕರ್ತನ ಮನೆಯಲ್ಲಿ ಹಾಡುವ ಸೇವೆಯ ಮೇಲೆ ಇರಿಸಿದವರು ಇವರೇ. ಸೊಲೊ ಮೋನನು ಯೆರೂಸಲೇಮಿನಲ್ಲಿ ಕರ್ತನ ಮನೆಯನ್ನು ಕಟ್ಟುವ ವರೆಗೆ ಇವರು ಹಾಡುವ ಸೇವೆಯಲ್ಲಿ ಸಭೆಯ ಗುಡಾರ ನಿವಾಸದ ಮುಂದೆ ಸೇವಿಸುತ್ತಾ ಇದ್ದರು; ಆಗ ಅವರು ತಮ್ಮ ಸೇವೆಯಲ್ಲಿ ಕ್ರಮದ ಪ್ರಕಾರ ಕಾಯುತ್ತಿದ್ದರು. ತಮ್ಮ ಮಕ್ಕಳ ಸಂಗಡ ಕಾಯುತ್ತಿದ್ದವರು ಯಾರಂದರೆ--ಕೆಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಇವನು ಯೋವೇಲನ ಮಗನು,
- 2 Chronicles 29:25–28 2 ಪೂರ್ವಕಾಲವೃತ್ತಾಂತ 29:25–28ಇದಲ್ಲದೆ ದಾವೀದನೂ ಅರಸನ ದರ್ಶಿಯಾದ ಗಾದನೂ ಪ್ರವಾ ದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ ತಾಳ ವೀಣೆ ಕಿನ್ನರಿಗಳನ್ನು ಹಿಡಿದವರಾಗಿ ಕರ್ತನ ಆಲಯದಲ್ಲಿ ಲೇವಿಯರನ್ನು ನಿಲ್ಲಿಸಿದನು. ಕರ್ತನ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹಾಗೆ ಇತ್ತು. ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿರುವಾಗ ಹಿಜ್ಕೀಯನು ಬಲಿಪೀಠದ ಮೇಲೆ ದಹನಬಲಿ ಯನ್ನು ಅರ್ಪಿಸಲು ಹೇಳಿದನು. ದಹನಬಲಿಯನ್ನು ಅರ್ಪಿಸಲು ಆರಂಭಿಸಿದಾಗ ತುತೂರಿಗಳಿಂದಲೂ ಇಸ್ರಾಯೇಲಿನ ಅರಸನಾದ ದಾವೀದನ ವಾದ್ಯಗ ಳಿಂದಲೂ ಕರ್ತನ ಹಾಡು ಆರಂಭವಾಯಿತು. ಆಗ ಸಭೆಯವರೆಲ್ಲರೂ ಆರಾಧಿಸಿದರು. ದಹನಬಲಿ ಅರ್ಪಿಸಿ ತೀರಿಸುವ ಪರ್ಯಂತರ ಹಾಡುಗಾರರು ಹಾಡಿದರು, ತುತೂರಿ ಊದುವವರು ಊದಿದರು.
- Revelation 5:8–14 ಪ್ರಕಟನೆ 5:8–14ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು. ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ; ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು. ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು. ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು. ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು. ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- Psalm 134:1–2 ಕೀರ್ತನೆಗಳು 134:1–2ಇಗೋ, ಕರ್ತನ ಆಲಯದಲ್ಲಿ ಪ್ರತಿ ರಾತ್ರಿ ನಿಲ್ಲುವವರಾದ ಕರ್ತನ ಸೇವಕರೆ ಎಲ್ಲಾ ಕರ್ತನನ್ನು ಸ್ತುತಿಸಿರಿ. ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ ಕರ್ತನನ್ನು ಸ್ತುತಿಸಿರಿ.ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
- Psalm 135:1–3 ಕೀರ್ತನೆಗಳು 135:1–3ಕರ್ತನನ್ನು ಸ್ತುತಿಸಿರಿ. ಕರ್ತನ ಹೆಸರನ್ನು ಸ್ತುತಿಸಿರಿ; ಕರ್ತನ ಆಲಯ ದಲ್ಲಿಯೂ ನಮ್ಮ ದೇವರ ಆಲಯದ ಅಂಗಳ ಗಳಲ್ಲಿಯೂ ನಿಲ್ಲುವ ಕರ್ತನ ಸೇವಕರೇ, ಸ್ತುತಿಸಿರಿ. ಕರ್ತನನ್ನು ಸ್ತುತಿಸಿರಿ; ಕರ್ತನು ಒಳ್ಳೆಯವನು; ಆತನ ಹೆಸರಿಗೆ ಸ್ತುತಿಗಳನ್ನು ಹಾಡಿರಿ; ಅದು ರಮ್ಯ ವಾದದ್ದು.
- Psalm 135:19–20 ಕೀರ್ತನೆಗಳು 135:19–20ಇಸ್ರಾಯೇಲಿನ ಮನೆಯವರೇ, ಕರ್ತನನ್ನು ಸ್ತುತಿ ಸಿರಿ. ಆರೋನನ ಮನೆಯವರೇ, ಕರ್ತನನ್ನು ಸ್ತುತಿಸಿರಿ. ಲೇವಿಯ ಮನೆಯವರೇ, ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಡುವವರೇ, ಕರ್ತನನ್ನು ಸ್ತುತಿಸಿರಿ.ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ.
- Psalm 137:2–4 ಕೀರ್ತನೆಗಳು 137:2–4ಅದರ ನಡುವೆ ಇರುವ ನೀರವಂಜಿ ಮರಗಳ ಮೇಲೆ ನಮ್ಮ ಕಿನ್ನರಿಗಳನ್ನು ತೂಗಹಾಕಿದೆವು. ಅಲ್ಲಿ ನಮ್ಮನ್ನು ಸೆರೆಹಿಡಿದು ಹಾಳುಮಾಡಿದವರು--ನಮ್ಮ ಸಂತೋಷ ಕ್ಕಾಗಿ ಒಂದು ಹಾಡನ್ನು ಹಾಡಿರಿ ಅಂದರು. ಅನ್ಯದೇಶದಲ್ಲಿ ನಾವು ಕರ್ತನ ಹಾಡನ್ನು ಹಾಡು ವದು ಹೇಗೆ?