1 Chronicles · chapter 23 · verse 4
1 Chronicles 23:4 in Kannada
ಇವರಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಕರ್ತನ ಮನೆಯ ಕೆಲಸವನ್ನು ನಡಿಸುವವರಾಗಿದ್ದರು; ಆರು ಸಾವಿರ ಮಂದಿ ಪಾರುಪತ್ಯಗಾರರೂ ನ್ಯಾಯಾಧಿ ಪತಿಗಳೂ ಆಗಿದ್ದರು.
Ivaralli ippattanaalku saavira mandi kartana maneya kelasavannu nadisuvavaraagiddaru; aaru saavira mandi paarupatyagaararoo nyaayaadhi patigaloo aagiddaru.
1 Chronicles 23:4 in English
- King James Version (KJV)
- Of which, twenty and four thousand [were] to set forward the work of the house of the LORD; and six thousand [were] officers and judges:
- World English Bible (WEB)
- David said, “Of these, twenty-four thousand were to oversee the work of the LORD’s house, six thousand were officers and judges,
- American Standard Version (ASV)
- Of these, twenty and four thousand were to oversee the work of the house of Jehovah; and six thousand were officers and judges;
- Bible in Basic English (BBE)
- Of these, twenty-four thousand were to be overseers of the work of the house of the Lord, and six thousand were judges and men of authority;
- Darby Translation (DBY)
- Of these, twenty-four thousand were to preside over the work of the house of Jehovah; and six thousand were officers and judges;
- Webster's Bible (WBS)
- Of which, twenty and four thousand [were] to oversee the work of the house of the LORD; and six thousand [were] officers and judges:
- Young's Literal Translation (YLT)
- Of these to preside over the work of the house of Jehovah [are] twenty and four thousand, and officers and judges six thousand,
Read in context
- 2ಇದ ಲ್ಲದೆ ತಾನು ಇಸ್ರಾಯೇಲಿನ ಸಮಸ್ತ ಪ್ರಧಾನರನ್ನೂ ಯಾಜಕರನ್ನೂ ಲೇವಿಯರನ್ನೂ ಒಟ್ಟುಗೂಡಿಸಿ ಬರ ಮಾಡಿದನು.
- 3ಲೇವಿಯರು ಮೂವತ್ತು ವರುಷ ಪ್ರಾಯದವರು ಮೊದಲುಗೊಂಡು ಲೆಕ್ಕಿಸಲ್ಪಟ್ಟಿದ್ದರು. ಅವರ ಪುರುಷರ ಲೆಕ್ಕವು ತಲೆ ತಲೆಯ ಪ್ರಕಾರ ಮೂವತ್ತೆಂಟು ಸಾವಿರ ವಾಗಿತ್ತು.
- 4ಇವರಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಕರ್ತನ ಮನೆಯ ಕೆಲಸವನ್ನು ನಡಿಸುವವರಾಗಿದ್ದರು; ಆರು ಸಾವಿರ ಮಂದಿ ಪಾರುಪತ್ಯಗಾರರೂ ನ್ಯಾಯಾಧಿ ಪತಿಗಳೂ ಆಗಿದ್ದರು.
- 5ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು; ನಾಲ್ಕು ಸಾವಿರ ಮಂದಿ ಸ್ತುತಿಸುವದಕ್ಕೆ ದಾವೀದನು ಸಿದ್ಧಮಾಡಿದ ವಾದ್ಯಗಳಿಂದ ಕರ್ತನನ್ನು ಸ್ತುತಿಸಿದರು.
- 6ಗೇರ್ಷೋನನು ಕೆಹಾತನು ಮೆರಾರೀಯು ಎಂಬ ಲೇವಿಯ ಮಕ್ಕಳಲ್ಲಿ ಅವರನ್ನು ವರ್ಗಗಳಾಗಿ ದಾವೀ ದನು ವಿಭಾಗಿಸಿದನು.
Cross references
- 2 Chronicles 19:8 2 ಪೂರ್ವಕಾಲವೃತ್ತಾಂತ 19:8ಇದಲ್ಲದೆ ಅವರು ಯೆರೂಸಲೇಮಿಗೆ ತಿರಿಗಿ ಬಂದ ತರುವಾಯ ಯೆಹೋಷಾಫಾಟನು ಕರ್ತನ ನ್ಯಾಯತೀರ್ವಿಕೆಗೋಸ್ಕರವೂ ವ್ಯಾಜ್ಯಗಳಿಗೋ ಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ ಯಾಜಕರಲ್ಲಿಯೂ ಪಿತೃಗಳ ಮುಖ್ಯಸ್ಥರಲ್ಲಿಯೂ ಕೆಲ ವರನ್ನು ನೇಮಿಸಿ ಅವರಿಗೆ--
- Deuteronomy 16:18 ಧರ್ಮೋಪದೇಶಕಾಂಡ 16:18ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.
- 1 Chronicles 9:28–32 1 ಪೂರ್ವಕಾಲವೃತ್ತಾಂತ 9:28–32ಸೇವೆಯ ಪಾತ್ರೆಗಳನ್ನು ಒಳಕ್ಕೆ ಲೆಕ್ಕದ ಪ್ರಕಾರ ತರುವದಕ್ಕೂ ಅವರಲ್ಲಿ ಕೆಲವರು ಅವುಗಳ ಮೇಲೆ ನೇಮಕವಾಗಿದ್ದರು. ಅವರಲ್ಲಿ ಕೆಲವರು ಸಾಮಾನುಗಳನ್ನೂ ಪರಿಶುದ್ಧಸ್ಥಾನದಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಯವಾದ ಹಿಟ್ಟನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಸಾಂಬ್ರಾಣಿಯನ್ನೂ ಸುಗಂಧದ್ರವ್ಯಗಳನ್ನೂ ಕಾಯಲು ನೇಮಿಸಲ್ಪಟ್ಟಿದ್ದರು. ಯಾಜಕರ ಕುಮಾರರಲ್ಲಿ ಕೆಲವರು ಸುಗಂಧಗಳಿಂದ ತೈಲವನ್ನು ಮಾಡಿದರು. ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ಲೇವಿ ಯರಲ್ಲಿ ಒಬ್ಬನಾಗಿದ್ದು ತಟ್ಟೆಗಳ ಮೇಲೆ ಮಾಡಲ್ಪಟ್ಟ ಭಕ್ಷ್ಯಗಳ ಕೆಲಸಕ್ಕೆ ನೇಮಿಸಲ್ಪಟ್ಟಿದ್ದನು. ಸಮ್ಮುಖದ ರೊಟ್ಟಿಯನ್ನು ಪ್ರತಿಸಬ್ಬತ್ ದಿವಸದಲ್ಲಿ ಸಿದ್ಧಮಾಡು ವದಕ್ಕೆ ಕೆಹಾತ್ಯರ ಕುಮಾರರಾದ ಅವರ ಸಹೋದರ ರಲ್ಲಿ ಕೆಲವರು ನೇಮಿಸಲ್ಪಟ್ಟಿದ್ದರು.
- Malachi 2:7 ಮಲಾಕಿಯ 2:7ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
- 1 Chronicles 26:29–31 1 ಪೂರ್ವಕಾಲವೃತ್ತಾಂತ 26:29–31ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಕುಮಾರರೂ ಪಾರುಪತ್ಯಗಾರರಿಗೋಸ್ಕರವೂ ನ್ಯಾಯಾಧಿಪತಿಗಳಿ ಗೋಸ್ಕರವೂ ಇಸ್ರಾಯೇಲಿನ ಮೇಲೆ ಹೊರಗಿನ ಕಾರ್ಯಗಳನ್ನು ನೋಡಲು ಇಡಲ್ಪಟ್ಟಿದ್ದರು. ಹೆಬ್ರೋನ್ಯರಲ್ಲಿ ಬಲವುಳ್ಳವರಾದ ಹಷಬ್ಯನೂ ಅವನ ಸಹೋದರರೂ ಕರ್ತನ ಸಮಸ್ತ ಕಾರ್ಯ ಗಳಲ್ಲಿಯೂ ಅರಸನ ಸೇವೆಯಲ್ಲಿಯೂ ಸಾವಿರದ ಏಳುನೂರು ಮಂದಿ ಪಶ್ಚಿಮವಾಗಿ ಯೊರ್ದನಿನ ಈಚೆ ಯಲ್ಲಿ ಇಸ್ರಾಯೇಲ್ಯರೊಳಗೆ ಅಧಿಪತಿಗಳಾಗಿದ್ದರು. ಯೆರೀಯನು ತನ್ನ ಪಿತೃಗಳ ಸಂತತಿಗಳ ಪ್ರಕಾರ ಹೆಬ್ರೋನ್ಯರಲ್ಲಿ ಮುಖ್ಯಸ್ಥನಾಗಿದ್ದನು. ಇವರು ದಾವೀ ದನ ಆಳಿಕೆಯ ನಾಲ್ವತ್ತನೇ ವರುಷದಲ್ಲಿ ಹುಡುಕ ಲ್ಪಟ್ಟಿದ್ದರು; ಆಗ ಗಿಲ್ಯಾದಿನ ಯಾಜೇರಿನಲ್ಲಿ ಅವರೊಳಗೆ ಬಲವುಳ್ಳ ಪರಾಕ್ರಮಶಾಲಿಗಳು ಸಿಕ್ಕಿದರು.ಇದ ಲ್ಲದೆ ಬಲವುಳ್ಳವರಾದ ಯೆರೀಯನ ಸಹೋದರರು ಎರಡು ಸಾವಿರದ ಏಳು ನೂರು ಮಂದಿ ಮುಖ್ಯ ಪಿತೃಗಳಾಗಿದ್ದರು. ಅರಸನಾದ ದಾವೀದನು ಇವರನ್ನು ದೇವರ ಸಮಸ್ತ ಕಾರ್ಯಗಳ ನಿಮಿತ್ತವಾಗಿಯೂ ಅರಸುಗಳ ಕಾರ್ಯಗಳ ನಿಮಿತ್ತವಾಗಿಯೂ ರೂಬೇ ನ್ಯರ ಮೇಲೆಯೂ ಗಾದ್ಯರ ಮೇಲೆಯೂ ಮನಸ್ಸೆಯ ಅರ್ಧ ಗೋತ್ರದ ಮೇಲೆಯೂ ಅಧಿಪತಿಗಳನ್ನಾಗಿ ಮಾಡಿದನು.
- Ezra 3:8–9 ಎಜ್ರನು 3:8–9ಅವರು ಯೆರೂಸಲೇಮಿನಲ್ಲಿದ್ದ ದೇವರ ಆಲಯಕ್ಕೆ ಬಂದ ಎರಡನೇ ವರುಷದ ಎರ ಡನೇ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾ ಬೆಲನೂ ಯೋಚಾದಾಕನ ಮಗನಾದ ಯೇಷೂ ವನೂ ಉಳಿದ ಅವರ ಸಹೋದರರಾದ ಯಾಜಕರೂ ಲೇವಿಯರೂ ಸೆರೆಯಿಂದ ಯೆರೂಸಲೇಮಿಗೆ ಬಂದ ಎಲ್ಲರೂ ಪ್ರಾರಂಭಿಸಿ ಇಪ್ಪತ್ತು ವರುಷ ಪ್ರಾಯಕ್ಕೆ ಹೆಚ್ಚಿದ ಲೇವಿಯರನ್ನು ಕರ್ತನ ಆಲಯದ ಕೆಲಸ ನಡಿಸುವದಕ್ಕೆ ಇಟ್ಟರು. ಆಗ ಯೇಷೂವನೂ ಅವನ ಮಕ್ಕಳೂ ಅವನ ಸಹೋದರರೂ ಕದ್ಮೀಯೇಲನೂ ಅವನ ಮಕ್ಕಳೂ ಯೆಹೂದನ ಮಕ್ಕಳೂ ಹೇನಾದಾ ದನ ಮಕ್ಕಳೂ ಅವರ ಮಕ್ಕಳೂ ಅವರ ಸಹೋದರ ರಾದ ಲೇವಿಯರೂ ದೇವರ ಆಲಯದಲ್ಲಿರುವ ಕೆಲಸ ದವರನ್ನು ನಡಿಸಲು ಎದ್ದು ನಿಂತರು.
- 1 Chronicles 26:20–27 1 ಪೂರ್ವಕಾಲವೃತ್ತಾಂತ 26:20–27ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಮನೆಯ ಬೊಕ್ಕಸದ ಮೇಲೆಯೂ ಪ್ರತಿಷ್ಠಿತವಾದ ವುಗಳ ಬೊಕ್ಕಸದ ಮೇಲೆಯೂ ಅಧಿಕಾರಿಯಾ ಗಿದ್ದನು. ಲದ್ದಾನನ ಕುಮಾರರು; ಗೇರ್ಷೋನ್ಯ ನಾದ ಲದ್ದಾನನ ಕುಮಾರರು ಮುಖ್ಯಸ್ಥರಾದ ಪಿತೃ ಗಳಾಗಿದ್ದರು. ಈ ಗೇರ್ಷೋನ್ಯನಾದ ಲದ್ದಾನನ ಮಗನು ಯೆಹೀಯೇಲನು. ಯೆಹೀಯೇಲನ ಕುಮಾರರು--ಜೇತಾಮನು, ಅವನ ಸಹೋದರನಾದ ಯೋವೇಲನು; ಇವರು ಕರ್ತನ ಮನೆಯ ಬೊಕ್ಕಸಗಳ ಮೇಲೆ ಇದ್ದರು. ಅಮ್ರಾಮ್ಯರಲ್ಲಿಯೂ ಇಚ್ಹಾರಲ್ಲಿಯೂ ಹೆಬ್ರೋ ನ್ಯರಲ್ಲಿಯೂ ಉಜ್ಜೀಯೇಲ್ಯರಲ್ಲಿಯೂ ಸಹ ಕೆಲವರು. ಮೋಶೆಯ ಮಗನಾದ ಗೇರ್ಷೋನನ ಮಗನಾದ ಶೆಬೂವೇಲನು ಬೊಕ್ಕಸಗಳ ಮೇಲೆ ಅಧಿಕಾರಿಯಾಗಿ ದ್ದನು. ಇವನ ಸಹೋದರರು--ಎಲಿಯೇಜೆರನ ಮಗನು ರೆಹಬ್ಯನು, ಇವನ ಮಗನು ಯೆಶಾಯನು, ಇವನ ಮಗನು ಯೋರಾಮನು, ಇವನ ಮಗನು ಜಿಕ್ರೀಯು, ಇವನ ಮಗನು ಶೆಲೋಮೊತನು. ಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು. ಅವರು ಕರ್ತನ ಮನೆಯನ್ನು ಬಲಪಡಿಸುವದಕ್ಕೆ ಯುದ್ಧಗಳಿಂದಲೂ ಕೊಳ್ಳೆಯಿಂದಲೂ ಸಂಪಾದಿಸಿ ದವುಗಳನ್ನು ಪ್ರತಿಷ್ಠೆಮಾಡಿದರು.
- Acts 20:28 ಅಪೊಸ್ತಲರ ಕೃತ್ಯಗಳು 20:28ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
- Deuteronomy 17:8–10 ಧರ್ಮೋಪದೇಶಕಾಂಡ 17:8–10ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ ಯಾಜಕರಾದ ಲೇವಿಯರ ಬಳಿಗೂ ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು; ಅವರು ನಿನಗೆ ಆ ನ್ಯಾಯದ ತೀರ್ಪನ್ನು ತಿಳಿಸುವರು. ಅವರು ನಿನಗೆ ಕರ್ತನು ಆದುಕೊಳ್ಳುವ ಆ ಸ್ಥಳದಿಂದ ತಿಳಿಸುವ ತೀರ್ಪಿನ ಪ್ರಕಾರ ನೀನು ಮಾಡಿ ಬೋಧಿಸುವಂಥದ್ದೆಲ್ಲಾ ಅನುಸ ರಿಸಬೇಕು.
- 1 Chronicles 6:48 1 ಪೂರ್ವಕಾಲವೃತ್ತಾಂತ 6:48ಅವರ ಸಹೋದರರಾದ ಲೇವಿಯರು ದೇವರ ಮನೆಯ ಗುಡಾರದ ಸಮಸ್ತ ಸೇವೆಗೆ ನೇಮಿಸಲ್ಪಟ್ಟ ವರಾಗಿದ್ದರು.
- Nehemiah 11:9 ನೆಹೆಮೀಯ 11:9ಜಿಕ್ರಿಯ ಮಗನಾದ ಯೋವೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು. ಹಸ್ಸೆನೂವನ ಮಗನಾದ ಯೆಹೂದನು ಪಟ್ಟಣದ ಮೇಲೆ ಎರಡನೆಯವನಾಗಿದ್ದನು.
- Nehemiah 11:22 ನೆಹೆಮೀಯ 11:22ವಿಾಕನ ಮಗ ನಾದ ಮತ್ತನ್ಯನ ಮಗನಾದ ಹಷಬ್ಯನ ಮಗನಾದ ಬಾನೀಯ ಮಗನಾದ ಉಜ್ಜಿಯು ಯೆರೂಸಲೇಮಿ ನಲ್ಲಿರುವ ಲೇವಿಯರ ಮೇಲ್ವಿಚಾರಕನಾಗಿದ್ದನು.