1 Chronicles · chapter 24 · verse 3
1 Chronicles 24:3 in Kannada
ಆದದರಿಂದ ದಾವೀದನು ಎಲ್ಲಾ ಜಾರನ ಮಕ್ಕಳಲ್ಲಿ ಚಾದೋಕನಿಗೂ ಈತಾಮಾರನ ಮಕ್ಕಳಲ್ಲಿ ಅಹೀಮೇಲೆಕನಿಗೂ ಅವರ ಸೇವೆಯಲ್ಲಿರುವ ವಿಚಾರಗಳ ಪ್ರಕಾರ ವರ್ಗಗಳನ್ನು ವಿಭಾಗಿಸಿದನು.
Aadadarinda daaveedanu ellaa jaarana makkalalli chaadokanigoo eetaamaarana makkalalli aheemelekanigoo avara seveyalliruva vichaaragala prakaara vargagalannu vibhaagisidanu.
1 Chronicles 24:3 in English
- King James Version (KJV)
- And David distributed them, both Zadok of the sons of Eleazar, and Ahimelech of the sons of Ithamar, according to their offices in their service.
- World English Bible (WEB)
- David, with Zadok of the sons of Eleazar and Ahimelech of the sons of Ithamar, divided them according to their ordering in their service.
- American Standard Version (ASV)
- And David with Zadok of the sons of Eleazar, and Ahimelech of the sons of Ithamar, divided them according to their ordering in their service.
- Bible in Basic English (BBE)
- And David, with Zadok of the sons of Eleazar, and Ahimelech of the sons of Ithamar, made distribution of them into their positions for their work.
- Darby Translation (DBY)
- And David distributed them, both Zadok of the sons of Eleazar, and Ahimelech of the sons of Ithamar, according to their office in their service.
- Webster's Bible (WBS)
- And David distributed them, both Zadok of the sons of Eleazar, and Ahimelech of the sons of Ithamar, according to their offices in their service.
- Young's Literal Translation (YLT)
- And David distributeth them, and Zadok of the sons of Eleazar, and Ahimelech of the sons of Ithamar, according to their office in their service;
Read in context
- 1ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ;
- 2ನಾದಾಬನೂ ಅಬೀಹುವೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದದ ರಿಂದ ಎಲ್ಲಾಜಾರನೂ ಈತಾಮಾರನೂ ಯಾಜಕ ಸೇವೆಮಾಡಿದರು.
- 3ಆದದರಿಂದ ದಾವೀದನು ಎಲ್ಲಾ ಜಾರನ ಮಕ್ಕಳಲ್ಲಿ ಚಾದೋಕನಿಗೂ ಈತಾಮಾರನ ಮಕ್ಕಳಲ್ಲಿ ಅಹೀಮೇಲೆಕನಿಗೂ ಅವರ ಸೇವೆಯಲ್ಲಿರುವ ವಿಚಾರಗಳ ಪ್ರಕಾರ ವರ್ಗಗಳನ್ನು ವಿಭಾಗಿಸಿದನು.
- 4ಈತಾಮಾರನ ಕುಮಾರರಿಗಿಂತ ಎಲ್ಲಾಜಾರನ ಕುಮಾ ರರಲ್ಲಿ ಮುಖ್ಯಸ್ಥರು ಹೆಚ್ಚಾಗಿದ್ದದರಿಂದ ಅವರು ಹೀಗೆಯೇ ವಿಭಾಗಿಸಲ್ಪಟ್ಟಿದ್ದರು. ಎಲ್ಲಾಜಾರನ ಕುಮಾರ ರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಹದಿನಾರು ಮಂದಿ ಮುಖ್ಯಸ್ಥರು. ಈತಾಮಾರನ ಕುಮಾರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಎಂಟುಮಂದಿ ಮುಖ್ಯ ಸ್ಥರು.
- 5ಇವರು ಅವರ ಸಂಗಡ ಬೆರೆತಿದ್ದು ಚೀಟು ಗಳಿಂದ ವಿಭಾಗಿಸಲ್ಪಟ್ಟಿದ್ದರು; ಪರಿಶುದ್ಧ ಸ್ಥಾನದ ಪ್ರಧಾನರೂ ದೈವೀಕ ಕಾರ್ಯಗಳಲ್ಲಿ ಪ್ರಧಾನರೂ ಎಲ್ಲಾಜಾರನ ಕುಮಾರರಿಂದಲೂ ಈತಾಮಾರನ ಕುಮಾರರಿಂದಲೂ ಇದ್ದರು.
Cross references
- 2 Samuel 8:17 2 ಸಮುವೇಲನು 8:17ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜ ಕರಾಗಿದ್ದರು; ಸೆರಾಯನು ಮಂತ್ರಿಯಾಗಿದ್ದನು.ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
- 1 Chronicles 24:31 1 ಪೂರ್ವಕಾಲವೃತ್ತಾಂತ 24:31ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ ಚಾದೋಕನು ಅಹಿಮೇಲೆಕನು ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ ಆರೋನನ ಕುಮಾರರಾದ ತಮ್ಮ ಸಹೋದರರಿಗೆದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಚಿಕ್ಕ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.
- 1 Chronicles 6:4–8 1 ಪೂರ್ವಕಾಲವೃತ್ತಾಂತ 6:4–8ಆರೋನನ ಕುಮಾರರು--ನಾದಬನು ಅಬೀಹೂವು ಎಲ್ಲಾಜಾರನು ಈತಾಮಾರನು. ಎಲ್ಲಾಜಾರನು ಫೀನೆಹಾಸನನ್ನು ಪಡೆ ದನು. ಫೀನೆಹಾಸನು ಅಬೀಷೂವನನ್ನು ಪಡೆದನು. ಅಬೀಷೂವನು ಬುಕ್ಕೀಯನನ್ನು ಪಡೆದನು; ಬುಕ್ಕೀ ಯನು ಉಜ್ಜೀಯನನ್ನು ಪಡೆದನು; ಉಜ್ಜೀಯನು ಜೆರಹ್ಯನನ್ನು ಪಡೆದನು; ಜೆರಹ್ಯನು ಮೆರಾಯೋತ ನನ್ನು ಪಡೆದನು; ಮೆರಾಯೋತನು ಅಮರ್ಯನನ್ನು ಪಡೆದನು; ಅಮರ್ಯನು ಅಹೀಟೂಬನನ್ನು ಪಡೆ ದನು. ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು;
- 1 Samuel 21:1 1 ಸಮುವೇಲನು 21:1ತರುವಾಯ ದಾವೀದನು ನೋಬ್ ಊರಲ್ಲಿದ್ದ ಯಾಜಕನಾದ ಅಹೀಮೆಲೆ ಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಎದುರುಗೊಳ್ಳಬಂದಾಗ ಹೆದರಿ--ಒಬ್ಬರೂ ನಿನ್ನ ಸಂಗಡ ಬಾರದೆ ನೀನು ಒಂಟಿಯಾಗಿ ಬಂದದ್ದು ಏನೆಂದು ಅವನನ್ನು ಕೇಳಿದನು.
- 1 Samuel 22:9–23 1 ಸಮುವೇಲನು 22:9–23ಆಗ ಸೌಲನ ಸೇವಕರಿಗೆ ಯಜಮಾನನಾಗಿದ್ದ ಎದೋಮ್ಯನಾದ ದೋಯೇಗನು ಪ್ರತ್ಯುತ್ತರವಾಗಿ--ಇಷಯನ ಮಗನು ನೋಬದ ಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ನಾನು ನೋಡಿದೆನು. ಇವನು ಅವನಿಗೋಸ್ಕರ ಕರ್ತನನ್ನು ಕೇಳಿ ಅವನಿಗೆ ಆಹಾರವನ್ನು ಕೊಟ್ಟು ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನು ಅವನಿಗೆ ಕೊಟ್ಟನು ಅಂದನು. ಅರಸನು ಅಹೀಟೂ ಬನ ಮಗನಾದ ಯಾಜಕನಾಗಿರುವ ಅಹೀಮೆಲಕ ನನ್ನೂ ನೋಬದಲ್ಲಿರುವ ಯಾಜಕರಾಗಿರುವ ಅವನ ತಂದೆಯ ಮನೆಯವರೆಲ್ಲರನ್ನೂ ಕರೇ ಕಳುಹಿಸಿದನು. ಅವರೆಲ್ಲರೂ ಅರಸನ ಬಳಿಗೆ ಬಂದರು. ಆಗ ಸೌಲನು--ಅಹೀಟೂಬನ ಮಗನೇ, ಕೇಳು ಅಂದನು. ಅದಕ್ಕವನು--ಇಗೋ, ನನ್ನ ಒಡೆಯನೇ, ನಾನು ಇಲ್ಲಿದ್ದೇನೆ ಅಂದನು. ಸೌಲನು ಅವನಿಗೆ--ನೀನೂ ಇಷಯನ ಮಗನೂ ನನಗೆ ವಿರೋಧವಾಗಿ ಒಳಸಂಚು ಮಾಡಿದ್ದೇನು? ಅವನು ಅಡಗಿಕೊಂಡು ನನಗೆ ವಿರೋ ಧವಾಗಿ ಏಳುವ ಹಾಗೆ ನೀನು ಅವನಿಗೆ ರೊಟ್ಟಿಯನ್ನೂ ಕತ್ತಿಯನ್ನೂ ಕೊಟ್ಟು ದೇವರನ್ನು ಅವನಿಗೋಸ್ಕರ ವಿಚಾರಿಸಿದ್ದೇನು ಅಂದನು. ಅಹೀಮೆಲೆಕನು ಅರಸನಿಗೆ ಪ್ರತ್ಯುತ್ತರವಾಗಿ--ನಿನ್ನ ಎಲ್ಲಾ ಸೇವಕರಲ್ಲಿ ದಾವೀದನ ಹಾಗೆ ನಂಬಿಗಸ್ತನಾದವನು ಯಾವನಿ ದ್ದಾನೆ? ಅವನು ಅರಸನಿಗೆ ಅಳಿಯನೂ ನಿನ್ನ ಆಜ್ಞೆಗಳ ಹಾಗೆ ಮಾಡಿಕೊಂಡು ಬರುವವನೂ ನಿನ್ನ ಮನೆಯಲ್ಲಿ ಘನವುಳ್ಳವನೂ ಆಗಿದ್ದಾನೆ. ನಾನು ಅವನಿಗೋಸ್ಕರ ದೇವರನ್ನು ಕೇಳಲು ಪ್ರಾರಂಭಿಸಿದ್ದೆನೋ? ಅದು ನನಗೆ ದೂರವಾಗಿರಲಿ. ಅರಸನು ತನ್ನ ಸೇವಕನ ಮೇಲಾ ದರೂ ನನ್ನ ತಂದೆಯ ಮನೆಯವರಲ್ಲಿ ಯಾರ ಮೇಲಾ ದರೂ ಅಪರಾಧ ಹೊರಿಸಬಾರದು; ನಿನ್ನ ಸೇವಕನು ಇದರಲ್ಲಿ ಹೆಚ್ಚಾದದ್ದನ್ನಾದರೂ ಕಡಿಮೆಯಾದದ್ದನ್ನಾ ದರೂ ತಿಳಿದವನಲ್ಲ ಅಂದನು. ಅದಕ್ಕೆ ಅರಸನುಅಹೀಮೆಲೆಕನೇ, ನೀನೂ ನಿನ್ನ ತಂದೆಯ ಮನೆಯವ ರೆಲ್ಲರೂ ನಿಶ್ಚಯವಾಗಿ ಸಾಯಲೇಬೇಕು ಅಂದನು. ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆನೀವು ತಿರುಗಿಕೊಂಡು ಕರ್ತನ ಯಾಜಕರನ್ನು ಕೊಂದು ಹಾಕಿರಿ. ಅವರ ಕೈ ದಾವೀದನ ಸಂಗಡ ಸಹಾಯ ವಾಗಿದೆ. ಅವನು ಓಡಿಹೋಗುವದನ್ನು ಅವರು ತಿಳಿದಿದ್ದು ಅದನ್ನು ನನಗೆ ತಿಳಿಸದೆ ಹೋದರು ಅಂದನು. ಆದರೆ ಅರಸನ ಸೇವಕರು ಕರ್ತನ ಯಾಜಕರ ಮೇಲೆ ಬೀಳಲು ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು. ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು. ಇದಲ್ಲದೆ ಯಾಜಕರ ಪಟ್ಟಣ ವಾದ ನೋಬಿನಲ್ಲಿ ಇರುವ ಪುರುಷರನ್ನೂ ಸ್ತ್ರೀಯ ರನ್ನೂ ಮಕ್ಕಳನ್ನೂ ಕೂಸುಗಳನ್ನೂ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕತ್ತಿಯಿಂದ ಸಂಹರಿಸಿದನು. ಆದರೆ ಅಹೀಟೂಬನ ಮಗನಾಗಿರುವ ಅಹೀಮೆ ಲೆಕನ ಮಕ್ಕಳಲ್ಲಿ ಒಬ್ಬನಾದ ಎಬ್ಯಾತಾರನು ತಪ್ಪಿಸಿ ಕೊಂಡು ದಾವೀದನ ಬಳಿಗೆ ಓಡಿಹೋದನು. ಸೌಲನು ಕರ್ತನ ಯಾಜಕರನ್ನು ಕೊಂದುಹಾಕಿದ ವರ್ತಮಾನವನ್ನು ಎಬ್ಯಾತಾರನು ದಾವೀದನಿಗೆ ತಿಳಿಸಿ ದನು. ಆಗ ದಾವೀದನು ಎಬ್ಯಾತಾರನಿಗೆ--ಎದೋಮ್ಯನಾದ ದೋಯೇಗನು ಅಲ್ಲಿ ಇದ್ದದರಿಂದ ಅವನು ಸೌಲನಿಗೆ ನಿಶ್ಚಯವಾಗಿ ತಿಳಿಸುವನೆಂದು ನಾನು ಆ ಹೊತ್ತು ತಿಳಿದಿದ್ದೆನು. ನಿನ್ನ ತಂದೆಯ ಮನೆಯವರೆಲ್ಲರ ಪ್ರಾಣಹತ್ಯಕ್ಕೆ ಕಾರಣನಾದವನು ನಾನೇ.ನನ್ನ ಬಳಿಯಲ್ಲಿ ಇರು; ಭಯಪಡಬೇಡ; ಯಾಕಂದರೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರು ವವನೇ ನಿನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ಆದರೆ ನೀನು ನನ್ನ ಸಂಗಡ ಸುರಕ್ಷಿತನಾಗಿರುವಿ ಅಂದನು. ನನ್ನ ಬಳಿಯಲ್ಲಿ ಇರು; ಭಯಪಡಬೇಡ; ಯಾಕಂದರೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರು ವವನೇ ನಿನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ಆದರೆ ನೀನು ನನ್ನ ಸಂಗಡ ಸುರಕ್ಷಿತನಾಗಿರುವಿ ಅಂದನು.
- 2 Samuel 20:25 2 ಸಮುವೇಲನು 20:25ಶೆವನು ಶಾಸ್ತ್ರಿಯಾಗಿದ್ದನು. ಚಾದೋಕನೂ ಎಬ್ಯಾತಾರನೂ ಯಾಜಕರಾಗಿದ್ದರು;ಯಾಯಾರಿನವನಾದ ಈರನೂ ದಾವೀದನ ಬಳಿಯಲ್ಲಿ ಮುಖ್ಯ ಅಧಿಪತಿಯಾಗಿದ್ದನು.
- 1 Chronicles 16:39 1 ಪೂರ್ವಕಾಲವೃತ್ತಾಂತ 16:39ಯಾವಾಗಲೂ ಉದಯ ಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ದಹನಬಲಿ ಪೀಠದ ಮೇಲೆ ಕರ್ತನಿಗೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಕರ್ತನು ಇಸ್ರಾಯೇಲಿಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದ ಎಲ್ಲಾದರ ಪ್ರಕಾರ ಮಾಡು ವದಕ್ಕೂ
- 1 Kings 2:35 1 ಅರಸುಗಳು 2:35ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯನನ್ನು ಯೋವಾಬನಿಗೆ ಬದಲಾಗಿ ಸೈನ್ಯದ ಮೇಲೆ ನೇಮಿಸಿದನು. ಇದಲ್ಲದೆ ಅರಸನು ಎಬ್ಯಾ ತಾರನಿಗೆ ಬದಲಾಗಿ ಯಾಜಕನಾದ ಚಾದೋಕನನ್ನು ನೇಮಿಸಿದನು.
- 1 Chronicles 24:6 1 ಪೂರ್ವಕಾಲವೃತ್ತಾಂತ 24:6ಇದಲ್ಲದೆ ಲೇವಿಯರಲ್ಲಿ ಒಬ್ಬನಾದಂಥ ನೆತನೇಲನ ಮಗನಾದ ಲೇಖಕನಾ ದಂಥ ಶೆಮಾಯನು ಅರಸನ ಮುಂದೆಯೂ ಪ್ರಧಾನ ಯಾಜಕನಾದ ಚಾದೋಕನು, ಎಬ್ಯಾತಾರನ ಮಗ ನಾದ ಅಹೀಮೆಲೆಕನು, ಯಾಜಕರ ಲೇವಿಯರ ಪಿತೃಗಳ ಮುಖ್ಯಸ್ಥರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರ್ಯರ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸ ಬೇಕೆಂದು ನೇಮಿಸಿದರು. ಎಲ್ಲಾ ವರ್ಗಗಳ ಸರತಿ ಯನ್ನು ಚೀಟಿನಿಂದಲೇ ಗೊತ್ತುಮಾಡಿದರು.
- 1 Chronicles 12:27–28 1 ಪೂರ್ವಕಾಲವೃತ್ತಾಂತ 12:27–28ಆರೋನಿಯರಲ್ಲಿ ಯೆಹೋಯಾದಾವನು ನಾಯ ಕನಾಗಿದ್ದನು; ಅವನ ಸಂಗಡ ಮೂರು ಸಾವಿರದ ಏಳು ನೂರು ಮಂದಿ; ಇದಲ್ಲದೆ ಬಲವುಳ್ಳ ಪರಾ ಕ್ರಮಶಾಲಿಯಾದ ಪ್ರಾಯಸ್ಥನಾಗಿದ್ದ ಚಾದೋಕನೂ ಅವನ ತಂದೆಯ ಮನೆಯಿಂದ ಇಪ್ಪತ್ತೆರಡು ಮಂದಿ ಪ್ರಧಾನರೂ.
- 1 Chronicles 6:50–53 1 ಪೂರ್ವಕಾಲವೃತ್ತಾಂತ 6:50–53ಆರೋನನ ಕುಮಾರರು-- ಇವನ ಮಗನು ಎಲ್ಲಾಜಾರನು, ಇವನ ಮಗನು ಫಿನೇ ಹಾಸನು, ಇವನ ಮಗನು ಅಬೀಷೂವನು, ಇವನ ಮಗನು ಬುಕ್ಕೀಯು, ಇವನ ಮಗನು ಉಜ್ಜೀಯು, ಇವನ ಮಗನು ಜೆರಹ್ಯಾಹನು, ಇವನ ಮಗನು ಮೆರಾಯೋತನು, ಇವನ ಮಗನು ಅಮರ್ಯನು, ಇವನ ಮಗನು ಅಹೀಟೂಬನು, ಇವನ ಮಗನು ಚಾದೋಕನು, ಇವನ ಮಗನು ಅಹಿಮಾಚನು.
- 1 Chronicles 15:11 1 ಪೂರ್ವಕಾಲವೃತ್ತಾಂತ 15:11ಆಗ ದಾವೀದನು ಚಾದೋಕ್, ಎಬ್ಯಾತ್ಯಾರ್ ಎಂಬ ಯಾಜಕರನ್ನೂ ಉರೀಯೇಲ್, ಅಸಾಯನು, ಯೋವೇಲನು, ಶೆಮಾಯನು, ಎಲೀಯೇಲನು, ಅವ್ಮೆಾನಾದಾಬ ಎಂಬ ಲೇವಿಯರನ್ನೂ ಕರೇಕಳುಹಿಸಿ ಅವರಿಗೆ ಹೇಳಿದ್ದೇನಂದರೆ--