1 Chronicles · chapter 27 · verse 24
1 Chronicles 27:24 in Kannada
ಚೆರೂಯಳ ಮಗನಾದ ಯೋವಾಬನು ಎಣಿಸಲು ಆರಂಭಿ ಸಿದನು; ಆದರೆ ಇಸ್ರಾಯೇಲಿಗೆ ವಿರೋಧವಾಗಿ ದೇವರ ರೌದ್ರವು ಬಂದದ್ದರಿಂದ ಅವನು ಪೂರ್ತಿ ಗೊಳಿಸಲಿಲ್ಲ; ಆ ಲೆಕ್ಕವು ಅರಸನಾದ ದಾವೀದನ ವೃತಾಂತಗಳ ಪುಸ್ತಕದಲ್ಲಿ ಸೇರಲಿಲ್ಲ.
Cherooyala maganaada yovaabanu enisalu aarambhi sidanu; aadare israayelige virodhavaagi devara raudravu bandaddarinda avanu poorti golisalilla; aa lekkavu arasanaada daaveedana vrutaantagala pustakadalli seralilla.
1 Chronicles 27:24 in English
- King James Version (KJV)
- Joab the son of Zeruiah began to number, but he finished not, because there fell wrath for it against Israel; neither was the number put in the account of the chronicles of king David.
- World English Bible (WEB)
- Joab the son of Zeruiah began to take a census, but didn’t finish; and wrath came on Israel for this. The number wasn’t put into the account in the chronicles of King David.
- American Standard Version (ASV)
- Joab the son of Zeruiah began to number, but finished not; and there came wrath for this upon Israel; neither was the number put into the account in the chronicles of king David.
- Bible in Basic English (BBE)
- The numbering was started by Joab, the son of Zeruiah, but he did not go on to the end; and because of it, wrath came on Israel and the number was not recorded in the history of King David.
- Darby Translation (DBY)
- Joab the son of Zeruiah began to number, but he did not finish; and there fell wrath for it upon Israel; and the number was not put in the account of the chronicles of king David.
- Webster's Bible (WBS)
- Joab the son of Zeruiah began to number, but he finished not, because there fell wrath for it against Israel; neither was the number put in the account of the chronicles of king David.
- Young's Literal Translation (YLT)
- Joab son of Zeruiah hath begun to number — and hath not finished — and there is for this wrath against Israel, and the number hath not gone up in the account of the Chronicles of king David.
Read in context
- 22ಇವರೇ ಇಸ್ರಾ ಯೇಲಿನ ಗೋತ್ರಗಳ ಪ್ರಧಾನರು.
- 23ಆದರೆ ದಾವೀದನು ಇಪ್ಪತ್ತು ವರುಷಗಳೊಳಗೆ ಇದ್ದವರ ಲೆಕ್ಕತಕ್ಕೊಳ್ಳಲಿಲ್ಲ. ಯಾಕಂದರೆ ಇಸ್ರಾ ಯೇಲ್ಯರನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿ ಮಾಡುವೆನೆಂದು ಕರ್ತನು ಹೇಳಿದ್ದನು.
- 24ಚೆರೂಯಳ ಮಗನಾದ ಯೋವಾಬನು ಎಣಿಸಲು ಆರಂಭಿ ಸಿದನು; ಆದರೆ ಇಸ್ರಾಯೇಲಿಗೆ ವಿರೋಧವಾಗಿ ದೇವರ ರೌದ್ರವು ಬಂದದ್ದರಿಂದ ಅವನು ಪೂರ್ತಿ ಗೊಳಿಸಲಿಲ್ಲ; ಆ ಲೆಕ್ಕವು ಅರಸನಾದ ದಾವೀದನ ವೃತಾಂತಗಳ ಪುಸ್ತಕದಲ್ಲಿ ಸೇರಲಿಲ್ಲ.
- 25ಅರಸನ ಬೊಕ್ಕಸಗಳ ಮೇಲೆ ಅಡಿಯೇಲನ ಮಗನಾದ ಅಜ್ಮಾವೆತನು ಇದ್ದನು. ಹೊಲಗಳಲ್ಲಿಯೂ ಪಟ್ಟಣಗಳಲ್ಲಿಯೂ ಗ್ರಾಮಗಳಲ್ಲಿಯೂ ಗಡೀ ಸ್ಥಳ ಗಳಲ್ಲಿಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀ ಯನ ಮಗನಾದ ಯೋನಾತಾನನು ಇದ್ದನು.
- 26ಹೊಲದಲ್ಲಿ ವ್ಯವಸಾಯ ಮಾಡುವ ಕೆಲಸದವರ ಮೇಲೆ ಕೆಲೂಬನ ಮಗನಾದ ಎಜ್ರೀಯು ಇದ್ದನು.
Cross references
- 2 Samuel 24:1–15 2 ಸಮುವೇಲನು 24:1–15ಕರ್ತನ ಕೋಪವು ತಿರಿಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು; ಆಗ ಇಸ್ರಾ ಯೇಲನ್ನೂ ಯೆಹೂದವನ್ನೂ ಲೆಕ್ಕಿಸಲು ಹೋಗೆಂದು ಆತನು ದಾವೀದನನ್ನು ಪ್ರೇರೇಪಿಸಿದನು. ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀನು ದಾನ್ನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲ್ ಎಲ್ಲಾ ಗೋತ್ರಗಳಲ್ಲಿ ಹೋಗಿ, ಜನರನ್ನು ಲೆಕ್ಕಿಸು, ಅಂದನು. ಆಗ ಯೋವಾಬನು ಅರಸನಿಗೆ-- ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ನೋಡುವ ಹಾಗೆ ನಿನ್ನ ದೇವರಾದ ಕರ್ತನು ಈಗ ಇರುವದಕ್ಕಿಂತ ಜ ರನ್ನು ನೂರರಷ್ಟಾಗಿ ಹೆಚ್ಚು ಮಾಡಲಿ; ಆದರೆ ಅರಸ ನಾದ ನನ್ನ ಒಡೆಯನು ಈ ಕಾರ್ಯವನ್ನು ಆಶಿಸುವ ದೇನು ಅಂದನು. ಆದಾಗ್ಯೂ ಅರಸನ ಮಾತು ಯೋವಾಬನಿಗೂ ಸೈನ್ಯಾಧಿಪತಿಗಳಿಗೂ ವಿರೋಧವಾಗಿ ಪ್ರೇರೇಪಿಸಿತು. ಆಗ ಯೋವಾಬನೂ ಸೈನ್ಯಾಧಿಪತಿಗಳೂ ಇಸ್ರಾ ಯೇಲ್ ಜನರನ್ನು ಲೆಕ್ಕಿಸಲು ಅರಸನ ಸಮ್ಮುಖದಿಂದ ಹೊರಟು ಹೋದರು. ಅವರು ಯೊರ್ದನನ್ನು ದಾಟಿ ಗಾದ್ ನದಿಯ ಮಧ್ಯದಲ್ಲಿರುವ ಪಟ್ಟಣಕ್ಕೆ ಬಲ ಪಾರ್ಶ್ವವಾದ ಅರೋಯೇರಿನಲ್ಲಿಯೂ ಯಗ್ಜೇರಿ ನಲ್ಲಿಯೂ ಇಳಿದು ಅಲ್ಲಿಂದ ಗಿಲ್ಯಾದಿಗೂ ತಖ್ತೀಮ್ ಹೊಜೀಯ ದೇಶಕ್ಕೂ ಅಲ್ಲಿಂದ ದಾನ್ನಿಗೂ ಅಲ್ಲಿಂದ ಸುತ್ತಿಕೊಂಡು ಚೀದೋನಿಗೂ ಬಂದರು. ಅವರು ತೂರಿನ ಭದ್ರ ಸ್ಥಳಕ್ಕೂ ಹಿವ್ವಿಯರ ಕಾನಾ ನ್ಯರ ಎಲ್ಲಾ ಪಟ್ಟಣಗಳಿಗೂ ಅಲ್ಲಿಂದ ಯೆಹೂದದ ದಕ್ಷಿಣಕ್ಕೂ ಬೇರ್ಷೆಬಕ್ಕೂ ಬಂದರು. ಹೀಗೆಯೇ ಅವರು ಎಲ್ಲಾ ದೇಶಕ್ಕೆ ಹೋಗಿ ಒಂಭತ್ತು ತಿಂಗಳು ಇಪ್ಪತ್ತು ದಿವಸವಾದ ತರುವಾಯ ಯೆರೂಸಲೇಮಿಗೆ ಬಂದರು. ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನಂದರೆ, ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷ ಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷ ಮಂದಿಯಾಗಿದ್ದರು. ಆದರೆ ದಾವೀದನು ಜನರನ್ನು ಲೆಕ್ಕಿಸಿದ ತರು ವಾಯ ಅವನು ತನ್ನ ಹೃದಯದಲ್ಲಿ ತಿವಿಯಲ್ಪಟ್ಟನು. ಆದದರಿಂದ ದಾವೀದನು ಕರ್ತನಿಗೆ--ನಾನು ಮಾಡಿ ದ್ದರಲ್ಲಿ ಮಹಾ ಪಾಪಮಾಡಿದೆನು. ಕರ್ತನೇ, ದಯ ಮಾಡಿ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಬಹಳ ಹುಚ್ಚುತನ ಮಾಡಿದೆನು ಅಂದನು. ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ-- ನೀನು ಹೋಗಿ ದಾವೀದ ನಿಗೆ--ಮೂರು ವಿಷಯಗಳನ್ನು ನಾನು ನಿನ್ನ ಮುಂದೆ ಇಡುವೆನು. ನಾನು ನಿನಗೆ ಮಾಡುವ ಹಾಗೆ ಅವುಗ ಳಲ್ಲಿ ಒಂದನ್ನು ಆದುಕೋ ಎಂದು ಕರ್ತನು ಹೇಳು ತ್ತಾನೆ ಅಂದನು. ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನಿನ್ನ ದೇಶದಲ್ಲಿ ನಿನಗೆ ಏಳು ವರುಷ ಬರವು ಆಗಬೇಕೋ ಇಲ್ಲವೆ ಮೂರು ತಿಂಗಳು ನಿನ್ನ ಶತ್ರುಗಳು ನಿನ್ನನ್ನು ಹಿಂದಟ್ಟುವಾಗ ನೀನು ಅವರ ಮುಂದೆ ಓಡಿಹೋಗಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿವಸ ಬಾಧೆ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದಾತನಿಗೆ ನಾನು ಏನು ಪ್ರತ್ಯುತ್ತರ ತಕ್ಕೊಂಡು ಹೋಗಬೇಕು ಯೋಚಿಸಿನೋಡು ಅಂದನು. ಆಗ ದಾವೀದನು ಗಾದನಿಗೆ--ನಾನು ಬಹು ಇಕ್ಕಟ್ಟಿನಲ್ಲಿದ್ದೇನೆ. ಈಗ ಕರ್ತನ ಕೈಯಲ್ಲಿ ಬೀಳುವೆವು; ಯಾಕಂದರೆ ಆತನ ಕರುಣೆಯು ಬಹಳವಾಗಿದೆ; ಮನುಷ್ಯರ ಕೈಯಲ್ಲಿ ಬೀಳೆನು ಅಂದನು. ಹಾಗೆಯೇ ಕರ್ತನು ಉದಯ ಕಾಲದಿಂದ ನೇಮಿಸಿದ ಕಾಲದ ವರೆಗೂ ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು. ಆದದರಿಂದ ದಾನಿ ಬನಿಂದ ಬೆರ್ಷೆಬದ ವರೆಗೂ ಇರುವ ಜನರಲ್ಲಿ ಎಪ್ಪತ್ತುಸಾವಿರ ಜನರು ಸತ್ತುಹೋದರು.
- 1 Chronicles 21:1–17 1 ಪೂರ್ವಕಾಲವೃತ್ತಾಂತ 21:1–17ಸೈತಾನನು ಇಸ್ರಾಯೇಲಿಗೆ ವಿರೋಧವಾಗಿ ಎದ್ದು ಇಸ್ರಾಯೇಲ್ಯರನ್ನು ಲೆಕ್ಕಿಸಲು ದಾವೀದನನ್ನು ಪ್ರೇರೇಪಿಸಿದನು. ಆದದರಿಂದ ದಾವೀದನು ಯೋವಾಬನ ಸಂಗಡಲೂ ಜನರ ಪ್ರಧಾನರ ಸಂಗಡಲೂ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀವು ಹೋಗಿ ಬೇರ್ಷೆಬವು ಮೊದಲುಗೊಂಡು ದಾನಿನ ವರೆಗೆ ಇಸ್ರಾಯೇಲ್ಯರನ್ನು ಲೆಕ್ಕಿಸಿ ಅವರ ಲೆಕ್ಕವನ್ನು ನನಗೆ ತಕ್ಕೊಂಡು ಬನ್ನಿರಿ ಅಂದನು. ಅದಕ್ಕೆ ಯೋವಾಬನು--ಕರ್ತನು ತನ್ನ ಜನರನ್ನು ಈಗ ಇರುವದಕ್ಕಿಂತ ನೂರರಷ್ಟಾಗಿ ಮಾಡಲಿ; ಆದರೆ ನನ್ನ ಒಡೆಯನಾದ ಅರಸನೇ, ಅವರೆಲ್ಲರು ನನ್ನ ಒಡೆಯನ ಸೇವಕರಲ್ಲವೋ? ನನ್ನ ಒಡೆಯನು ಈ ಕಾರ್ಯವನ್ನು ವಿಚಾರಿಸುವದು ಯಾಕೆ? ಅವನು ಇಸ್ರಾಯೇಲಿನಲ್ಲಿ ಅಪರಾಧಕ್ಕೆ ಕಾರಣವಾಗುವದು ಯಾಕೆ ಅಂದನು. ಆದರೆ ಅರಸನ ಮಾತು ಯೋವಾಬನಿಗೆ ವಿರೋಧವಾಗಿ ಜಯಗೊಂಡಿತು. ಆಗ ಯೋವಾಬನು ಹೊರಟು ಇಸ್ರಾಯೇಲಿನ ಸಮಸ್ತ ದೇಶದ ಮೇಲೆ ಹೋಗಿ ಯೆರೂಸಲೇಮಿಗೆ ತಿರಿಗಿ ಬಂದು ದಾವೀದನಿಗೆ ಜನರ ಒಟ್ಟು ಲೆಕ್ಕವನ್ನು ಕೊಟ್ಟನು. ಕತ್ತಿಯನ್ನು ಹಿಡಿಯುವ ಸಮಸ್ತ ಇಸ್ರಾಯೇಲ್ಯರು ಹನ್ನೊಂದು ಲಕ್ಷಜನರಾಗಿದ್ದರು; ಕತ್ತಿಯನ್ನು ಹಿಡಿಯುವ ಯೆಹೂದದ ಜನರು ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಜನರಾಗಿದ್ದರು. ಆದರೆ ಲೇವಿಯರನ್ನೂ ಬೆನ್ಯಾವಿಾನ್ಯ ರನ್ನೂ ಅವರಲ್ಲಿ ಎಣಿಸಲಿಲ್ಲ; ಯಾಕಂದರೆ ಅರಸನ ಮಾತು ಯೋವಾಬನಿಗೆ ಅಸಹ್ಯಕರವಾಗಿತ್ತು. ಇದಲ್ಲದೆ ಈ ಕಾರ್ಯವು ದೇವರ ಸಮ್ಮುಖದಲ್ಲಿ ಕೆಟ್ಟದಾದ್ದರಿಂದ ಆತನು ಇಸ್ರಾಯೇಲ್ಯರನ್ನು ಬಾಧಿಸಿ ದನು. ಆಗ ದಾವೀದನು ದೇವರಿಗೆ--ನಾನು ಈ ಕಾರ್ಯ ಮಾಡಿದ್ದರಿಂದ ಮಹಾಪಾಪಿಯಾಗಿದ್ದೇನೆ; ಆದರೆ ನೀನು ದಯದಿಂದ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಇದರಲ್ಲಿ ಬುದ್ಧಿಹೀನವಾಗಿ ನಡೆ ದೆನು ಅಂದನು. ಆಗ ಕರ್ತನು ದಾವೀದನ ದರ್ಶಿಯಾದ ಗಾದನಿಗೆ ಹೇಳಿದ್ದೇನಂದರೆ -- ನೀನು ದಾವೀದನ ಬಳಿಗೆ ಹೋಗಿ ಅವನ ಸಂಗಡ ಮಾತ ನಾಡಿ--ಕರ್ತನು ಹೀಗೆ ಹೇಳುತ್ತಾನೆ, ಮೂರು ಕಾರ್ಯ ಗಳನ್ನು ನಿನ್ನ ಮುಂದೆ ಇಡುತ್ತೇನೆ; ನಾನು ನಿನಗೆ ಮಾಡುವ ಹಾಗೆ ಅವುಗಳಲ್ಲಿ ಒಂದನ್ನು ಆರಿಸಿಕೋ ಎಂದು ಹೇಳು. ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ, ಮೂರು ವರುಷಗಳ ಬರವನ್ನಾದರೂ ಇಲ್ಲವೆ ನಿನ್ನ ಶತ್ರುಗಳ ಕತ್ತಿಯು ಹತ್ತಿಕೊಳ್ಳಲಾಗಿ ಮೂರು ತಿಂಗಳು ನಿನ್ನ ವೈರಿಗಳ ಮುಂದೆ ನಾಶಹೊಂದುವದನ್ನಾದರೂ ಇಲ್ಲವೆ ಕರ್ತನ ದೂತನು ಇಸ್ರಾಯೇಲಿನ ಸಮಸ್ತ ಮೇರೆಗಳಲ್ಲಿಯೂ ದೇಶದಲ್ಲಿಯೂ ಕರ್ತನ ಕತ್ತಿ ಎಂಬುವ ವ್ಯಾಧಿಯಿಂದ ನಾಶವಾಗುವದನ್ನಾದರೂ ನೀನು ಆರಿಸಿಕೋ. ಆದದರಿಂದ ನನ್ನನ್ನು ಕಳುಹಿ ಸಿದಾತನಿಗೆ ನಾನು ಹೇಳಬೇಕಾದ ಪ್ರತ್ಯುತ್ತರವೇನು ನೋಡಿಕೋ ಅಂದನು. ಆಗ ದಾವೀದನು ಗಾದ ನಿಗೆ--ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಕರ್ತನ ಕೈಯಲ್ಲಿ ಬೀಳುತ್ತೇನೆ; ಯಾಕಂದರೆ ಆತನ ಕರುಣೆಯು ಬಹಳವಾಗಿರುವದು; ಆದರೆ ಮನುಷ್ಯನ ಕೈಯಲ್ಲಿ ಬೀಳಲಾರೆನು ಅಂದನು. ಹಾಗೆಯೇ ಕರ್ತನು ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು; ಆಗ ಇಸ್ರಾಯೇಲಿನಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು. ಇದ ಲ್ಲದೆ ಯೆರೂಸಲೇಮನ್ನು ನಾಶಮಾಡುವದಕ್ಕೆ ದೇವರು ದೂತನನ್ನು ಕಳುಹಿಸಿದನು. ಅವನು ನಾಶಮಾಡು ವದನ್ನು ಕರ್ತನು ನೋಡಿ ಆ ಕೇಡಿಗೋಸ್ಕರ ಪಶ್ಚಾ ತ್ತಾಪಪಟ್ಟು ನಾಶಮಾಡುವ ದೂತನಿಗೆ--ಸಾಕು; ನಿನ್ನ ಕೈಯನ್ನು ಹಿಂದೆಗೆ ಅಂದನು. ಆದರೆ ಕರ್ತನ ದೂತನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ನಿಂತಿದ್ದನು. ಆಗ ದಾವೀದನು ತನ್ನ ಕಣ್ಣುಗಳನ್ನೆತ್ತಿ ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಕರ್ತನ ದೂತನನ್ನು ಕಂಡನು; ಅವನ ಕೈಯಲ್ಲಿ ಯೆರೂಸ ಲೇಮಿನ ಮೇಲೆ ಚಾಚಿದ್ದ ಬಿಚ್ಚುಕತ್ತಿ ಇತ್ತು. ಆಗ ದಾವೀದನೂ ಇಸ್ರಾಯೇಲಿನ ಹಿರಿಯರೂ ಗೋಣೀ ತಟ್ಟುಗಳಿಂದ ಮುಚ್ಚಿಕೊಂಡವರಾಗಿ ಮೋರೆ ಕೆಳಗಾಗಿ ಬಿದ್ದರು. ದಾವೀದನು ದೇವರಿಗೆ--ಜನರನ್ನು ಲೆಕ್ಕ ಮಾಡಲು ಆಜ್ಞಾಪಿಸಿದವನು ನಾನಲ್ಲವೋ? ನಾನೇ ಪಾಪವನ್ನು ಮಾಡಿ ಈ ಕೆಟ್ಟದ್ದನು ಮಾಡಿದ್ದೇನೆ. ಆದರೆ ಕುರಿಗಳಾದ ಇವರು ಮಾಡಿದ್ದೇನು? ನನ್ನ ದೇವರಾದ ಕರ್ತನೇ, ದಯದಿಂದ ನಿನ್ನ ಕೈ ನನ್ನ ಮೇಲೆಯೂ ನನ್ನ ತಂದೆಯ ಮನೆಯ ಮೇಲೆಯೂ ಇರಲಿ. ಆದರೆ ನಿನ್ನ ಜನರು ಬಾಧೆಪಡುವ ಹಾಗೆ ಅವರ ಮೇಲೆ ಬೇಡ ಅಂದನು.
Original words (Hebrew)
- Joab · H3097יוֹאָב Yôwʼâb
- son · H1121בֵּן bên
- Zeruiah · H6870צְרוּיָה Tsᵉrûwyâh
- began · H2490חָלַל châlal
- number · H4487מָנָה mânâh
- finished · H3615כָּלָה kâlâh
- wrath · H7110קֶצֶף qetseph
- it · H2063זֹאת zôʼth
- Israel · H3478יִשְׂרָאֵל Yisrâʼêl
- number · H4557מִסְפָּר miçpâr
- put · H5927עָלָה ʻâlâh
- account · H4557מִסְפָּר miçpâr
- chronicles · H1697דָּבָר dâbâr
- king · H4428מֶלֶךְ melek
- David · H1732דָּוִד Dâvid