1 Chronicles · chapter 28 · verse 1
1 Chronicles 28:1 in Kannada
ದಾವೀದನು ಇಸ್ರಾಯೇಲಿನ ಸಮಸ್ತ ಪ್ರಧಾನರಾದ ಗೋತ್ರಗಳ ಪ್ರಧಾನ ರನ್ನೂ ವರ್ಗವರ್ಗವಾಗಿ ಅರಸನನ್ನು ಸೇವಿಸುವ ಸಭೆಗಳ ಪ್ರಧಾನರನ್ನೂ ಸಹಸ್ರಾಧಿಪತಿಗಳನ್ನೂ ಶತಾಧಿಪತಿಗಳನ್ನೂ ಅರಸನ ಸ್ವಾಸ್ಥ್ಯದ ಮೇಲೆಯೂ ಅವನ ಕುಮಾರರ ಸ್ವಾಸ್ಥ್ಯಗಳ ಮೇಲೆಯೂ ಇರುವ ಪ್ರಧಾನರನ್ನೂ ಅಧಿಕಾರಿಗಳನ್ನೂ ಪರಾಕ್ರಮಶಾಲಿ ಗಳನ್ನೂ ಶೂರರನ್ನೂ ಯೆರೂಸಲೇಮಿಗೆ ಕೂಡಿ ಬರ ಮಾಡಿದನು.
Daaveedanu israayelina samasta pradhaanaraada gotragala pradhaana rannoo vargavargavaagi arasanannu sevisuva sabhegala pradhaanarannoo sahasraadhipatigalannoo shataadhipatigalannoo arasana svaasthyada meleyoo avana kumaarara svaasthyagala meleyoo iruva pradhaanarannoo adhikaarigalannoo paraakramashaali galannoo shoorarannoo yeroosalemige koodi bara maadidanu.
1 Chronicles 28:1 in English
- King James Version (KJV)
- And David assembled all the princes of Israel, the princes of the tribes, and the captains of the companies that ministered to the king by course, and the captains over the thousands, and captains over the hundreds, and the stewards over all the substance and possession of the king, and of his sons, with the officers, and with the mighty men, and with all the valiant men, unto Jerusalem.
- World English Bible (WEB)
- David assembled all the princes of Israel, the princes of the tribes, the captains of the companies who served the king by division, the captains of thousands, the captains of hundreds, and the rulers over all the substance and possessions of the king and of his sons, with the officers and the mighty men, even all the mighty men of valor, to Jerusalem.
- American Standard Version (ASV)
- And David assembled all the princes of Israel, the princes of the tribes, and the captains of the companies that served the king by course, and the captains of thousands, and the captains of hundreds, and the rulers over all the substance and possessions of the king and of his sons, with the officers, and the mighty men, even all the mighty men of valor, unto Jerusalem.
- Bible in Basic English (BBE)
- And David got together at Jerusalem all the rulers of Israel, the chiefs of the tribes and the captains of the divisions waiting on the king in turn, and the captains of thousands and the captains of hundreds and the controllers of all the goods and property of the king and his sons, with the unsexed servants and the great men of war.
- Darby Translation (DBY)
- And David assembled all the princes of Israel, the princes of the tribes, and the princes of the divisions that ministered to the king, and the captains over thousands, and the captains over hundreds, and the comptrollers of all the substance and possessions of the king and of his sons, with the chamberlains, and the mighty men, and all the men of valour, unto Jerusalem.
- Webster's Bible (WBS)
- And David assembled all the princes of Israel, the princes of the tribes, and the captains of the companies that ministered to the king by course, and the captains over the thousands, and captains over the hundreds, and the stewards over all the substance and possession of the king, and of his sons, with the officers, and with the mighty men, and with all the valiant men to Jerusalem.
- Young's Literal Translation (YLT)
- And David assembleth all the heads of Israel, heads of the tribes, and heads of the courses who are serving the king, and heads of the thousands, and heads of the hundreds, and heads of all the substance and possessions of the king, and of his sons, with the officers and the mighty ones, even to every mighty one of valour — unto Jerusalem.
Read in context
- 1ದಾವೀದನು ಇಸ್ರಾಯೇಲಿನ ಸಮಸ್ತ ಪ್ರಧಾನರಾದ ಗೋತ್ರಗಳ ಪ್ರಧಾನ ರನ್ನೂ ವರ್ಗವರ್ಗವಾಗಿ ಅರಸನನ್ನು ಸೇವಿಸುವ ಸಭೆಗಳ ಪ್ರಧಾನರನ್ನೂ ಸಹಸ್ರಾಧಿಪತಿಗಳನ್ನೂ ಶತಾಧಿಪತಿಗಳನ್ನೂ ಅರಸನ ಸ್ವಾಸ್ಥ್ಯದ ಮೇಲೆಯೂ ಅವನ ಕುಮಾರರ ಸ್ವಾಸ್ಥ್ಯಗಳ ಮೇಲೆಯೂ ಇರುವ ಪ್ರಧಾನರನ್ನೂ ಅಧಿಕಾರಿಗಳನ್ನೂ ಪರಾಕ್ರಮಶಾಲಿ ಗಳನ್ನೂ ಶೂರರನ್ನೂ ಯೆರೂಸಲೇಮಿಗೆ ಕೂಡಿ ಬರ ಮಾಡಿದನು.
- 2ಆಗ ಅರಸನಾದ ದಾವೀದನು ಎದ್ದು ನಿಂತು ಹೇಳಿದ್ದೇನಂದರೆ--ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ, ಕರ್ತನ ಒಡಂಬಡಿ ಕೆಯ ಮಂಜೂಷದ ನಿಮಿತ್ತವಾಗಿಯೂ ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಯಾದ ಮನೆಯನ್ನು ನಾನು ಕಟ್ಟಿಸಲು ಮನಸ್ಸಾಗಿದ್ದು ಕಟ್ಟುವಿ ಕೆಯ ನಿಮಿತ್ತ ಸಿದ್ಧಮಾಡಿದೆನು.
- 3ಆದರೆ ದೇವರು ನನಗೆ--ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಬೇಡ; ಯಾಕಂದರೆ ನೀನು ಯುದ್ಧದ ಮನುಷ್ಯನಾಗಿದ್ದೀ; ರಕ್ತವನ್ನು ಚೆಲ್ಲಿದ್ದೀ ಅಂದನು.
Cross references
- 1 Chronicles 23:2 1 ಪೂರ್ವಕಾಲವೃತ್ತಾಂತ 23:2ಇದ ಲ್ಲದೆ ತಾನು ಇಸ್ರಾಯೇಲಿನ ಸಮಸ್ತ ಪ್ರಧಾನರನ್ನೂ ಯಾಜಕರನ್ನೂ ಲೇವಿಯರನ್ನೂ ಒಟ್ಟುಗೂಡಿಸಿ ಬರ ಮಾಡಿದನು.
- 1 Chronicles 11:10–47 1 ಪೂರ್ವಕಾಲವೃತ್ತಾಂತ 11:10–47ದಾವೀದನಿಗೆ ಇರುವ ಮುಖ್ಯಸ್ಥರಾದ ಪರಾಕ್ರಮ ಶಾಲಿಗಳು ಇವರೇ; ಇಸ್ರಾಯೇಲನ್ನು ಕುರಿತು ಕರ್ತನು ಹೇಳಿದ ವಾಕ್ಯದ ಪ್ರಕಾರ ಅವನನ್ನು ಅರಸನನ್ನಾಗಿ ಮಾಡುವದಕ್ಕೆ ಅವರು ಸಮಸ್ತ ಇಸ್ರಾಯೇಲಿನ ಸಂಗಡ ಅವನ ರಾಜ್ಯದಲ್ಲಿ ತಮ್ಮನ್ನು ದೃಢಪಡಿಸಿಕೊಂಡರು. ದಾವೀದನ ಸಂಗಡ ಇದ್ದ ಪರಾಕ್ರಮಶಾಲಿಗಳ ಲೆಕ್ಕವೇನಂದರೆ--ಹಕ್ಮೋನಿಯನಾದ ಯಾಷೊಬ್ಬಾ ಮನು ಅಧಿಪತಿಗಳಲ್ಲಿ ಮುಖ್ಯಸ್ಥನಾಗಿದ್ದನು; ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿ ಯನ್ನು ಎತ್ತಿ ಒಂದೇ ಸಾರಿ ಅವರನ್ನು ಕೊಂದು ಹಾಕಿದನು. ಅವನ ತರುವಾಯ ಅಹೋಹ್ಯನಾ ದಂಥ ದೋದೋನ ಮಗನಾದಂಥ ಎಲ್ಲಾಜಾರನು ಮೂರು ಮಂದಿ ಪರಾಕ್ರಮಾಶಾಲಿಗಳಲ್ಲಿ ಒಬ್ಬನಾ ಗಿದ್ದನು. ಇವನು ದಾವೀದನ ಸಂಗಡ ಪಸ್ದವ್ಮೆಾಮಿನ ಬಳಿಯಲ್ಲಿದ್ದನು. ಅಲ್ಲಿ ಫಿಲಿಷ್ಟಿಯರು ಜವೆಗೋಧಿ ತುಂಬಿರುವ ಹೊಲದಲ್ಲಿ ಯುದ್ಧಕ್ಕೆ ಕೂಡಿಸಲ್ಪಟ್ಟಿರುವಾಗ ಜನರು ಫಿಲಿಷ್ಟಿಯರ ಮುಂದೆ ಓಡಿಹೋದರು. ಆಗ ಇವರು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು ಅದನ್ನು ತಪ್ಪಿಸಿ ಫಿಲಿಷ್ಟಿಯರನ್ನು ಕೊಂದುಹಾಕಿದರು; ಕರ್ತನು ಮಹಾ ಬಿಡುಗಡೆಯಿಂದ ರಕ್ಷಿಸಿದನು. ಇದಲ್ಲದೆ ಮೂವತ್ತು ಮಂದಿ ಅಧಿಪತಿಗಳ ಲ್ಲಿರುವ ಮೂರು ಮಂದಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿ ಗುಡ್ಡಕ್ಕೆ ಹೋದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ತಗ್ಗಿನಲ್ಲಿ ಇಳಿದಿತ್ತು. ಆಗ ದಾವೀದನು ಗಡಿಸ್ಥಳದಲ್ಲಿ ಇದ್ದನು; ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು. ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ತನಗೆ ಕುಡಿಯಲು ಕೊಡುವವನಾರೆಂದು ಆಶೆಪಟ್ಟು ಹೇಳಿದನು. ಆಗ ಆ ಮೂವರು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತೆಗೆದುಕೊಂಡು ಬಂದರು. ಆದರೆ ದಾವೀದನು ಅದನ್ನು ಕುಡಿಯಲೊಲ್ಲದೆ ಕರ್ತನಿಗೆ ಹೊಯ್ದು--ನನ್ನ ದೇವರು ಇಂಥಾ ಕಾರ್ಯವನ್ನು ನನಗೆ ದೂರವಾಗ ಮಾಡಲಿ; ನಾನು ಈ ಮನುಷ್ಯರ ಪ್ರಾಣ ರಕ್ತವನ್ನು ಕುಡಿಯಬಹುದೇ? ತಮ್ಮ ಪ್ರಾಣ ಗಳಿಂದ ಅದನ್ನು ತಂದರಲ್ಲಾ ಎಂದು ಹೇಳಿ ಕುಡಿಯ ಲೊಲ್ಲದೆ ಇದ್ದನು. ಈ ಕಾರ್ಯಗಳನ್ನು ಮುಖ್ಯಸ್ಥರಾದ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು. ಇದಲ್ಲದೆ ಯೋವಾಬನ ಸಹೋದರನಾದ ಅಬ್ಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನಾಗಿದ್ದನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ ಮೂವರಲ್ಲಿ ಹೆಸರುಗೊಂಡವನಾಗಿದ್ದನು. ಈ ಮೂವರಲ್ಲಿ ಅವರಿಗೆ ಅವನು ಪ್ರಧಾನನಾಗಿದ್ದನು; ಆದರೆ ಮೂವರ ಕೂಡ ಸೇರದೆ ಇದ್ದನು. ಇಬ್ಬರಿಗಿಂತ ಅವನು ಘನವುಳ್ಳವನಾಗಿದ್ದನು; ಕಬ್ಜಯೇಲಿನವ ನಾದ ಪರಾಕ್ರಮಶಾಲಿಯ ಮಗನಾದಂಥ ಯೆಹೋ ಯಾದನ ಮಗನಾದ ಬೆನಾಯನು ಅನೇಕ ಕ್ರಿಯೆಗ ಳನ್ನು ಮಾಡಿದನು; ಅವನು ಸಿಂಹದ ಹಾಗಿರುವ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇನ್ನೊಮ್ಮೆ ಹಿಮದ ದಿವಸದಲ್ಲಿ ಇಳಿದು ಹೋಗಿ ಕುಣಿಯೊಳಗೆ ಒಂದು ಸಿಂಹವನ್ನು ಕೊಂದುಬಿಟ್ಟನು. ಮತ್ತೊಮ್ಮೆ ಅವನು ಐದುಮೊಳ ಉದ್ದವಾದ ಐಗುಪ್ತ್ಯನನ್ನೂ ಕೊಂದುಬಿಟ್ಟನು; ಐಗುಪ್ತ್ಯನ ಕೈಯಲ್ಲಿ ನೇಯ್ಗೆಗಾರರ ಕುಂಟೆಯಂತಿರುವ ಒಂದು ಈಟಿ ಇತ್ತು; ಅವನು ಒಂದು ಕೋಲು ಹಿಡುಕೊಂಡು ಅವನ ಬಳಿಗೆ ಹೋಗಿ, ಐಗುಪ್ತ್ಯನ ಕೈಯಿಂದ ಈಟಿಯನ್ನು ಕಿತ್ತುಕೊಂಡು ಅವನ ಈಟಿಯಿಂದಲೇ ಅವನನ್ನು ಕೊಂದು ಹಾಕಿದನು. ಯೆಹೋಯಾದನ ಮಗ ನಾದ ಬೆನಾಯನು ಇವುಗಳನ್ನು ಮಾಡಿ ಮೂರು ಮಂದಿ ಪರಾಕ್ರಮಶಾಲಿಗಳಲ್ಲಿ ಹೆಸರುಗೊಂಡವನಾ ದನು. ಇಗೋ, ಅವನು ಮೂವತ್ತು ಮಂದಿಯಲ್ಲಿ ಘನವುಳ್ಳವನಾಗಿದ್ದನು; ಆದರೆ ಮೂವರ ಕೂಡ ಸೇರದೆ ಇದ್ದನು. ದಾವೀದನು ಅವನನ್ನು ತನ್ನ ಕಾವಲಿ ನವರ ಮೇಲೆ ಇಟ್ಟನು. ಇದಲ್ಲದೆ ದಂಡುಗಳಲ್ಲಿರುವ ಪರಾಕ್ರಮಶಾಲಿ ಗಳು ಯಾರಂದರೆ--ಯೋವಾಬನ ಸಹೋದರನಾದ ಅಸಾಹೇಲನು, ಬೇತ್ಲೆಹೇಮಿನವನಾದ ದೋದೋ ವಿನ ಮಗನಾದ ಎಲ್ಖಾನಾನು, ಹರೋರಿಯನಾದ ಶಮ್ಮೋತನು, ಪೆಲೋನ್ಯನಾದ ಹೆಲೆಚನು, ತೆಕೋ ವಿಯನಾದ ಇಕ್ಕೇಷನ ಮಗನಾದ ಈರನು, ಅನ ತೋತಿನವನಾದ ಅಬೀಯೆಜೆರನು, ಹುಷಾತ್ಯನಾದ ಸಿಬ್ಕೈನು, ಅಹೋಹಿತನಾದ ಈಲೈನು, ನೆಟೋಫದ ವನಾದ ಮಹರೈನು, ನೆಟೋಫದವನಾದ ಬಾಣನ ಮಗನಾದ ಹೆಲೇದನು, ಬೆನ್ಯಾವಿಾನನ ಮಕ್ಕಳಿಗೆ ಉಂಟಾದ ಗಿಬ್ಯದ ರೀಬೈನ ಮಗನಾದ ಈತೈಯು, ಪಿರತೋನ್ಯನಾದ ಬೆನಾಯನು, ಗಾಷಿನ ಹಳ್ಳಗಳ ಬಳಿಯಲ್ಲಿರುವ ಹೂರೈನು, ಅರಾಬಾತಗ್ಗಿನವನಾದ ಅಬೀಯೇಲನು, ಬಹರೂಮ್ಯನಾದ ಅಜ್ಮಾವೆತನು, ಶಾಲ್ಬೋನ್ಯನಾದ ಎಲೆಯಖ್ಬ, ಗಿಜೋನ್ಯನಾದ ಹಾಷೇಮನ ಕುಮಾರರು, ಹರಾರಿಯನಾದ ಶಾಗೇಯ ಮಗನಾದ ಯೋನಾತಾನನು, ಹರಾರಿಯನಾದ ಶಾಕಾರನ ಮಗನಾದ ಅಹೀಯಾಮನು, ಊರನ ಮಗನಾದ ಎಲೀಫಲನು, ಮೆಕೆರಾತ್ಯನಾದ ಹೇಫೆ ರನು, ಫೆಲೋನ್ಯನಾದ ಅಹೀಯನು, ಕರ್ಮೆಲ್ಯ ನಾದ ಹೆಚ್ರೋನು, ಎಜ್ಬೈಯನ ಮಗನಾದ ನಾರೈಯು, ನಾತಾನನ ಸಹೋದರನಾದ ಯೋವೇಲನು ಹಗ್ರಿ ಯನ ಮಗನಾದ ಮಿಬ್ಹಾರನು, ಅಮ್ಮೋನ್ಯನಾದ ಚೆಲೆಕನು, ಚೆರೂಯಳ ಮಗನಾದ ಯೋವಾಬನ ಆಯುಧಗಳನ್ನು ಹೊತ್ತುಕೊಂಡು ಹೋಗುವವನಾಗಿ ರುವ ಬೆರೋತ್ಯನಾದ ನಹರೈಯು, ಇತ್ರೀಯನಾದ ಈರನು ಗಾರೇಬನು, ಹಿತ್ತೀಯನಾದ ಊರೀಯನು, ಅಹ್ಲೈಯ ಮಗನಾದ ಜಾಬಾದನು, ರೂಬೇನ್ಯ ನಾದ ಶೀಜನ ಮಗನಾದ ಅದೀನನು; ಇವನು ರೂಬೇನ್ಯರಲ್ಲಿ ಅಧಿಪತಿಯಾಗಿದ್ದನು; ಮೂವತ್ತು ಮಂದಿ ಅವನ ಸಂಗಡ ಇದ್ದರು. ಮಾಕನ ಮಗ ನಾದ ಹಾನಾನನು, ಮೆತೆನನಾದ ಯೋಷಾಫಾಟನು, ಅಷ್ಟೆರಾತ್ಯನಾದ ಉಜ್ಜೀಯನು ಅರೋಯೇರಿವ ನಾದ ಹೋತಾಮನ ಮಕ್ಕಳಾಗಿರುವ ಶಾಮಾ, ಯೆಗೀಯೇಲನೂ; ಶಿಮ್ರಿಯ ಮಗನಾದ ಎದೀಗ ಯೇಲನು, ಅವನ ಸಹೋದರನಾದಂಥ ತೀಚೀಯ ನಾದಂಥ ಯೋಹನು. ಮಹವೀಯನಾದ ಎಲೀ ಯೇಲನು, ಎಲ್ನಾಮನ ಮಕ್ಕಳಾದ ಯೇರಿಬೈಯನೂ ಯೋಷವ್ಯನೂ;ಮೋವಾಬ್ಯನಾದ ಇತ್ಮನು, ಎಲೀ ಯೇಲನು, ಓಬೆದನು, ಮೆಚಬಾಯದವ ನಾದ ಯಾಸಿಯೇಲನು. ಮೋವಾಬ್ಯನಾದ ಇತ್ಮನು, ಎಲೀ ಯೇಲನು, ಓಬೆದನು, ಮೆಚಬಾಯದವ ನಾದ ಯಾಸಿಯೇಲನು.
- 1 Chronicles 27:1–34 1 ಪೂರ್ವಕಾಲವೃತ್ತಾಂತ 27:1–34ಆದರೆ ಇಸ್ರಾಯೇಲ್ ಮಕ್ಕಳು ತಮ್ಮ ಲೆಕ್ಕದ ಪ್ರಕಾರವಾಗಿ ಹೀಗೆಯೇ ಇದ್ದರು; ಹೇಗಂದರೆ, ಮುಖ್ಯಸ್ಥರಾದ ಪಿತೃಗಳು ಸಹಸ್ರಗಳಿಗೂ ಶತಗಳಿಗೂ ಅಧಿಪತಿಗಳು. ವರುಷದ ಎಲ್ಲಾ ತಿಂಗಳು ಗಳಲ್ಲಿ ಪ್ರತಿ ತಿಂಗಳು ಒಳಗೆ ಹೋಗಿ ಬರುವ ವರ್ಗ ಗಳ ಕಾರ್ಯಗಳಲ್ಲಿ ಅರಸನನ್ನು ಸೇವಿಸಿದ ಅವರ ಪಾರುಪತ್ಯಗಾರರೂ ಪ್ರತಿ ವರ್ಗಕ್ಕೆ ಇಪ್ಪತ್ತನಾಲ್ಕು ಸಾವಿರ ಮಂದಿಯಾಗಿದ್ದರು. ಮೊದಲನೇ ತಿಂಗಳಿಗೋಸ್ಕರ ಮೊದಲನೇ ವರ್ಗದ ಮೇಲೆ ಜಬ್ದೀಯೇಲನ ಮಗನಾದ ಯಾಷೊ ಬ್ಬಾಮನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. ಮೊದಲನೇ ತಿಂಗಳಿನ ಸೈನ್ಯದ ಸಮಸ್ತ ಅಧಿಪತಿಗಳಲ್ಲಿದ್ದ ಮುಖ್ಯನಾದವನು ಪೇರಚನ ಮಕ್ಕ ಳಲ್ಲಿ ಒಬ್ಬನಾಗಿದ್ದನು. ಎರಡನೇ ತಿಂಗಳಿನ ವರ್ಗದ ಮೇಲೆ ಅಹೋಹಿಯನಾದ ದೋದೈಯು; ಅವನ ವರ್ಗದಲ್ಲಿ ಮಿಕ್ಲೋತನು ನಾಯಕನಾಗಿದ್ದನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. ಮೂರನೇ ತಿಂಗಳಿನ ಸೈನ್ಯದ ಮೂರನೇ ಅಧಿಪತಿಯು ಮುಖ್ಯ ನಾಗಿರುವ ಯೆಹೋಯಾದನ ಮಗನಾದ ಬೆನಾ ಯನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. ಈ ಬೆನಾಯನು ಮೂವತ್ತು ಮಂದಿಯಲ್ಲಿ ಪರಾಕ್ರಮಶಾಲಿಯಾದವನಾಗಿ ಮೂವತ್ತು ಮಂದಿಯ ಮೇಲೆ ಮುಖ್ಯಸ್ಥನಾಗಿದ್ದನು; ಅವನ ವರ್ಗದಲ್ಲಿ ಅವನ ಮಗನಾದ ಅವ್ಮೆಾಜಾಬಾದನು ಇದ್ದನು. ನಾಲ್ಕನೇ ತಿಂಗಳಿನ ನಾಲ್ಕನೆಯವನು ಯೋವಾಬನ ಸಹೋ ದರನಾದ ಅಸಾಹೇಲನು; ಅವನ ತರುವಾಯ ಅವನ ಮಗನಾದ ಜೆಬದ್ಯನು; ಅವನ ವರ್ಗದಲ್ಲಿ ಇಪ್ಪತ್ತ ನಾಲ್ಕು ಸಾವಿರ ಜನರು. ಐದನೇ ತಿಂಗಳಿನ ಐದನೇ ಅಧಿಪತಿಯು ಇಜ್ರಾಹ್ಯನಾದ ಶಮ್ಹೂತನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. ಆರನೇ ತಿಂಗಳಿನ ಆರನೆಯವನು ತೆಕೋವಿಯನಾಗಿರುವ ಇಕ್ಕೇಷನ ಮಗನಾದ ಈರನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. ಏಳನೇ ತಿಂಗಳಿನ ಏಳನೇಯವನು ಎಫ್ರಾಯಾಮನ ಮಕ್ಕಳಲ್ಲಿ ಒಬ್ಬ ನಾಗಿರುವ ಪೆಲೋನ್ಯನಾದ ಹೆಲೆಚನು; ಅವನ ವರ್ಗ ದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. ಎಂಟನೇ ತಿಂಗಳಿನ ಎಂಟನೆಯವನು ಜೆರಹೀಯರಲ್ಲಿ ಒಬ್ಬ ನಾಗಿರುವ ಹುಷಾತ್ಯನಾದ ಸಿಬ್ಬೆಕೈಯು; ಅವನ ವರ್ಗ ದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು; ಒಂಭತ್ತನೇ ತಿಂಗಳಿನ ಒಂಭತ್ತನೆಯವನು ಬೆನ್ಯಾವಿಾನ್ಯರಲ್ಲಿ ಒಬ್ಬನಾಗಿರುವ ಅನತೋತ್ಯನಾದ ಅಬೀಯೆಜೆರನು; ಅವನ ವರ್ಗದಲ್ಲಿ ಇಪ್ಪತ್ತುನಾಲ್ಕು ಸಾವಿರ ಜನರು. ಹತ್ತನೇ ತಿಂಗಳಿನ ಹತ್ತನೆಯವನು ಜೆರಹೀಯರಲ್ಲಿ ಒಬ್ಬನಾಗಿರುವ ನೆಟೋಫದವನಾದ ಮಹರೈಯು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕುಸಾವಿರ ಜನರು. ಹನ್ನೊಂದನೇ ತಿಂಗಳಿನ ಹನ್ನೊಂದನೆಯವನು ಎಫ್ರಾಯಾಮನ ಮಕ್ಕಳಲ್ಲಿ ಒಬ್ಬನಾಗಿರುವ ಪಿರ್ರಾ ತೋನ್ಯನಾದ ಬೆನಾಯನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. ಹನ್ನೆರಡನೇ ತಿಂಗ ಳಿನ ಹನ್ನೆರಡನೆಯವನು ಒತ್ನೀಯೇಲನ ಮಕ್ಕಳಲ್ಲಿ ಒಬ್ಬನಾಗಿರುವ ನೆಟೋಫದವನಾದ ಹೆಲ್ದೈಯು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು. ಇಸ್ರಾಯೇಲಿನ ಗೋತ್ರಗಳ ಮೇಲೆ ಇರುವ ವರು ಯಾರಂದರೆ, ರೂಬೇನ್ಯರ ನಾಯಕನು ಜಿಕ್ರೀಯ ಮಗನಾದ ಎಲೀಯೆಜೆರನು. ಸಿಮೆಯೋನ್ಯರಿಗೆ ಮಾಕನ ಮಗನಾದ ಶೆಫಟ್ಯನು. ಲೇವಿಯರಿಗೆ ಕೆಮು ವೇಲನ ಮಗನಾದ ಹಷಬ್ಯನು. ಆರೋನ್ಯರಿಗೆ ಚಾದೋಕನು; ಯೆಹೂದನಿಗೆ ದಾವೀದನ ಸಹೋ ದರರಲ್ಲಿ ಒಬ್ಬನಾಗಿರುವ ಎಲೀಹುವು; ಇಸ್ಸಾಕಾರನಿಗೆ ವಿಾಕಾಯೇಲನ ಮಗನಾದ ಒಮ್ರಿಯು; ಜೆಬು ಲೋನನಿಗೆ, ಒಬದ್ಯನ ಮಗನಾದ ಇಷ್ಮಾಯನು; ನಫ್ತಾಲಿಯ ಗೋತ್ರಕ್ಕೆ ಅಜ್ರಿಯೇಲನ ಮಗನಾದ ಯೆರೀಮೋತನು; ಎಫ್ರಾಯಾಮನ ಮಕ್ಕಳಿಗೆ ಅಜಜ್ಯನ ಮಗನಾದ ಹೊಷೇಯನು; ಮನಸ್ಸೆಯ ಅರ್ಧಗೋತ್ರಕ್ಕೆ ಪೆದಾಯನ ಮಗನಾದ ಯೋವೇ ಲನು. ಗಿಲ್ಯಾದಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರಕ್ಕೆ ಜೆಕರ್ಯನ ಮಗನಾದ ಇದ್ದೋನು, ಬೆನ್ಯಾವಿಾನನ ಗೋತ್ರಕ್ಕೆ ಅಬ್ನೇರನ ಮಗನಾದ ಯಗಸೀಯೇಲನು. ದಾನನ ಗೋತ್ರಕ್ಕೆ ಯೆರೋ ಹಾಮನ ಮಗನಾದ ಅಜರೇಲನು. ಇವರೇ ಇಸ್ರಾ ಯೇಲಿನ ಗೋತ್ರಗಳ ಪ್ರಧಾನರು. ಆದರೆ ದಾವೀದನು ಇಪ್ಪತ್ತು ವರುಷಗಳೊಳಗೆ ಇದ್ದವರ ಲೆಕ್ಕತಕ್ಕೊಳ್ಳಲಿಲ್ಲ. ಯಾಕಂದರೆ ಇಸ್ರಾ ಯೇಲ್ಯರನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿ ಮಾಡುವೆನೆಂದು ಕರ್ತನು ಹೇಳಿದ್ದನು. ಚೆರೂಯಳ ಮಗನಾದ ಯೋವಾಬನು ಎಣಿಸಲು ಆರಂಭಿ ಸಿದನು; ಆದರೆ ಇಸ್ರಾಯೇಲಿಗೆ ವಿರೋಧವಾಗಿ ದೇವರ ರೌದ್ರವು ಬಂದದ್ದರಿಂದ ಅವನು ಪೂರ್ತಿ ಗೊಳಿಸಲಿಲ್ಲ; ಆ ಲೆಕ್ಕವು ಅರಸನಾದ ದಾವೀದನ ವೃತಾಂತಗಳ ಪುಸ್ತಕದಲ್ಲಿ ಸೇರಲಿಲ್ಲ. ಅರಸನ ಬೊಕ್ಕಸಗಳ ಮೇಲೆ ಅಡಿಯೇಲನ ಮಗನಾದ ಅಜ್ಮಾವೆತನು ಇದ್ದನು. ಹೊಲಗಳಲ್ಲಿಯೂ ಪಟ್ಟಣಗಳಲ್ಲಿಯೂ ಗ್ರಾಮಗಳಲ್ಲಿಯೂ ಗಡೀ ಸ್ಥಳ ಗಳಲ್ಲಿಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀ ಯನ ಮಗನಾದ ಯೋನಾತಾನನು ಇದ್ದನು. ಹೊಲದಲ್ಲಿ ವ್ಯವಸಾಯ ಮಾಡುವ ಕೆಲಸದವರ ಮೇಲೆ ಕೆಲೂಬನ ಮಗನಾದ ಎಜ್ರೀಯು ಇದ್ದನು. ಬಹಳ ದ್ರಾಕ್ಷೇ ತೋಟಗಳ ಮೇಲೆ ರಾಮಾ ಊರಿನ ಶಿಮ್ಮನು ಇದ್ದನು; ಅಲೆಗೋಸ್ಕರ ದ್ರಾಕ್ಷೇ ತೋಟಗಳ ಫಲದ ಮೇಲೆ ಶಿಪ್ಮಿಯನಾದ ಜಬ್ದೀಯು ಇದ್ದನು. ತಗ್ಗಿನಲ್ಲಿರುವ ಇಪ್ಪೆ ಮರಗಳ ಮೇಲೆಯೂ ಅತ್ತಿ ಮರಗಳ ಮೇಲೆಯೂ ಗೆದೆರೂರಿನವನಾದ ಬಾಳ್ಹಾನಾನನು ಇದ್ದನು; ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷನು ಇದ್ದನು. ಶಾರೋನಿನಲ್ಲಿ ಮೇಯಿಸುವ ದನಗಳ ಮೇಲೆ ಶಾರೋನಿನವನಾದ ಶಿಟ್ರೈ ಇದ್ದನು; ತಗ್ಗುಗಳಲ್ಲಿರುವ ದನಗಳ ಮೇಲೆ ಅದ್ಲೈಯ ಮಗನಾದ ಶಾಫಾಟನು ಇದ್ದನು. ಒಂಟೆಗಳ ಮೇಲೆ ಇರುವವನು ಇಷ್ಮಾ ಯೇಲ್ಯನಾದ ಓಬೀಲನು; ಕತ್ತೆಗಳ ಮೇಲೆ ಇರುವ ವನು ಮೇರೊನೋತಿನವನಾದ ಯೆಹ್ದೆಯನು. ಕುರಿ ಮಂದೆಗಳ ಮೇಲೆ ಇರುವವನು ಹಗ್ರೀಯನಾದ ಯಾಜೀಜನು. ಇವೆರಲ್ಲರೂ ಅರಸನಾದ ದಾವೀದನ ಸ್ವಾಸ್ಥ್ಯದ ಮೇಲೆ ಪ್ರಧಾನರಾಗಿದ್ದರು. ಇದಲ್ಲದೆ ದಾವೀದನ ಚಿಕ್ಕಪ್ಪನಾದ ಯೋನಾತಾನನು ಗ್ರಹಿಕೆಯುಳ್ಳವನಾಗಿ ಆಲೋಚನೆಯುಳ್ಳ ಲೇಖಕನೂ ಆಗಿದ್ದನು. ಹಕ್ಮೋನನಾದ ಯೆಹೀಯೇ ಲನು ಅರಸನ ಕುಮಾರರ ಸಂಗಡ ಇದ್ದನು. ಅರಸನ ಆಲೋಚನೆಗಾರನು ಅಹೀತೋಫೆಲನು, ಅರಸನ ಸ್ನೇಹಿತನು ಅರ್ಕೀಯನಾದ ಹೂಷೈಯು.ಅಹೀ ತೋಫೆಲನ ತರುವಾಯ ಬೆನಾಯನ ಮಗನಾದ ಯೆಹೋಯಾದಾವನೂ ಎಬ್ಯಾತಾರನೂ. ಅರಸನ ಸೈನ್ಯದ ಅಧಿಪತಿಯು ಯೋವಾಬನು. ಅಹೀ ತೋಫೆಲನ ತರುವಾಯ ಬೆನಾಯನ ಮಗನಾದ ಯೆಹೋಯಾದಾವನೂ ಎಬ್ಯಾತಾರನೂ. ಅರಸನ ಸೈನ್ಯದ ಅಧಿಪತಿಯು ಯೋವಾಬನು.
- Joshua 24:1 ಯೆಹೋಶುವ 24:1ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲಿನ ಸಮಸ್ತ ಗೋತ್ರದವರನ್ನು ಕೂಡಿಸಿ ಇಸ್ರಾಯೇಲಿನ ಹಿರಿಯರನ್ನೂ ಅವರ ಮುಖ್ಯಸ್ಥ ರನ್ನೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ಕರೆಸಿದನು. ಅವರು ದೇವರ ಮುಂದೆ ಬಂದು ನಿಂತರು.
- Joshua 23:2 ಯೆಹೋಶುವ 23:2ಅವನು ಸಮಸ್ತ ಇಸ್ರಾಯೇಲ್ಯರನ್ನೂ ಅವರ ಹಿರಿಯರನ್ನೂ ಮುಖ್ಯ ಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ಕರಿಸಿ ಅವರಿಗೆ--ನಾನು ವೃದ್ಧನಾಗಿ ದಿನಗಳು ತುಂಬಿ ದವನಾಗಿದ್ದೇನೆ.
Original words (Hebrew)
- David · H1732דָּוִד Dâvid
- assembled · H6950קָהַל qâhal
- princes · H8269שַׂר sar
- Israel · H3478יִשְׂרָאֵל Yisrâʼêl
- princes · H8269שַׂר sar
- tribes · H7626שֵׁבֶט shêbeṭ
- captains · H8269שַׂר sar
- companies · H4256מַחֲלֹקֶת machălôqeth
- ministered · H8334שָׁרַת shârath
- king · H4428מֶלֶךְ melek
- course · H4256מַחֲלֹקֶת machălôqeth
- captains · H8269שַׂר sar
- thousands · H505אֶלֶף ʼeleph
- captains · H8269שַׂר sar
- hundreds · H3967מֵאָה mêʼâh
- stewards · H8269שַׂר sar
- substance · H7399רְכוּשׁ rᵉkûwsh
- possession · H4735מִקְנֶה miqneh
- king · H4428מֶלֶךְ melek
- sons · H1121בֵּן bên
- officers · H5631סָרִיס çârîyç
- men · H1368גִּבּוֹר gibbôwr
- men · H2428חַיִל chayil
- Jerusalem · H3389יְרוּשָׁלַ͏ִם Yᵉrûwshâlaim