1 Chronicles · chapter 28 · verse 13
1 Chronicles 28:13 in Kannada
ಇದಲ್ಲದೆ ಯಾಜಕರ ಲೇವಿ ಯರ ವರ್ಗಗಳಿಗೋಸ್ಕರವೂ ಕರ್ತನ ಮನೆಯ ಸೇವೆಯ ಸಮಸ್ತ ಕೆಲಸಕ್ಕೋಸ್ಕರವೂ ಕರ್ತನ ಮನೆ ಯಲ್ಲಿರುವ ಸೇವೆಮಾಡುವ ಸಮಸ್ತ ಪಾತ್ರೆಗಳಿ ಗೋಸ್ಕರವೂ ಕಟ್ಟಳೆ ಕೊಟ್ಟನು.
Idallade yaajakara levi yara vargagaligoskaravoo kartana maneya seveya samasta kelasakkoskaravoo kartana mane yalliruva sevemaaduva samasta paatregali goskaravoo kattale kottanu.
1 Chronicles 28:13 in English
- King James Version (KJV)
- Also for the courses of the priests and the Levites, and for all the work of the service of the house of the LORD, and for all the vessels of service in the house of the LORD.
- World English Bible (WEB)
- also for the divisions of the priests and the Levites, for all the work of the service of the LORD’s house, and for all the vessels of service in the LORD’s house—
- American Standard Version (ASV)
- also for the courses of the priests and the Levites, and for all the work of the service of the house of Jehovah, and for all the vessels of service in the house of Jehovah;
- Bible in Basic English (BBE)
- And for the divisions of the priests and Levites, and for all the work in connection with the worship of the house of the Lord, and all the vessels used in the house of the Lord;
- Darby Translation (DBY)
- and for the courses of the priests and the Levites, and for all the work of the service of the house of Jehovah, and for all the instruments of service in the house of Jehovah:
- Webster's Bible (WBS)
- Also for the courses of the priests and the Levites, and for all the work of the service of the house of the LORD, and for all the vessels of service in the house of the LORD.
- Young's Literal Translation (YLT)
- and for the courses of the priests and of the Levites, and for all the work of the service of the house of Jehovah, and for all vessels of service of the house of Jehovah,
Read in context
- 11ಆಗ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ -- ದ್ವಾರಾಂಗಳದ ಮಾದರಿಯನ್ನೂ ಅದರ ಮನೆಗಳು, ಉಗ್ರಾಣಗಳು, ಮೇಲಿನ ಕೊಠಡಿ ಗಳು, ಅಂತರಂಗದ ಕೊಠಡಿಗಳು, ಕೃಪಾಸನದ ಸ್ಥಾನವು,
- 12ಕರ್ತನ ಮನೆಯ ಅಂಗಳಗಳು, ಸುತ್ತಲಿ ರುವ ಕೊಠಡಿಗಳಾದ ಕರ್ತನ ಮನೆಯ ಉಗ್ರಾಣ ಗಳು, ಪ್ರತಿಷ್ಠೆ ಮಾಡಿದವುಗಳ ಉಗ್ರಾಣಗಳು, ಆತ್ಮ ದಿಂದ ತನಗುಂಟಾದ ಇವುಗಳ ಸಮಸ್ತ ಮಾದರಿ ಯನ್ನೂ ಕೊಟ್ಟನು.
- 13ಇದಲ್ಲದೆ ಯಾಜಕರ ಲೇವಿ ಯರ ವರ್ಗಗಳಿಗೋಸ್ಕರವೂ ಕರ್ತನ ಮನೆಯ ಸೇವೆಯ ಸಮಸ್ತ ಕೆಲಸಕ್ಕೋಸ್ಕರವೂ ಕರ್ತನ ಮನೆ ಯಲ್ಲಿರುವ ಸೇವೆಮಾಡುವ ಸಮಸ್ತ ಪಾತ್ರೆಗಳಿ ಗೋಸ್ಕರವೂ ಕಟ್ಟಳೆ ಕೊಟ್ಟನು.
- 14ಸಕಲ ವಿಧವಾದ ಸೇವೆಗೆ ಸಮಸ್ತ ಬಂಗಾರದ ಸಾಮಾನುಗಳಿಗೋಸ್ಕರ ಬಂಗಾರವನ್ನೂ ಸಕಲವಿಧವಾದ ಸೇವೆಗೆ ಸಮಸ್ತ ಬೆಳ್ಳಿಯ ಸಾಮಾನುಗಳಿಗೋಸ್ಕರ ಬೆಳ್ಳಿಯನ್ನೂ ತೂಗಿ ಕೊಟ್ಟನು.
- 15ಬಂಗಾರದ ದೀಪಸ್ತಂಭಗಳಿಗೋಸ್ಕ ರವೂ ಅದರ ಬಂಗಾರದ ದೀಪಗಳಿಗೋಸ್ಕರವೂ ಒಂದೊಂದು ಸ್ತಂಭಕ್ಕೋಸ್ಕರ ತೂಕಮಾಡಿ ಕೊಟ್ಟನು. ಹಾಗೆಯೇ ಬೆಳ್ಳಿಯ ದೀಪಸ್ತಂಭಗಳಿಗೋಸ್ಕರ ದೀಪ ಸ್ತಂಭಕ್ಕೂ ಅದರ ದೀಪಗಳಿಗೂ ಒಂದೊಂದು ದೀಪ ಸ್ತಂಭದ ಕೆಲಸದ ಪ್ರಕಾರ ತೂಕಮಾಡಿ ಕೊಟ್ಟನು.
Cross references
- 1 Chronicles 24:1–19 1 ಪೂರ್ವಕಾಲವೃತ್ತಾಂತ 24:1–19ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ; ನಾದಾಬನೂ ಅಬೀಹುವೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದದ ರಿಂದ ಎಲ್ಲಾಜಾರನೂ ಈತಾಮಾರನೂ ಯಾಜಕ ಸೇವೆಮಾಡಿದರು. ಆದದರಿಂದ ದಾವೀದನು ಎಲ್ಲಾ ಜಾರನ ಮಕ್ಕಳಲ್ಲಿ ಚಾದೋಕನಿಗೂ ಈತಾಮಾರನ ಮಕ್ಕಳಲ್ಲಿ ಅಹೀಮೇಲೆಕನಿಗೂ ಅವರ ಸೇವೆಯಲ್ಲಿರುವ ವಿಚಾರಗಳ ಪ್ರಕಾರ ವರ್ಗಗಳನ್ನು ವಿಭಾಗಿಸಿದನು. ಈತಾಮಾರನ ಕುಮಾರರಿಗಿಂತ ಎಲ್ಲಾಜಾರನ ಕುಮಾ ರರಲ್ಲಿ ಮುಖ್ಯಸ್ಥರು ಹೆಚ್ಚಾಗಿದ್ದದರಿಂದ ಅವರು ಹೀಗೆಯೇ ವಿಭಾಗಿಸಲ್ಪಟ್ಟಿದ್ದರು. ಎಲ್ಲಾಜಾರನ ಕುಮಾರ ರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಹದಿನಾರು ಮಂದಿ ಮುಖ್ಯಸ್ಥರು. ಈತಾಮಾರನ ಕುಮಾರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಎಂಟುಮಂದಿ ಮುಖ್ಯ ಸ್ಥರು. ಇವರು ಅವರ ಸಂಗಡ ಬೆರೆತಿದ್ದು ಚೀಟು ಗಳಿಂದ ವಿಭಾಗಿಸಲ್ಪಟ್ಟಿದ್ದರು; ಪರಿಶುದ್ಧ ಸ್ಥಾನದ ಪ್ರಧಾನರೂ ದೈವೀಕ ಕಾರ್ಯಗಳಲ್ಲಿ ಪ್ರಧಾನರೂ ಎಲ್ಲಾಜಾರನ ಕುಮಾರರಿಂದಲೂ ಈತಾಮಾರನ ಕುಮಾರರಿಂದಲೂ ಇದ್ದರು. ಇದಲ್ಲದೆ ಲೇವಿಯರಲ್ಲಿ ಒಬ್ಬನಾದಂಥ ನೆತನೇಲನ ಮಗನಾದ ಲೇಖಕನಾ ದಂಥ ಶೆಮಾಯನು ಅರಸನ ಮುಂದೆಯೂ ಪ್ರಧಾನ ಯಾಜಕನಾದ ಚಾದೋಕನು, ಎಬ್ಯಾತಾರನ ಮಗ ನಾದ ಅಹೀಮೆಲೆಕನು, ಯಾಜಕರ ಲೇವಿಯರ ಪಿತೃಗಳ ಮುಖ್ಯಸ್ಥರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರ್ಯರ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸ ಬೇಕೆಂದು ನೇಮಿಸಿದರು. ಎಲ್ಲಾ ವರ್ಗಗಳ ಸರತಿ ಯನ್ನು ಚೀಟಿನಿಂದಲೇ ಗೊತ್ತುಮಾಡಿದರು. ಮೊದಲನೇ ಚೀಟು ಯೆಹೋಯಾರೀಬನಿಗೆ ಬಂತು, ಎರಡನೆಯದು ಯೆದಾಯನಿಗೆ ಮೂರನೆ ಯದು ಹಾರೀಮನಿಗೆ, ನಾಲ್ಕನೆಯದು ಸೆಯೋರೀಮ ನಿಗೆ, ಐದನೆಯದು ಮಲ್ಕೀಯನಿಗೆ, ಆರನೆಯದು ಮಿಯ್ಯಾವಿಾನನಿಗೆ, ಏಳನೆಯದು ಹಕ್ಕೋಚನಿಗೆ, ಎಂಟನೆಯದು ಅಬೀಯನಿಗೆ, ಒಂಭತ್ತನೆಯದು ಯೆಷೂವನಿಗೆ, ಹತ್ತನೆಯದು ಶೆಕನ್ಯನಿಗೆ, ಹನ್ನೊಂದ ನೆಯದು ಎಲ್ಯಾಷೀಬನಿಗೆ, ಹನ್ನೆರಡನೆಯದು ಯಾಕೀಮನಿಗೆ, ಹದಿಮೂರನೆಯದು ಹುಪ್ಪನಿಗೆ, ಹದಿನಾಲ್ಕನೆಯದು ಎಫೆಬಾಬನಿಗೆ, ಹದಿನೈದನೆ ಯದು ಬಿಲ್ಗನಿಗೆ, ಹದಿನಾರನೆಯದು ಇಮ್ಮೇರನಿಗೆ, ಹದಿನೇಳನೆಯದು ಹೇಜೀರನಿಗೆ, ಹದಿನೆಂಟನೆ ಯದು ಹಪ್ಪಿಚ್ಚೇಚನಿಗೆ, ಹತ್ತೊಂಭತ್ತನೆಯದು ಪೆತಹ್ಯನಿಗೆ, ಇಪ್ಪತ್ತನೆಯದು ಯೆಹೆಜ್ಕೇಲನಿಗೆ, ಇಪ್ಪತ್ತೊಂದನೆಯದು ಯಾಕೀನನಿಗೆ, ಇಪ್ಪತ್ತೆ ರಡನೆಯದು ಗಾಮೂಲನಿಗೆ, ಇಪ್ಪತ್ತಮೂರನೆ ಯದು ದೆಲಾಯನಿಗೆ, ಇಪ್ಪತ್ತನಾಲ್ಕನೆಯದು ಮಾಜ್ಯ ನಿಗೆ. ಇವೇ ಇಸ್ರಾಯೇಲ್ ದೇವರಾದ ಕರ್ತನು ತಮ್ಮ ತಂದೆಯಾದ ಆರೋನನಿಗೆ ಆಜ್ಞಾಪಿಸಿದ ಹಾಗೆ ಅವನ ಕೈಕೆಳಗೆ ತಮ್ಮ ತಮ್ಮ ಕಟ್ಟಳೆಗಳ ಪ್ರಕಾರ ಕರ್ತನ ಮನೆಯಲ್ಲಿ ಸೇವೆಮಾಡುವದಕ್ಕೆ ಬರಬೇಕಾದ ಅವರ ನಿಯಮಗಳು.
- 1 Chronicles 23:6 1 ಪೂರ್ವಕಾಲವೃತ್ತಾಂತ 23:6ಗೇರ್ಷೋನನು ಕೆಹಾತನು ಮೆರಾರೀಯು ಎಂಬ ಲೇವಿಯ ಮಕ್ಕಳಲ್ಲಿ ಅವರನ್ನು ವರ್ಗಗಳಾಗಿ ದಾವೀ ದನು ವಿಭಾಗಿಸಿದನು.
- 1 Chronicles 25:1–31 1 ಪೂರ್ವಕಾಲವೃತ್ತಾಂತ 25:1–31ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು. ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು. ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು. ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು. ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು. ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು. ಹೀಗೆಯೇ ಅವರ ಲೆಕ್ಕವೂ ಕರ್ತನ ಹಾಡುಗಳಲ್ಲಿ ಬೋಧಿಸಲ್ಪಟ್ಟ ಸಮಸ್ತ ಪ್ರವೀಣರ ಲೆಕ್ಕವೂ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಭತ್ತೆಂಟು ಮಂದಿಯಾಗಿದ್ದರು. ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು. ಆಸಾಫನಿ ಗೋಸ್ಕರ ಮೊದಲನೇ ಚೀಟು ಯೋಸೆಫನಿಗೆ ಬಂತು; ಎರಡನೆಯದು ಗೆದಲ್ಯನಿಗೆ, ಅವನೂ ಅವನ ಸಹೋ ದರರೂ ಅವನ ಕುಮಾರರೂ ಹನ್ನೆರಡು ಮಂದಿ; ಮೂರನೆಯದು ಜಕ್ಕೂರನಿಗೆ; ಅವನೂ ಅವನ ಕುಮಾರರೂ ಸಹೋದರರೂ ಹನ್ನೆರಡು ಮಂದಿ, ನಾಲ್ಕನೆಯದು ಇಚ್ರೀಗೆ, ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಐದನೆ ಯದು ನೆತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ. ಆರನೆ ಯದು ಬುಕ್ಕಿಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಏಳನೆ ಯದು ಯೆಸರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಎಂಟನೆ ಯದು ಯೆಶಾಯನಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಒಂಭ ತ್ತನೆಯದು ಮತ್ತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹತ್ತನೆಯದು ಶಿವ್ಮೆಾಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ; ಹನ್ನೊಂದನೆಯದು ಅಜರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹನ್ನೆರಡನೆಯದು ಹಷಬ್ಯನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿಮೂರನೆಯದು ಶೂಬಾಯೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿನಾಲ್ಕನೆಯದು ಮತ್ತಿತ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿನೈದನೆಯದು ಯೆರೆಮೋತ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ; ಹದಿನಾರನೆಯದು ಹನನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿನೇಳನೆ ಯದು ಯೊಷ್ಬೆಕಾಷನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿ ನೆಂಟನೆಯದು ಹನಾನೀಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ; ಹತ್ತೊಂಭತ್ತನೆಯದು ಮಲ್ಲೋತಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆ ರಡು ಮಂದಿ; ಇಪ್ಪತ್ತನೆಯದು ಎಲೀಯಾತನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಇಪ್ಪತ್ತೊಂದನೆಯದು ಹೋತೀ ರನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ; ಇಪ್ಪತ್ತೆರಡನೆಯದು ಗಿದ್ದಲ್ತಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಇಪ್ಪತ್ತು ಮೂರನೆಯದು ಮಹಜೀಯೋತನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;ಇಪ್ಪತ್ತು ನಾಲ್ಕನೆಯದು ರೊಮಮ್ತಿಯೇಜರ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ. ಇಪ್ಪತ್ತು ನಾಲ್ಕನೆಯದು ರೊಮಮ್ತಿಯೇಜರ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ.
- 1 Chronicles 9:29 1 ಪೂರ್ವಕಾಲವೃತ್ತಾಂತ 9:29ಅವರಲ್ಲಿ ಕೆಲವರು ಸಾಮಾನುಗಳನ್ನೂ ಪರಿಶುದ್ಧಸ್ಥಾನದಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಯವಾದ ಹಿಟ್ಟನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಸಾಂಬ್ರಾಣಿಯನ್ನೂ ಸುಗಂಧದ್ರವ್ಯಗಳನ್ನೂ ಕಾಯಲು ನೇಮಿಸಲ್ಪಟ್ಟಿದ್ದರು.
- 1 Kings 7:1–51 1 ಅರಸುಗಳು 7:1–51ಇದಲ್ಲದೆ ಸೊಲೊಮೋನನು ತನ್ನ ಮನೆಯನ್ನು ಹದಿಮೂರು ವರುಷಗಳಲ್ಲಿ ಕಟ್ಟಿಸಿ ಅದನ್ನೆಲ್ಲಾ ಮುಗಿಸಿದನು. ಇದಲ್ಲದೆ ಅವನು ಲೆಬ ನೋನಿನ ಅಡವಿಯ ಮನೆಯನ್ನು ಕಟ್ಟಿಸಿದನು. ಅದು ನೂರು ಮೊಳ ಉದ್ದವೂ ಐವತ್ತು ಮೊಳ ಅಗಲವೂ ಮೂವತ್ತು ಮೊಳ ಎತ್ತರವೂ ಆಗಿತ್ತು; ನಾಲ್ಕು ಸಾಲು ದೇವದಾರು ಕಂಭಗಳ ಮೇಲೆ ಇತ್ತು; ದೇವದಾರು ತೊಲೆಗಳು ಕಂಭಗಳ ಮೇಲೆ ಇದ್ದವು. ಒಂದೊಂದು ಸಾಲು ಹದಿನೈದು ಕಂಭಗಳಾಗಿ ನಾಲ್ವತ್ತೈದು ಕಂಭ ಗಳ ಮೇಲೆ ಇರುವ ತೊಲೆಗಳು ದೇವದಾರುಗಳಿಂದ ಮುಚ್ಚಲ್ಪಟ್ಟವು. ಮೂರು ಸಾಲು ಕಿಟಿಕಿಗಳು ಇದ್ದವು; ಮೂರು ಸಾಲುಗಳಲ್ಲಿ ಬೆಳಕಿಗೆ ಬೆಳಕು ಎದುರಾಗಿತ್ತು. ಕಿಟಿಕಿಗಳಲ್ಲಿ ಬಾಗಲುಗಳೂ ನಿಲುವುಗಳೂ ಎಲ್ಲಾ ಚೌಕವು; ಮೂರು ಸಾಲುಗಳಲ್ಲಿ ಬೆಳಕಿಗೆ ಬೆಳಕು ಎದುರಾಗಿತ್ತು. ಐವತ್ತು ಮೊಳ ಉದ್ದವೂ ಮೂವತ್ತು ಮೊಳ ಅಗಲವೂ ಆದ ದ್ವಾರಾಂಗಳವನ್ನು ಸ್ತಂಭಗಳಿಂದ ಮಾಡಿದನು. ಈ ದ್ವಾರಾಂಗಳವೂ ಅದರ ಸ್ತಂಭಗಳೂ ತೊಲೆಗಳೂ ಮನೆಯ ಸ್ತಂಭಗಳಿಗೂ ತೊಲೆಗಳಿಗೂ ಎದುರಾಗಿದ್ದವು. ಅಲ್ಲಿ ನ್ಯಾಯತೀರಿಸಲು ನ್ಯಾಯಾ ಸನದ ದ್ವಾರಾಂಗಗಳೆಂಬ ದ್ವಾರಾಂಗಳವನ್ನು ಮಾಡಿ ಈ ಪಾರ್ಶ್ವದಿಂದ ಆ ಪಾರ್ಶ್ವದ ವರೆಗೂ ದೇವದಾರು ಗಳನ್ನು ಹೊದಿಸಿದನು. ತಾನು ವಾಸವಾಗಿರುವ ತನ್ನ ಮನೆಯಲ್ಲಿ ದ್ವಾರಾಂಗ ಳದ ಒಳಭಾಗದಲ್ಲಿ ಈ ಕೆಲಸದ ಹಾಗೆ ಮಾಡಲ್ಪಟ್ಟ ಬೇರೆ ಒಂದು ಅಂಗಳ ಇತ್ತು. ಇದಲ್ಲದೆ ಸೊಲೊ ಮೋನನು ತಾನು ತಕ್ಕೊಂಡ ಫರೋಹನ ಮಗಳಿಗೂ ಈ ದ್ವಾರಾಂಗಳದ ಹಾಗೆ ಒಂದು ಮನೆಯನ್ನು ಮಾಡಿ ದನು. ಇವೆಲ್ಲಾ ಒಳಗೂ ಹೊರಗೂ ಅಸ್ತಿವಾರ ಗಳು ಮೊದಲುಗೊಂಡು ಕಬೋದದ ವರೆಗೂ ಹೊರ ಗಿರುವ ದೊಡ್ಡ ಅಂಗಳದ ಮಟ್ಟಿಗೂ ಅಳತೆಯ ಪ್ರಕಾರ ಗರಗಸದಿಂದ ಕೊಯ್ಯಲ್ಪಟ್ಟ ಕೆತ್ತಿದ ಬೆಲೆಯುಳ್ಳ ಕಲ್ಲು ಗಳಾಗಿದ್ದವು. ಅಸ್ತಿವಾರವು ಹತ್ತು ಮೊಳದ ಕಲ್ಲು ಗಳೂ ಎಂಟು ಮೊಳದ ಕಲ್ಲುಗಳೂ ಆದ ಬೆಲೆ ಯುಳ್ಳ ಕಲ್ಲುಗಳಾಗಿಯೂ ದೊಡ್ಡ ಕಲ್ಲುಗಳಾಗಿಯೂ ಇದ್ದವು. ಅದರ ಮೇಲೆ ಕೆತ್ತಿದ ಕಲ್ಲುಗಳ ಅಳ ತೆಯ ಪ್ರಕಾರ ಬೆಲೆಯುಳ್ಳ ಕಲ್ಲುಗಳೂ ದೇವದಾರುಗಳೂ ಇದ್ದವು. ದೊಡ್ಡ ಅಂಗಳವು ಸುತ್ತಲಾಗಿ ಮೂರು ತರ ಕೆತ್ತಿದ ಕಲ್ಲುಗಳೂ ಒಂದು ತರ ದೇವ ದಾರು ಮರದ ತೊಲೆಗಳೂ ಆಗಿದ್ದವು; ಕರ್ತನ ಮನೆಯ ಒಳ ಅಂಗಳಕ್ಕೂ ಮನೆಯ ದ್ವಾರಾಂಗಳಕ್ಕೂ ಹಾಗೆಯೇ ಇತ್ತು. ಆದರೆ ಅರಸನಾದ ಸೊಲೊಮೋನನು ಹೀರಾ ಮನನ್ನು ತೂರಿನಿಂದ ಕರೇಕಳುಹಿಸಿದನು. ಇವನು ನಫ್ತಾಲಿಯ ಗೋತ್ರದವಳಾದ ಒಬ್ಬ ವಿಧವೆಯ ಮಗನು; ಅವನ ತಂದೆ ತೂರಿನ ಮನುಷ್ಯನಾದ ತಾಮ್ರದ ಕೆಲಸದವನಾಗಿದ್ದನು; ಅವನು ತಾಮ್ರದ ಎಲ್ಲಾ ಕೆಲಸವನ್ನು ಮಾಡತಕ್ಕ ಜ್ಞಾನ ದಿಂದಲೂ ಗ್ರಹಿಕೆಯಿಂದಲೂ ತಿಳುವಳಿಕೆಯಿಂದಲೂ ಪೂರ್ಣನಾಗಿದ್ದನು. ಅವನು ಅರಸನಾದ ಸೊಲೊ ಮೋನನ ಬಳಿಗೆ ಬಂದು ಅವನ ಕೆಲಸವನ್ನೆಲ್ಲಾ ಮಾಡಿದನು. ಅವನು ಎರಡು ತಾಮ್ರದ ಸ್ತಂಭಗಳನ್ನು ಮಾಡಿ ದನು. ಒಂದೊಂದು ಸ್ತಂಭ ಹದಿನೆಂಟು ಮೊಳ ಉದ್ದ; ಒಂದೊಂದು ಸ್ತಂಭದ ಸುತ್ತಳತೆ ಹನ್ನೆರಡು ಮೊಳ ಇತ್ತು. ಆ ಸ್ತಂಭಗಳ ತಲೆಯಲ್ಲಿ ಇರಿಸಲು ತಾಮ್ರ ದಿಂದ ಎರಕ ಹೊಯ್ಯಲ್ಪಟ್ಟ ಎರಡು ಕುಂಭಗಳನ್ನು ಮಾಡಿದನು. ಒಂದೊಂದು ಕುಂಭವು ಐದು ಮೊಳ ಎತ್ತರವಾಗಿತ್ತು; ಸ್ತಂಭಗಳ ಕೊನೆಯಲ್ಲಿ ಇರುವ ಕುಂಭ ಗಳಿಗೆ ಜಾಲರಿನ ಹಾಗೆ ಇರುವ ಹಣತೆಗಳೂ ಸರ ಪಣಿಗಳ ಹಾಗಿರುವ ಗೊಂಡೆಗಳೂ ಇದ್ದವು. ಅವು ಒಂದೊಂದು ಕಂಭಕ್ಕೆ ಏಳೇಳು ಇದ್ದವು. ಸ್ತಂಭ ಗಳಿಗೆ ಇನ್ನೂ ಮಾಡಿದ್ದು ಹೇಗಂದರೆ, ಕೊನೆಯಲ್ಲಿ ರುವ ಕುಂಭಗಳನ್ನು ಮುಚ್ಚುವ ಹಾಗೆ ಕುಂಭಗಳೊಳಗೆ ಒಂದೊಂದರಲ್ಲಿ ಜಾಲರಿ ಕೆಲಸದ ಮೇಲೆ ಸುತ್ತಲೂ ಎರಡು ಸಾಲು ದಾಳಿಂಬದ ಹಣ್ಣುಗಳನ್ನು ಮಾಡಿದನು. ದ್ವಾರಾಂಗಳದ ಮುಂದಿರುವ ಆ ಸ್ತಂಭಗಳ ಕೊನೆಯ ಮೇಲಿರುವ ಕುಂಭಗಳು ತಾವರೆ ಪುಷ್ಟಗಳ ಕೆಲಸವಾಗಿ ನಾಲ್ಕು ಮೊಳ ಎತ್ತರವಾಗಿದ್ದವು. ಎರಡು ಸ್ತಂಭಗಳ ಮೇಲಿರುವ ಕುಂಭಗಳಲ್ಲಿ ಉನ್ನತ ಜಾಲರಿಯ ಕೆಲಸದ ಸವಿಾಪದಲ್ಲಿರುವ ಅದರ ಹೊಟ್ಟೆಯ ಎದುರಾಗಿ ಇನ್ನೂರು ದಾಳಿಂಬಗಳು ಸಾಲುಗಳಾಗಿ ಸುತ್ತಲೂ ಇದ್ದವು; ಮತ್ತೊಂದು ಕುಂಭಕ್ಕೂ ಹೀಗೆಯೇ ಇತ್ತು. ಆ ಸ್ತಂಭಗಳನ್ನು ಮಂದಿರದ ದ್ವಾರಾಂಗಳದ ಮುಂದೆ ನಿಲ್ಲಿಸಿದನು. ಅವನು ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್ ಎಂದೂ ಎಡಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಬೋವಜ್ ಎಂದೂ ಹೆಸರಿಟ್ಟನು. ಸ್ತಂಭಗಳ ತಲೆ ಯಲ್ಲಿ ತಾವರೆ ಪುಷ್ಪಗಳ ಕೆಲಸವಾಗಿತ್ತು. ಹೀಗೆ ಸ್ತಂಭಗಳ ಕೆಲಸವು ಮುಗಿಯಿತು. ಇದಲ್ಲದೆ ಎರಕದ ಸಮುದ್ರವನ್ನು ಮಾಡಿದನು. ಅದು ದುಂಡಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳವೂ ಅದರ ಎತ್ತರ ಐದು ಮೊಳವೂ ಸುತ್ತಳತೆ ಮೂವತ್ತು ಮೊಳವೂ ಆಗಿತ್ತು. ಅದರ ಅಂಚಿನ ಕೆಳ ಭಾಗದಲ್ಲಿ ಅದರ ಸುತ್ತಲೂ ಮೊಗ್ಗುಗಳಿದ್ದವು. ಅವು ಒಂದೊಂದು ಮೊಳಕ್ಕೆ ಹತ್ತಾಗಿ ಆ ಸಮುದ್ರದ ಸುತ್ತಲೂ ಇದ್ದವು. ಈ ಸಮುದ್ರವು ಎರಕ ಹೊಯ್ಯಲ್ಪಡು ವಾಗ ಮೊಗ್ಗುಗಳು ಎರಡು ಸಾಲಾಗಿ ಎರಕ ಹೊಯ್ಯಲ್ಪ ಟ್ಟಿದ್ದವು. ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ ಮೂರು ಪಶ್ಚಿಮಕ್ಕೂ ಮೂರು ದಕ್ಷಿಣಕ್ಕೂ ಮೂರು ಪೂರ್ವಕ್ಕೂ ನೋಡುತ್ತಾ ಇದ್ದವು. ಆ ಸಮುದ್ರವು ಅವುಗಳ ಮೇಲೆ ಇತ್ತು; ಅವುಗಳ ಹಿಂಭಾಗಗಳೆಲ್ಲಾ ಒಳಪಾರ್ಶ್ವದಲ್ಲಿ ಇದ್ದವು. ಅದರ ದಪ್ಪವು ಕೈಯಷ್ಟಾಗಿಯೂ ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ ತಾವರೆ ಪುಷ್ಪದ ಹಾಗೆಯೂ ಇತ್ತು. ಅದು ಎರಡು ಸಾವಿರ ಕೊಳಗ ಹಿಡಿಯು ವದಾಗಿತ್ತು. ಹತ್ತು ತಾಮ್ರದ ಆಧಾರಗಳನ್ನು ಮಾಡಿದನು. ಒಂದೊಂದು ಆಧಾರವು ನಾಲ್ಕು ಮೊಳ ಉದ್ದವೂ ನಾಲ್ಕು ಮೊಳ ಅಗಲವೂ ಮೂರು ಮೊಳ ಎತ್ತರವೂ ಆಗಿತ್ತು. ಆ ಆಧಾರಗಳ ಮೇಲಿರುವ ಕೆಲಸ ಹೇಗಂದರೆ, ಅವುಗಳಿಗೆ ಅಂಚುಗಳಿದ್ದವು. ಅಂಚುಗಳು ಹಲಿಗೆಗಳ ನಡುವೆ ಇದ್ದವು. ಹಲಿಗೆಗಳ ನಡುವೆ ಇರುವ ಆ ಅಂಚುಗಳಲ್ಲಿ ಸಿಂಹಗಳೂ ಎತ್ತುಗಳೂ ಕೆರೂಬಿಗಳೂ ಇದ್ದವು. ಹಲಿಗೆಗಳ ಮೇಲ್ಭಾಗದಲ್ಲಿ ಒಂದು ಅಂಚು ಇತ್ತು; ಸಿಂಹಗಳಿಗೂ ಎತ್ತುಗಳಿಗೂ ಕೆಳಭಾಗದಲ್ಲಿ ಕೆರೂಬಿಗಳ ಕೆಲಸಗಳು ಅದರ ಸಂಗಡ ಇದ್ದವು. ಒಂದೊಂದು ಆಧಾರಕ್ಕೆ ನಾಲ್ಕು ತಾಮ್ರದ ಗಾಲಿಗಳೂ ತಾಮ್ರದ ತಗಡುಗಳೂ ಇದ್ದವು. ಅದರ ನಾಲ್ಕು ಮೂಲೆಗಳಿಗೂ ಜೋಡಣೆಗಳಿದ್ದವು. ಸಮು ದ್ರದ ಕೆಳಗೆ ಇರುವ ಪ್ರತಿ ಕೆರೂಬಿಯ ಬಳಿಯಲ್ಲೂ ಎರಕ ಹೊಯ್ಯಲ್ಪಟ್ಟ ಜೋಡಣೆಗಳಿದ್ದವು. ಅಂಚಿಗೆ ಒಳಗಾದ ಅದರ ಬಾಯಿಯ ಮೇಲೆ ಒಂದು ಮೊಳ ಉದ್ದವಾಗಿತ್ತು. ಅದರ ಬಾಯಿ ದುಂಡಾಗಿ ಒಂದೂವರೆ ಮೊಳವಾಗಿತ್ತು; ಅದರ ಬಾಯಿಯ ಮೇಲೆ ಚಿತ್ರ ಗಳಿದ್ದವು; ಅದರ ಚಿತ್ರಗಳು ದುಂಡಾಗಿರದೆ ಚೌಕ ವಾಗಿದ್ದವು. ಅಂಚುಗಳ ಕೆಳಗೆ ನಾಲ್ಕು ಗಾಲಿಗಳಿದ್ದವು; ಗಾಲಿಗಳ ಅಚ್ಚುಗಳು ಆಧಾರದಲ್ಲಿದ್ದವು. ಒಂದೊಂದು ಗಾಲಿಯು ಒಂದೂವರೆ ಮೊಳವಾಗಿತ್ತು; ಗಾಲಿಗಳ ಮೇಲೆ ಇದ್ದ ಕೆಲಸವು ರಥದ ಗಾಲಿಯ ಕೆಲಸದ ಹಾಗೆ ಇತ್ತು. ಅವುಗಳ ಇರುಸುಗಳೂ ಅಣಸುಗಳೂ ಚಕ್ರಗಳೂ ಕಂಬಿಗಳೂ ಎಲ್ಲಾ ಎರಕ ಹೊಯ್ಯಲ್ಪಟ್ಟಿದ್ದವು. ಒಂದೊಂದು ಆಧಾರದ ನಾಲ್ಕು ಮೂಲೆಗಳಲ್ಲಿ ಅಂಚುಗಳಿದ್ದವು; ಆಧಾರದಲ್ಲಿಂದಲೇ ಅಂಚುಗಳು ಆದವು. ಆಧಾರದ ತಲೆಯಲ್ಲಿ ಒಂದು ವರೆ ಮೊಳ ದುಂಡಾದದ್ದು ಒಂದು ಇತ್ತು; ಆಧಾರದ ತಲೆಯ ಮೇಲೆ ಅದರ ಕೈಪಿಡಿಗಳೂ ಅಂಚುಗಳೂ ಅದರಿಂದಲೇ ಆಗಿದ್ದವು. ಅದರದರ ಪ್ರಮಾಣದ ಪ್ರಕಾರ ಹಲಿಗೆಗಳ ಕೈಹಿಡಿಗಳ ಮೇಲೆಯೂ ಅಂಚು ಗಳ ಮೇಲೆಯೂ ಕೆರೂಬಿಗಳನ್ನೂ ಸಿಂಹಗಳನ್ನೂ ಖರ್ಜೂರ ಗಿಡಗಳನ್ನೂ ಚಿತ್ರಿಸಿದನು; ಸುತ್ತಲೂ ಅದ ರದರ ಪ್ರಮಾಣದ ಪ್ರಕಾರ ಚಿತ್ರಿಸಿದನು. ಈ ಪ್ರಕಾರ ಆ ಹತ್ತು ಆಧಾರಗಳನ್ನು ಮಾಡಿದನು. ಅವು ಗಳಿಗೆಲ್ಲಾ ಒಂದೇ ಎರಕವೂ ಒಂದೇ ಅಳತೆಯೂ ಒಂದೇ ಪ್ರಮಾಣವೂ ಆಗಿದ್ದವು. ಹತ್ತು ತಾಮ್ರದ ತೊಟ್ಟಿಗಳನ್ನು ಮಾಡಿದನು. ಒಂದೊಂದು ತೊಟ್ಟಿಯು ನಾಲ್ವತ್ತು ಕೊಳಗ ಹಿಡಿಯಿತು; ಒಂದೊಂದು ತೊಟ್ಟಿಯು ನಾಲ್ಕು ಮೊಳವು; ಆ ಹತ್ತು ಆಧಾರ ಗಳಲ್ಲಿಯೂ ಒಂದೊಂದರ ಮೇಲೆ ಒಂದೊಂದು ತೊಟ್ಟಿಯನ್ನು ಇಟ್ಟನು. ಮನೆಯ ಬಲ ಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಮನೆಯ ಎಡಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಇಟ್ಟನು. ಆದರೆ ಸಮುದ್ರವನ್ನು ಮನೆಯ ಪೂರ್ವ ಭಾಗದ ಬಲಪಾರ್ಶ್ವದಲ್ಲಿ ದಕ್ಷಿಣಕ್ಕೆ ದುರಾಗಿ ಇಟ್ಟನು. ಹೀಗೆಯೇ ಹೀರಾಮನು ತೊಟ್ಟಿ ಗಳನ್ನೂ ಸಲಿಕೆಗಳನ್ನೂ ಪಾತ್ರೆಗಳನ್ನೂ ಮಾಡಿದನು. ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನು ಮಾಡಿಸಿದ ಎಲ್ಲಾ ಕೆಲಸಗಳನ್ನು ಮಾಡಿ ತೀರಿಸಿದನು. ಅವು ಯಾವವಂದರೆ, ಎರಡು ಸ್ತಂಭಗಳೂ ಎರಡು ಸ್ತಂಭಗಳ ತುದಿಯಲ್ಲಿರುವ ಕುಂಭಗಳ ಚಂಬು ಗಳೂ ಎರಡು ಸ್ತಂಭಗಳ ತಲೆಯಲ್ಲಿರುವ ಕುಂಭಗಳ ಎರಡು ಚಂಬುಗಳನ್ನು ಮುಚ್ಚುವ ಎರಡು ಜಾಲರಿ ಸಾಮಾನುಗಳೂ ಎರಡು ಜಾಲರಿಗಳಿಗೆ ನಾನೂರು ದಾಳಿಂಬಗಳೂ ಸ್ತಂಭಗಳ ಮೇಲೆ ಇರುವ ಎರಡು ಚಂಬುಗಳನ್ನು ಮುಚ್ಚುವಂತೆ ಒಂದು ಜಾಲರಿಗೆ ಎರಡು ಸಾಲಿನ ದಾಳಿಂಬಗಳೂ ಹತ್ತು ಆಧಾರಗಳೂ ಆಧಾ ರಗಳ ಮೇಲಿರುವ ಹತ್ತು ತೊಟ್ಟಿಗಳೂ ಒಂದು ಸಮುದ್ರವೂ ಸಮುದ್ರದ ಕೆಳಗಿರುವ ಹನ್ನೆರಡು ಎತ್ತು ಗಳೂ ಪಾತ್ರೆಗಳೂ ಸಲಿಕೆಗಳೂ ಬೋಗುಣಿಗಳೂ. ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನಿಗೆ ಮಾಡಿದ ಈ ಸಾಮಾನುಗಳೆಲ್ಲಾ ಹೊಳೆಯುವ ತಾಮ್ರದವುಗಳಾಗಿದ್ದವು. ಯೊರ್ದ ನಿಗೆ ಸೇರಿದ ಬೈಲಾದ ಸುಕ್ಕೋತಿಗೂ ಚಾರೆತಾನಿಗೂ ನಡುವೆ ಇರುವ ಜೇಡು ಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯ್ಸಿದನು. ಈ ಪಾತ್ರೆಗ ಳೆಲ್ಲಾ ಬಹು ಹೆಚ್ಚಾಗಿದ್ದದರಿಂದ ಸೊಲೊಮೋನನು ಅವುಗಳನ್ನು ಎಣಿಸದೆ ಬಿಟ್ಟನು; ತಾಮ್ರದ ತೂಕವು ಗೊತ್ತಾಗಲಿಲ್ಲ. ಇದಲ್ಲದೆ ಕರ್ತನ ಮನೆಗೆ ಸಂಬಂಧವಾದ ಪಾತ್ರೆ ಗಳನ್ನೆಲ್ಲಾ ಸೊಲೊಮೋನನು ಮಾಡಿಸಿದನು; ಯಾವ ವಂದರೆ, ಚಿನ್ನದ ಧೂಪದ ವೇದಿ, ಸಮ್ಮುಖದ ರೊಟ್ಟಿ ಗಳನ್ನು ಇಡುವದಕ್ಕೆ ಚಿನ್ನದ ಮೇಜು, ದೈವೋಕ್ತಿಯ ಸ್ಥಾನದ ಮುಂಭಾಗದ ಬಲಪಾರ್ಶ್ವದಲ್ಲಿ ಐದು, ಎಡ ಪಾರ್ಶ್ವದಲ್ಲಿ ಐದು, ಅಪರಂಜಿಯ ದೀಪ ಸ್ತಂಭಗಳು, ಚಿನ್ನದ ಅದರ ಹೂವುಗಳು, ದೀಪಗಳು, ಚಿಮಟಗಳು, ಅಪರಂಜಿಯ ತಂಬಿಗೆಗಳು, ಕತ್ತರಿಗಳು, ಸಲಿಕೆಗಳು, ಸೌಟುಗಳು, ಅಗ್ನಿ ಪಾತ್ರೆಗಳು, ಮಹಾಪರಿಶುದ್ಧ ಸ್ಥಳ ವಾದ ಒಳಗಿನ ಮನೆಯ ಕದಗಳಿಗೋಸ್ಕರವೂ ಮಂದಿ ರವೆಂಬ ಮನೆಯ ಕದಗಳಿಗೋಸ್ಕರವೂ ಬಂಗಾರದ ಕೀಲುಗಳನ್ನೆಲ್ಲಾ ಮಾಡಿಸಿದನು.ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು. ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.
- Ezra 8:33 ಎಜ್ರನು 8:33ಅವನ ಸಂಗಡ ಲೇವಿ ಯರಾದ ಫಿನೇಹಾಸನ ಮಗನಾಗಿರುವ ಎಲ್ಲಾಜಾ ರನೂ ಯೇಷೂವನ ಮಗನಾದ ಯೋಜಾಬಾದನೂ ಬಿನ್ನೂಯ ಮಗನಾದ ನೋವದ್ಯನೂ ಇದ್ದರು.
- Ezra 8:25–30 ಎಜ್ರನು 8:25–30ಅರಸನೂ ಅವನ ಸಲಹೆಗಾರರೂ ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ ಬಂಗಾರವನ್ನೂ ಸಾಮಾನುಗಳನ್ನೂ ಅವರಿಗೆ ತೂಗಿ ಕೊಟ್ಟೆನು. ಅವರ ಕೈಯಲ್ಲಿ ನಾನು ಆರುನೂರ ಐವತ್ತು ತಲಾಂತು ಬೆಳ್ಳಿಯನ್ನೂ ನೂರು ತಲಾಂತು ತೂಕವಾದ ಬೆಳ್ಳಿಯ ಪಾತ್ರೆಗ ಳನ್ನೂ ನೂರು ತಲಾಂತು ಬಂಗಾರವನ್ನೂ ಸಾವಿರ ಪವನು ಬೆಲೆಯುಳ್ಳ ಇಪ್ಪತ್ತು ಬಂಗಾರದ ಬಟ್ಟಲು ಗಳನ್ನು ಬಂಗಾರದ ಹಾಗೆ ಅಮೂಲ್ಯವಾದಂಥಾ ಥಳ ಥಳಿಸುವಂಥಾ ಒಳ್ಳೇ ತಾಮ್ರದ ಎರಡು ಪಾತ್ರೆಗ ಳನ್ನೂ ತೂಗಿಕೊಟ್ಟೆನು. ನಾನು ಅವರಿಗೆ--ನೀವು ಕರ್ತನಿಗೆ ಪರಿಶುದ್ಧರಾಗಿದ್ದೀರಿ. ಈ ಸಾಮಾನುಗಳು ಹಾಗೆಯೇ ಪರಿಶುದ್ಧವು. ಈ ಬೆಳ್ಳಿ ಬಂಗಾರವು ನಿಮ್ಮ ತಂದೆಗಳ ದೇವರಾಗಿರುವ ಕರ್ತನಿಗೆ ಉಚಿತಾರ್ಥ ವಾದ ಅರ್ಪಣೆಯಾಗಿದೆ. ನೀವು ಯೆರೂಸಲೇಮಿ ನಲ್ಲಿ ಕರ್ತನ ಆಲಯದ ಕೊಠಡಿಗಳೊಳಗೆ ಯಾಜಕರ ಲೇವಿಯರ ಪ್ರಧಾನರ ಮುಂದೆಯೂ ಇಸ್ರಾಯೇಲ್ ಪಿತೃಗಳ ಪ್ರಧಾನರ ಮುಂದೆಯೂ ತೂಗುವ ವರೆಗೆ ಜಾಗ್ರತೆಯಾಗಿ ಕಾಪಾಡಿರಿ ಅಂದನು. ಹಾಗೆಯೇ ಯಾಜಕರೂ ಲೇವಿಯರೂ ತೂಕದ ಹಾಗೆ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಯೆರೂಸಲೇಮಿನಲ್ಲಿರುವ ನಮ್ಮ ದೇವರ ಆಲಯಕ್ಕೆ ತೆಗೆದುಕೊಂಡು ಬಂದರು.