1 Chronicles · chapter 28 · verse 18
1 Chronicles 28:18 in Kannada
ಇದಲ್ಲದೆ ಧೂಪಪೀಠಕ್ಕೋಸ್ಕರ ಬಂಗಾರವನ್ನೂ ರೆಕ್ಕೆಗಳನ್ನೂ ಚಾಚಿಕೊಂಡು ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಮುಚ್ಚುವ ಕೆರೂಬಿಗಳ ರಥದ ಮಾದರಿಗೋಸ್ಕರ ಬಂಗಾರವನ್ನೂ ತೂಗಿಕೊಟ್ಟನು.
Idallade dhoopapeethakkoskara bangaaravannoo rekkegalannoo chaachikondu kartana odambadikeya manjoosha vannu muchchuva keroobigala rathada maadarigoskara bangaaravannoo toogikottanu.
1 Chronicles 28:18 in English
- King James Version (KJV)
- And for the altar of incense refined gold by weight; and gold for the pattern of the chariot of the cherubims, that spread out [their wings], and covered the ark of the covenant of the LORD.
- World English Bible (WEB)
- and for the altar of incense, refined gold by weight; and gold for the plans for the chariot, and the cherubim that spread out and cover the ark of the LORD’s covenant.
- American Standard Version (ASV)
- and for the altar of incense refined gold by weight; and gold for the pattern of the chariot, [even] the cherubim, that spread out [their wings], and covered the ark of the covenant of Jehovah.
- Bible in Basic English (BBE)
- And the best gold for the altar of perfumes; and gold for the design of the carriage, for the winged ones whose wings were outstretched covering the ark of the Lord's agreement.
- Darby Translation (DBY)
- and for the altar of incense, refined gold by weight; and the pattern of the chariot of the cherubim of gold, which spread out [their wings] and cover the ark of the covenant of Jehovah.
- Webster's Bible (WBS)
- And for the altar of incense refined gold by weight; and gold for the pattern of the chariot of the cherubim, that spread out [their wings] , and covered the ark of the covenant of the LORD.
- Young's Literal Translation (YLT)
- and for the altar of perfume refined gold by weight, and for the pattern of the chariot of the cherubs of gold — spreading and covering over the ark of the covenant of Jehovah.
Read in context
- 16ಆ ಪ್ರಕಾರವೇ ಸಮ್ಮುಖದ ರೊಟ್ಟಿಗಳ ಮೇಜುಗಳಿ ಗೋಸ್ಕರ ಒಂದೊಂದು ಮೇಜಿಗೆ ತೂಗಿಕೊಟ್ಟನು; ಬೆಳ್ಳಿಯ ಮೇಜುಗಳಿಗೋಸ್ಕರ ಹಾಗೆಯೇ ಬೆಳ್ಳಿಯನ್ನು ತೂಗಿಕೊಟ್ಟನು.
- 17ಅದೇ ಪ್ರಕಾರ ಮುಳ್ಳುಗಳೂ ಪಾತ್ರೆಗಳೂ ಹೂಜೆಗಳೂ ಇವುಗಳಿಗೋಸ್ಕರ ಚೊಕ್ಕ ಬಂಗಾರವನ್ನು ಕೊಟ್ಟನು. ಬಂಗಾರದ ಬಟ್ಟಲುಗಳಿ ಗೋಸ್ಕರ ಒಂದೊಂದು ಬಟ್ಟಲಿಗೋಸ್ಕರ ಅದರ ತೂಕವಾಗಿಯೂ ಬೆಳ್ಳಿಯ ಒಂದೊಂದು ಬಟ್ಟಲಿಗೋ ಸ್ಕರ ಅದರ ತೂಕವಾಗಿಯೂ ಕೊಟ್ಟನು.
- 18ಇದಲ್ಲದೆ ಧೂಪಪೀಠಕ್ಕೋಸ್ಕರ ಬಂಗಾರವನ್ನೂ ರೆಕ್ಕೆಗಳನ್ನೂ ಚಾಚಿಕೊಂಡು ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಮುಚ್ಚುವ ಕೆರೂಬಿಗಳ ರಥದ ಮಾದರಿಗೋಸ್ಕರ ಬಂಗಾರವನ್ನೂ ತೂಗಿಕೊಟ್ಟನು.
- 19ಕರ್ತನು ತನ್ನ ಕೈ ನನ್ನ ಮೇಲೆ ಇರಿಸಿ ಈ ಮಾದರಿಯ ಕೆಲಸಗಳನ್ನೆಲ್ಲಾ ನನಗೆ ತಿಳಿಯುವಂತೆ ಮಾಡಿದನು ಅಂದನು.
- 20ದಾವೀದನು ತನ್ನ ಮಗನಾದ ಸೊಲೊಮೋನ ನಿಗೆ ಹೇಳಿದ್ದೇನಂದರೆ--ನೀನು ಬಲಗೊಂಡು ದೃಢ ಪಟ್ಟು ಮಾಡು; ಭಯಪಡಬೇಡ, ಹೆದರಬೇಡ; ಯಾಕಂದರೆ ನನ್ನ ದೇವರಾಗಿರುವ ಕರ್ತನಾದ ದೇವರು ನಿನ್ನ ಸಂಗಡ ಇರುವನು. ಕರ್ತನ ಮನೆಯ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವ ವರೆಗೂ ಆತನು ನಿನ್ನನ್ನು ವಿಸರ್ಜಿಸುವದಿಲ್ಲ, ಕೈ ಬಿಡುವದಿಲ್ಲ.ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.
Cross references
- Exodus 25:18–22 ವಿಮೋಚನಕಾಂಡ 25:18–22ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು. ಈ ಬದಿಯಲ್ಲಿ ಒಂದು ಕೆರೂಬಿಯನ್ನೂ ಆ ಬದಿಯಲ್ಲಿ ಮತ್ತೊಂದು ಕೆರೂಬಿಯನ್ನೂ ಹೀಗೆ ಕರುಣಾಸನದ ಮೇಲೆಯೇ ಎರಡೂ ಬದಿಗಳಲ್ಲಿ ಮಾಡಬೇಕು. ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು. ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು. ಕರುಣಾಸನ ವನ್ನು ಮಂಜೂಷದ ಮೇಲೆ ಇಡಬೇಕು ಮತ್ತು ನೀನು ಮಂಜೂಷದಲ್ಲಿ ನಾನು ನಿನಗೆ ಕೊಡುವ ಸಾಕ್ಷಿ ಹಲಗೆಗಳನ್ನು ಇಡಬೇಕು. ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು.
- Exodus 30:1–10 ವಿಮೋಚನಕಾಂಡ 30:1–10ನೀನು ಧೂಪ ಸುಡುವ ವೇದಿಯನ್ನು ಮಾಡಬೇಕು; ಜಾಲೀ ಮರದಿಂದ ಅದನ್ನು ಮಾಡಬೇಕು. ಅದರ ಉದ್ದ ಒಂದು ಮೊಳ, ಅಗಲ ಒಂದು ಮೊಳ, ಎತ್ತರ ಎರಡು ಮೊಳ ಇದ್ದು ಅದು ಚಚ್ಚೌಕವಾಗಿರಬೇಕು. ಅದಕ್ಕೆ ಕೊಂಬುಗಳನ್ನು ಅದ ರಿಂದಲೇ ಮಾಡಬೇಕು. ಮೇಲ್ಭಾಗವನ್ನೂ ಸುತ್ತಲಿನ ಭಾಗಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು. ಗೋಟಿನ ಕೆಳಗೆ ಎರಡೂ ಪಕ್ಕಗಳ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡ ಬೇಕು. ಇವುಗಳನ್ನು ಹೊರುವದಕ್ಕಾಗಿ ಅವುಗಳಲ್ಲಿ ಸಿಕ್ಕಿಸಬೇಕು. ಆ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು. ಪ್ರತಿದಿನ ಬೆಳಿಗ್ಗೆ ಆರೋನನು ಪರಿಮಳ ಧೂಪ ವನ್ನು ಅದರ ಮೇಲೆ ಸುಡಬೇಕು. ಅವನು ದೀಪಗಳನ್ನು ಸಿದ್ಧಮಾಡುವಾಗ ಪರಿಮಳ ಧೂಪವನ್ನು ಅದರ ಮೇಲೆ ಸುಡಬೇಕು. ಆರೋನನು ಸಾಯಂಕಾಲ ದೀಪಗಳನ್ನು ಅಂಟಿಸುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಕರ್ತನ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪ ವು. ನೀವು ಅದರ ಮೇಲೆ ಬೇರೆ ಧೂಪವನ್ನಾಗಲಿ ದಹನಬಲಿಗಳನ್ನಾಗಲಿ ಆಹಾರಾರ್ಪಣೆಯನ್ನಾಗಲಿ ಅರ್ಪಿಸಬಾರದು. ಇಲ್ಲವೆ ಪಾನಾರ್ಪಣೆಯನ್ನು ಅದರ ಮೇಲೆ ಹೊಯ್ಯಬಾರದು. ಆರೋನನು ಅದರ ಕೊಂಬುಗಳಿಗೆ ವರುಷಕ್ಕೆ ಒಂದು ಸಾರಿ ಪ್ರಾಯಶ್ಚಿತ್ತದ ಬಲಿಯ ರಕ್ತದಿಂದ ಪ್ರಾಯಶ್ಚಿತ್ತ ಮಾಡಬೇಕು. ವರುಷಕ್ಕೊಂದು ಸಾರಿ ನಿಮ್ಮ ಸಂತತಿಗಳಲ್ಲೆಲ್ಲಾ ಅದನ್ನು ಮಾಡಬೇಕು. ಅದು ಕರ್ತನಿಗೆ ಅತಿಪರಿಶುದ್ಧವಾದದ್ದು.
- 1 Samuel 4:4 1 ಸಮುವೇಲನು 4:4ಹಾಗೆಯೇ ಜನರನ್ನು ಕೆರೂಬಿಗಳ ಮಧ್ಯ ದಲ್ಲಿರುವ ಸೈನ್ಯಗಳ ಕರ್ತನ ಒಡಂಬಡಿಕೆಯ ಮಂಜೂ ಷವನ್ನು ತಕ್ಕೊಂಡು ಬರುವಂತೆ ಶೀಲೋವಿಗೆ ಕಳು ಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು;
- 1 Kings 7:48 1 ಅರಸುಗಳು 7:48ಇದಲ್ಲದೆ ಕರ್ತನ ಮನೆಗೆ ಸಂಬಂಧವಾದ ಪಾತ್ರೆ ಗಳನ್ನೆಲ್ಲಾ ಸೊಲೊಮೋನನು ಮಾಡಿಸಿದನು; ಯಾವ ವಂದರೆ, ಚಿನ್ನದ ಧೂಪದ ವೇದಿ, ಸಮ್ಮುಖದ ರೊಟ್ಟಿ ಗಳನ್ನು ಇಡುವದಕ್ಕೆ ಚಿನ್ನದ ಮೇಜು, ದೈವೋಕ್ತಿಯ ಸ್ಥಾನದ ಮುಂಭಾಗದ ಬಲಪಾರ್ಶ್ವದಲ್ಲಿ ಐದು,
- Psalm 18:10 ಕೀರ್ತನೆಗಳು 18:10ಆತನು ಕೆರೂಬಿನ ಮೇಲೆ ಕೂತು ಹಾರಿದನು; ಹೌದು, ಗಾಳಿಯ ರೆಕ್ಕೆಗಳ ಮೇಲೆ ಹಾರಿದನು.
- Psalm 68:17 ಕೀರ್ತನೆಗಳು 68:17ದೇವರ ರಥಗಳು ಇಪ್ಪತ್ತು ಸಾವಿರವು, ಸಾವಿರಾರು ದೂತರು ಗಳು; ಕರ್ತನು ಸೀನಾಯಿಯಲ್ಲಿ ಇದ್ದ ಹಾಗೆ ಅವರೊಳಗೆ ಪರಿಶುದ್ಧ ಸ್ಥಳದಲ್ಲಿ ಇದ್ದಾನೆ.
- 1 Kings 6:23–30 1 ಅರಸುಗಳು 6:23–30ಅವನು ದೈವೋಕ್ತಿಯ ಸ್ಥಾನದಲ್ಲಿ ಇಪ್ಪೇ ಮರಗಳಿಂದ ಎರಡು ಕೆರೂಬಿಗಳನ್ನು ಮಾಡಿದನು. ಒಂದೊಂದು ಹತ್ತು ಮೊಳ ಎತ್ತರವಾಗಿತ್ತು. ಕೆರೂಬಿಯ ಒಂದೊಂದು ರೆಕ್ಕೆ ಐದು ಮೊಳವೂ ಮತ್ತೊಂದು ರೆಕ್ಕೆ ಐದು ಮೊಳವೂ ಆಗಿತ್ತು; ಒಂದು ರೆಕ್ಕೆಯ ಕೊನೆ ಮೊದಲುಗೊಂಡು ಮತ್ತೊಂದು ರೆಕ್ಕೆಯ ಕೊನೆಯ ವರೆಗೂ ಹತ್ತು ಮೊಳವಾಗಿತ್ತು. ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವೂ ಹತ್ತು ಮೊಳವಾಗಿತ್ತು. ಎರಡು ಕೆರೂಬಿಗಳಿಗೆ ಒಂದೇ ಅಳ ತೆಯೂ ಒಂದೇ ಆಕಾರವಿತ್ತು. ಒಂದು ಕೆರೂಬಿಯು ಹತ್ತು ಮೊಳ ಎತ್ತರವಾಗಿತ್ತು: ಇನ್ನೊಂದು ಕೆರೂಬಿಯು ಅದರ ಹಾಗೆಯೇ ಇತ್ತು. ಆ ಕೆರೂಬಿಗಳನ್ನು ಒಳ ಮನೆಯೊಳಗೆ ಇಟ್ಟನು. ಆ ಕೆರೂಬಿಗಳು ರೆಕ್ಕೆಗಳನ್ನು ಚಾಚಿರುವದರಿಂದ ಒಂದು ಕೆರೊಬಿಯ ರೆಕ್ಕೆಯು ಈ ಭಾಗದ ಗೋಡೆಯನ್ನೂ ಮತ್ತೊಂದು ಕೆರೂಬಿಯ ರೆಕ್ಕೆಯು ಆ ಭಾಗದ ಗೋಡೆಯನ್ನೂ ಮುಟ್ಟಿತು; ಮನೆಯ ಮಧ್ಯದಲ್ಲಿ ಒಂದರ ರೆಕ್ಕೆ ಮತ್ತೊಂದರ ರೆಕ್ಕೆಯನ್ನು ಮುಟ್ಟಿತು. ಆ ಕೆರೂಬಿಗಳನ್ನು ಚಿನ್ನದಿಂದ ಹೊದಿಸಿದನು. ಮನೆಯ ಗೋಡೆಗಳನ್ನೆಲ್ಲಾ ಅವನು ಸುತ್ತಲೂ ಒಳ ಹೊರ ಭಾಗಗಳಲ್ಲಿ ಕೆರೂಬಿಗಳನ್ನೂ ಖರ್ಜೂರದ ಗಿಡಗಳನ್ನೂ ವಿಕಸಿಸಿದ ಪುಷ್ಪಗಳನ್ನೂ ಕೆತ್ತಿದ ಕೆಲಸದಿಂದ ಮಾಡಿಸಿದನು. ಮನೆಯ ಒಳ ಹೊರ ಭಾಗವಾಗಿರುವ ನೆಲವನ್ನು ಚಿನ್ನದಿಂದ ಹೊದಿಸಿ ದನು.
- Hebrews 9:5 ಇಬ್ರಿಯರಿಗೆ 9:5ಅದರ ಮೇಲೆ ಪ್ರಭಾವದ ಕೆರೂಬಿ ಯರು ಕೃಪಾಸನವನ್ನು ಮುಚ್ಚಿಕೊಂಡಿದ್ದರು. ಸದ್ಯಕ್ಕೆ ಈ ವಿಷಯಗಳನ್ನು ಪ್ರತ್ಯೇಕವಾಗಿ ನಾವು ವಿವರಿಸು ವದಕ್ಕೆ ಆಗುವದಿಲ್ಲ.
- Psalm 99:1 ಕೀರ್ತನೆಗಳು 99:1ಕರ್ತನು ಆಳುತ್ತಾನೆ; ಜನಗಳು ನಡುಗಲಿ; ಆತನು ಕೆರೂಬಿಗಳ ಮಧ್ಯದಲ್ಲಿ ಕೂತಿ ದ್ದಾನೆ; ಭೂಮಿಯು ಕದಲಲಿ.
- Ezekiel 1:15–24 ಯೆಹೆಜ್ಕೇಲನು 1:15–24ಆಗ ನಾನು ಆ ಜೀವಿಗಳನ್ನು ನೋಡಲಾಗಿ ಇಗೋ, ಜೀವಿಗಳಿಂದ ಭೂಮಿಯ ಮೇಲೆ ಒಂದು ಚಕ್ರವು ನಾಲ್ಕು ಮುಖಗಳುಳ್ಳದ್ದಾಗಿ ರುವದನ್ನು ನೋಡಿದೆನು. ಆ ಚಕ್ರಗಳ ಆಕಾರವೂ ಅವುಗಳ ಕೆಲಸವೂ ಪೀತರತ್ನ ವರ್ಣದ ಹಾಗಿದೆ. ಆ ನಾಲ್ಕಕ್ಕೆ ಒಂದೇ ರೂಪವಿದ್ದು ಅವುಗಳ ಆಕಾರವೂ ಅವುಗಳ ಕೆಲಸವೂ ಚಕ್ರದ ಮಧ್ಯದೊಳಗೆ ಚಕ್ರವು ಇದ್ದ ಹಾಗಿತ್ತು. ಅವು ಹೋಗುವಾಗ ತಮ್ಮ ನಾಲ್ಕು ಪಕ್ಕೆಗಳ ಮೇಲೆ ಹೋದವು, ಅವು ಹೋಗುವಾಗ ಹಿಂತಿರುಗಲಿಲ್ಲ. ಅವುಗಳ ಚಕ್ರಗಳು ಎತ್ತರವಾ ಗಿಯೂ ಭಯಂಕರ ವಾಗಿಯೂ ಇದ್ದವು; ಆ ನಾಲ್ಕು ಚಕ್ರಗಳ ಸುತ್ತಲೂ ಕಣ್ಣುಗಳಿದ್ದವು. ಆ ಜೀವಿಗಳು ಹೋಗುವಾಗ ಆ ಚಕ್ರಗಳು ಅವುಗಳ ಬಳಿಯಲ್ಲೇ ಹೋದವು; ಆ ಜೀವಿಗಳು ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಮೇಲಕ್ಕೆ ಎತ್ತಲ್ಪಟ್ಟವು. ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಅವುಗಳು ಹೋದವು; ಆ ಸ್ಥಳಕ್ಕೆ ಅವುಗಳ ಆತ್ಮವು ಹೋಗಬೇಕೆಂದಿತ್ತು; ಚಕ್ರಗಳು ಸಹ ಅವುಗಳಿಗೆದು ರಾಗಿ ಮೇಲಕ್ಕೆ ಎತ್ತಲ್ಪ ಟ್ಟವು; ಚಕ್ರಗಳಲ್ಲಿ ಆ ಜೀವಿಯ ಆತ್ಮವು ಇತ್ತು. ಅವುಗಳು ಹೋಗುವಾಗ ಇವುಗಳೂ ಹೋದವು; ಅವುಗಳು ನಿಲ್ಲುವಾಗ ಇವುಗಳೂ ನಿಂತವು; ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಅವುಗಳ ಸಂಗಡ ಎತ್ತಲ್ಪಟ್ಟವು; ಆ ಜೀವಿಯ ಆತ್ಮನು ಆ ಚಕ್ರಗಳಲ್ಲಿ ಇತ್ತು. ಜೀವಿಯ ತಲೆಗಳ ಮೇಲೆ ಗಗನಮಂಡಲ ವಿಶಾಲ ರೂಪವು ಭೀಕರ ವಜ್ರದ ಬಣ್ಣದ್ದಾಗಿತ್ತು; ಅದು ಅವುಗಳ ತಲೆಗಳ ಮೇಲೆ ಹರ ಡಿತ್ತು (ಹಾಸಲ್ಪಟ್ಟಿತ್ತು). ಆ ಗಗನಮಂಡಲದ (ರೂಪದ) ಕೆಳಗೆ ಅವುಗಳ ರೆಕ್ಕೆಗಳು ನೆಟ್ಟಗೆ (ನೇರ ವಾಗಿ) ಒಂದಕ್ಕೊಂದು ಸರಿಯಾಗಿದ್ದವು; ಅವುಗಳ ಶರೀರಗಳನ್ನು ಮುಚ್ಚಿಕೊಳ್ಳುವ ಎರಡೆರೆಡು ರೆಕ್ಕೆಗಳು ಎರಡು ಕಡೆಗಳಲ್ಲೂ ಇರುವ ಪ್ರತಿಯೊಂದನ್ನು ಮುಚ್ಚಿ ಕೊಂಡಿದ್ದವು. ಅವು ಹೋದಾಗ ನಾನು ಅವುಗಳ ರೆಕ್ಕೆಗಳ ಶಬ್ದವನ್ನು ಕೇಳಿದೆನು; ಅದು ಜಲಪ್ರವಾಹದ ಶಬ್ದದಂತೆಯೂ ಸರ್ವಶಕ್ತನ ಶಬ್ದದ ಹಾಗೆಯೂ ಸಂದಣಿಯ ಶಬ್ದದಂತೆಯೂ ಸೈನ್ಯದ ಶಬ್ದದ ಹಾಗೆಯೂ ಇತ್ತು; ಅವು ನಿಲ್ಲುವಾಗ ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸುತ್ತಿದ್ದವು.
- Ezekiel 10:2–22 ಯೆಹೆಜ್ಕೇಲನು 10:2–22ಆತನು ನಾರುಮಡಿಯನ್ನು ಧರಿಸಿ ಕೊಂಡಿದ್ದ ಮನುಷ್ಯನಿಗೆ ಹೇಳಿದ್ದೇನಂದರೆ--ನೀನು ಕೆರೂಬಿಗಳ ಕೆಳಗೆ ಇರುವ ಚಕ್ರಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ನಡುವೆ ಇರುವ ಉರಿಕೆಂಡಗಳ ತಳದಲಿ ನಿನ್ನ ಕೈತುಂಬ ಎತ್ತಿ ಅದನ್ನು ಪಟ್ಟಣದ ಮೇಲೆ ಚೆಲ್ಲು ಅಂದನು. ಹಾಗೆಯೇ ನಾನು ಕಂಡಂತೆ ಒಳಗೆ ಪ್ರವೇಶಿಸಿದನು. ಆ ಮನುಷ್ಯನು ಒಳಗೆ ಹೋಗು ವಾಗ ಕೆರೂಬಿಯರು ಆಲಯದ ಬಳಿಯಲ್ಲಿ ನಿಂತಿ ದ್ದರು. ಮೇಘವು ಒಳಗಿನ ಅಂಗಳವನ್ನು ತುಂಬಿಸಿ ಕೊಂಡಿತ್ತು. ಆಗ ಕರ್ತನ ಮಹಿಮೆಯು ಕೆರೂಬಿಗಳನ್ನು ಬಿಟ್ಟು ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಲ್ಲಿ ನಿಂತಿತು, ಆಲಯವು ಮೇಘದಿಂದ ತುಂಬಿತ್ತು. ಆಗ ಕರ್ತನ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು. ಕೆರೂಬಿಗಳ ರೆಕ್ಕೆಗಳ ಶಬ್ದವು ಮಾತನಾಡುವ ಸರ್ವಶಕ್ತನ ದೇವರ ಹಾಗೆ ಹೊರಗಣ ಅಂಗಳದ ವರೆಗೂ ಕೇಳಿಬಂತು. ಆತನು ನಾರು ಮಡಿಯನ್ನು ಧರಿಸಿಕೊಂಡ ಮನುಷ್ಯನಿಗೆ--ಚಕ್ರಗಳ ಮಧ್ಯದಿಂದಲೂ ಕೆರೂಬಿಯರ ಮಧ್ಯದಿಂದಲೂ ಬೆಂಕಿ ಯನ್ನು ತೆಗೆದುಕೊಳ್ಳಲು ಆಜ್ಞಾಪಿಸಿದನು. ಅವನು ಒಳಗೆ ಹೋಗಿ ಚಕ್ರಗಳ ಬಳಿಯಲ್ಲಿ ನಿಂತನು. ಒಬ್ಬ ಕೆರೂಬಿಯನು ಕೆರೂಬಿಯರ ಮಧ್ಯದೊಳಗಿಂದ ತನ್ನ ಕೈಯನ್ನು ಕೆರೂಬಿಯರ ಮಧ್ಯದೊಳಗಿರುವ ಬೆಂಕಿಗೆ ಚಾಚಿ, ತಕ್ಕೊಂಡು ನಾರುಮಡಿಯನ್ನು ಧರಿಸಿಕೊಂಡಿ ದ್ದವನ ಕೈಗೆ ಇಟ್ಟನು. ಇವನು ಅದನ್ನು ತೆಗೆದುಕೊಂಡು ಹೊರಗೆ ಹೋದನು. ಕೆರೂಬಿಯರಲ್ಲಿ ಅವರ ರೆಕ್ಕೆ ಗಳ ಕೆಳಗೆ ಮನುಷ್ಯನ ಕೈಗೆ ಸಮಾನವಾದದ್ದು ಕಂಡುಬಂತು. ನಾನು ನೋಡಿದಾಗ ಇಗೋ, ಒಬ್ಬೊಬ್ಬ ಕೆರೂ ಬಿಯನ ಬಳಿಯಲ್ಲಿ ಒಂದು ಚಕ್ರ, ಈ ಪ್ರಕಾರ ಕೆರೂಬಿಯರ ಬಳಿಯಲ್ಲಿ ನಾಲ್ಕು ಚಕ್ರಗಳಿದ್ದವು; ಆ ಚಕ್ರಗಳ ವರ್ಣವು ಪೀತರತ್ನದ ಹಾಗೆ ಇತ್ತು. ಅವುಗಳ ಆಕಾರವು ನಾಲ್ಕಕ್ಕೂ ಒಂದೇ ರೂಪ ವಿತ್ತು; ಚಕ್ರದಲ್ಲಿ ಚಕ್ರವು ಇದ್ದ ಹಾಗೆ ಇದ್ದವು. ಅವು ಹೋಗುತ್ತಿರುವಾಗ ಅವುಗಳು ನಾಲ್ಕು ಕಡೆಗಳಲ್ಲೂ ಹೋಗುತ್ತಿದ್ದವು. ಹೋಗುವಾಗ ತಿರುಗಿ ಕೊಳ್ಳಲಿಲ್ಲ. ಆದರೆ ಅವುಗಳ ತಲೆ ಯಾವ ಸ್ಥಳವನ್ನು ನೋಡುತ್ತಿತ್ತೋ ಅಲ್ಲಿಗೆ ಅದರ ಹಿಂದೆಯೇ ಹೋದವು, ಹೋಗುವಾಗ ತಿರುಗಲಿಲ್ಲ. ಅವುಗಳ ಪೂರ್ತಿ ದೇಹವು, ಬೆನ್ನುಗಳು, ಕೈಗಳು, ರೆಕ್ಕೆಗಳು, ಮತ್ತು ಚಕ್ರಗಳು, ಇವುಗಳಿಗೆ ಸುತ್ತಲೂ ಕಣ್ಣುಗಳು ಇದ್ದವು. ಅಲ್ಲಿ ನಾಲ್ಕೂ ಚಕ್ರಗಳ ಮೇಲೂ ಇದ್ದವು. ಚಕ್ರಗಳೋ ಅವುಗಳಿಗೆ ನಾನು ಕೇಳುವ ಹಾಗೆ ಓ ಚಕ್ರಗಳೇ ಎಂದು ಕೂಗಲ್ಪಟ್ಟಿತು. ಒಬ್ಬೊಬ್ಬ ನಿಗೆ ನಾಲ್ಕು ಮುಖಗಳಿದ್ದವು, ಮೊದಲನೆಯ ಮುಖವು ಕೆರೂಬಿಯನ ಮುಖ, ಎರಡನೆಯ ಮುಖವು ಮನು ಷ್ಯನ ಮುಖ ಮೂರನೆಯದು ಸಿಂಹದ ಮುಖ ಮತ್ತು ನಾಲ್ಕನೆಯದು ಹದ್ದಿನ ಮುಖಗಳಾಗಿದ್ದವು. ಆಗ ಕೆರೂಬಿಯರು ಮೇಲಕ್ಕೆತ್ತಲ್ಪಟ್ಟರು. ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಜೀವಿಯು ಇದೇ. ಕೆರೂಬಿಯರು ಹೋದಾಗ, ಚಕ್ರಗಳು ಅವರ ಸಂಗಡ ಹೋದವು. ಕೆರೂಬಿಯರು ಭೂಮಿಯನ್ನು ಬಿಟ್ಟು ಮೇಲೇರುವಾಗ ತಮ್ಮ ರೆಕ್ಕೆಗಳನ್ನು ಚಾಚಿದಾಗ, ಅವರ ಚಕ್ರಗಳು ಪಕ್ಕಕ್ಕೆ ತಿರುಗಲಿಲ್ಲ. ಅವು ನಿಂತಾಗ ಇವೂ ನಿಂತವು. ಅವು ಎತ್ತಲ್ಪಟ್ಟಾಗ ಇವೂ ಅವುಗಳ ಸಂಗಡ ಎತ್ತಲ್ಪಟ್ಟವು; ಯಾಕಂದರೆ ಇವುಗಳಲ್ಲಿ ಆ ಜೀವಿಗಳ ಆತ್ಮವು ಇತ್ತು. ಆಗ ಕರ್ತನ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು. ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿ ಕೊಂಡು ನಾನು ನೋಡುವಾಗಲೇ ಭೂಮಿಯನ್ನು ಬಿಟ್ಟು ಮೇಲೆಕ್ಕೇರಿ ಹೋದರು. ಅವು ಹೊರಟಾಗ ಚಕ್ರಗಳೂ ಅವರ ಸಂಗಡ ಇದ್ದವು, ಅವರು ಕರ್ತನ ಆಲಯದ ಮೂಡಣ ಬಾಗಲಿನ ದ್ವಾರದ ಬಳಿಯಲ್ಲಿ ನಿಂತಿದ್ದರು. ಮತ್ತು ಇಸ್ರಾಯೇಲಿನ ದೇವರ ಮಹಿ ಮೆಯು ಅವರ ಮೇಲೆ ಇತ್ತು. ಕೆಬಾರ್ ನದಿಯ ಬಳಿಯಲ್ಲಿ ನಾನು ನೋಡಿದ ಜೀವಿಯು ಇದೇ. ಅವು ಕೆರೂಬಿಯರೆಂದು ತಿಳಿದುಕೊಂಡೆನು. ಪ್ರತಿಯೊಬ್ಬ ನಿಗೂ ನಾಲ್ಕು ಮುಖಗಳು ಮತ್ತು ನಾಲ್ಕು ರೆಕ್ಕೆಗಳು ಇದ್ದವು, ಅವರ ರೆಕ್ಕೆಗಳ ಕೆಳಗೆ ಮನುಷ್ಯರ ಕೈಗಳ ರೂಪವಿತ್ತು;ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರ ಆಕಾರವೂ ಅವರೂ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು. ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರ ಆಕಾರವೂ ಅವರೂ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು.
- Psalm 80:1 ಕೀರ್ತನೆಗಳು 80:1ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
Original words (Hebrew)
- altar · H4196מִזְבֵּחַ mizbêach
- incense · H7004קְטֹרֶת qᵉṭôreth
- refined · H2212זָקַק zâqaq
- gold · H2091זָהָב zâhâb
- weight · H4948מִשְׁקָל mishqâl
- gold · H2091זָהָב zâhâb
- pattern · H8403תַּבְנִית tabnîyth
- chariot · H4818מֶרְכָּבָה merkâbâh
- cherubims · H3742כְּרוּב kᵉrûwb
- out · H6566פָּרַשׂ pâras
- covered · H5526סָכַךְ çâkak
- ark · H727אָרוֹן ʼârôwn
- covenant · H1285בְּרִית bᵉrîyth