1 Chronicles · chapter 28 · verse 5
1 Chronicles 28:5 in Kannada
ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು.
Kartanu nanage aneka kumaa rarannu kottiruvaaga nanna samasta kumaararalli israayelina melaagi kartana raajyada sinhaa sanada mele kulitukolluvadakke nanna maganaada solomonanannu aadukondanu.
1 Chronicles 28:5 in English
- King James Version (KJV)
- And of all my sons, (for the LORD hath given me many sons,) he hath chosen Solomon my son to sit upon the throne of the kingdom of the LORD over Israel.
- World English Bible (WEB)
- Of all my sons (for the LORD has given me many sons), he has chosen Solomon my son to sit on the throne of the LORD’s kingdom over Israel.
- American Standard Version (ASV)
- and of all my sons (for Jehovah hath given me many sons), he hath chosen Solomon my son to sit upon the throne of the kingdom of Jehovah over Israel.
- Bible in Basic English (BBE)
- And of all my sons (for the Lord has given me a great number of sons) he has made selection of Solomon to take his place on the seat of the kingdom of the Lord over Israel.
- Darby Translation (DBY)
- and of all my sons, (for Jehovah has given me many sons,) he has chosen Solomon my son to sit upon the throne of the kingdom of Jehovah over Israel.
- Webster's Bible (WBS)
- And of all my sons, (for the LORD hath given me many sons,) he hath chosen Solomon my son to sit upon the throne of the kingdom of the LORD over Israel.
- Young's Literal Translation (YLT)
- and out of all my sons — for many sons hath Jehovah given to me — He also fixeth on Solomon my son, to sit on the throne of the kingdom of Jehovah over Israel,
Read in context
- 3ಆದರೆ ದೇವರು ನನಗೆ--ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಬೇಡ; ಯಾಕಂದರೆ ನೀನು ಯುದ್ಧದ ಮನುಷ್ಯನಾಗಿದ್ದೀ; ರಕ್ತವನ್ನು ಚೆಲ್ಲಿದ್ದೀ ಅಂದನು.
- 4ಆದರೆ ಇಸ್ರಾಯೇಲಿನ ಕರ್ತನಾದ ದೇವರು ಎಂದೆಂದಿಗೂ ಇಸ್ರಾಯೇಲಿನ ಮೇಲೆ ಅರಸನಾಗಿರಲು ನನ್ನ ತಂದೆಯ ಮನೆಯ ಸಮಸ್ತರಿಂದ ನನ್ನನ್ನು ಆದುಕೊಂಡನು. ಯಾಕಂದರೆ ನಾನು ನಾಯಕನಾಗಿರಲು ಯೆಹೂದನನ್ನೂ ಯೆಹೂ ದನ ಮನೆಯಲ್ಲಿ ನನ್ನ ತಂದೆಯ ಮನೆಯನ್ನೂ ಆದು ಕೊಂಡು ನನ್ನ ತಂದೆಯ ಕುಮಾರರಲ್ಲಿ ನನ್ನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗ ಮಾಡಲು ಚಿತ್ತ ವುಳ್ಳವನಾಗಿದ್ದನು;
- 5ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು.
- 6ಆತನು ನನ್ನ ಸಂಗಡ--ನಿನ್ನ ಮಗನಾದ ಸೊಲೊಮೋನನು ತಾನೇನನ್ನ ಮನೆಯನ್ನೂ ಅಂಗಳಗಳನ್ನೂ ಕಟ್ಟಿಸುವನು; ಅವನನ್ನು ನನಗೆ ಮಗನಾಗಿರಲು ಆದುಕೊಂಡೆನು. ನಾನು ಅವನಿಗೆ ತಂದೆಯಾಗಿರುವೆನು.
- 7ಇದಲ್ಲದೆ ಈಗಿನಂತೆ ನನ್ನ ಆಜ್ಞೆಗಳನ್ನೂ ನ್ಯಾಯಗಳನ್ನೂ ಅವನು ನಡಿಸಲು ದೃಢವಾಗಿದ್ದರೆ ಅವನ ರಾಜ್ಯವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು ಅಂದನು.
Cross references
- 1 Chronicles 3:1–9 1 ಪೂರ್ವಕಾಲವೃತ್ತಾಂತ 3:1–9ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ -- ಇಜ್ರೇಲ್ಯಳಾದ ಅಹೀನೋವಮಳಿಂದ ಚೊಚ್ಚಲ ಮಗನಾದ ಅಮ್ನೋ ನನು, ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದ ಎರಡ ನೆಯವನಾದ ದಾನಿಯೇಲನು, ಗೆಷೂರಿನ ಅರಸ ನಾಗಿರುವ ತಲ್ಮೈಯ ಮಗಳಾದ ಮಾಕಳ ಮಗನಾ ದಂಥ ಮೂರನೆಯವನಾದ ಅಬ್ಷಾಲೋಮನು, ಹಗ್ಗೀ ತಳ ಮಗನಾದ ನಾಲ್ಕನೆಯವನಾದ ಅದೋನೀ ಯನು, ಅಬೀಟಲಳಿಂದ ಹುಟ್ಟಿದ ಐದನೆಯವನಾದ ಶೆಫಟ್ಯನು, ತನ್ನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದ ಆರನೆಯವನಾದ ಇತ್ರಾಮನು. ಈ ಆರು ಮಂದಿ ಹೆಬ್ರೋನಿನಲ್ಲಿ ಅವನಿಗೆ ಹುಟ್ಟಿದರು. ಅಲ್ಲಿ ಅವನು ಏಳೂವರೆ ವರುಷ ಆಳಿದನು; ಯೆರೂಸಲೇಮಿನಲ್ಲಿ ಮೂವತ್ತಮೂರು ವರುಷ ಆಳಿದನು. ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರು ಯಾರಂದರೆ ಅವ್ಮೆಾಯೇಲನ ಮಗಳಾದ ಬತ್ಷೂವಳಿಂದ ಹುಟ್ಟಿದ ಶಿಮ್ಮನು, ಶೋಬಾಬನು, ನಾತಾನನು, ಸೊಲೊ ಮೋನನು ಈ ನಾಲ್ಕು ಮಂದಿಯು. ಇದಲ್ಲದೆ ಇಬ್ಹಾರನು, ಎಲೀಷಾಮನು, ಎಲೀಫೆಲೆಟನು, ನೊಗನು, ನೆಫೆಗನು, ಯಾಫೀಯನು, ಎಲೀಷಾ ಮನು, ಎಲ್ಯಾದನು, ಎಲೀಫೆಲೆಟನು, ಈ ಒಂಬತ್ತು ಮಂದಿಯು. ಉಪಪತ್ನಿಗಳ ಮಕ್ಕಳ ಹೊರತಾಗಿ ಇವರೆಲ್ಲರು ದಾವೀದನ ಮಕ್ಕಳಾಗಿದ್ದರು. ತಾಮಾರಳು ಇವರ ಸಹೋದರಿಯಾಗಿದ್ದಳು.
- 1 Chronicles 23:1 1 ಪೂರ್ವಕಾಲವೃತ್ತಾಂತ 23:1ಹೀಗೆ ದಾವೀದನು ಮುದುಕನಾಗಿಯೂ ದಿವಸಗಳು ತುಂಬಿದವನಾಗಿಯೂ ಇರು ವಾಗ ತನ್ನ ಮಗನಾದ ಸೊಲೊಮೋನನನ್ನು ಇಸ್ರಾ ಯೇಲಿನ ಮೇಲೆ ಅರಸನನ್ನಾಗಿ ಮಾಡಿದನು.
- 1 Chronicles 22:9–10 1 ಪೂರ್ವಕಾಲವೃತ್ತಾಂತ 22:9–10ಇಗೋ, ಸಮಾ ಧಾನವುಳ್ಳ ಮನುಷ್ಯನಾಗಿರುವ ಒಬ್ಬ ಮಗನು ನಿನಗೆ ಹುಟ್ಟುವನು; ಸುತ್ತಲಿರುವ ಅವನ ಸಮಸ್ತ ಶತ್ರುಗಳಿಂದ ನಾನು ಅವನಿಗೆ ಸಮಾಧಾನವನ್ನು ಕೊಡುವೆನು. ಅವ ನಿಗೆ ಸೊಲೊಮೋನನೆಂಬ ಹೆಸರಾಗುವದು; ಅವನ ದಿವಸಗಳಲ್ಲಿ ನಾನು ಇಸ್ರಾಯೇಲಿಗೆ ಸಮಾಧಾನ ವನ್ನೂ ವಿಶ್ರಾಂತಿಯನ್ನೂ ಕೊಡುವೆನು. ಅವನು ನನ್ನ ನಾಮಕ್ಕೆ ಮನೆಯನ್ನು ಕಟ್ಟಿಸುವನು. ಅವನು ನನ್ನ ಮಗನಾಗಿರುವನು, ನಾನು ಅವನಿಗೆ ತಂದೆ ಯಾಗಿರುವೆನು; ಇಸ್ರಾಯೇಲಿನ ಮೇಲೆ ಅವನ ರಾಜ್ಯದ ಸಿಂಹಾಸನವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು.
- 1 Chronicles 14:3–7 1 ಪೂರ್ವಕಾಲವೃತ್ತಾಂತ 14:3–7ದಾವೀದನು ಯೆರೂಸಲೇಮಿನಲ್ಲಿ ಇನ್ನೂ ಹೆಂಡತಿಯರನ್ನು ತೆಗೆದು ಕೊಂಡು ಹೆಚ್ಚು ಕುಮಾರರನ್ನೂ ಕುಮಾರ್ತೆಯರನ್ನೂ ಪಡೆದನು. ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳೇನಂದರೆ--ಶಮ್ಮೂವನು, ಶೋಬಾ ಬನು, ನಾತಾನನು, ಸೊಲೊಮೋನನು, ಇಬ್ಹಾರನು, ಎಲೀಷೂವನು, ಎಲ್ಪೆಲೆಟನು, ನೋಗಹನು, ನೆಫೆ ಗನು, ಯಾಫೀಯನು, ಎಲೀಷಾಮನು, ಬೆಲ್ಯಾದನು, ಎಲೀಫೆಲೆಟನು.
- 2 Chronicles 1:8–9 2 ಪೂರ್ವಕಾಲವೃತ್ತಾಂತ 1:8–9ಆಗ ಸೊಲೊಮೋನನು ದೇವ ರಿಗೆ--ನೀನು ನನ್ನ ತಂದೆಯಾದ ದಾವೀದನಿಗೆ ಬಹು ಕೃಪೆಯನ್ನು ತೋರಿಸಿ ಅವನಿಗೆ ಬದಲಾಗಿ ನಾನು ಆಳುವಂತೆ ಮಾಡಿದಿ. ಈಗ ಕರ್ತನಾದ ದೇವರೇ, ನನ್ನ ತಂದೆಯಾದ ದಾವೀದನಿಗೆ ನೀನು ಮಾಡಿದ ವಾಗ್ದಾನವು ಸ್ಥಾಪಿತವಾಗಲಿ, ಲೆಕ್ಕದಲ್ಲಿ ಧೂಳಿಯ ಹಾಗೆ ಹೆಚ್ಚಾಗಿರುವ ಜನರ ಮೇಲೆ ನನ್ನನ್ನು ಅರಸನಾಗ ಮಾಡಿದಿ.
- 1 Chronicles 29:1 1 ಪೂರ್ವಕಾಲವೃತ್ತಾಂತ 29:1ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನಂದರೆ -- ದೇವರು ಒಬ್ಬನನ್ನೇ ಆದುಕೊಂಡ ನನ್ನ ಮಗನಾದ ಸೊಲೊ ಮೋನನು ಚಿಕ್ಕವನಾಗಿಯೂ ಮೃದುವಾಗಿಯೂ ಇದ್ದಾನೆ. ಆದರೆ ಕೆಲಸವು ದೊಡ್ಡದು; ಈ ಅರಮನೆ ಯು ಮನುಷ್ಯರಿಗೋಸ್ಕರವಲ್ಲ, ಕರ್ತನಾದ ದೇವರಿ ಗೋಸ್ಕರವೇ.
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Psalm 72:1–20 ಕೀರ್ತನೆಗಳು 72:1–20ಓ ದೇವರೇ, ನಿನ್ನ ನ್ಯಾಯತೀರ್ಪುಗಳನ್ನು ಅರಸನಿಗೂ ನೀತಿಯನ್ನು ಅರಸನ ಮಗನಿಗೂ ಕೊಡು. ನಿನ್ನ ಜನರಿಗೆ ನೀತಿಯಿಂದಲೂ ದೀನರಿಗೆ ನ್ಯಾಯದಿಂದಲೂ ಆತನು ತೀರ್ಪು ಮಾಡು ವನು. ಬೆಟ್ಟಗಳೂ ಚಿಕ್ಕ ಗುಡ್ಡಗಳೂ ನೀತಿಯಿಂದ ಸಮಾಧಾನವನ್ನು ಜನರಿಗೆ ತರುವವು. ಆತನು ಜನರಲ್ಲಿ ದೀನರಿಗೆ ನ್ಯಾಯತೀರಿಸುವನು; ಬಡವನ ಮಕ್ಕಳನ್ನು ರಕ್ಷಿಸುವನು; ಬಲಾತ್ಕಾರಿಯನ್ನು ಮುರಿದು ತುಂಡು ಮಾಡುವನು. ಸೂರ್ಯನೂ ಚಂದ್ರನೂ ಇರುವ ವರೆಗೆ ತಲ ತಲಾಂತರಗಳು ನಿನಗೆ ಭಯಪಡುವರು. ಕೊಯ್ದ ಹುಲ್ಲಿನ ಮೇಲೆ ಬೀಳುವ ಮಳೆಯ ಹಾಗೆಯೂ ಭೂಮಿಯನ್ನು ನೆನಸುವ ಸುರಿಯುವ ಮಳೆಗಳ ಹಾಗೆಯೂ ಆತನು ಇಳಿದು ಬರುವನು. ಆತನ ದಿವಸಗಳಲ್ಲಿ ನೀತಿವಂತನು ವೃದ್ಧಿಯಾಗುವನು. ಸಮೃದ್ಧಿ ಯಾದ ಸಮಾಧಾನವು ಚಂದ್ರನು ಇರುವ ವರೆಗೂ ಇರುವದು. ಸಮುದ್ರದಿಂದ ಸಮುದ್ರದ ವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಆತನು ಆಳುವನು. ಆತನ ಮುಂದೆ ಅರಣ್ಯ ನಿವಾಸಿಗಳು ಎರಗುವರು; ಆತನ ಶತ್ರುಗಳು ಧೂಳನ್ನು ನೆಕ್ಕುವರು. ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು. ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು. ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು. ದರಿದ್ರನನ್ನೂ ಬಡವನನ್ನೂ ಕರುಣಿಸುವನು; ಬಡವರ ಪ್ರಾಣಗ ಳನ್ನು ರಕ್ಷಿಸುವನು. ಮೋಸದಿಂದಲೂ ಬಲಾತ್ಕಾರ ದಿಂದಲೂ ಅವರ ಪ್ರಾಣವನ್ನು ಬಿಡುಗಡೆ ಮಾಡು ವನು; ಅವರ ರಕ್ತವು ಆತನ ದೃಷ್ಟಿಯಲ್ಲಿ ಅಮೂಲ್ಯ ವಾಗಿರುವದು. ಅವನು ಬಾಳುವನು; ಅವನಿಗೆ ಶೆಬಾದ ಚಿನ್ನ ವನ್ನು ಕೊಡುವರು; ಅವನಿಗೋಸ್ಕರ ಯಾವಾಗಲೂ ಪ್ರಾರ್ಥನೆ ಮಾಡುವರು; ಪ್ರತಿದಿನ ಅವನನ್ನು ಕೊಂಡಾಡುವರು. ಧಾನ್ಯದ ಸಮೃದ್ಧಿಯು ದೇಶದಲ್ಲಿ ಬೆಟ್ಟಗಳ ತುದಿಯ ಮೇಲೆ ಇರುವದು; ಅದರ ಫಲವು ಲೆಬನೋನಿನ ಹಾಗೆ ಕದಲುವದು. ಪಟ್ಟಣದ ವರು ಭೂಮಿಯ ಸೊಪ್ಪಿನ ಹಾಗೆ ವೃದ್ಧಿಯಾಗುವರು. ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು. ಒಬ್ಬನೇ ಅದ್ಭುತಗಳನ್ನು ಮಾಡುವ ಇಸ್ರಾಯೇಲಿನ ದೇವರಾಗಿರುವ ಕರ್ತನಾದ ದೇವರಿಗೆ ಸ್ತೋತ್ರವಾಗಲಿ. ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ. ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
- 1 Chronicles 29:23 1 ಪೂರ್ವಕಾಲವೃತ್ತಾಂತ 29:23ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ, ಕರ್ತನ ಸಿಂಹಾಸನದ ಮೇಲೆ ಕುಳಿತುಕೊಂಡು ಸಫಲ ಹೊಂದಿದನು. ಸಮಸ್ತ ಇಸ್ರಾಯೇಲ್ಯರು ಅವನಿಗೆ ವಿಧೇಯರಾದರು.
- 1 Chronicles 17:14 1 ಪೂರ್ವಕಾಲವೃತ್ತಾಂತ 17:14ಅವನ ಸಿಂಹಾಸನವು ಯುಗ ಯುಗಕ್ಕೂ ಸ್ಥಿರವಾಗಿರುವದು.