1 Chronicles · chapter 29 · verse 11
1 Chronicles 29:11 in Kannada
ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ.
Kartane, doddastikeyoo paraakramavoo saundaryavoo jayavoo mahimeyoo ninnade; aakaashagalalliyoo bhoomiyalliyoo iruvadellaa ninnade. Kartane, raajyavu ninnadu; neenu samastakkoo taleyaagi unnatavaagiddee. Aishvaryavoo ghanavoo ninna bali yinda baruttade.
1 Chronicles 29:11 in English
- King James Version (KJV)
- Thine, O LORD, [is] the greatness, and the power, and the glory, and the victory, and the majesty: for all [that is] in the heaven and in the earth [is thine;] thine [is] the kingdom, O LORD, and thou art exalted as head above all.
- World English Bible (WEB)
- Yours, LORD, is the greatness, the power, the glory, the victory, and the majesty! For all that is in the heavens and on the earth is yours. Yours is the kingdom, LORD, and you are exalted as head above all.
- American Standard Version (ASV)
- Thine, O Jehovah, is the greatness, and the power, and the glory, and the victory, and the majesty: for all that is in the heavens and in the earth [is thine]; thine is the kingdom, O Jehovah, and thou art exalted as head above all.
- Bible in Basic English (BBE)
- Yours, O Lord, is the strength and the power and the glory, and the authority and the honour: for everything in heaven and on earth is yours; yours is the kingdom, O Lord, and you are lifted up as head over all.
- Darby Translation (DBY)
- Thine, Jehovah, is the greatness, and the power, and the glory, and the splendour, and the majesty; for all that is in the heavens and on the earth is thine: thine, Jehovah, is the kingdom, and thou art exalted as Head above all;
- Webster's Bible (WBS)
- Thine, O LORD, [is] the greatness, and the power, and the glory, and the victory, and the majesty: for all [that is] in the heaven and on the earth [is thine] ; thine [is] the kingdom, O LORD, and thou art exalted as head above all.
- Young's Literal Translation (YLT)
- To Thee, O Jehovah, [is] the greatness, and the might, and the beauty, and the victory, and the honour, because of all in the heavens and in the earth; to Thee, O Jehovah, [is] the kingdom, and he who is lifting up himself over all for head;
Read in context
- 9ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ ಜನರು ಸಂತೋಷಪಟ್ಟರು. ಅವರು ಪೂರ್ಣ ಮನಸ್ಸಿನಿಂದ ಮನಃಪೂರ್ವಕವಾಗಿ ಕರ್ತನಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷದಿಂದ ಸಂತೋಷಪಟ್ಟನು.
- 10ಆಗ ದಾವೀದನು ಸಮಸ್ತ ಕೂಟದ ಮುಂದೆ ಕರ್ತನನ್ನು ಕೊಂಡಾಡಿ ಹೇಳಿದ್ದೇನಂದರೆ -- ನಮ್ಮ ತಂದೆ ಯಾದ ಇಸ್ರಾಯೇಲಿನ ದೇವರಾದ ಕರ್ತನೇ, ನೀನು ಯುಗಯುಗಾಂತರಗಳಿಂದ ಯುಗಯುಗಾಂತರ ಗಳಿಗೂ ಸ್ತುತಿಸಲ್ಪಡುವವನಾಗಿದ್ದೀ.
- 11ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ.
- 12ನೀನು ಸಮಸ್ತವನ್ನು ಆಳುವಾತ ನಾಗಿದ್ದೀ. ಶಕ್ತಿಯೂ ಪರಾಕ್ರಮವೂ ನಿನ್ನ ಕೈಯಲ್ಲಿ ಅವೆ. ಎಲ್ಲರಿಗೂ ದೊಡ್ಡಸ್ತಿಕೆಯನ್ನೂ ಬಲವನ್ನೂ ಕೊಡುವದಕ್ಕೆ ನಿನ್ನ ಕೈಯಲ್ಲಿ ಅದೆ.
- 13ಆದದರಿಂದ ನಮ್ಮ ದೇವರೇ, ನಾವು ನಿನ್ನನ್ನು ಸ್ತುತಿಸಿ ನಿನ್ನ ಮಹಿಮೆ ಯುಳ್ಳ ನಾಮವನ್ನು ಕೊಂಡಾಡುತ್ತೇವೆ.
Cross references
- Hebrews 1:3 ಇಬ್ರಿಯರಿಗೆ 1:3ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
- 1 Timothy 1:17 1 ತಿಮೊಥೆಯನಿಗೆ 1:17ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್.
- Daniel 4:34–35 ದಾನಿಯೇಲನು 4:34–35ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು. ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
- Revelation 5:12–13 ಪ್ರಕಟನೆ 5:12–13ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು. ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- Jude 1:25 ಯೂದನು 1:25ಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
- Isaiah 12:4 ಯೆಶಾಯ 12:4ನೀವು--ಕರ್ತನನ್ನು ಕೊಂಡಾ ಡಿರಿ; ಜನರ ಮಧ್ಯದಲ್ಲಿ ಆತನ ಹೆಸರನ್ನೆತ್ತಿ ಕ್ರಿಯೆಗ ಳನ್ನು ಪ್ರಕಟಿಸಿರಿ. ಆತನ ನಾಮವನ್ನು ಉನ್ನತೋನ್ನತ ವೆಂದು ಎತ್ತಿ ಹೇಳಿರಿ ಎಂದು ಆ ದಿನದಲ್ಲಿ ಹೇಳುವಿರಿ.
- Jeremiah 27:5 ಯೆರೆಮೀಯ 27:5ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ.
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- Revelation 7:9–12 ಪ್ರಕಟನೆ 7:9–12ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಅವರು--ರಕ್ಷಣೆಯು ಸಿಂಹಾಸನದ ಮೇಲೆ ಕೂತಿರುವ ನಮ್ಮ ದೇವರಿಗೂ ಕುರಿಮರಿಯಾದಾತನಿಗೂ ಸೇರಿದ್ದು ಎಂದು ಮಹಾ ಶಬ್ದದಿಂದ ಕೂಗಿದರು. ಸಿಂಹಾಸನದ, ಹಿರಿಯರ ಮತ್ತು ನಾಲ್ಕು ಜೀವಿಗಳ ಸುತ್ತಲೂ ನಿಂತುಕೊಂಡಿದ್ದ ದೂತರೆಲ್ಲರೂ ಸಿಂಹಾಸನದ ಮುಂದೆ ಬೋರಲ ಬಿದ್ದು ದೇವರನ್ನು ಆರಾಧಿಸುತ್ತಾ.-- ಆಮೆನ್. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್.
- Psalm 46:10 ಕೀರ್ತನೆಗಳು 46:10ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು.ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Revelation 4:10–11 ಪ್ರಕಟನೆ 4:10–11ಆಗ ಆ ಇಪ್ಪತ್ತನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಿದ್ದಾತನ ಮುಂದೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ ಯುಗಯುಗಾಂತರ ಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾ--ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು. ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
- Daniel 4:3 ದಾನಿಯೇಲನು 4:3ಆತನ ಸೂಚಕ ಕಾರ್ಯಗಳು ಎಷ್ಟೋ ದೊಡ್ಡವುಗಳು! ಆತನ ಅದ್ಭುತ ಗಳು ಪರಾಕ್ರಮವಾದವುಗಳು, ಆತನ ರಾಜ್ಯವು ನಿತ್ಯವಾದ ರಾಜ್ಯವು, ಆತನ ಆಡಳಿತವು ತಲತಲಾಂತರ ವಾಗಿರುವಂತದ್ದು.