1 Chronicles · chapter 29 · verse 15
1 Chronicles 29:15 in Kannada
ನಾವು ನಿನ್ನ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಅವೆ; ನೆಲೆಯು ಇಲ್ಲ.
Naavu ninna sammukhadalli namma samasta pitrugala haage paradeshastharoo pravaasigaloo aagiddeve. Bhoomiya mele namma divasagalu neralina haage ave; neleyu illa.
1 Chronicles 29:15 in English
- King James Version (KJV)
- For we [are] strangers before thee, and sojourners, as [were] all our fathers: our days on the earth [are] as a shadow, and [there is] none abiding.
- World English Bible (WEB)
- For we are strangers before you and foreigners, as all our fathers were. Our days on the earth are as a shadow, and there is no remaining.
- American Standard Version (ASV)
- For we are strangers before thee, and sojourners, as all our fathers were: our days on the earth are as a shadow, and there is no abiding.
- Bible in Basic English (BBE)
- For we, as all our fathers were, are like men from a strange country before you, who have got a place for a time in the land; our days on the earth are like a shade, and there is no hope of going on.
- Darby Translation (DBY)
- For we are strangers before thee, and sojourners, as all our fathers: our days on the earth are as a shadow, and there is no hope [of life].
- Webster's Bible (WBS)
- For we [are] strangers before thee, and sojourners, as [were] all our fathers: our days on the earth [are] as a shadow, and [there is] no abiding.
- Young's Literal Translation (YLT)
- for sojourners we [are] before Thee, and settlers, like all our fathers; as a shadow [are] our days on the land, and there is none abiding.
Read in context
- 13ಆದದರಿಂದ ನಮ್ಮ ದೇವರೇ, ನಾವು ನಿನ್ನನ್ನು ಸ್ತುತಿಸಿ ನಿನ್ನ ಮಹಿಮೆ ಯುಳ್ಳ ನಾಮವನ್ನು ಕೊಂಡಾಡುತ್ತೇವೆ.
- 14ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು.
- 15ನಾವು ನಿನ್ನ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಅವೆ; ನೆಲೆಯು ಇಲ್ಲ.
- 16ನಮ್ಮ ದೇವರಾದ ಕರ್ತನೇ, ನಿನ್ನ ಪರಿಶುದ್ಧ ನಾಮಕ್ಕೋಸ್ಕರ ನಿನಗೆ ಮನೆಯನ್ನು ಕಟ್ಟಿಸಲು ನಾವು ಸಿದ್ಧಮಾಡಿದ ಈ ರಾಶಿಯೆಲ್ಲಾ ನಿನ್ನಿಂದ ಬಂದದ್ದು; ಸಮಸ್ತವೂ ನಿನ್ನದು.
- 17ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.
Cross references
- Leviticus 25:23 ಯಾಜಕಕಾಂಡ 25:23ಇದಲ್ಲದೆ ಭೂಮಿಯನ್ನು ಎಂದಿಗೂ ಮಾರಬಾರದು, ಯಾಕಂದರೆ ಭೂಮಿಯು ನನ್ನದು; ನನ್ನೊಂದಿಗೆ ನೀವು ಪರಕೀಯರೂ ಪ್ರವಾಸಿಗಳೂ ಆಗಿದ್ದೀರಿ.
- Psalm 102:11 ಕೀರ್ತನೆಗಳು 102:11ನನ್ನ ದಿವಸಗಳು ನೀಳದ ನೆರಳಿನ ಹಾಗಿವೆ; ನಾನು ಹುಲ್ಲಿನ ಹಾಗೆ ಒಣಗುತ್ತೇನೆ.
- Psalm 144:4 ಕೀರ್ತನೆಗಳು 144:4ಮನುಷ್ಯನು ವ್ಯರ್ಥತೆಗೆ ಸಮಾನನಾಗಿದ್ದಾನೆ; ಅವನ ದಿವಸಗಳು ಕಳೆದುಹೋಗುವ ನೆರಳಿನ ಹಾಗಿವೆ.
- Job 14:2 ಯೋಬನು 14:2ಅವನು ಹೂವಿನ ಹಾಗೆ ಅರಳು ತ್ತಾನೆ ಮತ್ತು ಕೊಯ್ಯಲ್ಪಡುತ್ತಾನೆ; ಅವನು ನೆರಳಿನಂತೆ ಓಡಿಹೋಗುತ್ತಾನೆ, ಹಾಗೂ ಮುಂದುವರೆಯುವ ದಿಲ್ಲ.
- James 4:14 ಯಾಕೋಬನು 4:14ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.
- Psalm 39:12 ಕೀರ್ತನೆಗಳು 39:12ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಮೊರೆಗೆ ಕಿವಿಗೊಡು; ನನ್ನ ಕಣ್ಣೀರಿಗೆ ಮೌನ ವಾಗಿರಬೇಡ. ನಾನು ನಿನ್ನ ಸಂಗಡ ಪರದೇಶಸ್ಥನು; ನನ್ನ ತಂದೆಗಳೆಲ್ಲರ ಹಾಗೆ ಪ್ರವಾಸಿಯಾಗಿದ್ದೇನೆ.ಕರ್ತನೇ ನನ್ನನ್ನು ಉಳಿಸು; ಆಗ ನಾನು ಇಲ್ಲಿಂದ ಹೋಗಿಬಿಟ್ಟು ಇಲ್ಲದೆ ಹೋಗುವದಕ್ಕಿಂತ ಮುಂಚೆ ಬಲವನ್ನು ತಿರಿಗಿ ಪಡೆಯುವೆನು.
- Psalm 119:19 ಕೀರ್ತನೆಗಳು 119:19ನಾನು ಭೂಮಿಯಲ್ಲಿ ಪರದೇಶಸ್ಥನಾಗಿದ್ದೇನೆ; ನಿನ್ನ ಆಜ್ಞೆ ಗಳನ್ನು ನನಗೆ ಮರೆಮಾಡಬೇಡ.
- Hebrews 11:13–16 ಇಬ್ರಿಯರಿಗೆ 11:13–16ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು. ಇಂಥ ಮಾತುಗಳನ್ನಾಡುವವರು ತಾವು ಒಂದು ದೇಶವನ್ನು ಹುಡುಕುವವರೆಂದು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಾರೆ. ತಾವು ಹೊರಟು ಬಂದಿದ್ದ ದೇಶದ ಮೇಲೆ ನಿಜವಾಗಿ ಮನಸ್ಸಿಟ್ಟವರಾಗಿದ್ದರೆ ತಿರಿಗಿ ಅಲ್ಲಿಗೆ ಹೋಗುವದಕ್ಕೆ ಅವರಿಗೆ ಅವಕಾಶವಿತ್ತು. ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.
- Psalm 90:9 ಕೀರ್ತನೆಗಳು 90:9ನಮ್ಮ ದಿವಸಗಳೆಲ್ಲಾ ನಿನ್ನ ಕೋಪದಿಂದ ದಾಟಿಹೋದವು. ನಮ್ಮ ವರುಷಗಳನ್ನು ಕೇಳಿದ ಕಥೆಯ ಹಾಗೆ ಕಳೆ ಯುತ್ತೇವೆ.
- Isaiah 40:6–8 ಯೆಶಾಯ 40:6–8ವಾಣಿಯು ಕೂಗು ಅನ್ನುತ್ತದೆ. ಅವನು--ನಾನು ಏನು ಕೂಗಲಿ ಅನ್ನಲು ಎಲ್ಲಾ ನರಮನುಷ್ಯರು ಹುಲ್ಲಿನ ಹಾಗಿದ್ದಾರೆ. ಕರ್ತನ ಶ್ವಾಸವು ಅವರ ಮೇಲೆ ಬೀಸುವದರಿಂದ ಅವರ ಲಾವಣ್ಯವೆಲ್ಲಾ ಹೊಲದ ಹೂವಿನಂತಿದೆ. ಹುಲ್ಲು ಒಣಗಿ ಹೋಗು ವದು ಹೂವು ಬಾಡಿಹೋಗುವದು. ಕರ್ತನ ಆತ್ಮ ಅವುಗಳ ಮೇಲೆ ಊದುವನು; ನಿಶ್ಚಯವಾಗಿ ಜನರು ಹುಲ್ಲೇ. ಹುಲ್ಲು ಒಣಗಿಹೋಗುವದು ಹೂವು ಬಾಡಿಹೋಗುವದು. ಆದರೆ ನಮ್ಮ ದೇವರ ವಾಕ್ಯವು ಸದಾಕಾಲ ನಿಲ್ಲುವದು ಎಂದು ಉತ್ತರವಾಯಿತು.
- Genesis 47:9 ಆದಿಕಾಂಡ 47:9ಯಾಕೋಬನು ಫರೋಹನಿಗೆ--ನನ್ನ ಪ್ರವಾಸದ ದಿನಗಳು ನೂರ ಮೂವತ್ತು ವರುಷಗಳು. ನನ್ನ ಜೀವನದ ದಿನಗಳು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇದ್ದವು. ನನ್ನ ತಂದೆಗಳು ತಾವು ಪ್ರವಾಸಿಗಳಾಗಿದ್ದ ಜೀವನದ ವರುಷಗಳ ದಿನಗಳಿಗೆ ನಾನು ಮುಟ್ಟಲಿಲ್ಲ ಅಂದನು.
- Ecclesiastes 6:12 ಪ್ರಸಂಗಿ 6:12ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.