1 Chronicles · chapter 3 · verse 9
1 Chronicles 3:9 in Kannada
ಉಪಪತ್ನಿಗಳ ಮಕ್ಕಳ ಹೊರತಾಗಿ ಇವರೆಲ್ಲರು ದಾವೀದನ ಮಕ್ಕಳಾಗಿದ್ದರು. ತಾಮಾರಳು ಇವರ ಸಹೋದರಿಯಾಗಿದ್ದಳು.
Upapatnigala makkala horataagi ivarellaru daaveedana makkalaagiddaru. Taamaaralu ivara sahodariyaagiddalu.
1 Chronicles 3:9 in English
- King James Version (KJV)
- [These were] all the sons of David, beside the sons of the concubines, and Tamar their sister.
- World English Bible (WEB)
- All these were the sons of David, in addition to the sons of the concubines; and Tamar was their sister.
- American Standard Version (ASV)
- All these were the sons of David, besides the sons of the concubines; and Tamar was their sister.
- Bible in Basic English (BBE)
- All these were the sons of David, in addition to the sons of his servant-wives; and Tamar was their sister.
- Darby Translation (DBY)
- all were sons of David, besides the sons of the concubines; and Tamar was their sister.
- Webster's Bible (WBS)
- [These were] all the sons of David, besides the sons of the concubines, and Tamar their sister.
- Young's Literal Translation (YLT)
- All [are] sons of David, apart from sons of the concubines, and Tamar their sister.
Read in context
- 7ಇದಲ್ಲದೆ ಇಬ್ಹಾರನು, ಎಲೀಷಾಮನು, ಎಲೀಫೆಲೆಟನು, ನೊಗನು, ನೆಫೆಗನು,
- 8ಯಾಫೀಯನು, ಎಲೀಷಾ ಮನು, ಎಲ್ಯಾದನು, ಎಲೀಫೆಲೆಟನು, ಈ ಒಂಬತ್ತು ಮಂದಿಯು.
- 9ಉಪಪತ್ನಿಗಳ ಮಕ್ಕಳ ಹೊರತಾಗಿ ಇವರೆಲ್ಲರು ದಾವೀದನ ಮಕ್ಕಳಾಗಿದ್ದರು. ತಾಮಾರಳು ಇವರ ಸಹೋದರಿಯಾಗಿದ್ದಳು.
- 10ಸೊಲೊಮೋನನ ಮಗನು ರೆಹಬ್ಬಾಮನು; ಇವನ ಮಗನು ಅಬೀಯನು; ಇವನ ಮಗನು ಆಸನು; ಇವನ ಮಗನು ಯೆಹೋಷಾಫಾಟನು.
- 11ಇವನ ಮಗನು ಯೆಹೋರಾಮನು; ಇವನ ಮಗನು ಅಹಜ್ಯನು; ಇವನ ಮಗನು ಯೆಹೋವಾಷನು.
Cross references
- 2 Samuel 13:1–20 2 ಸಮುವೇಲನು 13:1–20ತರುವಾಯ ಏನಾಯಿತಂದರೆ, ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಹೆಸರುಳ್ಳ ಸೌಂದರ್ಯವತಿಯಾದ ಒಬ್ಬ ಸಹೋದರಿ ಇದ್ದಳು. ಅವಳನ್ನು ದಾವೀದನ ಮಗನಾದ ಅಮ್ನೋನನು ಪ್ರೀತಿಮಾಡಿದನು. ತನ್ನ ಸಹೋದರಿಯಾದ ತಾಮಾರಳ ನಿಮಿತ್ತ ಬಹು ತಾಪಪಟ್ಟು ಅಸ್ವಸ್ಥನಾದನು; ಅವಳು ಕನ್ನಿಕೆಯಾಗಿದ್ದಳು; ಆದದರಿಂದ ಅವಳನ್ನು ಏನಾದರೂ ಮಾಡುವದಕ್ಕೆ ಅಮ್ನೋನನಿಗೆ ಕಷ್ಟವಾಗಿತ್ತು. ಆದರೆ ಅಮ್ನೋನನಿಗೆ ದಾವೀದನ ಸಹೋದರನಾಗಿರುವ ಶಿಮ್ಮನ ಮಗನಾದ ಯೋನಾದಾಬನೆಂಬ ಒಬ್ಬ ಸ್ನೇಹಿತನಿದ್ದನು. ಈ ಯೋನಾದಾಬನು ಮಹಾ ಕುಯುಕ್ತಿಯುಳ್ಳವನಾಗಿ ದ್ದನು. ಇವನು ಅವನಿಗೆ--ಅರಸನ ಮಗನಾದ ನೀನು ದಿನದಿನಕ್ಕೆ ಯಾಕೆ ಕ್ಷೀಣನಾಗಿ ಹೋಗುತ್ತೀ? ನನಗೆ ತಿಳಿಸುವದಿಲ್ಲವೋ ಅಂದನು. ಅದಕ್ಕೆ ಅಮ್ನೋನನು ಅವನಿಗೆ--ನಾನು ನನ್ನ ಸಹೋದರನಾಗಿರುವ ಅಬ್ಷಾ ಲೋಮನ ಸಹೋದರಿಯಾದ ತಾಮಾರಳನ್ನು ಪ್ರೀತಿ ಮಾಡುತ್ತೇನೆ ಅಂದನು. ಆಗ ಯೋನಾದಾಬನು ಅವನಿಗೆ--ನೀನು ರೋಗಿಷ್ಟನ ಹಾಗೆ ಮಂಚದ ಮೇಲೆ ಮಲಗು; ನಿನ್ನನ್ನು ನೋಡುವದಕ್ಕೆ ನಿನ್ನ ತಂದೆ ಬರುವಾಗ ನೀನು ಅವನಿಗೆ--ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣೆದುರಿನಲ್ಲಿ ಅಡಿಗೆಯನ್ನು ಮಾಡಿ ನನಗೆ ಆಹಾರ ಕೊಡಲಿ ಎಂದು ಹೇಳು ಅಂದನು. ಅವನು ಅದೇ ಪ್ರಕಾರ ರೋಗಿಷ್ಟನ ಹಾಗೆ ಮಲಗಿದನು. ಅರಸನು ತನ್ನನ್ನು ನೋಡುವದಕ್ಕೆ ಬಂದಾಗ ಅಮ್ನೋನನು ಅರಸನಿಗೆ--ನೀನು ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣುಮುಂದೆ ಎರಡು ಭಕ್ಷ್ಯಗಳನ್ನು ಮಾಡುವದಕ್ಕೆ ಬರಲಿ ಅಂದನು. ಆಗ ದಾವೀದನು ತನ್ನ ಮನೆಯಲ್ಲಿರುವ ತಾಮಾರಳ ಬಳಿಗೆ ಮನುಷ್ಯನನ್ನು ಕಳುಹಿಸಿ--ನೀನು ನಿನ್ನ ಸಹೋದರನಾದ ಅಮ್ನೋನನ ಮನೆಗೆ ಹೋಗಿ ಅವನಿಗೆ ಅಡಿಗೆಯನ್ನು ಮಾಡು ಅಂದನು. ಹಾಗೆಯೇ ತನ್ನ ಸಹೋದರನಾದ ಅಮ್ನೋನನ ಮನೆಗೆ ಹೋದಳು. ಆಗ ಅವನು ಮಲಗಿದ್ದನು. ಅವಳು ಹಿಟ್ಟನ್ನು ತೆಗೆದುಕೊಂಡು ಅವನ ಕಣ್ಣು ಮುಂದೆ ಹಿಸಿಕಿ ನಾದಿ ಭಕ್ಷ್ಯಗಳನ್ನು ಮಾಡಿ ಪಾತ್ರೆ ತಕ್ಕೊಂಡು ಅವನ ಮುಂದೆ ಇಟ್ಟಳು. ಆದರೆ ಅಮ್ನೋನನು--ನಾನು ಉಣ್ಣುವದಿಲ್ಲ ಎಂದು ಹೇಳಿ ನನ್ನ ಬಳಿಯಿಂದ ಎಲ್ಲಾ ಜನರನ್ನು ಕಳುಹಿಸಿಬಿಡಿರಿ ಅಂದನು. ಹಾಗೆಯೇ ಎಲ್ಲರೂ ಅವನನ್ನು ಬಿಟ್ಟು ಹೊರಗೆ ಹೋದರು. ಆಗ ಅಮ್ನೋನನು--ನಾನು ನಿನ್ನ ಕೈಯಿಂದ ತಿನ್ನುವಂತೆ ಆ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತೆಗೆದುಕೊಂಡು ಬಾ ಅಂದನು. ಹಾಗೆಯೇ ತಾಮಾರಳು ತಾನು ಮಾಡಿದ ಭಕ್ಷ್ಯಗಳನ್ನು ಕೊಠಡಿ ಯೊಳಗೆ ತನ್ನ ಸಹೋದರನಾದ ಅಮ್ನೋನನ ಬಳಿಗೆ ತಕ್ಕೊಂಡು ಬಂದಳು. ಆದರೆ ಅವನು ಅವುಗಳನ್ನು ಉಣ್ಣುವ ಹಾಗೆ ಅವಳು ಅವನ ಬಳಿಗೆ ತಂದಾಗ ಅವನು ಅವಳನ್ನು ಹಿಡಿದು ಅವಳಿಗೆ--ನನ್ನ ಸಹೋ ದರಿಯೇ, ನನ್ನ ಸಂಗಡ ಮಲಗು; ಬಾ ಅಂದನು. ಅದಕ್ಕವಳು--ನನ್ನ ಸಹೋದರನೇ, ಬೇಡ; ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ಇಸ್ರಾಯೇಲಿನಲ್ಲಿ ಇಂಥಾ ಕಾರ್ಯಮಾಡಕೂಡದು; ಇಂಥಾ ಬುದ್ಧಿಹೀನ ವಾದ ಕೆಲಸ ಮಾಡಬೇಡ. ನಾನಾದರೋ ನನ್ನ ನಿಂದೆಯನ್ನು ಎಲ್ಲಿಗೆ ಹೋಗಮಾಡಲಿ; ಇದಲ್ಲದೆ ನೀನು ಇಸ್ರಾಯೇಲಿನಲ್ಲಿ ಬುದ್ಧಿಹೀನರೊಳಗೆ ಒಬ್ಬನ ಹಾಗೆ ಇರುವಿ. ಹಾಗಾದರೆ ಈಗ ದಯಮಾಡಿ ಅರಸನ ಸಂಗಡ ಮಾತನಾಡು; ಅವನು ನಿನ್ನ ಬಳಿಯಿಂದ ನನ್ನನ್ನು ಹೇಗಾದರೂ ಹಿಂತೆಗೆಯುವುದಿಲ್ಲ ಅಂದಳು. ಅವನು ಅವಳ ಮಾತನ್ನು ಕೇಳಲೊಲ್ಲದೆ ತಾನು ಅವಳಿಗಿಂತ ಬಲವುಳ್ಳವನಾಗಿದ್ದದರಿಂದ ಅವಳನ್ನು ಕುಂದಿಸಿ ಅವಳ ಸಂಗಡ ಮಲಗಿದನು. ಆಗ ಅಮ್ನೊನನು ಅವಳನ್ನು ಅತ್ಯಂತ ಹಗೆಮಾಡಿದನು; ಅವನು ಅವಳನ್ನು ಹಗೆಮಾಡಿದ ಹಗೆಯು ಮೊದಲು ಮಾಡಿದ ಪ್ರೀತಿಗಿಂತ ಅಧಿಕವಾಗಿತ್ತು; ಆದದರಿಂದ ಅಮ್ನೋನನು ಅವಳಿಗೆ--ಎದ್ದು ಹೋಗು ಅಂದನು. ಆಗ ಅವಳು ಅವನಿಗೆ--ಇದಕ್ಕೆ ಕಾರಣವಿಲ್ಲ; ನನಗೆ ಮಾಡಿದ ಆ ಕೆಟ್ಟತನಕ್ಕಿಂತ ನೀನು ನನ್ನನ್ನು ಕಳುಹಿಸಿಬಿಡುವ ಈ ಕೆಟ್ಟತನವು ಮತ್ತೂ ಅಧಿಕವಾಗಿದೆ ಅಂದಳು. ಆದರೆ ಅವನು ಅವಳ ಮಾತನ್ನು ಕೇಳಲೊಲ್ಲದೆ ತನ್ನನ್ನು ಸೇವಿಸುವ ತನ್ನ ದಾಸರನ್ನು ಕರೆದು--ಇವಳನ್ನು ನನ್ನ ಬಳಿಯಿಂದ ಹೊರಗೆ ತಳ್ಳಿ ಬಾಗಲು ಮುಚ್ಚಿ ಬೀಗಹಾಕು ಅಂದನು. ಅವಳು ವಿವಿಧವಾದ ವಸ್ತ್ರವನ್ನು ಉಟ್ಟಿದ್ದಳು; ಯಾಕಂದರೆ ಅರಸನ ಕುಮಾರ್ತೆಯರಾದ ಕನ್ಯಾಸ್ತ್ರೀಯರು ಇಂಥಾ ನಿಲುವಂಗಿಗಳನ್ನು ಧರಿಸಿಕೊಳ್ಳುತ್ತಿದ್ದರು. ಆದರೆ ಅವನ ಸೇವಕನು ಅವಳನ್ನು ಹೊರಗೆ ಕಳುಹಿಸಿ ಬಾಗಲು ಮುಚ್ಚಿ ಬೀಗಹಾಕಿದನು. ಆಗ ತನ್ನ ತಲೆಯಮೇಲೆ ಬೂದಿಯನ್ನು ಹಾಕಿಕೊಂಡು ತಾನು ಧರಿಸಿಕೊಂಡಿದ್ದ ವಿವಿಧವಾದ ವಸ್ತ್ರವನ್ನು ಹರಿದು ತನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಅಳುತ್ತಾ ಹೋದಳು. ಆಗ ಅವಳ ಸಹೋದರನಾದ ಅಬ್ಷಾಲೋಮನು ಅವಳಿಗೆ --ನಿನ್ನ ಸಹೋದರನಾದ ಅಮ್ನೋನನು ನಿನ್ನ ಸಂಗಡ ಇದ್ದನೋ? ನನ್ನ ಸಹೋದರಿಯೇ, ಈಗ ಮೌನ ವಾಗಿರು; ಅವನು ನಿನ್ನ ಸಹೋದರನು; ಈ ಕಾರ್ಯ ವನ್ನು ನಿನ್ನ ಮನಸ್ಸಿಗೆ ಹಚ್ಚಿಕೊಳ್ಳಬೇಡ ಅಂದನು. ಹಾಗೆಯೇ ತಾಮಾರಳು ತನ್ನ ಸಹೋದರನಾದ ಅಬ್ಷಾಲೋಮನ ಮನೆಯಲ್ಲಿ ಒಂಟಿಗಳಾಗಿದ್ದಳು.
- 2 Samuel 5:13 2 ಸಮುವೇಲನು 5:13ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ ಯೆರೂಸಲೇಮಿನಿಂದ ಇನ್ನೂ ಕೆಲವು ಮಂದಿ ಉಪಪತ್ನಿಯರನ್ನೂ ಹೆಂಡತಿಯರನ್ನೂ ಮಾಡಿಕೊಂಡನು; ದಾವೀದನಿಗೆ ಇನ್ನೂ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು.