1 Chronicles · chapter 4 · verse 40
1 Chronicles 4:40 in Kannada
ಅವರು ರಸವತ್ತಾದ ಒಳ್ಳೇ ಮೇವನ್ನು ಕಂಡು ಕೊಂಡರು. ಆ ದೇಶವು ವಿಸ್ತಾರವಾಗಿಯೂ ಶಾಂತ ವಾಗಿಯೂ ಸಮಾಧಾನವಾಗಿಯೂ ಇತ್ತು; ಪೂರ್ವ ದಲ್ಲಿ ಹಾಮನ ವಂಶದವರು ಅಲ್ಲಿ ವಾಸವಾಗಿದ್ದರು.
Avaru rasavattaada olle mevannu kandu kondaru. Aa deshavu vistaaravaagiyoo shaanta vaagiyoo samaadhaanavaagiyoo ittu; poorva dalli haamana vanshadavaru alli vaasavaagiddaru.
1 Chronicles 4:40 in English
- King James Version (KJV)
- And they found fat pasture and good, and the land [was] wide, and quiet, and peaceable; for [they] of Ham had dwelt there of old.
- World English Bible (WEB)
- They found rich, good pasture, and the land was wide, and quiet, and peaceful, for those who lived there before were descended from Ham.
- American Standard Version (ASV)
- And they found fat pasture and good, and the land was wide, and quiet, and peaceable; for they that dwelt there aforetime were of Ham.
- Bible in Basic English (BBE)
- And they came to some good fertile grass-land, in a wide quiet country of peace-loving people; for the people who were living there before were of the offspring of Ham.
- Darby Translation (DBY)
- And they found fat and good pasture, and a land widely extended and quiet and fertile, for they who had dwelt there formerly were of Ham.
- Webster's Bible (WBS)
- And they found rich pasture and good, and the land [was] wide, and quiet, and peaceable; for [they] of Ham had dwelt there of old.
- Young's Literal Translation (YLT)
- and they find pasture, fat and good, and the land broad of sides, and quiet, and safe, for of Ham are those dwelling there before.
Read in context
- 38ಹೆಸರು ಹೆಸರಾಗಿ ಬರೆಯಲ್ಪಟ್ಟವರಾದ ಇವರು ತಮ್ಮ ಸಂತತಿಗಳಲ್ಲಿ ಪ್ರಭುಗಳಾಗಿದ್ದರು; ಅವರ ಪಿತೃಗಳ ಮನೆ ಬಹಳ ಅಭಿವೃದ್ಧಿಯಾಯಿತು.
- 39ತಮ್ಮ ಮಂದೆಗಳಿಗೆ ಮೇವನ್ನು ಹುಡುಕಲು ತಗ್ಗಿನ ಪೂರ್ವದಿಕ್ಕಿನಲ್ಲಿರುವ ಗೆದೋರು ಎಂಬ ಸ್ಥಳದ ಪ್ರವೇಶದ ವರೆಗೂ ಹೋದರು.
- 40ಅವರು ರಸವತ್ತಾದ ಒಳ್ಳೇ ಮೇವನ್ನು ಕಂಡು ಕೊಂಡರು. ಆ ದೇಶವು ವಿಸ್ತಾರವಾಗಿಯೂ ಶಾಂತ ವಾಗಿಯೂ ಸಮಾಧಾನವಾಗಿಯೂ ಇತ್ತು; ಪೂರ್ವ ದಲ್ಲಿ ಹಾಮನ ವಂಶದವರು ಅಲ್ಲಿ ವಾಸವಾಗಿದ್ದರು.
- 41ಹೆಸರು ಹೆಸರಾಗಿ ಬರೆಯಲ್ಪಟ್ಟವರಾದ ಇವರು ಯೆಹೂದದ ಅರಸನಾದ ಹಿಜ್ಕೀಯನ ದಿವಸಗಳಲ್ಲಿ ಬಂದು ಅಲ್ಲಿ ಸಿಕ್ಕಿದ ಅವರ ಡೇರೆಗಳನ್ನೂ ನಿವಾಸ ಗಳನ್ನೂ ಹೊಡೆದು ಅವರನ್ನು ಸಂಪೂರ್ಣ ನಾಶಮಾಡಿ ಅಲ್ಲಿ ತಮ್ಮ ಮಂದೆಗಳಿಗೆ ಮೇವು ಇರುವದರಿಂದ ಇಂದಿನ ವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದಾರೆ.
- 42ಇದಲ್ಲದೆ ಅವರಲ್ಲಿ ಸಿಮೆಯೋನನ ಕುಮಾರರಲ್ಲಿ ಐನೂರು ಮಂದಿ ಇಷ್ಷೀಯ ಕುಮಾರರಾದ ಪೆಲಟ್ಯ ನನ್ನೂ ನೆಗರ್ಯನನ್ನೂ ರೆಫಾಯನನ್ನೂ ಉಜ್ಜೀ ಯೇಲನನ್ನೂ ತಮ್ಮ ಅಧಿಪತಿಗಳಾಗಿ ಮಾಡಿಕೊಂಡು ಸೇಯಾರ್ ಪರ್ವತಕ್ಕೆ ಹೋಗಿ ತಪ್ಪಿಸಿಕೊಂಡು ಹೋದಉಳಿದ ಅಮಾಲೇಕ್ಯರನ್ನು ಹೊಡೆದು ಅಲ್ಲಿ ಇಂದಿನ ವರೆಗೂ ವಾಸವಾಗಿದ್ದಾರೆ.
Cross references
- Judges 18:7–10 ನ್ಯಾಯಸ್ಥಾಪಕರು 18:7–10ಆಗ ಆ ಐದು ಮಂದಿಯು ಹೊರಟು ಲಯಿಷಿಗೆ ಹೋಗಿ ಅದರಲ್ಲಿ ವಾಸಿಸಿರುವ ಆ ಜನರನ್ನು ನೋಡು ವಾಗ ಅವರು ನಿಶ್ಚಿಂತರಾಗಿಯೂ ಚೀದೋನ್ಯರ ಹಾಗೆ ನೆಮ್ಮದಿಯಾಗಿಯೂ ಸುರಕ್ಷಿತವಾಗಿಯೂ ಇದ್ದರು; ಯಾವ ಕಾರ್ಯದಲ್ಲಾದರೂ ನಾಚಿಕೆಪಡಿಸುವದಕ್ಕೆ ಬಿಗಿಹಿಡಿಯುವ ನ್ಯಾಯಾಧಿಪತಿಯು ದೇಶದಲ್ಲಿ ಇರ ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದರು; ಯಾವ ಮನುಷ್ಯನ ಸಂಗಡವೂ ಅವರಿಗೆ ಏನೂ ಕೆಲಸವಿರಲಿಲ್ಲ. ಅವರು ಚೊರ್ಗಾದಲ್ಲಿಯೂ ಎಷ್ಟಾ ವೋಲಿನಲ್ಲಿಯೂ ಇರುವ ಸಹೋದರರ ಬಳಿಗೆ ತಿರಿಗಿ ಬಂದರು. ಅವರ ಸಹೋದರರು ಅವರಿಗೆ--ನೀವು ಏನು ಹೇಳುತ್ತೀರಿ? ಅಂದರು. ಅದಕ್ಕವರು--ಏಳಿರಿ ನಾವು ಅವರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋಗುವ ಹಾಗೆ ಆ ದೇಶವನ್ನು ನೋಡಿದೆವು; ಇಗೋ, ಅದು ಬಹಳ ಚೆನ್ನಾಗಿದೆ; ನೀವು ಸುಮ್ಮನೆ ಇರುವದು ಯಾಕೆ? ಆ ದೇಶದಲ್ಲಿ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳಲು ಹೋಗುವದಕ್ಕೆ ತಾಮಸ ಮಾಡಬೇಡಿರಿ. ನೀವು ಅಲ್ಲಿಗೆ ಹೋಗುವಾಗ ಭರವಸವಾಗಿರುವ ಜನರ ಬಳಿಗೆ ಹೋಗುವಿರಿ; ಅದು ವಿಸ್ತಾರವಾದ ದೇಶವಾಗಿದೆ; ದೇವರು ಅದನ್ನು ನಿಮ್ಮ ಕೈಗಳಲ್ಲಿ ಒಪ್ಪಿಸಿಕೊಟ್ಟಿದ್ದಾನೆ. ಆ ಸ್ಥಳದಲ್ಲಿ ಭೂಮಿ ಯಲ್ಲಿರುವ ವಸ್ತುಗಳಲ್ಲಿ ಒಂದಾದರೂ ಕೊರತೆ ಇಲ್ಲ ಅಂದರು.
- Genesis 10:6 ಆದಿಕಾಂಡ 10:6ಹಾಮನ ಕುಮಾರರು ಯಾರಂದರೆ, ಕೂಷ್ ಮಿಚ್ರಯಿಮ್ ಪೂತ್ ಕಾನಾನ್ ಎಂಬವರು.
- Genesis 9:22–29 ಆದಿಕಾಂಡ 9:22–29ಕಾನಾನನ ತಂದೆಯಾದ ಹಾಮನು ತನ್ನ ತಂದೆಯ ಬೆತ್ತಲೆತನವನ್ನು ನೋಡಿ ಹೊರಗಿದ್ದ ತನ್ನ ಸಹೋದರರಿಬ್ಬರಿಗೆ ತಿಳಿಸಿ ದನು. ಆಗ ಶೇಮನೂ ಯೆಫೆತನೂ ಬಟ್ಟೆಯನ್ನು ತಕ್ಕೊಂಡು ತಮ್ಮಿಬ್ಬರ ಹೆಗಲಿನ ಮೇಲೆ ಇಟ್ಟು ಹಿಂಭಾಗವಾಗಿ ಹೋಗಿ ತಮ್ಮ ತಂದೆಯ ಬೆತ್ತಲೆತನವನ್ನು ಮುಚ್ಚಿದರು. ಅವರ ಮುಖಗಳು ಹಿಂಭಾಗವಾಗಿದ್ದ ದರಿಂದ ತಮ್ಮ ತಂದೆಯ ಬೆತ್ತಲೆತನವನ್ನು ಅವರು ನೋಡಲಿಲ್ಲ. ನೋಹನು ದ್ರಾಕ್ಷಾರಸದ ಅಮಲಿನಿಂದ ಎಚ್ಚತ್ತು ತನ್ನ ಚಿಕ್ಕಮಗನು ತನಗೆ ಮಾಡಿದ್ದನ್ನು ತಿಳಿದು ಅವನು-- ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಸಹೋದರರಿಗೆ ದಾಸಾನುದಾಸನಾ ಗಿರುವನು ಅಂದನು. ಅವನು-- ಶೇಮನ ದೇವ ರಾದ ಕರ್ತನು ಸ್ತುತಿಸಲ್ಪಡಲಿ; ಕಾನಾನನು ಅವನಿಗೆ ದಾಸನಾಗಿರಲಿ. ಯೆಫೆತನನ್ನು ದೇವರು ವಿಸ್ತರಿಸಲಿ; ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ; ಕಾನಾನನು ಅವನಿಗೆ ದಾಸನಾಗಿರಲಿ ಅಂದನು. ಪ್ರಳಯವಾದ ಮೇಲೆ ನೋಹನು ಮೂನ್ನೂರ ಐವತ್ತು ವರುಷ ಬದುಕಿದನು.ನೋಹನ ದಿನ ಗಳೆಲ್ಲಾ ಒಟ್ಟು ಒಂಭೈನೂರ ಐವತ್ತು ವರುಷ ಗಳಾಗಿದ್ದವು. ತರುವಾಯ ಅವನು ಸತ್ತನು. ನೋಹನ ದಿನ ಗಳೆಲ್ಲಾ ಒಟ್ಟು ಒಂಭೈನೂರ ಐವತ್ತು ವರುಷ ಗಳಾಗಿದ್ದವು. ತರುವಾಯ ಅವನು ಸತ್ತನು.
- Psalm 105:23 ಕೀರ್ತನೆಗಳು 105:23ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪರದೇಶಸ್ಥನಾಗಿದ್ದನು.
- Psalm 78:51 ಕೀರ್ತನೆಗಳು 78:51ಐಗುಪ್ತದಲ್ಲಿ ಚೊಚ್ಚಲವಾದವರೆಲ್ಲರನ್ನೂ ಹಾಮನ ಗುಡಾರಗಳಲ್ಲಿ ಶಕ್ತಿಯ ಪ್ರಥಮ ಫಲವನ್ನೂ ಹೊಡೆದನು.