1 Chronicles 5:25 in Kannada
ಆದರೆ ಅವರು ತಮ್ಮ ಪಿತೃಗಳ ದೇವರಿಗೆ ವಿರೋಧವಾಗಿ ಅಪರಾಧಮಾಡಿ ದೇವರು ತಮ್ಮ ಮುಂದೆ ನಾಶಮಾಡಿದ ಆ ದೇಶದ ಜನರ ದೇವರುಗಳ ಹಿಂದೆ ಜಾರರಾಗಿ ಹೋದರು.ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.
Aadare avaru tamma pitrugala devarige virodhavaagi aparaadhamaadi devaru tamma munde naashamaadida aa deshada janara devarugala hinde jaararaagi hodaru.aada kaarana israayelina devaru ashyoorina arasa naada poolana aatmavannoo ashyoorina arasanaada tiglatpilesarana aatmavannoo prerisiddarinda avaru avarannu sereyaagi oydaru. Aa roobenyarannoo gaadyarannoo manasseya ardhagotradavarannoo halahakkoo haaborigoo haarakkoo gojaan nadiya pradeshakkoo takkonduhodaru. Avaru indina varegoo alle iddaare.
1 Chronicles 5:25 in English
- King James Version (KJV)
- And they transgressed against the God of their fathers, and went a whoring after the gods of the people of the land, whom God destroyed before them.
- World English Bible (WEB)
- They trespassed against the God of their fathers, and played the prostitute after the gods of the peoples of the land whom God destroyed before them.
- American Standard Version (ASV)
- And they trespassed against the God of their fathers, and played the harlot after the gods of the peoples of the land, whom God destroyed before them.
- Bible in Basic English (BBE)
- And they did evil against the God of their fathers, worshipping the gods of the people of the land, whom God had put to destruction before them.
- Darby Translation (DBY)
- And they transgressed against the God of their fathers, and went a whoring after the gods of the peoples of the land, whom God had destroyed before them.
- Webster's Bible (WBS)
- And they transgressed against the God of their fathers, and went astray after the gods of the people of the land, whom God destroyed before them.
- Young's Literal Translation (YLT)
- And they trespass against the God of their fathers, and go a-whoring after the gods of the peoples of the land whom God destroyed from their presence;
Read in context
- 23ಮನಸ್ಸೆಯ ಅರ್ಧಗೋತ್ರದ ಮಕ್ಕಳು ದೇಶ ದಲ್ಲಿ ವಾಸಮಾಡಿ ಬಾಷಾನ್ ಮೊದಲುಗೊಂಡು ಬಾಳ್ಹೆರ್ಮೋನು ಸೆನೀರು ಹೆರ್ಮೋನ್ ಬೆಟ್ಟದ ವರೆಗೂ ಹಬ್ಬಿಕೊಂಡರು.
- 24ಅವರ ಪಿತೃಗಳ ಮನೆ ಯಲ್ಲಿರುವ ಯಜಮಾನರು ಯಾರಂದರೆ--ಏಫೆರನು, ಇಷ್ಷೀಯು, ಎಲೀಯೇಲನು, ಅಜ್ರಿಯೇಲನು, ಯೆರೆ ವಿಾಯನು, ಹೋದವ್ಯನು, ಯೆಹ್ತಿಯೇಲನು. ಇವರು ಪರಾಕ್ರಮಶಾಲಿಗಳಾಗಿಯೂ ಹೆಸರುಗೊಂಡವರಾ ಗಿಯೂ ತಮ್ಮ ಪಿತೃಗಳ ಮನೆಯಲ್ಲಿ ಯಜಮಾನ ರಾಗಿಯೂ ಇದ್ದರು.
- 25ಆದರೆ ಅವರು ತಮ್ಮ ಪಿತೃಗಳ ದೇವರಿಗೆ ವಿರೋಧವಾಗಿ ಅಪರಾಧಮಾಡಿ ದೇವರು ತಮ್ಮ ಮುಂದೆ ನಾಶಮಾಡಿದ ಆ ದೇಶದ ಜನರ ದೇವರುಗಳ ಹಿಂದೆ ಜಾರರಾಗಿ ಹೋದರು.ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.
- 26ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.
Cross references
- Psalm 106:34–39 ಕೀರ್ತನೆಗಳು 106:34–39ಕರ್ತನು ಅವರಿಗೆ ಹೇಳಿದ ಜನಗಳನ್ನು ಅವರು ನಾಶಮಾಡದೆ ಹೋದರು. ಆದರೆ ಅನ್ಯಜನಾಂಗ ಗಳ ಸಂಗಡ ಕೂಡಿಕೊಂಡು; ಅವರ ಕೆಲಸಗಳನ್ನು ಕಲಿತುಕೊಂಡರು. ಅವರ ವಿಗ್ರಹಗಳಿಗೆ ಸೇವೆ ಮಾಡಿದರು ಅವು ಅವರಿಗೆ ನೇಣು ಆದವು. ತಮ್ಮ ಗಂಡು ಹೆಣ್ಣು ಮಕ್ಕಳನ್ನೂ ದೆವ್ವಗಳಿಗೆ ಅರ್ಪಿಸಿದರು. ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾ ಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ; ದೇಶವನ್ನು ರಕ್ತದಿಂದ ಅಶುದ್ಧಮಾಡಿದರು. ಹೀಗೆ ತಮ್ಮ ಕೆಲಸಗಳಿಂದ ತಮ್ಮನ್ನು ಹೊಲೆಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ಜಾರರಾದರು.
- Revelation 17:5 ಪ್ರಕಟನೆ 17:5ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು.
- Hosea 1:2 ಹೋಶೇಯ 1:2ಹೊಶೇಯನಿಂದಾದ ಕರ್ತನ ವಾಕ್ಯದ ಪ್ರಾರಂ ಭವು: ಕರ್ತನು ಹೊಶೇಯನಿಗೆ ಹೇಳಿದ್ದೇನಂದರೆ --ಹೋಗಿ ನಿನಗೆ ವ್ಯಭಿಚಾರಿಣಿಗಳ ಹೆಂಡತಿಯನ್ನೂ ವ್ಯಭಿಚಾರಿಣಿಗಳ ಮಕ್ಕಳನ್ನೂ ತೆಗೆದುಕೊ; ದೇಶವು ಕರ್ತನನ್ನು ಬಿಟ್ಟು ದೊಡ್ಡ ವ್ಯಭಿಚಾರತನವನ್ನು ಮಾಡಿಕೊಂಡಿದೆ.
- Exodus 34:15 ವಿಮೋಚನಕಾಂಡ 34:15ಆ ದೇಶ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಬಾರದು. ಅವರು ಅನ್ಯ ದೇವರುಗಳನ್ನು ಆರಾಧಿಸಿ, ಅವುಗಳಿಗೆ ಯಜ್ಞಗಳನ್ನು ಮಾಡುವಾಗ ಒಬ್ಬನು ನಿನ್ನನ್ನು ಕರೆದಾನು; ನೀನು ಅವನ ಬಲಿಯನ್ನು ತಿನ್ನ ಬೇಕಾದೀತು.
- Hosea 9:1 ಹೋಶೇಯ 9:1ಓ ಇಸ್ರಾಯೇಲೇ, ಬೇರೆ ಜನರು ಉಲ್ಲಾ ಸಿಸುವ ಪ್ರಕಾರ ಸಂತೋಷಪಡಬೇಡ; ನಿನ್ನ ದೇವರನ್ನು ನೀನು ಬಿಟ್ಟು ವ್ಯಭಿಚಾರ ಮಾಡಿದ್ದೀ, ಎಲ್ಲಾ ಧಾನ್ಯದ ಕಣಗಳಲ್ಲಿ ಕೂಲಿಯನ್ನು ಪ್ರೀತಿ ಮಾಡಿದ್ದೀ.
- 2 Kings 17:7–18 2 ಅರಸುಗಳು 17:7–18ಯಾಕೆ ಹೀಗಾಯಿತಂದರೆ, ಇಸ್ರಾಯೇಲಿನ ಮಕ್ಕಳು, ಐಗುಪ್ತದ ಅರಸನಾದ ಫರೋಹನ ಕೈಯಿಂದ ತಪ್ಪಿಸಿ ಐಗುಪ್ತದೇಶದೊಳಗಿಂದ ಬರ ಮಾಡಿದ ತಮ್ಮ ದೇವರಾದ ಕರ್ತನಿಗೆ ವಿರೋಧ ವಾಗಿ ಪಾಪಮಾಡಿ ಇತರ ದೇವರುಗಳಿಗೆ ಭಯಪಟ್ಟರು. ಇಸ್ರಾಯೇಲ್ಯರ ಮುಂದೆ ಕರ್ತನು ಹೊರ ಡಿಸಿಬಿಟ್ಟ ಅನ್ಯ ಜನಾಂಗಗಳ ಕಟ್ಟಳೆಗಳಲ್ಲಿಯೂ ಇಸ್ರಾ ಯೇಲಿನ ಅರಸುಗಳು ಮಾಡಿದ ಕಟ್ಟಳೆಗಳಲ್ಲಿಯೂ ನಡೆದರು. ಇಸ್ರಾಯೇಲಿನ ಮಕ್ಕಳು ಗುಪ್ತವಾಗಿ ತಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಅಯುಕ್ತ ವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲು ಗೊಂಡು ಕೋಟೆಯುಳ್ಳ ಪಟ್ಟಣಗಳ ವರೆಗೂ ತಮ್ಮ ಎಲ್ಲಾ ಪಟ್ಟಣಗಳಲ್ಲಿ ತಮಗೆ ಉನ್ನತ ಸ್ಥಳಗಳನ್ನು ಕಟ್ಟಿಸಿ ಕೊಂಡಿದ್ದರು. ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ ಹಸುರಾದ ಎಲ್ಲಾ ಮರಗಳ ಕೆಳಗೂ ತಮಗೆ ವಿಗ್ರಹಗಳನ್ನು ನಿಲ್ಲಿಸಿ ಅಲ್ಲಿ ಕರ್ತನು ತಮ್ಮ ಮುಂದೆ ಓಡಿಸಿಬಿಟ್ಟ ಅನ್ಯ ಜನಾಂಗಗಳ ಹಾಗೆ ಅವರು ಎಲ್ಲಾ ಉನ್ನತ ಸ್ಥಳಗಳಲ್ಲಿ ಧೂಪವನ್ನು ಸುಟ್ಟು ಕರ್ತನನ್ನು ಸಿಟ್ಟುಗೊಳಿಸುವ ಹಾಗೆ ಕೆಟ್ಟ ಕಾರ್ಯಗಳನ್ನು ಮಾಡಿದರು-- ನೀವು ಈ ಕಾರ್ಯವನ್ನು ಮಾಡಬೇಡಿರೆಂದು ಕರ್ತನು ತಮಗೆ ಹೇಳಿದ ಮಣ್ಣು ಪ್ರತಿಮೆಗಳನ್ನು ಸೇವಿಸಿದರು. ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು. ಆದರೆ ಅವರು ಕೇಳ ದೆಯೂ ತಮ್ಮ ದೇವರಾದ ಕರ್ತನಲ್ಲಿ ನಂಬಿಕೆ ಇಡ ದೆಯೂ ತಮ್ಮ ಪಿತೃಗಳ ಕುತ್ತಿಗೆಯ ಹಾಗೆ ತಮ್ಮ ಕುತ್ತಿಗೆಯನ್ನು ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು. ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ ತಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ಬೆಂಕಿಯಲ್ಲಿ ದಾಟಮಾಡಿ ಕಣಿಗಳನ್ನೂ ಶಕುನಗಳನ್ನೂ ಬಳಸಿ ಕರ್ತ ನಿಗೆ ಕೋಪ ಬರುವಂತೆ ಆತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು. ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಬಹುಕೋಪ ಗೊಂಡು ಅವರನ್ನು ತನ್ನ ಸಮ್ಮುಖದಿಂದ ತೆಗೆದುಹಾಕಿ ದನು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿದದ್ದಿಲ್ಲ.
- Judges 2:12 ನ್ಯಾಯಸ್ಥಾಪಕರು 2:12ತಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಮಾಡಿದ ತಮ್ಮ ದೇವರಾದ ಕರ್ತನನ್ನು ಬಿಟ್ಟು ತಮ್ಮ ಸುತ್ತಲಿರುವ ಜನಗಳ ಅನ್ಯ ದೇವರುಗಳ ಹಿಂದೆಹೋಗಿ ಅವುಗಳಿಗೆ ಅಡ್ಡಬಿದ್ದು ಕರ್ತನಿಗೆ ಕೋಪವನ್ನೆಬ್ಬಿಸಿದರು.
- Deuteronomy 32:15–18 ಧರ್ಮೋಪದೇಶಕಾಂಡ 32:15–18ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು. ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು. ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು. ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ.
- 2 Chronicles 25:14–15 2 ಪೂರ್ವಕಾಲವೃತ್ತಾಂತ 25:14–15ಅಮಚ್ಯನು ಎದೋಮ್ಯರನ್ನು ಹೊಡೆದು ತಿರಿಗಿ ಬಂದ ತರುವಾಯ ಏನಾಯಿತಂದರೆ, ತಾನು ಸೇಯಾ ರನ ಮಕ್ಕಳ ದೇವರುಗಳನ್ನು ತಕ್ಕೊಂಡು ಬಂದು ಅವು ತನಗೆ ದೇವರುಗಳಾಗಿರುವ ಹಾಗೆ ನಿಲ್ಲಿಸಿಕೊಂಡು ಅವುಗಳ ಮುಂದೆ ಅಡ್ಡಬಿದ್ದು ಅವುಗಳಿಗೆ ಧೂಪವನ್ನು ಸುಟ್ಟನು. ಆದಕಾರಣ ಕರ್ತನ ಕೋಪವು ಅಮಚ್ಯನ ಮೇಲೆ ಹೊತ್ತಿತು; ಆತನು ಅವನ ಬಳಿಗೆ ಪ್ರವಾದಿ ಯನ್ನು ಕಳುಹಿಸಿದನು. ಅವನು ಅವನಿಗೆ--ತಮ್ಮ ಜನ ರನ್ನು ನಿನ್ನ ಕೈಯಿಂದ ತಪ್ಪಿಸಲಾರದ ದೇವರುಗಳನ್ನು ನೀನು ಹುಡುಕುವದೇನು ಅಂದನು.
- Judges 2:17 ನ್ಯಾಯಸ್ಥಾಪಕರು 2:17ಅವರು ತಮ್ಮ ನ್ಯಾಯಾಧಿಪತಿಗಳ ಮಾತನ್ನು ಕೇಳದೆ ಅನ್ಯದೇವರುಗಳ ಹಿಂದೆ ಜಾರತ್ವಮಾಡಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳು ಕರ್ತನ ಆಜ್ಞೆಗಳನ್ನು ಕೇಳಿ ನಡೆದ ಮಾರ್ಗವನ್ನು ಶೀಘ್ರವಾಗಿ ತೊರೆದು ಬಿಟ್ಟರು; ಅವರು ಮಾಡಿದ ಪ್ರಕಾರ ಮಾಡಲಿಲ್ಲ.
- Judges 8:33 ನ್ಯಾಯಸ್ಥಾಪಕರು 8:33ಗಿದ್ಯೋನನು ಸತ್ತತರುವಾಯ ಆದದ್ದೇನಂದರೆ, ಇಸ್ರಾಯೇಲ್ ಮಕ್ಕಳು ತಿರುಗಿಕೊಂಡು ಬಾಳನ ಹಿಂದೆ ಜಾರರಾಗಿ ಹೋಗಿ ಬಾಳ್ಬೆರೀತನನ್ನು ತಮಗೆ ದೇವರಾಗಿ ಮಾಡಿಕೊಂಡರು.