1 Chronicles · chapter 6 · verse 31
1 Chronicles 6:31 in Kannada
ಮಂಜೂಷವನ್ನು ನೆಲೆಯಾಗಿ ಇರಿಸಿದ ತರು ವಾಯ ದಾವೀದನು ಕರ್ತನ ಮನೆಯಲ್ಲಿ ಹಾಡುವ ಸೇವೆಯ ಮೇಲೆ ಇರಿಸಿದವರು ಇವರೇ.
Manjooshavannu neleyaagi irisida taru vaaya daaveedanu kartana maneyalli haaduva seveya mele irisidavaru ivare.
1 Chronicles 6:31 in English
- King James Version (KJV)
- And these [are they] whom David set over the service of song in the house of the LORD, after that the ark had rest.
- World English Bible (WEB)
- These are they whom David set over the service of song in the LORD’s house after the ark came to rest there.
- American Standard Version (ASV)
- And these are they whom David set over the service of song in the house of Jehovah, after that the ark had rest.
- Bible in Basic English (BBE)
- And these are those whom David made responsible for the music in the house of the Lord, after the ark had rest.
- Darby Translation (DBY)
- And these are they whom David set over the service of song in the house of Jehovah after that the ark was in rest.
- Webster's Bible (WBS)
- And these [are they] whom David set over the service of song in the house of the LORD, after that the ark had rest.
- Young's Literal Translation (YLT)
- And these [are] they whom David stationed over the parts of the song of the house of Jehovah, from the resting of the ark,
Read in context
- 29ಮೆರಾರೀಯ ಕುಮಾರರು--ಮಹ್ಲೀಯು ಇವನ ಮಗನಾದ ಲಿಬ್ನೀಯು; ಇವನ ಮಗನಾದ ಶಿವ್ಮೆಾ;
- 30ಇವನ ಮಗನಾದ ಉಜ್ಜಾನು; ಇವನ ಮಗನಾದ ಶಿಮ್ಮಾನು; ಇವನ ಮಗನಾದ ಹಗ್ಗೀಯನು; ಇವನ ಮಗನಾದ ಅಸಾಯನು.
- 31ಮಂಜೂಷವನ್ನು ನೆಲೆಯಾಗಿ ಇರಿಸಿದ ತರು ವಾಯ ದಾವೀದನು ಕರ್ತನ ಮನೆಯಲ್ಲಿ ಹಾಡುವ ಸೇವೆಯ ಮೇಲೆ ಇರಿಸಿದವರು ಇವರೇ.
- 32ಸೊಲೊ ಮೋನನು ಯೆರೂಸಲೇಮಿನಲ್ಲಿ ಕರ್ತನ ಮನೆಯನ್ನು ಕಟ್ಟುವ ವರೆಗೆ ಇವರು ಹಾಡುವ ಸೇವೆಯಲ್ಲಿ ಸಭೆಯ ಗುಡಾರ ನಿವಾಸದ ಮುಂದೆ ಸೇವಿಸುತ್ತಾ ಇದ್ದರು; ಆಗ ಅವರು ತಮ್ಮ ಸೇವೆಯಲ್ಲಿ ಕ್ರಮದ ಪ್ರಕಾರ ಕಾಯುತ್ತಿದ್ದರು.
- 33ತಮ್ಮ ಮಕ್ಕಳ ಸಂಗಡ ಕಾಯುತ್ತಿದ್ದವರು ಯಾರಂದರೆ--ಕೆಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಇವನು ಯೋವೇಲನ ಮಗನು,
Cross references
- 2 Samuel 6:17 2 ಸಮುವೇಲನು 6:17ಅವರು ಕರ್ತನ ಮಂಜೂಷವನ್ನು ಒಳಗೆ ತಂದು ದಾವೀದನು ಹಾಕಿಸಿದ ಗುಡಾರದೊಳಗೆ ಅದರ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ ದಾವೀದನು ಕರ್ತನ ಸನ್ನಿಧಿಯಲ್ಲಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು.
- Psalm 132:14 ಕೀರ್ತನೆಗಳು 132:14ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ.
- 1 Chronicles 16:4–6 1 ಪೂರ್ವಕಾಲವೃತ್ತಾಂತ 16:4–6ಇದಲ್ಲದೆ ಕರ್ತನ ಮಂಜೂಷದ ಮುಂದೆ ಸೇವೆ ಮಾಡಲೂ ಇಸ್ರಾಯೇಲಿನ ದೇವರಾದ ಕರ್ತನನ್ನು ಸ್ಮರಿಸುವದಕ್ಕೂ ಕೊಂಡಾಡುವದಕ್ಕೂ ಹೊಗಳುವ ದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು. ಅವರು ಯಾರಂದರೆ, ಮುಖ್ಯಸ್ಥನಾದ ಆಸಾಫನೂ ಅವನ ತರುವಾಯ ಜೆಕರ್ಯನೂ ಯೆಗೀಯೇಲನೂ ಶೆವಿಾರಾಮೋತನೂ ಯೆಹೀಯೇಲನೂ ಮತ್ತಿತ್ಯನೂ ಎಲೀಯಾಬನೂ ಬೆನಾಯನೂ ಒಬೇದೆದೋಮನೂ ಯೇಗಿಯೇಲನೂ. ಇವರು ವೀಣೆಗಳನ್ನೂ ಕಿನ್ನರಿ ಗಳನ್ನೂ ಬಾರಿಸುತ್ತಿದ್ದರು; ಆದರೆ ಆಸಾಫನು ತಾಳ ಗಳನ್ನು ಬಾರಿಸುತ್ತಿದ್ದನು. ಇದಲ್ಲದೆ ಯಾಜಕರಾದ ಬೆನಾಯನೂ ಯೆಹಜೀಯೇಲನೂ ದೇವರ ಒಡಂಬ ಡಿಕೆಯ ಮಂಜೂಷದ ಮುಂದೆ ಯಾವಾಗಲೂ ತುತೂರಿಗಳನ್ನು ಊದುವವರಾಗಿದ್ದರು.
- Psalm 132:8 ಕೀರ್ತನೆಗಳು 132:8ಓ ಕರ್ತನೇ, ನೀನು ಬಲವುಳ್ಳ ನಿನ್ನ ಮಂಜೂಷದೊಂದಿಗೆ ನಿನ್ನ ವಿಶ್ರಾಂತಿಗೆ ಎದ್ದೇಳು.
- 1 Chronicles 15:16–22 1 ಪೂರ್ವಕಾಲವೃತ್ತಾಂತ 15:16–22ಇದಲ್ಲದೆ ದಾವೀದನು ವಿಶೇಷವಾದ ವೀಣೆ ಗಳನ್ನೂ ಕಿನ್ನರಿಗಳನ್ನೂ ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನು ಎತ್ತುವ ಹಾಗೆ ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವ ದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು. ಹಾಗೆಯೇ ಲೇವಿಯರು ಯೋವೇಲನ ಮಗನಾದ ಹೇಮಾನನನ್ನೂ ಅವನ ಸಹೋದರರಲ್ಲಿ ಬೆರೆಕ್ಯನ ಮಗನಾದ ಆಸಾಫನನ್ನೂ ಮೆರಾರಿಯ ಕುಮಾರರ ಸಹೋದರರಲ್ಲಿ ಕೂಷಾಯನ ಮಗನಾದ ಎತಾನ ನನ್ನೂ ನೇಮಿಸಿದರು. ಅವರ ಸಂಗಡ ಎರಡನೇ ತರಗತಿಯ ತಮ್ಮ ಸಹೋದರರಾಗಿರುವ ಜೆಕರ್ಯ ನನ್ನೂ ಬೇನ್ನನ್ನೂ ಯಾಜೀಯೇಲನನ್ನೂ ಶೆವಿಾರಾ ಮೋತನನ್ನೂ ಯೆಹೀಯೇಲನನ್ನೂ ಉನ್ನಿಯನ್ನೂ ಎಲೀಯಾಬನನ್ನೂ ಬೆನಾಯನನ್ನೂ ಮಾಸೇಯನನ್ನೂ ಮತ್ತಿತ್ಯನನ್ನೂ ಎಲೀಫೆಲೇಹುವನ್ನೂ ಮಿಕ್ನೇಯನನ್ನೂ ದ್ವಾರಪಾಲಕರಾದ ಒಬೇದೆದೋಮನನ್ನೂ ಯೆಗೀ ಯೇಲನನ್ನೂ ನೇಮಿಸಿದರು. ಹಾಡುಗಾರರಾದ ಹೇಮಾನನೂ ಆಸಾಫನೂ ಏತಾನನೂ ತಾಮ್ರದ ತಾಳಗಳನ್ನು ಬಾರಿಸುವದಕ್ಕೂ ಜೆಕರ್ಯನೂ ಅಜೀಯೇಲನೂ ಶೆವಿಾರಾಮೋತನೂ ಯೆಹೀ ಯೇಲನೂ ಉನ್ನಿಯೂ ಎಲೀಯಾಬನೂ ಮಾಸೇ ಯನೂ ಬೆನಾಯನೂ ಅಲಮೋತಿನಿಂದ ವೀಣೆಗಳನ್ನು ಬಾರಿಸುವದಕ್ಕೂ; ಮತ್ತಿತ್ಯನೂ ಎಲೀಫೆಲೇಹುವೂ ಮಿಕ್ನೇಯನೂ ಒಬೇದೆದೋಮನೂ ಯೆಗೀಯೇ ಲನೂ ಅಜಜ್ಯನೂ ಹೆಚ್ಚಳವಾಗಿ ಶಿಮಿನೇಟನಿಂದ ಕಿನ್ನರಿಗಳನ್ನು ಬಾರಿಸುವದಕ್ಕೂ ನೇಮಿಸಲ್ಪಟ್ಟಿದ್ದರು. ಆದರೆ ಲೇವಿಯರ ಪ್ರಧಾನನಾದ ಕೆನನ್ಯನು ಹಾಡು ವದಕ್ಕೆ ನೇಮಿಸಲ್ಪಟ್ಟಿದ್ದನು. ಅವನು ಗ್ರಹಿಕೆಯುಳ್ಳವನಾ ದದರಿಂದ ಹಾಡುವದಕ್ಕೆ ಕಲಿಸುತ್ತಿದ್ದನು.
- 1 Chronicles 25:1–31 1 ಪೂರ್ವಕಾಲವೃತ್ತಾಂತ 25:1–31ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು. ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು. ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು. ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು. ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು. ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು. ಹೀಗೆಯೇ ಅವರ ಲೆಕ್ಕವೂ ಕರ್ತನ ಹಾಡುಗಳಲ್ಲಿ ಬೋಧಿಸಲ್ಪಟ್ಟ ಸಮಸ್ತ ಪ್ರವೀಣರ ಲೆಕ್ಕವೂ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಭತ್ತೆಂಟು ಮಂದಿಯಾಗಿದ್ದರು. ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು. ಆಸಾಫನಿ ಗೋಸ್ಕರ ಮೊದಲನೇ ಚೀಟು ಯೋಸೆಫನಿಗೆ ಬಂತು; ಎರಡನೆಯದು ಗೆದಲ್ಯನಿಗೆ, ಅವನೂ ಅವನ ಸಹೋ ದರರೂ ಅವನ ಕುಮಾರರೂ ಹನ್ನೆರಡು ಮಂದಿ; ಮೂರನೆಯದು ಜಕ್ಕೂರನಿಗೆ; ಅವನೂ ಅವನ ಕುಮಾರರೂ ಸಹೋದರರೂ ಹನ್ನೆರಡು ಮಂದಿ, ನಾಲ್ಕನೆಯದು ಇಚ್ರೀಗೆ, ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಐದನೆ ಯದು ನೆತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ. ಆರನೆ ಯದು ಬುಕ್ಕಿಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಏಳನೆ ಯದು ಯೆಸರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಎಂಟನೆ ಯದು ಯೆಶಾಯನಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಒಂಭ ತ್ತನೆಯದು ಮತ್ತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹತ್ತನೆಯದು ಶಿವ್ಮೆಾಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ; ಹನ್ನೊಂದನೆಯದು ಅಜರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹನ್ನೆರಡನೆಯದು ಹಷಬ್ಯನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿಮೂರನೆಯದು ಶೂಬಾಯೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿನಾಲ್ಕನೆಯದು ಮತ್ತಿತ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿನೈದನೆಯದು ಯೆರೆಮೋತ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ; ಹದಿನಾರನೆಯದು ಹನನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿನೇಳನೆ ಯದು ಯೊಷ್ಬೆಕಾಷನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿ ನೆಂಟನೆಯದು ಹನಾನೀಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ; ಹತ್ತೊಂಭತ್ತನೆಯದು ಮಲ್ಲೋತಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆ ರಡು ಮಂದಿ; ಇಪ್ಪತ್ತನೆಯದು ಎಲೀಯಾತನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಇಪ್ಪತ್ತೊಂದನೆಯದು ಹೋತೀ ರನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ; ಇಪ್ಪತ್ತೆರಡನೆಯದು ಗಿದ್ದಲ್ತಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಇಪ್ಪತ್ತು ಮೂರನೆಯದು ಮಹಜೀಯೋತನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;ಇಪ್ಪತ್ತು ನಾಲ್ಕನೆಯದು ರೊಮಮ್ತಿಯೇಜರ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ. ಇಪ್ಪತ್ತು ನಾಲ್ಕನೆಯದು ರೊಮಮ್ತಿಯೇಜರ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ.