1 Chronicles · chapter 6 · verse 49
1 Chronicles 6:49 in Kannada
ಆದರೆ ಆರೋನನು ಅವನ ಕುಮಾ ರರು ದಹನಬಲಿಯ ಪೀಠದ ಮೇಲೆಯೂ ಧೂಪ ಪೀಠದ ಮೇಲೆಯೂ ಅರ್ಪಿಸುತ್ತಿದ್ದರು. ದೇವರ ಸೇವಕನಾದ ಮೋಶೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಅವರು ಮಹಾಪರಿಶುದ್ಧ ಸ್ಥಾನದ ಸಮಸ್ತ ಕಾರ್ಯಕ್ಕೂ ಇಸ್ರಾಯೇಲಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕೂ ನೇಮಿಸಲ್ಪಟ್ಟರು.
Aadare aaronanu avana kumaa raru dahanabaliya peethada meleyoo dhoopa peethada meleyoo arpisuttiddaru. Devara sevakanaada moshe aajnyaapisida ellaadara prakaara avaru mahaaparishuddha sthaanada samasta kaaryakkoo israayeligoskara praayashchitta maaduvadakkoo nemisalpattaru.
1 Chronicles 6:49 in English
- King James Version (KJV)
- But Aaron and his sons offered upon the altar of the burnt offering, and on the altar of incense, [and were appointed] for all the work of the [place] most holy, and to make an atonement for Israel, according to all that Moses the servant of God had commanded.
- World English Bible (WEB)
- But Aaron and his sons offered on the altar of burnt offering, and on the altar of incense, for all the work of the most holy place, and to make atonement for Israel, according to all that Moses the servant of God had commanded.
- American Standard Version (ASV)
- But Aaron and his sons offered upon the altar of burnt-offering, and upon the altar of incense, for all the work of the most holy place, and to make atonement for Israel, according to all that Moses the servant of God had commanded.
- Bible in Basic English (BBE)
- But Aaron and his sons made offerings on the altar of burned offering, and on the altar of perfume, for all the work of the most holy place, and to take away the sin of Israel, doing everything ordered by Moses, the servant of God.
- Darby Translation (DBY)
- And Aaron and his sons offered upon the altar of the burnt-offering, and on the altar of incense, for all the work of the most holy place, and to make atonement for Israel, according to all that Moses the servant of God had commanded.
- Webster's Bible (WBS)
- But Aaron and his sons offered upon the altar of the burnt-offering, and on the altar of incense, [and were appointed] for all the work of the [place] most holy, and to make an atonement for Israel, according to all that Moses the servant of God had commanded.
- Young's Literal Translation (YLT)
- And Aaron and his sons are making perfume on the altar of the burnt-offering, and on the altar of the perfume, for all the work of the holy of holies, and to make atonement for Israel, according to all that Moses servant of God commanded.
Read in context
- 47ಇವನು ಶೆಮೆರನ ಮಗನು, ಇವನು ಮಹ್ಲೀಯ ಮಗನು, ಇವನು ಮೂಷೀಯ ಮಗನು, ಇವನು ಮೆರಾರಿಯ ಮಗನು, ಇವನು ಲೇವಿಯ ಮಗನು.
- 48ಅವರ ಸಹೋದರರಾದ ಲೇವಿಯರು ದೇವರ ಮನೆಯ ಗುಡಾರದ ಸಮಸ್ತ ಸೇವೆಗೆ ನೇಮಿಸಲ್ಪಟ್ಟ ವರಾಗಿದ್ದರು.
- 49ಆದರೆ ಆರೋನನು ಅವನ ಕುಮಾ ರರು ದಹನಬಲಿಯ ಪೀಠದ ಮೇಲೆಯೂ ಧೂಪ ಪೀಠದ ಮೇಲೆಯೂ ಅರ್ಪಿಸುತ್ತಿದ್ದರು. ದೇವರ ಸೇವಕನಾದ ಮೋಶೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಅವರು ಮಹಾಪರಿಶುದ್ಧ ಸ್ಥಾನದ ಸಮಸ್ತ ಕಾರ್ಯಕ್ಕೂ ಇಸ್ರಾಯೇಲಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕೂ ನೇಮಿಸಲ್ಪಟ್ಟರು.
- 50ಆರೋನನ ಕುಮಾರರು-- ಇವನ ಮಗನು ಎಲ್ಲಾಜಾರನು, ಇವನ ಮಗನು ಫಿನೇ ಹಾಸನು, ಇವನ ಮಗನು ಅಬೀಷೂವನು,
- 51ಇವನ ಮಗನು ಬುಕ್ಕೀಯು, ಇವನ ಮಗನು ಉಜ್ಜೀಯು, ಇವನ ಮಗನು ಜೆರಹ್ಯಾಹನು, ಇವನ ಮಗನು ಮೆರಾಯೋತನು,
Cross references
- Leviticus 4:20 ಯಾಜಕಕಾಂಡ 4:20ಪಾಪದ ಬಲಿ ಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ ಈ ಹೋರಿಗೂ ಮಾಡಬೇಕು; ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವರಿಗೆ ಕ್ಷಮಿಸಲ್ಪಡುವದು.
- Exodus 27:1–8 ವಿಮೋಚನಕಾಂಡ 27:1–8ಇದಲ್ಲದೆ ಜಾಲೀ ಮರದಿಂದ ಯಜ್ಞವೇದಿಯನ್ನು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಮಾಡಬೇಕು. ಆ ಯಜ್ಞವೇದಿಯು ಚಚ್ಚೌಕವಾಗಿರಬೇಕು. ಅದರ ಎತ್ತ ರವು ಮೂರು ಮೊಳ ಇರಬೇಕು. ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಬೇಕು. ಆ ಕೊಂಬುಗಳು ಯಜ್ಞವೇದಿಗೆ ಎತ್ತರವಾಗಿರಬೇಕು; ನೀನು ಅದನ್ನು ಹಿತ್ತಾಳೆಯಿಂದ ಹೊದಿಸಬೇಕು. ಅದರ ಬೂದಿಗಾಗಿ ತಟ್ಟೆಗಳನ್ನು ಸಲಿಕೆಗಳನ್ನು ಬೋಗುಣಿಗಳನ್ನು ಮುಳ್ಳುಗಳನ್ನು ಅಗ್ನಿಪಾತ್ರೆಗಳನ್ನು ಎಲ್ಲಾ ಉಪಕರಣಗಳನ್ನು ಹಿತ್ತಾಳೆಯಿಂದ ಮಾಡಬೇಕು. ಅದಕ್ಕೆ ಹಿತ್ತಾಳೆಯ ಜಾಳಿಗೆಯನ್ನು ಮಾಡಿ ಆ ಜಾಳಿಗೆಯ ಮೇಲೆ ನಾಲ್ಕು ಮೂಲೆಗಳಿಗೆ ಹಿತ್ತಾಳೆಯ ನಾಲ್ಕು ಬಳೆಗಳನ್ನು ಮಾಡಬೇಕು. ಆ ಜಾಳಿಗೆಯು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ಇದ್ದು, ಯಜ್ಞವೇದಿಯ ಬುಡದಿಂದ ನಡುವಿನ ತನಕ ಇರು ವಂತೆ ಹಾಕಿಸಬೇಕು. ಯಜ್ಞವೇದಿಗೆ ಜಾಲೀ ಮರ ದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಹಿತ್ತಾಳೆ ಯಿಂದ ಹೊದಿಸಬೇಕು. ಆ ಕೋಲುಗಳನ್ನು ಬಳೆ ಗಳಲ್ಲಿ ಸೇರಿಸಬೇಕು. ಅವುಗಳು ಯಜ್ಞವೇದಿಯನ್ನು ಹೊರುವದಕ್ಕೆ ಅದರ ಎರಡೂ ಪಾರ್ಶ್ವಗಳಲ್ಲಿ ಇರ ಬೇಕು. ಹಲಗೆಗಳಿಂದ ಅದನ್ನು ಪೊಳ್ಳಾಗಿರುವಂತೆ ಮಾಡಬೇಕು. ಬೆಟ್ಟದಲ್ಲಿ ನಿನಗೆ ತೋರಿಸಿದಂತೆಯೇ ಅದನ್ನು ಮಾಡಬೇಕು.
- Exodus 30:1–7 ವಿಮೋಚನಕಾಂಡ 30:1–7ನೀನು ಧೂಪ ಸುಡುವ ವೇದಿಯನ್ನು ಮಾಡಬೇಕು; ಜಾಲೀ ಮರದಿಂದ ಅದನ್ನು ಮಾಡಬೇಕು. ಅದರ ಉದ್ದ ಒಂದು ಮೊಳ, ಅಗಲ ಒಂದು ಮೊಳ, ಎತ್ತರ ಎರಡು ಮೊಳ ಇದ್ದು ಅದು ಚಚ್ಚೌಕವಾಗಿರಬೇಕು. ಅದಕ್ಕೆ ಕೊಂಬುಗಳನ್ನು ಅದ ರಿಂದಲೇ ಮಾಡಬೇಕು. ಮೇಲ್ಭಾಗವನ್ನೂ ಸುತ್ತಲಿನ ಭಾಗಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು. ಗೋಟಿನ ಕೆಳಗೆ ಎರಡೂ ಪಕ್ಕಗಳ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡ ಬೇಕು. ಇವುಗಳನ್ನು ಹೊರುವದಕ್ಕಾಗಿ ಅವುಗಳಲ್ಲಿ ಸಿಕ್ಕಿಸಬೇಕು. ಆ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು. ಪ್ರತಿದಿನ ಬೆಳಿಗ್ಗೆ ಆರೋನನು ಪರಿಮಳ ಧೂಪ ವನ್ನು ಅದರ ಮೇಲೆ ಸುಡಬೇಕು. ಅವನು ದೀಪಗಳನ್ನು ಸಿದ್ಧಮಾಡುವಾಗ ಪರಿಮಳ ಧೂಪವನ್ನು ಅದರ ಮೇಲೆ ಸುಡಬೇಕು.
- Exodus 30:10–16 ವಿಮೋಚನಕಾಂಡ 30:10–16ಆರೋನನು ಅದರ ಕೊಂಬುಗಳಿಗೆ ವರುಷಕ್ಕೆ ಒಂದು ಸಾರಿ ಪ್ರಾಯಶ್ಚಿತ್ತದ ಬಲಿಯ ರಕ್ತದಿಂದ ಪ್ರಾಯಶ್ಚಿತ್ತ ಮಾಡಬೇಕು. ವರುಷಕ್ಕೊಂದು ಸಾರಿ ನಿಮ್ಮ ಸಂತತಿಗಳಲ್ಲೆಲ್ಲಾ ಅದನ್ನು ಮಾಡಬೇಕು. ಅದು ಕರ್ತನಿಗೆ ಅತಿಪರಿಶುದ್ಧವಾದದ್ದು. ಆಗ ಕರ್ತನು ಮಾತನಾಡಿ ಮೋಶೆಗೆ-- ನೀನು ಇಸ್ರಾಯೇಲ್ ಮಕ್ಕಳ ಲೆಕ್ಕವನ್ನು ಅದರ ಸಂಖ್ಯೆಗೆ ಸರಿಯಾಗಿ ಎಣಿಸಿದಾಗ ಅವರಲ್ಲಿ ವ್ಯಾಧಿ ಉಂಟಾಗದ ಹಾಗೆ ಅವರನ್ನು ಕ್ರಮವಾಗಿ ಎಣಿಸಿ ಒಬ್ಬೊಬ್ಬನು ತನ್ನ ಪ್ರಾಣದ ವಿಮೋಚನೆಯ ಕ್ರಮವನ್ನು ಕರ್ತನಿಗೆ ಕೊಡಬೇಕು. ಎಣಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನುಷ್ಯನು ಕೊಡಬೇಕಾದದ್ದು ಏನಂದರೆ: ಶೆಕೆಲಿಗೆ ಇಪ್ಪತ್ತು ಗೇರಾ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರೆ ಶೆಕೆಲ್ ಕೊಡಬೇಕು. ಅರೆ ಶೆಕೆಲ್ ಕರ್ತನಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು. ಕ್ರಮವಾಗಿ ಲೆಕ್ಕಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನು ಷ್ಯನು ಇಪ್ಪತ್ತು ವರುಷ ಮೊದಲುಗೊಂಡು ಅದಕ್ಕೆ ಮೇಲಾದ ಪ್ರಾಯವುಳ್ಳವರು ಕರ್ತನಿಗೆ ಕಾಣಿಕೆಯನ್ನು ಕೊಡಬೇಕು. ನಿಮ್ಮ ಪ್ರಾಣಗಳ ಪ್ರಾಯಶ್ಚಿತ್ತಕ್ಕೆ ಕರ್ತನಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವದರಲ್ಲಿ ಐಶ್ವರ್ಯವಂತರು ಅರೆ ಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು. ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲ್ ಮಕ್ಕಳಿಂದ ತೆಗೆದುಕೊಂಡು ಸಭೆಯ ಗುಡಾರದ ಕೆಲಸಕ್ಕಾಗಿ ಪ್ರತ್ಯೇ ಕಿಸಬೇಕು. ಇದೇ ಕರ್ತನ ಮುಂದೆ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿಯೂ ಇರುವದು ಅಂದನು.
- Exodus 29:33 ವಿಮೋಚನಕಾಂಡ 29:33ಅವ ರನ್ನು ಪ್ರತಿಷ್ಠೆಮಾಡುವದಕ್ಕೋಸ್ಕರ ಮತ್ತು ಪರಿಶುದ್ಧ ಮಾಡುವದಕ್ಕೋಸ್ಕರ ಅವರಿಗಾಗಿ ಪ್ರಾಯಶ್ಚಿತ್ತ ಮಾಡಿ ದವುಗಳನ್ನು ಅವರೇ ಊಟಮಾಡಬೇಕು. ಅನ್ಯರು ಅವುಗಳನ್ನು ಉಣ್ಣಬಾರದು, ಯಾಕಂದರೆ ಅವುಗಳು ಪರಿಶುದ್ಧವಾದವುಗಳು.
- Hebrews 7:11–14 ಇಬ್ರಿಯರಿಗೆ 7:11–14ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು). ಯಾಜಕತ್ವವು ಬೇರೆಯಾದರೆ ನ್ಯಾಯಪ್ರಮಾಣವು ಕೂಡ ಬೇರೆ ಯಾಗುವದು ಅಗತ್ಯ. ಇವು ಯಾವಾತನ ವಿಷಯ ದಲ್ಲಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸಂಬಂಧಪಟ್ಟವನು; ಆ ಗೋತ್ರದವರಲ್ಲಿ ಒಬ್ಬನೂ ಯಜ್ಞವೇದಿಯ ಬಳಿಯಲ್ಲಿ ಸೇವೆಮಾಡಿದ್ದಿಲ್ಲ. ನಮ್ಮ ಕರ್ತನು ಯೂದಾ ಗೋತ್ರದಲ್ಲಿ ಜನಿಸಿದಾತನೆಂಬದು ಸ್ಪಷ್ಟವಾಗಿದೆಯಷ್ಟೆ; ಈ ಗೋತ್ರದ ವಿಷಯದಲ್ಲಿ ಮೋಶೆಯು ಯಾಜಕರ ಸಂಬಂಧವಾಗಿ ಏನೂ ಹೇಳಲಿಲ್ಲ.
- Job 33:24 ಯೋಬನು 33:24ಆಗ ಆತನು ಅವನಿಗೆ ಕೃಪಾಳುವಾಗಿದ್ದು ಕುಣಿಗೆ ಇಳಿಯು ವದರಿಂದ ಅವನನ್ನು ಬಿಡಿಸುತ್ತಾನೆ; ನಾನು ವಿಮೋ ಚನೆಯ ಕ್ರಯವನ್ನು ಕಂಡುಕೊಂಡೆನು.
- Deuteronomy 18:1–8 ಧರ್ಮೋಪದೇಶಕಾಂಡ 18:1–8ಯಾಜಕರಾದ ಲೇವಿಯರಿಗೂ ಆ ಎಲ್ಲಾ ಲೇವಿಯ ಗೋತ್ರಕ್ಕೂ ಇಸ್ರಾಯೇಲಿನ ಸಂಗಡ ಪಾಲೂ ಸ್ವಾಸ್ತ್ಯವೂ ಇರಬಾರದು; ಅವರು ಕರ್ತನ ಬೆಂಕಿಯಿಂದ ಮಾಡಿದ ಬಲಿಗಳನ್ನೂ ಆತನ ಸ್ವಾಸ್ತ್ಯವನ್ನೂ ತಿನ್ನಬೇಕು. ಆದದರಿಂದ ಅವರಿಗೆ ಅವರ ಸಹೋದರರ ಮಧ್ಯದಲ್ಲಿ ಸ್ವಾಸ್ತ್ಯವಿರಬಾರದು; ಕರ್ತನು ಅವರಿಗೆ ಹೇಳಿದ ಹಾಗೆ ಆತನೇ ಅವರ ಸ್ವಾಸ್ತ್ಯವಾಗಿದ್ದಾನೆ. ಎತ್ತಾಗಲಿ ಕುರಿಯಾಗಲಿ ಒಂದು ಬಲಿಯನ್ನು ಅರ್ಪಿಸುವವರ ಕಡೆಯಿಂದಲೂ ಜನರ ಕಡೆಯಿಂದ ಲೂ ಯಾಜಕರಿಗೆ ಬರತಕ್ಕದ್ದು ಇದೇ: ಮುಂದೊಡೆ ಯನ್ನೂ ಎರಡು ದವಡೆಗಳನ್ನೂ ಕೋಷ್ಟವನ್ನೂ ಯಾಜ ಕನಿಗೆ ಕೊಡಬೇಕು. ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆ ಗಳ ಪ್ರಥಮ ಫಲವನ್ನೂ ನಿನ್ನ ಕುರಿಗಳ ಉಣ್ಣೆ ಯಲ್ಲಿ ಪ್ರಥಮವಾದದ್ದನ್ನೂ ಅವನಿಗೆ ಕೊಡಬೇಕು. ಅವನೂ ಅವನ ಕುಮಾರರೂ ನಿತ್ಯವಾಗಿ ಕರ್ತನ ಹೆಸರಿನಲ್ಲಿ ಸೇವಿಸುತ್ತಾ ನಿಂತಿರುವ ಹಾಗೆ ಅವನನ್ನು ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡಿದ್ದಾನೆ. ಇದಲ್ಲದೆ ಲೇವಿಯು ಸಮಸ್ತ ಇಸ್ರಾಯೇಲಿನ ಲ್ಲಿರುವ ನಿನ್ನ ಯಾವ ಬಾಗಲುಗಳಿಂದ ಅವನು ಪ್ರವಾಸವಾಗಿರುವ ಸ್ಥಳದಿಂದ ಬಂದು ತನ್ನ ಮನಸ್ಸಿನ ಪೂರ್ಣಾಪೇಕ್ಷೆಯೊಂದಿಗೆ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಬಂದರೆ ಅಲ್ಲಿ ಕರ್ತನ ಮುಂದೆ ನಿಂತು ಕೊಳ್ಳುವ ಅವನ ಸಹೋದರರಾದ ಲೇವಿಯರ ಹಾಗೆ ಅವನು ತನ್ನ ದೇವರಾದ ಕರ್ತನ ಹೆಸರಿ ನಲ್ಲಿ ಸೇವೆಮಾಡಬಹುದು. ಅವರು ಪಿತ್ರಾರ್ಜಿತ ಆಸ್ತಿಯನ್ನು ಮಾರಿದ್ದಲ್ಲದೆ ಸಮವಾದ ಭಾಗಗಳನ್ನು ತಿನ್ನಬೇಕು.
- Leviticus 1:7–9 ಯಾಜಕಕಾಂಡ 1:7–9ಯಾಜಕನಾದ ಆರೋನನ ಕುಮಾ ರರು ಯಜ್ಞವೇದಿಯ ಮೇಲೆ ಬೆಂಕಿ ಇಟ್ಟು ಆ ಬೆಂಕಿಯ ಮೇಲೆ ಕ್ರಮವಾಗಿ ಕಟ್ಟಿಗೆಯನ್ನು ಇಡಬೇಕು. ಆಗ ಆರೋನನ ಕುಮಾರರಾದ ಯಾಜಕರು ಅದರ ಭಾಗಗಳನ್ನು ಅಂದರೆ ತಲೆಯನ್ನೂ ಕೊಬ್ಬನ್ನೂ ಯಜ್ಞವೇದಿಯ ಮೇಲಿನ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು; ಅದರ ಕರುಳುಗಳನ್ನೂ ಕಾಲುಗಳನ್ನೂ ಅವನು ನೀರಿನಲ್ಲಿ ತೊಳೆಯಬೇಕು; ಯಾಜಕನು ಎಲ್ಲವನ್ನೂ ಯಜ್ಞವೇದಿಯ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ ಕರ್ತನಿಗೆ ಸುವಾಸನೆಯಾಗು ವಂತೆಯೂ ಸುಡಬೇಕು.
- Leviticus 21:1–22 ಯಾಜಕಕಾಂಡ 21:1–22ತರುವಾಯ ಕರ್ತನು ಮೋಶೆಗೆ ಹೇಳಿದ್ದೇನಂದರೆ--ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಸತ್ತವರ ನಿಮಿತ್ತವಾಗಿ ಅವನ ಜನರಲ್ಲಿ ಯಾವನೂ ಹೊಲೆಯಾಗಬಾರದು. ಆದರೆ ತನ್ನ ಹತ್ತಿರದ ಸಂಬಂಧಿಯಾಗಿ, ಅಂದರೆ ಅವನ ತಾಯಿ, ತಂದೆ, ಮಗ, ಮಗಳು, ಸಹೋದರನಿಗಾಗಿ ಅವನಿಗೆ ಹತ್ತಿರದ ಗಂಡನಿಲ್ಲದ ಕನ್ನಿಕೆಯಾದ ಸಹೋದರಿಗಾಗಿ ಅವನು ಹೊಲೆಯಾಗಬಹುದು. ಆದರೆ ಅವನು ತನ್ನ ಜನರೊಳಗೆ ಮುಖ್ಯಸ್ಥನಾಗಿ ರುವದರಿಂದ ತನ್ನನ್ನು ತಾನು ಹೊಲೆಮಾಡಿ ಕೊಳ್ಳಬಾರದು ಅಪವಿತ್ರಮಾಡಿಕೊಳ್ಳಲೂಬಾರದು. ಅವರು ತಮ್ಮ ತಲೆಯನ್ನು ಬೋಳಿಸಿಕೊಳ್ಳಬಾರದು. ಅಲ್ಲದೆ ತಮ್ಮ ಗಡ್ಡದ ಮೂಲೆಯನ್ನು ಬೋಳಿಸಿ ಕೊಳ್ಳಬಾರದು. ತಮ್ಮ ಶರೀರವನ್ನು ಕೊಯ್ದುಕೊಳ್ಳ ಬಾರದು. ಅವರು ತಮ್ಮ ಕರ್ತನಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತಮ್ಮ ದೇವರ ರೊಟ್ಟಿಯನ್ನು ಅರ್ಪಿಸುವದರಿಂದ ಅವರು ತಮ್ಮ ದೇವರ ಹೆಸರನ್ನು ಅಪವಿತ್ರಪಡಿಸದೆ ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು; ಆದಕಾರಣ ಅವರು ಪರಿಶುದ್ಧ ರಾಗಿರುವರು. ಅವರು ವ್ಯಭಿಚಾರಿಯನ್ನು ಇಲ್ಲವೆ ಅಪವಿತ್ರಳನ್ನು ಹೆಂಡತಿಯಾಗಿ ತೆಗೆದುಕೊಳ್ಳಬಾರದು; ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯನ್ನು ತೆಗೆದು ಕೊಳ್ಳಬಾರದು; ಅವನು ತನ್ನ ದೇವರಿಗೆ ಪರಿಶುದ್ಧ ನಾಗಿದ್ದಾನೆ. ಅವನು ನಿನ್ನ ದೇವರಿಗೆ ರೊಟ್ಟಿಯನ್ನು ಸಮರ್ಪಿಸುವ ಕಾರಣ ನೀನು ಅವನನ್ನು ಶುದ್ಧೀಕರಿಸ ಬೇಕು, ಅವನು ನನಗೆ ಪರಿಶುದ್ಧನಾಗಿರುವನು. ನಿನ್ನನ್ನು ಶುದ್ಧೀಕರಿಸುವ ಕರ್ತನಾದ ನಾನು ಪರಿಶುದ್ಧನು. ಯಾವದೇ ಯಾಜಕನ ಮಗಳು ವ್ಯಭಿ ಚಾರ ಕೃತ್ಯದಿಂದ ತನ್ನನ್ನು ಅಪವಿತ್ರಮಾಡಿಕೊಂಡರೆ ಅವಳು ತನ್ನ ತಂದೆಯನ್ನು ಅಪವಿತ್ರಮಾಡುತ್ತಾಳೆ; ಅವಳನ್ನು ಬೆಂಕಿಯಿಂದ ಸುಡಬೇಕು. ಅವನ ಸಹೋದರರೊಳಗೆ ಮಹಾಯಾಜಕ ನಾಗಿದ್ದು ಯಾವನ ತಲೆಯ ಮೇಲೆ ಅಭಿಷೇಕ ತೈಲವು ಸುರಿಯಲ್ಪಟ್ಟಿದೆಯೋ ಮತ್ತು ಯಾವನು ಉಡುಪು ಗಳನ್ನು ಧರಿಸಿಕೊಳ್ಳುವದಕ್ಕೆ ಪ್ರತಿಷ್ಠಿಸಲ್ಪಟ್ಟಿದ್ದಾನೋ ಅವನು ತನ್ನ ತಲೆಯನ್ನು ಮುಚ್ಚಿಕೊಳ್ಳಲೂಬಾರದು ಮತ್ತು ತನ್ನ ಬಟ್ಟೆಗಳನ್ನು ಹರಿದುಕೊಳ್ಳಲೂಬಾರದು; ಇಲ್ಲವೆ ಯಾವ ಮೃತ ಶರೀರದ ಬಳಿಗೂ ಹೋಗಬಾರದು; ತನ್ನ ತಂದೆಗಾಗಲಿ ತಾಯಿಗಾಗಲಿ ತನ್ನನ್ನು ಹೊಲೆಮಾಡಿಕೊಳ್ಳಬಾರದು. ಇದಲ್ಲದೆ ಪರಿಶುದ್ಧ ಸ್ಥಳದಿಂದ ಹೊರಗೆ ಹೋಗಬಾರದು ತನ್ನ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ತನ್ನ ದೇವರ ಅಭಿಷೇಕ ತೈಲದ ಕಿರೀಟವು ಅವನ ತಲೆಯ ಮೇಲೆ ಇರುತ್ತದೆ; ನಾನೇ ಕರ್ತನು. ಅವನು ತನಗೆ ಹೆಂಡತಿಯನ್ನು ಅವಳ ಕನ್ನಿಕಾವಸ್ಥೆಯಲ್ಲಿ ತೆಗೆದುಕೊಳ್ಳಬೇಕು. ವಿಧವೆ ಯನ್ನಾಗಲಿ, ಬಿಡಲ್ಪಟ್ಟ ಸ್ತ್ರೀಯನ್ನಾಗಲಿ, ಅಪವಿತ್ರ ಳನ್ನಾಗಲಿ, ಇಲ್ಲವೆ ಸೂಳೆಯನ್ನಾಗಲಿ, ಇಂಥವರನ್ನು ಅವನು ತೆಗೆದುಕೊಳ್ಳಬಾರದು. ಆದರೆ ತನ್ನ ಸ್ವಂತ ಜನರಲ್ಲಿ ಒಬ್ಬ ಕನ್ನಿಕೆಯನ್ನು ತನಗೆ ಹೆಂಡತಿಯನ್ನಾಗಿ ತೆಗೆದುಕೊಳ್ಳಬೇಕು. ಇದಲ್ಲದೆ ಅವನು ತನ್ನ ಜನರೊಳಗೆ ತನ್ನ ಸಂತತಿಯನ್ನು ಅಪವಿತ್ರ ಮಾಡಬಾರದು. ಕರ್ತನಾದ ನಾನು ಅವನನ್ನು ಶುದ್ಧೀಕರಿಸುತ್ತೇನೆ. ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- ಆರೋನನೊಂದಿಗೆ ಮಾತ ನಾಡಿ ಹೇಳಬೇಕಾದದ್ದೇನಂದರೆ--ನಿನ್ನ ಸಂತತಿಯು ಅವರ ವಂಶಾವಳಿಗಳಲ್ಲಿ ಯಾವನಿಗೆ ಯಾವದಾದರೂ ಕಳಂಕವಿರುವದಾದರೆ ಅವನು ತನ್ನ ದೇವರ ರೊಟ್ಟಿಯನ್ನು ಸಮರ್ಪಿಸುವದಕ್ಕಾಗಿ ಬರಬಾರದು. ಯಾವ ಮನುಷ್ಯನು ಕಳಂಕವುಳ್ಳವನಾಗಿರುತ್ತಾನೋ ಅಂದರೆ ಕಣ್ಣಿಲ್ಲದವನು ಇಲ್ಲವೆ ಕುಂಟನು ಚಪ್ಪಟೆ ಯಾದ ಮೂಗುಳ್ಳವನು ಹೆಚ್ಚಾದ ಅಂಗವುಳ್ಳವನು ಮುರಿದ ಪಾದವುಳ್ಳವನು ಮುರಿದ ಕೈಯುಳ್ಳವನು ಗೂನು ಬೆನ್ನುಳ್ಳವನು ಗಿಡ್ಡನು ಕಣ್ಣುಗಳಲ್ಲಿ ಕಳಂಕವುಳ್ಳವನು ಹುರುಕುಳ್ಳವನು ತುರಿಯುಳ್ಳವನು ತನ್ನ ಬೀಜಹೊಡೆದವನು ಯಾಜಕನಾದ ಆರೋನನ ಸಂತತಿಯಲ್ಲಿ ಕಳಂಕವುಳ್ಳ ಯಾವ ಮನುಷ್ಯನೂ ಅಗ್ನಿ ಸಮರ್ಪಣೆಗಳನ್ನು ಅರ್ಪಿಸು ವದಕ್ಕಾಗಿ ಕರ್ತನ ಸನ್ನಿಧಿಯಲ್ಲಿ ಬರಬಾರದು; ಕಳಂಕವುಳ್ಳವನು ತನ್ನ ದೇವರ ರೊಟ್ಟಿಯನ್ನು ಅರ್ಪಿಸುವದಕ್ಕಾಗಿ ಸವಿಾಪಬರಬಾರದು. ಅವನು ಅತಿ ಪರಿಶುದ್ಧವಾದ ಮತ್ತು ಪರಿಶುದ್ಧವಾದ ತನ್ನ ದೇವರ ರೊಟ್ಟಿಯನ್ನು ತಿನ್ನಬೇಕು.
- Deuteronomy 34:5 ಧರ್ಮೋಪದೇಶಕಾಂಡ 34:5ಕರ್ತನ ಮಾತಿನ ಹಾಗೆ ಕರ್ತನ ದಾಸನಾದ ಮೋಶೆಯು ಅಲ್ಲಿ ಮೋವಾಬಿನ ದೇಶದಲ್ಲಿ ಸತ್ತನು.
- Exodus 29:36–37 ವಿಮೋಚನಕಾಂಡ 29:36–37ಪಾಪದ ಯಜ್ಞವಾದ ಹೋರಿಯನ್ನು ಪ್ರತಿದಿನ ಪ್ರಾಯಶ್ಚಿತ್ತಕ್ಕಾಗಿ ತಂದು ಯಜ್ಞವೇದಿಗಾಗಿ ಪ್ರಾಯ ಶ್ಚಿತ್ತ ಮಾಡಿದ ಮೇಲೆ ಅದರ ದೋಷವನ್ನು ಪರಿ ಹರಿಸಿ ಅದನ್ನು ಪವಿತ್ರಮಾಡುವದಕ್ಕೆ ಅದನ್ನು ಅಭಿಷೇಕಿಸಬೇಕು. ಏಳು ದಿವಸ ಯಜ್ಞವೇದಿಗೋಸ್ಕರ ಪ್ರಾಯಶ್ಚಿತ್ತ ಮಾಡಿ ಅದನ್ನು ಪವಿತ್ರಮಾಡಬೇಕು. ಆಗ ಯಜ್ಞ ವೇದಿಯು ಅತಿಪರಿಶುದ್ಧವಾಗಿರುವದು. ಯಜ್ಞವೇದಿ ಯನ್ನು ಮುಟ್ಟುವದೆಲ್ಲಾ ಪವಿತ್ರವಾಗಿರಬೇಕು.
Original words (Hebrew)
- Aaron · H175אַהֲרוֹן ʼAhărôwn
- sons · H1121בֵּן bên
- offered · H6999קָטַר qâṭar
- altar · H4196מִזְבֵּחַ mizbêach
- offering · H5930עֹלָה ʻôlâh
- altar · H4196מִזְבֵּחַ mizbêach
- incense · H7004קְטֹרֶת qᵉṭôreth
- work · H4399מְלָאכָה mᵉlâʼkâh
- most · H6944קֹדֶשׁ qôdesh
- holy · H6944קֹדֶשׁ qôdesh
- atonement · H3722כָּפַר kâphar
- Israel · H3478יִשְׂרָאֵל Yisrâʼêl
- Moses · H4872מֹשֶׁה Môsheh
- servant · H5650עֶבֶד ʻebed
- God · H430אֱלֹהִים ʼĕlôhîym
- commanded · H6680צָוָה tsâvâh