1 Chronicles · chapter 9 · verse 33
1 Chronicles 9:33 in Kannada
ಇದಲ್ಲದೆ ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ಹಾಡುಗಾರರಾಗಿದ್ದು ಸ್ವತಂತ್ರವಾಗಿ ಕೊಠಡಿ ಗಳಲ್ಲಿ ವಾಸವಾಗಿದ್ದರು; ಅವರು ರಾತ್ರಿ ಹಗಲು ಅದೇ ಕಾರ್ಯದಲ್ಲಿದ್ದರು.
Idallade leviyara pitrugalalli mukhyastharaada ivaru haadugaararaagiddu svatantravaagi kothadi galalli vaasavaagiddaru; avaru raatri hagalu ade kaaryadalliddaru.
1 Chronicles 9:33 in English
- King James Version (KJV)
- And these [are] the singers, chief of the fathers of the Levites, [who remaining] in the chambers [were] free: for they were employed in [that] work day and night.
- World English Bible (WEB)
- These are the singers, heads of fathers’ households of the Levites, who lived in the rooms and were free from other service, for they were employed in their work day and night.
- American Standard Version (ASV)
- And these are the singers, heads of fathers’ [houses] of the Levites, [who dwelt] in the chambers [and were] free [from other service]; for they were employed in their work day and night.
- Bible in Basic English (BBE)
- And these were those who had the ordering of the music and songs, heads of families of the Levites, who were living in the rooms, and were free from other work, for their work went on day and night.
- Darby Translation (DBY)
- And these were the singers, chief fathers of the Levites, [who were] in the chambers free from service; for they were employed day and night.
- Webster's Bible (WBS)
- And these [are] the singers, chief of the fathers of the Levites, [who remaining] in the chambers [were] free: for they were employed in [that] work day and night.
- Young's Literal Translation (YLT)
- And these who sing, heads of fathers of the Levites, in the chambers, [are] free, for by day and by night [they are] over them in the work.
Read in context
- 31ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ಲೇವಿ ಯರಲ್ಲಿ ಒಬ್ಬನಾಗಿದ್ದು ತಟ್ಟೆಗಳ ಮೇಲೆ ಮಾಡಲ್ಪಟ್ಟ ಭಕ್ಷ್ಯಗಳ ಕೆಲಸಕ್ಕೆ ನೇಮಿಸಲ್ಪಟ್ಟಿದ್ದನು.
- 32ಸಮ್ಮುಖದ ರೊಟ್ಟಿಯನ್ನು ಪ್ರತಿಸಬ್ಬತ್ ದಿವಸದಲ್ಲಿ ಸಿದ್ಧಮಾಡು ವದಕ್ಕೆ ಕೆಹಾತ್ಯರ ಕುಮಾರರಾದ ಅವರ ಸಹೋದರ ರಲ್ಲಿ ಕೆಲವರು ನೇಮಿಸಲ್ಪಟ್ಟಿದ್ದರು.
- 33ಇದಲ್ಲದೆ ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ಹಾಡುಗಾರರಾಗಿದ್ದು ಸ್ವತಂತ್ರವಾಗಿ ಕೊಠಡಿ ಗಳಲ್ಲಿ ವಾಸವಾಗಿದ್ದರು; ಅವರು ರಾತ್ರಿ ಹಗಲು ಅದೇ ಕಾರ್ಯದಲ್ಲಿದ್ದರು.
- 34ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ತಮ್ಮ ವಂಶಗಳಲ್ಲಿ ಮುಖ್ಯಸ್ಥರಾಗಿದ್ದು ಯೆರೂಸಲೇಮಿ ನಲ್ಲಿ ವಾಸವಾಗಿದ್ದರು.
- 35ಇದಲ್ಲದೆ ಗಿಬ್ಯೋನನ ತಂದೆಯಾದ ಯೆಯೂ ವೇಲನು ಗಿಬ್ಯೋನಿನಲ್ಲಿ ವಾಸವಾಗಿದ್ದನು. ಅವನ ಹೆಂಡತಿಯ ಹೆಸರು ಮಾಕಳು.
Cross references
- 1 Chronicles 6:31–33 1 ಪೂರ್ವಕಾಲವೃತ್ತಾಂತ 6:31–33ಮಂಜೂಷವನ್ನು ನೆಲೆಯಾಗಿ ಇರಿಸಿದ ತರು ವಾಯ ದಾವೀದನು ಕರ್ತನ ಮನೆಯಲ್ಲಿ ಹಾಡುವ ಸೇವೆಯ ಮೇಲೆ ಇರಿಸಿದವರು ಇವರೇ. ಸೊಲೊ ಮೋನನು ಯೆರೂಸಲೇಮಿನಲ್ಲಿ ಕರ್ತನ ಮನೆಯನ್ನು ಕಟ್ಟುವ ವರೆಗೆ ಇವರು ಹಾಡುವ ಸೇವೆಯಲ್ಲಿ ಸಭೆಯ ಗುಡಾರ ನಿವಾಸದ ಮುಂದೆ ಸೇವಿಸುತ್ತಾ ಇದ್ದರು; ಆಗ ಅವರು ತಮ್ಮ ಸೇವೆಯಲ್ಲಿ ಕ್ರಮದ ಪ್ರಕಾರ ಕಾಯುತ್ತಿದ್ದರು. ತಮ್ಮ ಮಕ್ಕಳ ಸಂಗಡ ಕಾಯುತ್ತಿದ್ದವರು ಯಾರಂದರೆ--ಕೆಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಇವನು ಯೋವೇಲನ ಮಗನು,
- 1 Chronicles 25:1–31 1 ಪೂರ್ವಕಾಲವೃತ್ತಾಂತ 25:1–31ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು. ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು. ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು. ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು. ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು. ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು. ಹೀಗೆಯೇ ಅವರ ಲೆಕ್ಕವೂ ಕರ್ತನ ಹಾಡುಗಳಲ್ಲಿ ಬೋಧಿಸಲ್ಪಟ್ಟ ಸಮಸ್ತ ಪ್ರವೀಣರ ಲೆಕ್ಕವೂ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಭತ್ತೆಂಟು ಮಂದಿಯಾಗಿದ್ದರು. ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು. ಆಸಾಫನಿ ಗೋಸ್ಕರ ಮೊದಲನೇ ಚೀಟು ಯೋಸೆಫನಿಗೆ ಬಂತು; ಎರಡನೆಯದು ಗೆದಲ್ಯನಿಗೆ, ಅವನೂ ಅವನ ಸಹೋ ದರರೂ ಅವನ ಕುಮಾರರೂ ಹನ್ನೆರಡು ಮಂದಿ; ಮೂರನೆಯದು ಜಕ್ಕೂರನಿಗೆ; ಅವನೂ ಅವನ ಕುಮಾರರೂ ಸಹೋದರರೂ ಹನ್ನೆರಡು ಮಂದಿ, ನಾಲ್ಕನೆಯದು ಇಚ್ರೀಗೆ, ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಐದನೆ ಯದು ನೆತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ. ಆರನೆ ಯದು ಬುಕ್ಕಿಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಏಳನೆ ಯದು ಯೆಸರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಎಂಟನೆ ಯದು ಯೆಶಾಯನಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಒಂಭ ತ್ತನೆಯದು ಮತ್ತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹತ್ತನೆಯದು ಶಿವ್ಮೆಾಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ; ಹನ್ನೊಂದನೆಯದು ಅಜರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹನ್ನೆರಡನೆಯದು ಹಷಬ್ಯನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿಮೂರನೆಯದು ಶೂಬಾಯೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿನಾಲ್ಕನೆಯದು ಮತ್ತಿತ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿನೈದನೆಯದು ಯೆರೆಮೋತ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ; ಹದಿನಾರನೆಯದು ಹನನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿನೇಳನೆ ಯದು ಯೊಷ್ಬೆಕಾಷನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿ ನೆಂಟನೆಯದು ಹನಾನೀಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ; ಹತ್ತೊಂಭತ್ತನೆಯದು ಮಲ್ಲೋತಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆ ರಡು ಮಂದಿ; ಇಪ್ಪತ್ತನೆಯದು ಎಲೀಯಾತನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಇಪ್ಪತ್ತೊಂದನೆಯದು ಹೋತೀ ರನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ; ಇಪ್ಪತ್ತೆರಡನೆಯದು ಗಿದ್ದಲ್ತಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಇಪ್ಪತ್ತು ಮೂರನೆಯದು ಮಹಜೀಯೋತನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;ಇಪ್ಪತ್ತು ನಾಲ್ಕನೆಯದು ರೊಮಮ್ತಿಯೇಜರ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ. ಇಪ್ಪತ್ತು ನಾಲ್ಕನೆಯದು ರೊಮಮ್ತಿಯೇಜರ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ.
- 1 Chronicles 16:4–6 1 ಪೂರ್ವಕಾಲವೃತ್ತಾಂತ 16:4–6ಇದಲ್ಲದೆ ಕರ್ತನ ಮಂಜೂಷದ ಮುಂದೆ ಸೇವೆ ಮಾಡಲೂ ಇಸ್ರಾಯೇಲಿನ ದೇವರಾದ ಕರ್ತನನ್ನು ಸ್ಮರಿಸುವದಕ್ಕೂ ಕೊಂಡಾಡುವದಕ್ಕೂ ಹೊಗಳುವ ದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು. ಅವರು ಯಾರಂದರೆ, ಮುಖ್ಯಸ್ಥನಾದ ಆಸಾಫನೂ ಅವನ ತರುವಾಯ ಜೆಕರ್ಯನೂ ಯೆಗೀಯೇಲನೂ ಶೆವಿಾರಾಮೋತನೂ ಯೆಹೀಯೇಲನೂ ಮತ್ತಿತ್ಯನೂ ಎಲೀಯಾಬನೂ ಬೆನಾಯನೂ ಒಬೇದೆದೋಮನೂ ಯೇಗಿಯೇಲನೂ. ಇವರು ವೀಣೆಗಳನ್ನೂ ಕಿನ್ನರಿ ಗಳನ್ನೂ ಬಾರಿಸುತ್ತಿದ್ದರು; ಆದರೆ ಆಸಾಫನು ತಾಳ ಗಳನ್ನು ಬಾರಿಸುತ್ತಿದ್ದನು. ಇದಲ್ಲದೆ ಯಾಜಕರಾದ ಬೆನಾಯನೂ ಯೆಹಜೀಯೇಲನೂ ದೇವರ ಒಡಂಬ ಡಿಕೆಯ ಮಂಜೂಷದ ಮುಂದೆ ಯಾವಾಗಲೂ ತುತೂರಿಗಳನ್ನು ಊದುವವರಾಗಿದ್ದರು.
- Psalm 134:1–2 ಕೀರ್ತನೆಗಳು 134:1–2ಇಗೋ, ಕರ್ತನ ಆಲಯದಲ್ಲಿ ಪ್ರತಿ ರಾತ್ರಿ ನಿಲ್ಲುವವರಾದ ಕರ್ತನ ಸೇವಕರೆ ಎಲ್ಲಾ ಕರ್ತನನ್ನು ಸ್ತುತಿಸಿರಿ. ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ ಕರ್ತನನ್ನು ಸ್ತುತಿಸಿರಿ.ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
- Nehemiah 11:22–23 ನೆಹೆಮೀಯ 11:22–23ವಿಾಕನ ಮಗ ನಾದ ಮತ್ತನ್ಯನ ಮಗನಾದ ಹಷಬ್ಯನ ಮಗನಾದ ಬಾನೀಯ ಮಗನಾದ ಉಜ್ಜಿಯು ಯೆರೂಸಲೇಮಿ ನಲ್ಲಿರುವ ಲೇವಿಯರ ಮೇಲ್ವಿಚಾರಕನಾಗಿದ್ದನು. ಆಸಾಫನ ಕುಮಾರರಲ್ಲಿರುವ ಹಾಡುಗಾರರು ದೇವರ ಆಲಯದ ಕಾರ್ಯದ ಮೇಲೆ ವಿಚಾರಣಾ ಕರ್ತರಾಗಿದ್ದರು. ದಿನದಿನಕ್ಕೆ ಹಾಡುಗಾರರಿಗೋಸ್ಕರ ಪ್ರತಿದಿನ ಕಟ್ಟಳೆ ಇರಬೇಕೆಂದು ಅರಸನು ಅವರನ್ನು ಕುರಿತು ಆಜ್ಞಾಪಿಸಿದ್ದನು.
- Nehemiah 11:17 ನೆಹೆಮೀಯ 11:17ಇದಲ್ಲದೆ ಆಸಾಫನ ಮಗ ನಾದ ಜಬ್ದೀಯ ಮಗನಾದ ವಿಾಕಾಯನ ಮಗ ನಾದ ಮತ್ತನ್ಯನು ಪ್ರಾರ್ಥನೆಯಲ್ಲಿ ಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಹೋ ದರರಲ್ಲಿ ಎರಡನೆಯವನು ಬಕ್ಬುಕ್ಯನು; ಅವನ ಸಂಗಡ ಯೆದುತೂನನ ಮಗನಾದ ಗಾಲಾಲನ ಮಗನಾದ ಶಮ್ಮೂವನ ಮಗನಾದ ಅಬ್ದನು.
- Psalm 135:1–3 ಕೀರ್ತನೆಗಳು 135:1–3ಕರ್ತನನ್ನು ಸ್ತುತಿಸಿರಿ. ಕರ್ತನ ಹೆಸರನ್ನು ಸ್ತುತಿಸಿರಿ; ಕರ್ತನ ಆಲಯ ದಲ್ಲಿಯೂ ನಮ್ಮ ದೇವರ ಆಲಯದ ಅಂಗಳ ಗಳಲ್ಲಿಯೂ ನಿಲ್ಲುವ ಕರ್ತನ ಸೇವಕರೇ, ಸ್ತುತಿಸಿರಿ. ಕರ್ತನನ್ನು ಸ್ತುತಿಸಿರಿ; ಕರ್ತನು ಒಳ್ಳೆಯವನು; ಆತನ ಹೆಸರಿಗೆ ಸ್ತುತಿಗಳನ್ನು ಹಾಡಿರಿ; ಅದು ರಮ್ಯ ವಾದದ್ದು.
- Ezra 7:24 ಎಜ್ರನು 7:24ಇದಲ್ಲದೆ ಯಾಜಕರೂ ಲೇವಿ ಯರೂ ಹಾಡುಗಾರರೂ ದ್ವಾರಪಾಲಕರೂ ನೆತಿನಿ ಯರೂ ಮೊದಲಾದ ದೇವರ ಆಲಯದ ಸೇವಕರನ್ನು ಕುರಿತು ಏನಂದರೆ--ಅವರ ಮೇಲೆ ತೆರಿಗೆಯನ್ನಾದರೂ ಕಪ್ಪವನ್ನಾದರೂ ಸುಂಕವನ್ನಾದರೂ ಹೊರಿಸಲು ಅಪ್ಪಣೆ ಇಲ್ಲವೆಂದು ನಿಮಗೆ ತಿಳಿಸುತ್ತೇನೆ.
- 1 Chronicles 15:16–22 1 ಪೂರ್ವಕಾಲವೃತ್ತಾಂತ 15:16–22ಇದಲ್ಲದೆ ದಾವೀದನು ವಿಶೇಷವಾದ ವೀಣೆ ಗಳನ್ನೂ ಕಿನ್ನರಿಗಳನ್ನೂ ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನು ಎತ್ತುವ ಹಾಗೆ ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವ ದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು. ಹಾಗೆಯೇ ಲೇವಿಯರು ಯೋವೇಲನ ಮಗನಾದ ಹೇಮಾನನನ್ನೂ ಅವನ ಸಹೋದರರಲ್ಲಿ ಬೆರೆಕ್ಯನ ಮಗನಾದ ಆಸಾಫನನ್ನೂ ಮೆರಾರಿಯ ಕುಮಾರರ ಸಹೋದರರಲ್ಲಿ ಕೂಷಾಯನ ಮಗನಾದ ಎತಾನ ನನ್ನೂ ನೇಮಿಸಿದರು. ಅವರ ಸಂಗಡ ಎರಡನೇ ತರಗತಿಯ ತಮ್ಮ ಸಹೋದರರಾಗಿರುವ ಜೆಕರ್ಯ ನನ್ನೂ ಬೇನ್ನನ್ನೂ ಯಾಜೀಯೇಲನನ್ನೂ ಶೆವಿಾರಾ ಮೋತನನ್ನೂ ಯೆಹೀಯೇಲನನ್ನೂ ಉನ್ನಿಯನ್ನೂ ಎಲೀಯಾಬನನ್ನೂ ಬೆನಾಯನನ್ನೂ ಮಾಸೇಯನನ್ನೂ ಮತ್ತಿತ್ಯನನ್ನೂ ಎಲೀಫೆಲೇಹುವನ್ನೂ ಮಿಕ್ನೇಯನನ್ನೂ ದ್ವಾರಪಾಲಕರಾದ ಒಬೇದೆದೋಮನನ್ನೂ ಯೆಗೀ ಯೇಲನನ್ನೂ ನೇಮಿಸಿದರು. ಹಾಡುಗಾರರಾದ ಹೇಮಾನನೂ ಆಸಾಫನೂ ಏತಾನನೂ ತಾಮ್ರದ ತಾಳಗಳನ್ನು ಬಾರಿಸುವದಕ್ಕೂ ಜೆಕರ್ಯನೂ ಅಜೀಯೇಲನೂ ಶೆವಿಾರಾಮೋತನೂ ಯೆಹೀ ಯೇಲನೂ ಉನ್ನಿಯೂ ಎಲೀಯಾಬನೂ ಮಾಸೇ ಯನೂ ಬೆನಾಯನೂ ಅಲಮೋತಿನಿಂದ ವೀಣೆಗಳನ್ನು ಬಾರಿಸುವದಕ್ಕೂ; ಮತ್ತಿತ್ಯನೂ ಎಲೀಫೆಲೇಹುವೂ ಮಿಕ್ನೇಯನೂ ಒಬೇದೆದೋಮನೂ ಯೆಗೀಯೇ ಲನೂ ಅಜಜ್ಯನೂ ಹೆಚ್ಚಳವಾಗಿ ಶಿಮಿನೇಟನಿಂದ ಕಿನ್ನರಿಗಳನ್ನು ಬಾರಿಸುವದಕ್ಕೂ ನೇಮಿಸಲ್ಪಟ್ಟಿದ್ದರು. ಆದರೆ ಲೇವಿಯರ ಪ್ರಧಾನನಾದ ಕೆನನ್ಯನು ಹಾಡು ವದಕ್ಕೆ ನೇಮಿಸಲ್ಪಟ್ಟಿದ್ದನು. ಅವನು ಗ್ರಹಿಕೆಯುಳ್ಳವನಾ ದದರಿಂದ ಹಾಡುವದಕ್ಕೆ ಕಲಿಸುತ್ತಿದ್ದನು.