1 Corinthians · chapter 10 · verse 18
1 Corinthians 10:18 in Kannada
ಶರೀರದ ಪ್ರಕಾರ ಇಸ್ರಾಯೇಲ್ಯರನ್ನು ನೋಡಿರಿ; ಯಜ್ಞ ಮಾಡಿದವು ಗಳನ್ನು ತಿನ್ನುವವರು ಯಜ್ಞವೇದಿಯೊಂದಿಗೆ ಪಾಲು ಗಾರರಾಗಿದ್ದಾರಲ್ಲವೇ?
Shareerada prakaara israayelyarannu nodiri; yajnya maadidavu galannu tinnuvavaru yajnyavediyondige paalu gaararaagiddaarallave?
1 Corinthians 10:18 in English
- King James Version (KJV)
- Behold Israel after the flesh: are not they which eat of the sacrifices partakers of the altar?
- World English Bible (WEB)
- Consider Israel according to the flesh. Don’t those who eat the sacrifices participate in the altar?
- American Standard Version (ASV)
- Behold Israel after the flesh: have not they that eat the sacrifices communion with the altar?
- Bible in Basic English (BBE)
- See Israel after the flesh: do not those who take as food the offerings of the altar take a part in the altar?
- Darby Translation (DBY)
- See Israel according to flesh: are not they who eat the sacrifices in communion with the altar?
- Webster's Bible (WBS)
- Behold Israel after the flesh: are not they who eat of the sacrifices, partakers of the altar?
- Young's Literal Translation (YLT)
- See Israel according to the flesh! are not those eating the sacrifices in the fellowship of the altar?
Read in context
- 16ನಾವು ಸ್ತೋತ್ರಸಲ್ಲಿಸುವ ಸ್ತೋತ್ರದ ಪಾತ್ರೆಯು ಕ್ರಿಸ್ತನ ರಕ್ತದ ಅನ್ಯೋನ್ಯತೆ ಯಲ್ಲವೋ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದ ಅನ್ಯೋನ್ಯತೆಯಲ್ಲವೋ?
- 17ಅನೇಕರಾದ ನಾವು ಒಂದೇರೊಟ್ಟಿಯೂ ಒಂದೇದೇಹವೂ ಆಗಿದ್ದೇವೆ; ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲುಗಾರರಾಗಿದ್ದೇವೆ.
- 18ಶರೀರದ ಪ್ರಕಾರ ಇಸ್ರಾಯೇಲ್ಯರನ್ನು ನೋಡಿರಿ; ಯಜ್ಞ ಮಾಡಿದವು ಗಳನ್ನು ತಿನ್ನುವವರು ಯಜ್ಞವೇದಿಯೊಂದಿಗೆ ಪಾಲು ಗಾರರಾಗಿದ್ದಾರಲ್ಲವೇ?
- 19ಹಾಗಾದರೆ ನಾನು ಏನು ಹೇಳಲಿ? ವಿಗ್ರಹವು ಏನಾದರೂ ವಿಶೇಷವೋ? ಇಲ್ಲವೆ ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ್ದು ಏನಾದರೂ ವಿಶೇಷವೋ?
- 20ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ.
Cross references
- Leviticus 7:6 ಯಾಜಕಕಾಂಡ 7:6ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಅತಿ ಪರಿಶುದ್ಧವಾದದ್ದು.
- Ephesians 2:11–12 ಎಫೆಸದವರಿಗೆ 2:11–12ಆದಕಾರಣ ಪೂರ್ವಕಾಲದಲ್ಲಿ ಶಾರೀರಿಕವಾಗಿ ಅನ್ಯಜನರಾಗಿದ್ದು ಶರೀರದಲ್ಲಿ ಕೈಗಳಿಂದ ಮಾಡಲ್ಪಟ ಸುನ್ನತಿಯಿದ್ದವರೆಂದು ಕರೆಯಲ್ಪಟ್ಟವರಿಂದ ಸುನ್ನತಿಯಿಲ್ಲ ದವರೆಂದು ನೀವು ಕರೆಯಲ್ಪಟ್ಟಿದ್ದೀರಿ. ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.
- Galatians 6:16 ಗಲಾತ್ಯದವರಿಗೆ 6:16ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆ ಅಂದರೆ ದೇವರ ಇಸ್ರಾ ಯೇಲಿನ ಮೇಲೆ ಶಾಂತಿಯೂ ಕರುಣೆಯೂ ಇರಲಿ.
- Philippians 3:3–5 ಫಿಲಿಪ್ಪಿಯವರಿಗೆ 3:3–5ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ. ನಾನಾದರೋ ಶರೀರ ಸಂಬಂಧವಾದವು ಗಳಲ್ಲಿ ಭರವಸವಿಟ್ಟರೂ ಇಡಬಹುದು, ಬೇರೆ ಯಾವ ನಾದರೂ ಶರೀರ ಸಂಬಂಧವಾದವುಗಳಲ್ಲಿ ಭರವಸವಿಡ ಬಹುದೆಂದು ಯೋಚಿಸುವದಾದರೆ ನಾನು ಅವನಿ ಗಿಂತಲೂ ಹೆಚ್ಚಾಗಿ ಹಾಗೆ ಯೋಚಿಸಬಹುದು. ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು; ನಾನು ಇಸ್ರಾಯೇಲ್ ವಂಶದವನು, ಬೆನ್ಯಾವಿಾನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು; ನ್ಯಾಯಪ್ರಮಾಣವನ್ನು ನೋಡಿದರೆ ನಾನು ಫರಿಸಾ ಯನು;
- Leviticus 3:11 ಯಾಜಕಕಾಂಡ 3:11ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುತ್ತದೆ.
- Romans 1:3 ರೋಮಾಪುರದವರಿಗೆ 1:3ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ;
- Romans 4:12 ರೋಮಾಪುರದವರಿಗೆ 4:12ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ.
- Romans 4:1 ರೋಮಾಪುರದವರಿಗೆ 4:1ಹಾಗಾದರೆ ನಮ್ಮ ಮೂಲಪಿತೃವಾಗಿರುವ ಅಬ್ರಹಾಮನು ಶರೀರಸಂಬಂಧವಾಗಿ ಏನು ಪಡೆದುಕೊಂಡನೆಂದು ಹೇಳಬೇಕು?
- 2 Corinthians 11:18–22 2 ಕೊರಿಂಥದವರಿಗೆ 11:18–22ಅನೇಕರು ಶಾರೀರಿಕ ರೀತಿಯಲ್ಲಿ ಹೊಗಳಿಕೊಳ್ಳು ವದರಿಂದ ನಾನೂ ಹೊಗಳಿಕೊಳ್ಳುತ್ತೇನೆ. ನೀವು ಬುದ್ಧಿವಂತರಾಗಿದ್ದು ಬುದ್ಧಿಹೀನರನ್ನು ಸಂತೋಷದಿಂದ ಸಹಿಸಿಕೊಳ್ಳುತ್ತೀರಲ್ಲಾ. ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ ಒಬ್ಬನು ನಿಮ್ಮನ್ನು ನುಂಗಿ ಬಿಟ್ಟರೂ ಒಬ್ಬನು ನಿಮ್ಮನ್ನು ಮರುಳುಗೊಳಿಸಿ ಹಿಡಿದರೂ ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ನೀವು ಸಹಿಸಿಕೊಳ್ಳುತ್ತೀರಲ್ಲಾ. ನಾವು ಬಲವಿಲ್ಲದವರೋ ಎಂಬಂತೆ ಅವ ಮಾನದ ವಿಷಯವಾಗಿ ನಾನು ಮಾತನಾಡುತ್ತೇನೆ. ಹೇಗಿದ್ದರೂ ಯಾವನಾದರೂ ಧೈರ್ಯವುಳ್ಳವ ನಾಗಿದ್ದರೆ (ನಾನು ಬುದ್ಧಿಹೀನನಂತೆ ಮಾತ ನಾಡುತ್ತೇನೆ) ನಾನು ಸಹ ಧೈರ್ಯವುಳ್ಳವನಾಗಿದ್ದೇನೆ. ಅವರು ಇಬ್ರಿಯರೋ? ನಾನೂ ಇಬ್ರಿಯನು; ಅವರು ಇಸ್ರಾಯೇಲ್ಯರೊ? ನಾನೂ ಇಸ್ರಾಯೇ ಲ್ಯನು; ಅವರು ಅಬ್ರಹಾಮನ ವಂಶದವರೋ? ನಾನೂ ಅದೇ ವಂಶದವನು;
- 1 Corinthians 9:13 1 ಕೊರಿಂಥದವರಿಗೆ 9:13ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ?
- Leviticus 3:3–5 ಯಾಜಕಕಾಂಡ 3:3–5ಅವನು ಸಮಾಧಾನದ ಕಾಣಿಕೆಯ ಯಜ್ಞಾ ರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿ ಯಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನ ಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಕರ್ತನಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು. ಆರೋನನ ಕುಮಾರರು ಅದನ್ನು ಯಜ್ಞವೇದಿಯಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನ ಬಲಿಯಾಗಿ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು ಕರ್ತನಿಗೆ ಸುವಾಸನೆಯಾಗಿರುವದು.
- Romans 9:3–8 ರೋಮಾಪುರದವರಿಗೆ 9:3–8ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು. ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು. ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್. ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ; ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ. ಅಂದರೆ--ಶರೀರ ಸಂಬಂಧವಾದ ಮಕ್ಕಳು ದೇವರ ಮಕ್ಕಳಲ್ಲ; ಆದರೆ ವಾಗ್ದಾನದ ಮಕ್ಕಳೇ ಆತನ ಸಂತತಿಯೆಂದು ಎಣಿಸಲ್ಪಟ್ಟಿದ್ದಾರೆ.