1 Corinthians · chapter 11 · verse 31
1 Corinthians 11:31 in Kannada
ನಮ್ಮನ್ನು ನಾವೇ ವಿಚಾರಿಸಿ ಕೊಂಡರೆ ನ್ಯಾಯವಿಚಾರಣೆಗೊಳಗಾಗುವದಿಲ್ಲ.
Nammannu naave vichaarisi kondare nyaayavichaaranegolagaaguvadilla.
1 Corinthians 11:31 in English
- King James Version (KJV)
- For if we would judge ourselves, we should not be judged.
- World English Bible (WEB)
- For if we discerned ourselves, we wouldn’t be judged.
- American Standard Version (ASV)
- But if we discerned ourselves, we should not be judged.
- Bible in Basic English (BBE)
- But if we were true judges of ourselves, punishment would not come on us.
- Darby Translation (DBY)
- But if we judged ourselves, so were we not judged.
- Webster's Bible (WBS)
- For if we would judge ourselves, we should not be judged.
- Young's Literal Translation (YLT)
- for if ourselves we were discerning, we would not be being judged,
Read in context
- 29ಯಾಕಂದರೆ ಕರ್ತನ ದೇಹವೆಂದು ವಿವೇಚಿಸದೆ ಅಯೋಗ್ಯವಾಗಿ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವದರಿಂದ ನ್ಯಾಯತೀರ್ಪಿಗೊಳ ಗಾಗುವನು.
- 30ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರೂ ರೋಗಿಗಳೂ ಆಗಿದ್ದಾರೆ; ಅನೇಕರು ನಿದ್ರಿಸುತ್ತಾರೆ.
- 31ನಮ್ಮನ್ನು ನಾವೇ ವಿಚಾರಿಸಿ ಕೊಂಡರೆ ನ್ಯಾಯವಿಚಾರಣೆಗೊಳಗಾಗುವದಿಲ್ಲ.
- 32ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ.
- 33ಆದಕಾರಣ ನನ್ನ ಸಹೋದರರೇ, ಈ ಭೋಜನವನ್ನು ಮಾಡುವದಕ್ಕೆ ನೀವು ಕೂಡಿ ಬರುವಾಗ ಒಬ್ಬರನ್ನೊಬ್ಬರು ಕಾದುಕೊಳ್ಳಿರಿ.ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟ ಮಾಡಲಿ; ನೀವು ಕೂಡಿಬಂದದ್ದು ನ್ಯಾಯತೀರ್ಪಿಗೊಳಗಾಗು ವದಕ್ಕೆ ಕಾರಣವಾಗಬಾರದು. ಮಿಕ್ಕಾದ ಸಂಗತಿಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.
Cross references
- 1 John 1:9 1 ಯೋಹಾನನು 1:9ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- Psalm 32:3–5 ಕೀರ್ತನೆಗಳು 32:3–5ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು. ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ. ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ--ಸೆಲಾ.
- Revelation 2:5 ಪ್ರಕಟನೆ 2:5ಆದದ ರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ ಅದನ್ನು ನಿನ್ನ ನೆನಪಿಗೆ ತಂದುಕೊಂಡು ಮಾನಸಾಂತರಪಡು. ನೀನು ಮೊದಲು ಮಾಡುತ್ತಿದ್ದ ಕ್ರಿಯೆಗಳನ್ನು ಮಾಡು. ನೀನು ಮಾನಸಾಂತರಪಡದೆ ಹೋದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನಿನ್ನ ದೀಪ ಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು
- 1 Corinthians 11:28 1 ಕೊರಿಂಥದವರಿಗೆ 11:28ಆದರೆ ಒಬ್ಬನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ.
- Revelation 3:2–3 ಪ್ರಕಟನೆ 3:2–3ಎಚ್ಚರವಾಗಿರು, ಸಾಯುವದಕ್ಕೆ ಸಿದ್ಧವಾಗಿ ರುವ ಉಳಿದವುಗಳನ್ನು ಬಲಪಡಿಸು. ಯಾಕಂದರೆ ದೇವರ ಮುಂದೆ ನಿನ್ನ ಕ್ರಿಯೆಗಳು ಸಂಪೂರ್ಣವಾದ ವುಗಳೆಂದು ನಾನು ಕಾಣಲಿಲ್ಲ. ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು.
- Luke 15:18–20 ಲೂಕನು 15:18–20ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ; ಇನ್ನೆಂದಿಗೂ ನಾನು ನಿನ್ನ ಮಗನೆಂದು ಕರೆಯಲ್ಪಡುವದಕ್ಕೆ ಯೋಗ್ಯನಲ್ಲ; ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಅನ್ನುವೆನು ಎಂದು ಅಂದುಕೊಂಡು ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.
- Jeremiah 31:18–20 ಯೆರೆಮೀಯ 31:18–20ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ. ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು. ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.