1 Corinthians · chapter 12 · verse 1
1 Corinthians 12:1 in Kannada
ಸಹೋದರರೇ, ಆತ್ಮಿಕ ವರಗಳನ್ನು ಕುರಿತು ನಿಮಗೆ ತಿಳಿಯದಿರಬಾರದೆಂದು ನಾನು ಅಪೇಕ್ಷಿಸುತ್ತೇನೆ.
Sahodarare, aatmika varagalannu kuritu nimage tiliyadirabaaradendu naanu apekshisuttene.
1 Corinthians 12:1 in English
- King James Version (KJV)
- Now concerning spiritual [gifts], brethren, I would not have you ignorant.
- World English Bible (WEB)
- Now concerning spiritual things, brothers, I don’t want you to be ignorant.
- American Standard Version (ASV)
- Now concerning spiritual [gifts], brethren, I would not have you ignorant.
- Bible in Basic English (BBE)
- But about the things of the spirit, my brothers, it is not right for you to be without teaching.
- Darby Translation (DBY)
- But concerning spiritual [manifestations], brethren, I do not wish you to be ignorant.
- Webster's Bible (WBS)
- Now concerning spiritual [gifts] , brethren, I would not have you ignorant.
- Young's Literal Translation (YLT)
- And concerning the spiritual things, brethren, I do not wish you to be ignorant;
Read in context
- 1ಸಹೋದರರೇ, ಆತ್ಮಿಕ ವರಗಳನ್ನು ಕುರಿತು ನಿಮಗೆ ತಿಳಿಯದಿರಬಾರದೆಂದು ನಾನು ಅಪೇಕ್ಷಿಸುತ್ತೇನೆ.
- 2ನೀವು ಅನ್ಯರಾಗಿದ್ದಾಗ ನಿಮಗೆ ಪ್ರೇರಣೆಯಾದ ಹಾಗೆ ಮೂಕವಿಗ್ರಹಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.
- 3ಹೀಗಿರುವದರಿಂದ ನಾನು ನಿಮಗೆ ತಿಳಿಸುವದೇನಂದರೆ, ದೇವರಾತ್ಮನಿಂದ ಮಾತನಾಡುವ ಯಾವ ಮನುಷ್ಯನಾದರೂ ಯೇಸು ವನ್ನು ಶಾಪಗ್ರಸ್ತನೆಂದು ಹೇಳುವದಿಲ್ಲ; ಪವಿತ್ರಾತ್ಮ ನಿಂದಲೇ ಹೊರತು ಯಾವ ಮನುಷ್ಯನಾದರೂ ಯೇಸುವನ್ನು ಕರ್ತನೆಂದು ಹೇಳಲಾರನು.
Cross references
- 1 Corinthians 12:4–11 1 ಕೊರಿಂಥದವರಿಗೆ 12:4–11ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ; ಸೇವೆಗಳಲ್ಲಿ ಬೇರೆ ಬೇರೆ ವಿಧ ಗಳುಂಟು, ಆದರೆ ಕರ್ತನು ಒಬ್ಬನೇ; ಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು, ಆದರೆ ಸರ್ವರಲ್ಲಿಯೂ ಸರ್ವಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ. ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ. ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು, ಬೇರೊಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಮತ್ತೊಬ್ಬನಿಗೆ ಆ ಆತ್ಮನಿಂದಲೇ ರೋಗ ಗಳನ್ನು ವಾಸಿಮಾಡುವ ವರಗಳು, ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ. ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.
- Ephesians 4:11 ಎಫೆಸದವರಿಗೆ 4:11ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ
- 1 Corinthians 14:37 1 ಕೊರಿಂಥದವರಿಗೆ 14:37ಯಾವ ನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಇಲ್ಲವೆ ಆತ್ಮಿಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವ ವಿಷಯಗಳು ಕರ್ತನ ಆಜ್ಞೆಗಳೇ ಎಂದು ಚೆನ್ನಾಗಿ ತಿಳುಕೊಳ್ಳಲಿ.
- 1 Corinthians 14:1–18 1 ಕೊರಿಂಥದವರಿಗೆ 14:1–18ಪ್ರೀತಿಯನ್ನು ಅನುಸರಿಸಿರಿ; ಆದರೂ ಆತ್ಮಿಕ ವರಗಳನ್ನು, ಅದರಲ್ಲೂ ಪ್ರವಾದಿಸುವ ದನ್ನೇ ಅಪೇಕ್ಷಿಸಿರಿ. ಭಾಷೆಯನ್ನಾಡುವವನು ದೇವರ ಸಂಗಡಲೇ ಹೊರತು ಮನುಷ್ಯರ ಸಂಗಡ ಮಾತನಾಡು ವದಿಲ್ಲ. ಅವನು ಆತ್ಮನಲ್ಲಿದ್ದು ರಹಸ್ಯಗಳನ್ನು ನುಡಿ ಯುತ್ತಿದ್ದರೂ ಯಾರೂ ಅವನನ್ನು ತಿಳುಕೊಳ್ಳುವದಿಲ್ಲ. ಪ್ರವಾದಿಸುವವನಾದರೋ ಮನುಷ್ಯರ ಸಂಗಡ ಮಾತನಾಡುವವನಾಗಿ ಅವರಿಗೆ ಭಕ್ತಿವೃದ್ಧಿಯನ್ನೂ ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟು ಮಾಡುತ್ತಾನೆ. ಭಾಷೆಯನ್ನಾಡುವವನು ತನಗೆ ಮಾತ್ರ ಭಕ್ತಿವೃದ್ಧಿಯನ್ನುಂಟು ಮಾಡಿಕೊಳ್ಳುತ್ತಾನೆ. ಪ್ರವಾದಿಸು ವವನಾದರೋ ಸಭೆಗೆ ಭಕ್ತಿವೃದ್ಧಿಯನ್ನುಂಟು ಮಾಡು ತ್ತಾನೆ. ನೀವೆಲ್ಲರೂ ಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸುತ್ತೇನೆ; ಆದರೆ ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬದೇ ನನ್ನಿಷ್ಟ. ಭಾಷೆಗಳನ್ನಾಡು ವವನು ಸಭೆಗೆ ಭಕ್ತಿವೃದ್ಧಿಯಾಗುವದಕ್ಕಾಗಿ ಆ ಭಾಷೆಯ ಅರ್ಥವನ್ನು ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠ. ಹೀಗಿರುವದರಿಂದ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ಪ್ರಕಟ ವಾದದ್ದರಿಂದಾಗಲಿ ಇಲ್ಲವೆ ಜ್ಞಾನದಿಂದಾಗಲಿ ಇಲ್ಲವೆ ಪ್ರವಾದನೆಯಿಂದಾಗಲಿ ಇಲ್ಲವೆ ಬೋಧನೆಯಿಂದಾ ಗಲಿ ಮಾತನಾಡದೆ ಭಾಷೆಗಳಿಂದ ಮಾತ್ರ ಮಾತನಾಡಿ ದರೆ ನನ್ನಿಂದ ನಿಮಗೇನು ಪ್ರಯೋಜನ? ಕೊಳಲು ವೀಣೆ ಮೊದಲಾದ ಅಚೇತನವಾದ್ಯಗಳು ಸ್ವರಗಳಲಿ ಯಾವ ಭೇದವನ್ನೂ ತೋರಿಸದಿದ್ದರೆ ಊದಿದ್ದು ಅಥವಾ ಬಾರಿಸಿದ್ದು ತಿಳಿಯುವದು ಹೇಗೆ? ತುತೂರಿಯು ಗೊತ್ತಿಲ್ಲದ ಶಬ್ದವನ್ನು ಕೊಟ್ಟರೆ ತನ್ನನ್ನು ಯುದ್ಧಕ್ಕೆ ಸಿದ್ಧಮಾಡಿಕೊಳ್ಳುವವನು ಯಾರು? ಹಾಗೆಯೇ ನೀವು ಸುಲಭವಾಗಿ ತಿಳಿಯಬಹುದಾದ ಮಾತುಗಳನ್ನಾಡದೆ ಹೋದರೆ ಮಾತನಾಡಿದ್ದು ಏನೆಂದು ಹೇಗೆ ತಿಳಿದೀತು? ನೀವು ಗಾಳಿಯಲ್ಲಿ ಮಾತನಾಡಿದ ಹಾಗಿರುವದಷ್ಟೆ. ಲೋಕದಲ್ಲಿ ಅನೇಕ ವಿಧವಾದ ಸ್ವರಗಳು ಇದ್ದರೂ ಇರಬಹುದು; ಆದರೆ ಅವುಗಳಲ್ಲಿ ಅರ್ಥವಿಲ್ಲದ್ದು ಒಂದಾದರೂ ಇಲ್ಲ. ಆದದರಿಂದ ಭಾಷೆಯ ಅರ್ಥವು ನನಗೆ ಗೊತ್ತಿಲ್ಲ ದಿದ್ದರೆ ಮಾತನಾಡುವವನಿಗೆ ನಾನು ಅನ್ಯದೇಶ ದವನಂತಿರುವೆನು; ಮಾತನಾಡುವವನು ನನಗೆ ಅನ್ಯ ದೇಶದವನಂತಿರುವನು. ಅದರಂತೆಯೇ ನೀವು ಆತ್ಮಿಕ ವರಗಳಲ್ಲಿ ಆಸಕ್ತಿಯುಳ್ಳವರಾಗಿರುವದರಿಂದ ಸಭೆಯ ಹೆಚ್ಚಿನ ಭಕ್ತಿವೃದ್ಧಿಗಾಗಿ ತವಕಪಡಿರಿ. ಆದದರಿಂದ ಅನ್ಯಭಾಷೆಯಲ್ಲಿ ಮಾತನಾಡುವವನು ಅದರ ಅರ್ಥ ಹೇಳುವಂತೆ ಪ್ರಾರ್ಥಿಸಲಿ. ಅನ್ಯಭಾಷೆಯಲ್ಲಿ ನಾನು ಪ್ರಾರ್ಥಿಸಿದರೆ ನನ್ನ ಆತ್ಮವು ಪ್ರಾರ್ಥಿಸುವದು; ಆದರೆ ನನ್ನ ತಿಳುವಳಿಕೆಯು ನಿಷ್ಪಲವಾಗಿರುವದು. ಹಾಗಾದ ರೇನು? ನಾನು ಆತ್ಮದಿಂದ ಪ್ರಾರ್ಥಿಸುವೆನು, ಬುದ್ಧಿ ಯಿಂದಲೂ ಪ್ರಾರ್ಥಿಸುವೆನು; ಆತ್ಮದಿಂದ ಹಾಡು ವೆನು, ಬುದ್ಧಿಯಿಂದಲೂ ಹಾಡುವೆನು. ಇದಲ್ಲದೆ ನೀನು ಆತ್ಮದಿಂದ ಸ್ತೋತ್ರ ಮಾಡುವಾಗ ತಿಳುವಳಿಕೆ ಯಿಲ್ಲದವನು ನೀನು ಮಾಡುವ ಕೃತಜ್ಞತಾಸ್ತುತಿಯನ್ನು ತಿಳಿಯದೆ ಇರುವದರಿಂದ ನೀನು ಹೇಳುವದಕ್ಕೆ ಆಮೆನ್ ಎಂದು ಹೇಳುವದು ಹೇಗೆ? ನೀನಂತೂ ನಿಜ ವಾಗಿಯೂ ಚೆನ್ನಾಗಿ ಕೃತಜ್ಞತಾಸ್ತುತಿ ಮಾಡುತ್ತೀ; ಆದರೆ ಬೇರೊಬ್ಬನು ಭಕ್ತಿವೃದ್ದಿ ಹೊಂದುವದಿಲ್ಲ. ನಾನು ನಿಮ್ಮೆಲ್ಲರಿಗಿಂತಲೂ ಹೆಚ್ಚಾಗಿ ಭಾಷೆಗಳನ್ನಾಡುತ್ತೇನೆಂದು ನನ್ನ ದೇವರನ್ನು ಕೊಂಡಾಡುತ್ತೇನೆ.