1 Corinthians · chapter 12 · verse 2
1 Corinthians 12:2 in Kannada
ನೀವು ಅನ್ಯರಾಗಿದ್ದಾಗ ನಿಮಗೆ ಪ್ರೇರಣೆಯಾದ ಹಾಗೆ ಮೂಕವಿಗ್ರಹಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.
Neevu anyaraagiddaaga nimage preraneyaada haage mookavigrahagala balige hoguttiddirendu balliri.
1 Corinthians 12:2 in English
- King James Version (KJV)
- Ye know that ye were Gentiles, carried away unto these dumb idols, even as ye were led.
- World English Bible (WEB)
- You know that when you were heathen, you were led away to those mute idols, however you might be led.
- American Standard Version (ASV)
- Ye know that when ye were Gentiles [ye were] led away unto those dumb idols, howsoever ye might be led.
- Bible in Basic English (BBE)
- You are conscious that when you were Gentiles, in whatever way you were guided, you went after images without voice or power.
- Darby Translation (DBY)
- Ye know that when ye were [of the] nations [ye were] led away to dumb idols, in whatever way ye might be led.
- Webster's Bible (WBS)
- Ye know that ye were Gentiles, carried away to these dumb idols, even as ye were led.
- Young's Literal Translation (YLT)
- ye have known that ye were nations, unto the dumb idols — as ye were led — being carried away;
Read in context
- 1ಸಹೋದರರೇ, ಆತ್ಮಿಕ ವರಗಳನ್ನು ಕುರಿತು ನಿಮಗೆ ತಿಳಿಯದಿರಬಾರದೆಂದು ನಾನು ಅಪೇಕ್ಷಿಸುತ್ತೇನೆ.
- 2ನೀವು ಅನ್ಯರಾಗಿದ್ದಾಗ ನಿಮಗೆ ಪ್ರೇರಣೆಯಾದ ಹಾಗೆ ಮೂಕವಿಗ್ರಹಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.
- 3ಹೀಗಿರುವದರಿಂದ ನಾನು ನಿಮಗೆ ತಿಳಿಸುವದೇನಂದರೆ, ದೇವರಾತ್ಮನಿಂದ ಮಾತನಾಡುವ ಯಾವ ಮನುಷ್ಯನಾದರೂ ಯೇಸು ವನ್ನು ಶಾಪಗ್ರಸ್ತನೆಂದು ಹೇಳುವದಿಲ್ಲ; ಪವಿತ್ರಾತ್ಮ ನಿಂದಲೇ ಹೊರತು ಯಾವ ಮನುಷ್ಯನಾದರೂ ಯೇಸುವನ್ನು ಕರ್ತನೆಂದು ಹೇಳಲಾರನು.
- 4ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ;
Cross references
- 1 Peter 4:3 1 ಪೇತ್ರನು 4:3ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.
- 1 Thessalonians 1:9 1 ಥೆಸಲೊನೀಕದವರಿಗೆ 1:9ನಾವು ನಿಮ್ಮಲ್ಲಿ ಹೇಗೆ ಪ್ರವೇಶಿಸಿದೆವೆಂಬದನ್ನೂ ನೀವು ಹೇಗೆ ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬದನ್ನೂ ಅವರು ತಾವೇ ಹೇಳುತ್ತಾರೆ.ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.
- Psalm 115:5 ಕೀರ್ತನೆಗಳು 115:5ಅವುಗಳಿಗೆ ಬಾಯಿ ಉಂಟು; ಮಾತಾಡುವದಿಲ್ಲ; ಕಣ್ಣುಗಳುಂಟು; ನೋಡು ವದಿಲ್ಲ.
- Galatians 4:8 ಗಲಾತ್ಯದವರಿಗೆ 4:8ಪೂರ್ವಕಾಲದಲ್ಲಿ ನೀವು ದೇವರನ್ನರಿಯದವರಾಗಿ ಸ್ವಾಭಾವಿಕವಾಗಿ ದೇವರಲ್ಲದವುಗಳನ್ನು ಸೇವಿಸಿದಿರಿ.
- Ephesians 2:11–12 ಎಫೆಸದವರಿಗೆ 2:11–12ಆದಕಾರಣ ಪೂರ್ವಕಾಲದಲ್ಲಿ ಶಾರೀರಿಕವಾಗಿ ಅನ್ಯಜನರಾಗಿದ್ದು ಶರೀರದಲ್ಲಿ ಕೈಗಳಿಂದ ಮಾಡಲ್ಪಟ ಸುನ್ನತಿಯಿದ್ದವರೆಂದು ಕರೆಯಲ್ಪಟ್ಟವರಿಂದ ಸುನ್ನತಿಯಿಲ್ಲ ದವರೆಂದು ನೀವು ಕರೆಯಲ್ಪಟ್ಟಿದ್ದೀರಿ. ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.
- 1 Corinthians 6:11 1 ಕೊರಿಂಥದವರಿಗೆ 6:11ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
- Habakkuk 2:18–19 ಹಬಕ್ಕೂಕ 2:18–19ಅದನ್ನು ಕೆತ್ತಿ ರೂಪಿಸಿದವನ ಕೆತ್ತಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ, ಅದನ್ನು ರೂಪಿಸಿದವನು ಮೂಕ ಬೊಂಬೆಗಳನ್ನು ಮಾಡಿ ಅದರಲ್ಲಿ ನಂಬಿಕೆಯಿಡು ವಂಥ, ಎರಕದ ವಿಗ್ರಹದಿಂದ ಪ್ರಯೋಜನವೇನು? ಮರಕ್ಕೆ--ಎಚ್ಚರವಾಗು; ಮೂಕವಾದ ಕಲ್ಲಿಗೆ--ಎದ್ದು ಬೋಧಿಸಲಿ ಎಂದು ಹೇಳುವವನಿಗೆ ಅಯ್ಯೋ! ಇಗೋ, ಅದು ಬಂಗಾರದಿಂದಲೂ ಬೆಳ್ಳಿಯಿಂದಲೂ ಹೊದಿಸಲ್ಪಟ್ಟಿದೆ, ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.
- Jeremiah 10:5 ಯೆರೆಮೀಯ 10:5ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ.
- Ephesians 4:17–18 ಎಫೆಸದವರಿಗೆ 4:17–18ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ; ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.
- Psalm 115:7 ಕೀರ್ತನೆಗಳು 115:7ಕೈಗಳುಂಟು; ಮುಟ್ಟುವ ದಿಲ್ಲ. ಕಾಲುಗಳುಂಟು; ನಡೆಯುವದಿಲ್ಲ. ತಮ್ಮ ಗಂಟಲಿನಿಂದ ಮಾತನಾಡುವದಿಲ್ಲ,
- Titus 3:3 ತೀತನಿಗೆ 3:3ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
- Isaiah 46:7 ಯೆಶಾಯ 46:7ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.