1 Corinthians · chapter 12 · verse 7
1 Corinthians 12:7 in Kannada
ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ.
Aadare pavitraatmana prakataneyu pratiyobbana prayojanakkaagi kodalpattide.
1 Corinthians 12:7 in English
- King James Version (KJV)
- But the manifestation of the Spirit is given to every man to profit withal.
- World English Bible (WEB)
- But to each one is given the manifestation of the Spirit for the profit of all.
- American Standard Version (ASV)
- But to each one is given the manifestation of the Spirit to profit withal.
- Bible in Basic English (BBE)
- But to every man some form of the Spirit's working is given for the common good.
- Darby Translation (DBY)
- But to each the manifestation of the Spirit is given for profit.
- Webster's Bible (WBS)
- But the manifestation of the Spirit is given to every man for profit.
- Young's Literal Translation (YLT)
- And to each hath been given the manifestation of the Spirit for profit;
Read in context
- 5ಸೇವೆಗಳಲ್ಲಿ ಬೇರೆ ಬೇರೆ ವಿಧ ಗಳುಂಟು, ಆದರೆ ಕರ್ತನು ಒಬ್ಬನೇ;
- 6ಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು, ಆದರೆ ಸರ್ವರಲ್ಲಿಯೂ ಸರ್ವಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ.
- 7ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ.
- 8ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು,
- 9ಬೇರೊಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಮತ್ತೊಬ್ಬನಿಗೆ ಆ ಆತ್ಮನಿಂದಲೇ ರೋಗ ಗಳನ್ನು ವಾಸಿಮಾಡುವ ವರಗಳು,
Cross references
- 1 Peter 4:10–11 1 ಪೇತ್ರನು 4:10–11ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ. ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ
- Romans 12:6–8 ರೋಮಾಪುರದವರಿಗೆ 12:6–8ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ. ಇಲ್ಲವೆ ಸೇವೆಯಾಗಿದ್ದರೆ ನಮ್ಮ ಸೇವೆಯಲ್ಲಿ ನಿರತರಾಗಿರೋಣ. ಬೋಧಿಸುವವನು ಬೋಧಿಸುವದರಲ್ಲಿ ನಿರತನಾಗಿರಲಿ. ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ.
- 1 Corinthians 14:19 1 ಕೊರಿಂಥದವರಿಗೆ 14:19ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತುಸಾವಿರ ಮಾತು ಗಳನ್ನಾಡುವದಕ್ಕಿಂತ ನನ್ನ ಬುದ್ಧಿಯಿಂದ ಐದೇ ಮಾತು ಗಳನ್ನಾಡಿ ಇತರರಿಗೆ ಉಪದೇಶಮಾಡುವದು ನನಗೆ ಇಷ್ಟವಾದದ್ದು.
- 1 Corinthians 14:12 1 ಕೊರಿಂಥದವರಿಗೆ 14:12ಅದರಂತೆಯೇ ನೀವು ಆತ್ಮಿಕ ವರಗಳಲ್ಲಿ ಆಸಕ್ತಿಯುಳ್ಳವರಾಗಿರುವದರಿಂದ ಸಭೆಯ ಹೆಚ್ಚಿನ ಭಕ್ತಿವೃದ್ಧಿಗಾಗಿ ತವಕಪಡಿರಿ.
- 1 Corinthians 14:17 1 ಕೊರಿಂಥದವರಿಗೆ 14:17ನೀನಂತೂ ನಿಜ ವಾಗಿಯೂ ಚೆನ್ನಾಗಿ ಕೃತಜ್ಞತಾಸ್ತುತಿ ಮಾಡುತ್ತೀ; ಆದರೆ ಬೇರೊಬ್ಬನು ಭಕ್ತಿವೃದ್ದಿ ಹೊಂದುವದಿಲ್ಲ.
- 1 Corinthians 14:22–26 1 ಕೊರಿಂಥದವರಿಗೆ 14:22–26ಆದದ ರಿಂದ ಭಾಷೆಗಳು ನಂಬುವವರಿಗೆ ಅಲ್ಲ, ನಂಬದವರಿಗೆ ಸೂಚನೆಯಾಗಿವೆ; ಆದರೆ ಪ್ರವಾದಿಸುವದು ನಂಬದ ವರಿಗಲ್ಲ, ನಂಬುವವರಿಗೆ ಸೂಚನೆಯಾಗಿದೆ. ಆದ ಕಾರಣ ಸಭೆಯೆಲ್ಲವೂ ಒಂದು ಸ್ಥಳದಲ್ಲಿ ಕೂಡಿ ಬಂದಾಗ ಎಲ್ಲರೂ ಭಾಷೆಗಳನ್ನಾಡುವದಾದರೆ ತಿಳುವಳಿಕೆ ಯಿಲ್ಲದವರು ಇಲ್ಲವೆ ಅವಿಶ್ವಾಸಿಗಳು ಒಳಗೆ ಬಂದು ನೀವು ಹುಚ್ಚರಾಗಿದ್ದೀರೆಂದು ಹೇಳುವದಿಲ್ಲವೇ? ಆದರೆ ಎಲ್ಲರೂ ಪ್ರವಾದಿಸುವಾಗ ಒಬ್ಬ ಅವಿಶ್ವಾಸಿ ಯಾಗಲಿ ಇಲ್ಲವೆ ತಿಳುವಳಿಕೆಯಿಲ್ಲದವನಾಗಲಿ ಒಳಗೆ ಬಂದರೆ ಅವನು ಎಲ್ಲರಿಂದ ಅರುಹು ಹೊಂದುತ್ತಾನೆ, ಎಲ್ಲರಿಂದ ಪರಿಶೋಧಿತನಾಗುತ್ತಾನೆ. ಹೀಗೆ ಅವನ ಹೃದಯದ ರಹಸ್ಯಗಳು ತೋರಿಬರುತ್ತವೆ; ಅವನು ಸಾಷ್ಟಾಂಗವೆರಗಿ ದೇವರನ್ನು ಆರಾಧಿಸಿ ನಿಜಕ್ಕೂ ನಿಮ್ಮಲ್ಲಿ ದೇವರಿದ್ದಾನೆಂದು ಹೇಳುವನು. ಹಾಗಾದರೇನು? ಸಹೋದರರೇ, ನೀವು ಕೂಡಿ ಬಂದಾಗ ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಬೋಧನೆಯಾಗಲಿ, ಭಾಷೆಯಾಗಲಿ, ಪ್ರಕಟನೆಯಾ ಗಲಿ ಭಾಷೆಯ ಅರ್ಥ ಹೇಳುವದಾಗಲಿ ಇರುತ್ತದಷ್ಟೆ. ಎಲ್ಲವುಗಳು ಭಕ್ತವೃದ್ಧಿಗಾಗಿಯೇ ನಡೆಯಲಿ.
- Ephesians 4:7–12 ಎಫೆಸದವರಿಗೆ 4:7–12ಆದರೆ ಕ್ರಿಸ್ತನು ಅನುಗ್ರಹಿಸಿದ ದಾನದ ಅಳತೆ ಗನುಸಾರವಾಗಿ ನಮ್ಮಲ್ಲಿ ಪ್ರತಿಯೊಬ್ಬನಿಗೆ ಕೃಪೆಯು ಕೊಡಲ್ಪಟ್ಟಿತು. ಆದದರಿಂದ--ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ. (ಏರಿ ಹೋದನೆಂದು ಹೇಳಿ ದ್ದರಲ್ಲಿ ಮೊದಲು ಭೂಮಿಯ ಅಧೋಭಾಗಕ್ಕೆ ಇಳಿ ದಿದ್ದನೆಂತಲೂ ಹೇಳಿದ ಹಾಗಾಯಿತಲ್ಲವೇ? ಇಳಿದು ಬಂದಾತನು ಮೇಲಣ ಎಲ್ಲಾ ಆಕಾಶ ಗಳಿಗಿಂತ ಉನ್ನತವಾಗಿ ಏರಿ ಹೋದಾತನೇ; ಆದದರಿಂದ ಆತನು ಸಮಸ್ತವನ್ನು ತುಂಬಿದವ ನಾದನು). ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.
- 1 Corinthians 14:5 1 ಕೊರಿಂಥದವರಿಗೆ 14:5ನೀವೆಲ್ಲರೂ ಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸುತ್ತೇನೆ; ಆದರೆ ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬದೇ ನನ್ನಿಷ್ಟ. ಭಾಷೆಗಳನ್ನಾಡು ವವನು ಸಭೆಗೆ ಭಕ್ತಿವೃದ್ಧಿಯಾಗುವದಕ್ಕಾಗಿ ಆ ಭಾಷೆಯ ಅರ್ಥವನ್ನು ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠ.
- Matthew 25:14–30 ಮತ್ತಾಯನು 25:14–30ಯಾಕಂದರೆ ಪರಲೋಕರಾಜ್ಯವು ದೂರ ದೇಶಕ್ಕೆ ಪ್ರಯಾಣಮಾಡುವ ಒಬ್ಬ ಮನುಷ್ಯನು ತನ್ನ ಸ್ವಂತ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ. ಅವನು ಒಬ್ಬನಿಗೆ ಐದು ತಲಾಂತುಗಳನ್ನು ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ತಕ್ಷಣವೇ ಪ್ರಯಾಣ ಮಾಡಿದನು. ತರುವಾಯ ಐದು ತಲಾಂತುಗಳನ್ನು ಹೊಂದಿದ ವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ತಲಾಂತುಗಳನ್ನು ಸಂಪಾದಿಸಿದನು. ಅದೇ ಪ್ರಕಾರ ಎರಡು ಹೊಂದಿದವನು ಸಹ ಬೇರೆ ಎರಡನ್ನು ಸಂಪಾದಿಸಿದನು. ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗೆದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು. ಬಹುಕಾಲವಾದ ಮೇಲೆ ಆ ಸೇವಕರ ಯಜ ಮಾನನು ಬಂದು ಅವರಿಂದ ಲೆಕ್ಕಾ ತೆಗೆದುಕೊಂಡನು. ಆಗ ಐದು ತಲಾಂತುಗಳನ್ನು ಹೊಂದಿದ್ದವನು ಬಂದು ಬೇರೆ ಐದು ತಲಾಂತುಗಳನ್ನು ತಂದು--ಒಡೆಯನೇ, ನೀನು ನನಗೆ ಐದು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಬೇರೆ ಐದು ತಲಾಂತುಗಳನ್ನು ನಾನು ಸಂಪಾದಿಸಿದ್ದೇನೆ ಅಂದನು. ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು. ಎರಡು ತಲಾಂತುಗಳನ್ನು ಹೊಂದಿದ್ದವನು ಸಹ ಬಂದು--ಒಡೆಯನೇ, ನೀನು ನನಗೆ ಎರಡು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಇನ್ನೂ ಎರಡು ತಲಾಂತುಗಳನ್ನು ನಾನು ಸಂಪಾದಿಸಿ ದ್ದೇನೆ ಅಂದನು. ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇ ದನ್ನು ಮಾಡಿದ್ದೀ; ಸ್ವಲ್ಪವಾದವುಗಳಲ್ಲಿ ನೀನು ನಂಬಿಗ ಸ್ತನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು. ಆಗ ಒಂದು ತಲಾಂತು ಹೊಂದಿದ್ದ ವನು ಬಂದು--ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು; ಅದಕ್ಕೆ ನಾನು ಭಯಪಟ್ಟು ಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು. ಇಗೋ, ನಿನ್ನದು ನಿನಗೆ ಸಲ್ಲಿದೆ ಅಂದನು. ಅದಕ್ಕೆ ಅವನ ಯಜ ಮಾನನು ಪ್ರತ್ಯುತ್ತರವಾಗಿ--ಮೈಗಳ್ಳನಾದ ಕೆಟ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆ ಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ. ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗಾಗಿ ಕೊಡತಕ್ಕದ್ದಾಗಿತ್ತು; ನಾನು ಬಂದಾಗ ನನ್ನ ಸ್ವಂತದ್ದನ್ನು ಬಡ್ಡಿ ಸಹಿತವಾಗಿ ಹೊಂದಿ ಕೊಳ್ಳುತ್ತಿದ್ದೆನು. ಆ ತಲಾಂತನ್ನು ತೆಗೆದುಕೊಂಡು ಹತ್ತು ತಲಾಂತುಗಳುಳ್ಳವನಿಗೆ ಕೊಡಿರಿ. ಇದ್ದ ಪ್ರತಿ ಯೊಬ್ಬನಿಗೆ ಕೊಡಲ್ಪಡುವದು ಮತ್ತು ಅವನಿಗೆ ಸಮೃದ್ಧಿ ಯಾಗುವದು; ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ತೆಗೆಯಲ್ಪಡುವದು. ಮತ್ತು ನಿಷ್ಪ್ರಯೋ ಜಕನಾದ ಈ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಅಂದನು.