1 Corinthians · chapter 15 · verse 35
1 Corinthians 15:35 in Kannada
ಆದರೆ ಒಬ್ಬನು--ಸತ್ತವರು ಹೇಗೆ ಎಬ್ಬಿಸ ಲ್ಪಡುತ್ತಾರೆ? ಎಂಥ ದೇಹದಿಂದ ಅವರು ಬರುತ್ತಾರೆ ಎಂದು ಕೇಳಾನು.
Aadare obbanu--sattavaru hege ebbisa lpaduttaare? Entha dehadinda avaru baruttaare endu kelaanu.
1 Corinthians 15:35 in English
- King James Version (KJV)
- But some [man] will say, How are the dead raised up? and with what body do they come?
- World English Bible (WEB)
- But someone will say, “How are the dead raised?” and, “With what kind of body do they come?”
- American Standard Version (ASV)
- But some one will say, How are the dead raised? and with what manner of body do they come?
- Bible in Basic English (BBE)
- But someone will say, How do the dead come back? and with what sort of body do they come?
- Darby Translation (DBY)
- But some one will say, How are the dead raised? and with what body do they come?
- Webster's Bible (WBS)
- But some [man] will say, How are the dead raised? and with what body do they come?
- Young's Literal Translation (YLT)
- But some one will say, 'How do the dead rise?
Read in context
- 33ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ.
- 34ನೀತಿಗಾಗಿ ಎಚ್ಚರಗೊಳ್ಳಿರಿ, ಪಾಪಮಾಡಬೇಡಿರಿ; ಕೆಲವರಿಗೆ ದೇವರ ವಿಷಯವಾದ ಜ್ಞಾನವೇ ಇಲ್ಲ; ನಾನು ಇದನ್ನು ನಿಮಗೆ ನಾಚಿಕೆ ಪಡಿಸುವದಕ್ಕಾಗಿ ಹೇಳುತ್ತೇನೆ.
- 35ಆದರೆ ಒಬ್ಬನು--ಸತ್ತವರು ಹೇಗೆ ಎಬ್ಬಿಸ ಲ್ಪಡುತ್ತಾರೆ? ಎಂಥ ದೇಹದಿಂದ ಅವರು ಬರುತ್ತಾರೆ ಎಂದು ಕೇಳಾನು.
- 36ಮೂಢನು ನೀನು; ನೀನು ಬಿತ್ತಿರುವದು ಸಾಯದ ಹೊರತು ಜೀವಿತವಾಗು ವದಿಲ್ಲ.
- 37ಒಂದು ವೇಳೆ ಗೋಧಿಯನ್ನಾಗಲಿ ಬೇರೆ ಯಾವದೋ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಆಗಬೇಕಾದ ದೇಹವನ್ನು ಬಿತ್ತುವದಿಲ್ಲ.
Cross references
- Ezekiel 37:3 ಯೆಹೆಜ್ಕೇಲನು 37:3ಆತನು ನನಗೆ ಹೇಳಿದ್ದು--ಮನಷ್ಯಪುತ್ರನೇ, ಈ ಎಲುಬುಗಳು ಜೀವಿಸುವವೇ ಎಂದಾಗ ನಾನು ಉತ್ತರವಾಗಿ, ಓ ದೇವರಾದ ಕರ್ತನೇ, ನೀನೇ ತಿಳಿದಿರುವೆ ಎಂದೆನು.
- Philippians 3:21 ಫಿಲಿಪ್ಪಿಯವರಿಗೆ 3:21ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
- 1 Corinthians 15:38–53 1 ಕೊರಿಂಥದವರಿಗೆ 15:38–53ಆದರೆ ದೇವರು ತನ್ನ ಇಷ್ಟದಂತೆ ಅದಕ್ಕೆ ದೇಹವನ್ನು ಕೊಡುತ್ತಾನೆ. ಒಂದೊಂದು ಬೀಜಕ್ಕೆ ಅದರದರ ದೇಹವನ್ನು ಕೊಡುತ್ತಾನೆ. ಎಲ್ಲಾ ಶರೀರಗಳು ಒಂದೇ ವಿಧವಾದವುಗಳಲ್ಲ; ಮನುಷ್ಯರ ಶರೀರ ಬೇರೆ, ಪಶುಗಳ ಶರೀರ ಬೇರೆ, ವಿಾನುಗಳದು ಬೇರೆ, ಪಕ್ಷಿಗಳದು ಬೇರೆ. ಇದಲ್ಲದೆ ಆಕಾಶದ ದೇಹಗಳು ಮತ್ತು ಭೂಮಂಡಲದ ದೇಹಗಳು ಇವೆ;ಆದರೆ ಆಕಾಶದ ಮಹಿಮೆ ಒಂದು ವಿಧ ಮತ್ತು ಭೂಮಂಡಲದ ಮಹಿಮೆ ಮತ್ತೊಂದು ವಿಧ. ಸೂರ್ಯನ ಮಹಿಮೆ ಒಂದು ವಿಧ, ಚಂದ್ರನ ಮಹಿಮೆ ಮತ್ತೊಂದು ವಿಧ, ನಕ್ಷತ್ರಗಳ ಮಹಿಮೆ ಇನ್ನೊಂದು ವಿಧ ಮಹಿಮೆಯಲ್ಲಿ ಒಂದು ನಕ್ಷತ್ರಕ್ಕೂ ಇನ್ನೊಂದು ನಕ್ಷತ್ರಕ್ಕೂ ಹೆಚ್ಚು ಕಡಿಮೆಯುಂಟಷ್ಟೆ. ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರ ವಾಗಿರುವದು. ದೇಹವು ಲಯಾವಸ್ಥೆಯಲ್ಲಿ ಬಿತ್ತಲ್ಪಡು ತ್ತದೆ. ನಿರ್ಲಯಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ. ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಎಬ್ಬಿಸಲ್ಪಡುತ್ತದೆ; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ. ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಆತ್ಮಿಕದೇಹವಾಗಿ ಎಬ್ಬಿಸಲ್ಪಡುತ್ತದೆ; ಪ್ರಾಕೃತದೇಹವಿರುವದಾದರೆ ಆತ್ಮಿಕ ದೇಹವೂ ಇರುವದು. ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ. ಹೇಗಿದ್ದರೂ ಆತ್ಮಿಕವಾದದ್ದು ಮೊದಲ ನೆಯದಲ್ಲ, ಪ್ರಾಕೃತವಾದದ್ದು ಮೊದಲನೆಯದು; ಆಮೇಲೆ ಆತ್ಮಿಕವಾದದ್ದು. ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು. ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು. ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾ ತನ ಸಾರೂಪ್ಯವನ್ನೂ ಧರಿಸಿಕೊಳ್ಳುವೆವು. ಸಹೋದರರೇ, ನಾನು ಹೇಳುವದೇನಂದರೆ-- ಮಾಂಸವು ರಕ್ತವು ದೇವರ ರಾಜ್ಯಕ್ಕೆ ಬಾಧ್ಯವಾಗ ಲಾರವು; ಇಲ್ಲವೆ ಲಯವಾಗುವದು ನಿರ್ಲಯತ್ವಕ್ಕೆ ಬಾಧ್ಯವಾಗುವದಿಲ್ಲ. ಇಗೋ, ಮರ್ಮವಾಗಿದ್ದ ಒಂದು ಸಂಗತಿಯನ್ನು ನಿಮಗೆ ತಿಳಿಸುತ್ತೇನೆ-- ನಾವೆಲ್ಲರೂ ನಿದ್ರೆಹೋಗುವದಿಲ್ಲ, ಆದರೆ ನಾವೆ ಲ್ಲರೂ ಮಾರ್ಪಡುವೆವು. ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು. ಲಯ ವಾಗುವಂಥದ್ದು (ಈ ದೇಹವು) ನಿರ್ಲಯತ್ವವನ್ನು ಧರಿಸಿಕೊಳ್ಳುವದೂ ಮರಣಾಧೀನವಾಗಿರುವಂಥ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವದೂ ಅವಶ್ಯ.
- Romans 9:19 ರೋಮಾಪುರದವರಿಗೆ 9:19ಆಗ ನೀನು ನನಗೆ--ಹಾಗಾದರೆ ಆತನು ಇನ್ನು ತಪ್ಪು ಕಂಡುಹಿಡಿಯುವದು ಹೇಗೆ? ಆತನ ಚಿತ್ತವನ್ನು ಎದುರಿಸುವದು ಯಾರಿಂದಾದೀತು ಎಂದು ಕೇಳುವಿ.
- Psalm 73:11 ಕೀರ್ತನೆಗಳು 73:11ಅವರು-- ದೇವರು ಹೇಗೆ ಬಲ್ಲನು? ಮಹೋನ್ನತನಲ್ಲಿ ತಿಳುವಳಿಕೆ ಉಂಟೋ ಎಂದು ಅಂದುಕೊಳ್ಳುತ್ತಾರೆ.
- John 3:4 ಯೋಹಾನನು 3:4ನಿಕೊದೇಮನು ಆತನಿಗೆ--ಒಬ್ಬನು ಮುದುಕನಾದ ಮೇಲೆ ಹುಟ್ಟುವದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವದಾದೀತೇ ಎಂದು ಕೇಳಿದನು.
- Ecclesiastes 11:5 ಪ್ರಸಂಗಿ 11:5ಹೇಗೆ ನೀನು ಆತ್ಮೀಯ ಮಾರ್ಗವು ಯಾವದೆಂದೂ ಮತ್ತು ಮಗು ವಿರುವ ಅವಳ ಗರ್ಭದಲ್ಲಿ ಎಲುಬುಗಳು ಹೇಗೆ ಬೆಳೆಯುವವೆಂದೂ ತಿಳಿದುಕೊಳ್ಳಲಾರಿಯೋ ಹಾಗೆ ಯೇ ಎಲ್ಲವನ್ನೂ ಮಾಡುವ ದೇವರ ಕೆಲಸವನ್ನೂ ತಿಳಿದುಕೊಳ್ಳಲಾರಿ.
- Job 11:12 ಯೋಬನು 11:12ಕಾಡುಕತ್ತೆಯ ಮರಿಯ ಹಾಗೆ ಮನುಷ್ಯನು ಹುಟ್ಟಿ ದರೂ ವ್ಯರ್ಥ ಮನುಷ್ಯನು ಜ್ಞಾನಿಯಾಗಿರುವನು.
- Job 22:13 ಯೋಬನು 22:13ಆದರೆ ನೀನು ಹೇಳುತ್ತೀ--ದೇವರು ಏನು ಬಲ್ಲನು? ಆತನು ಕಾರ್ಗತ್ತಲಿಂದ ನ್ಯಾಯತೀರಿಸುವನೋ?
- Matthew 22:29–30 ಮತ್ತಾಯನು 22:29–30ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ. ಯಾಕಂದರೆ ಪುನರುತ್ಥಾನದಲ್ಲಿ ಅವರು ಮದುವೆಯಾಗುವದಿಲ್ಲ ಮತ್ತು ಮದುವೆ ಮಾಡಿಕೊಡುವದೂ ಇಲ್ಲ; ಆದರೆ ಅವರು ಪರಲೋಕ ದಲ್ಲಿರುವ ದೇವದೂತರಂತೆ ಇರುತ್ತಾರೆ.
- John 9:10 ಯೋಹಾನನು 9:10ಆದದರಿಂದ ಅವರು ಅವ ನಿಗೆ--ನಿನ್ನ ಕಣ್ಣುಗಳು ಹೇಗೆ ತೆರೆಯಲ್ಪಟ್ಟವು ಎಂದು ಕೇಳಲು
- John 3:9 ಯೋಹಾನನು 3:9ಅದಕ್ಕೆ ನಿಕೊ ದೇಮನು ಪ್ರತ್ಯುತ್ತರವಾಗಿ ಆತನಿಗೆ--ಇವುಗಳು ಹೇಗಾದಾವು ಎಂದು ಕೇಳಿದ್ದಕ್ಕೆ