1 Corinthians · chapter 15 · verse 4
1 Corinthians 15:4 in Kannada
ಹೂಣಲ್ಪಟ್ಟನು; ಬರಹದ ಪ್ರಕಾರವೇ ಆತನು ಮೂರನೆಯ ದಿನದಲ್ಲಿ ತಿರಿಗಿ ಎದ್ದುಬಂದನು.
Hoonalpattanu; barahada prakaarave aatanu mooraneya dinadalli tirigi eddubandanu.
1 Corinthians 15:4 in English
- King James Version (KJV)
- And that he was buried, and that he rose again the third day according to the scriptures:
- World English Bible (WEB)
- that he was buried, that he was raised on the third day according to the Scriptures,
- American Standard Version (ASV)
- and that he was buried; and that he hath been raised on the third day according to the scriptures;
- Bible in Basic English (BBE)
- And he was put in the place of the dead; and on the third day he came back from the dead, as it says in the Writings;
- Darby Translation (DBY)
- and that he was buried; and that he was raised the third day, according to the scriptures;
- Webster's Bible (WBS)
- And that he was buried, and that he rose again the third day according to the scriptures:
- Young's Literal Translation (YLT)
- and that he was buried, and that he hath risen on the third day, according to the Writings,
Read in context
- 2ನಾನು ನಿಮಗೆ ಸಾರಿರುವದನ್ನು ನೀವು ಜ್ಞಾಪಕದಲ್ಲಿಟ್ಟುಕೊಂಡವರಾಗಿದ್ದು ನಿಮ್ಮ ನಂಬಿಕೆಯು ವ್ಯರ್ಥವಾಗಿರದಿದ್ದರೆ ಅದರಿಂದಲೂ ನೀವು ರಕ್ಷಣೆ ಹೊಂದಿದ್ದೀರಿ.
- 3ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು.
- 4ಹೂಣಲ್ಪಟ್ಟನು; ಬರಹದ ಪ್ರಕಾರವೇ ಆತನು ಮೂರನೆಯ ದಿನದಲ್ಲಿ ತಿರಿಗಿ ಎದ್ದುಬಂದನು.
- 5ತರುವಾಯ ಆತನು ಕೇಫನಿಗೂ ಆಮೇಲೆ ಹನ್ನೆರಡು ಮಂದಿಗೂ ಕಾಣಿಸಿ ಕೊಂಡನು.
- 6ಇದಾದ ಮೇಲೆ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಆತನು ಕಾಣಿಸಿ ಕೊಂಡನು; ಇದರಲ್ಲಿ ಹೆಚ್ಚು ಜನರು ಇಂದಿನವರೆಗೂ ಇದ್ದಾರೆ; ಆದರೆ ಕೆಲವರು ನಿದ್ರೆಹೋಗಿದ್ದಾರೆ.
Cross references
- Hosea 6:2 ಹೋಶೇಯ 6:2ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು.
- Matthew 12:40 ಮತ್ತಾಯನು 12:40ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.
- Psalm 16:10–11 ಕೀರ್ತನೆಗಳು 16:10–11ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ. ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
- Isaiah 53:9–12 ಯೆಶಾಯ 53:9–12ಆತನು ಮರಣವನ್ನು ಧನಿಕರೊಂದಿಗೂ ಆತನ ಸಮಾಧಿಯನ್ನು ದುಷ್ಟರೊಂದಿಗೂ ಮಾಡಿಕೊಂಡನು. ಆತನು ಯಾವ ಬಲಾತ್ಕಾರವನ್ನೂ ಮಾಡಲಿಲ್ಲ ಇಲ್ಲವೆ ಆತನ ಬಾಯಲ್ಲಿ ಯಾವ ವಂಚನೆಯೂ ಇರಲಿಲ್ಲ. ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು. ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು. ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- Acts 26:22–23 ಅಪೊಸ್ತಲರ ಕೃತ್ಯಗಳು 26:22–23ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ. ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವ ರೊಳಗಿಂದ ಮೊದಲನೆಯವನಾಗಿ ಎದ್ದು ಪ್ರಜೆ ಗಳಿಗೂ ಅನ್ಯಜನಾಂಗದವರಿಗೂ ಬೆಳಕನ್ನು ತೋರಿಸು ವವನಾಗಿರಬೇಕಾಗಿತ್ತು.
- Acts 13:29–37 ಅಪೊಸ್ತಲರ ಕೃತ್ಯಗಳು 13:29–37ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು. ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು. ಆತನು ಯೆರೂಸಲೇಮಿಗೆ ಗಲಿಲಾಯ ದಿಂದ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿವಸಗಳ ಪರ್ಯಂತರ ಕಾಣಿಸಿಕೊಂಡನು. ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ. ಪಿತೃಗಳಿಗೆ ವಾಗ್ದಾನ ಮಾಡಿದ್ದು ಹೇಗೆ ಎಂಬ ಶುಭಸಂದೇಶ ವನ್ನು ನಾವು ನಿಮಗೆ ಪ್ರಕಟಿಸುತ್ತೇವೆ. ಏನಂ ದರೆ--ನೀನು ನನ್ನ ಮಗನು, ಈ ದಿನ ನಾನು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಸಹ ಬರೆದಿರುವ ಪ್ರಕಾರ ಅವರ ಮಕ್ಕಳಾದ ನಮಗೆ ದೇವರು ಯೇಸುವನ್ನು ತಿರಿಗಿ ಎಬ್ಬಿಸುವದರ ಮೂಲಕ ಅದನ್ನು ನೆರವೇರಿಸಿದ್ದಾನೆ ಎಂಬದೇ. ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು. ಅದಕ್ಕನುಸಾರವಾಗಿ ಆತನು--ನೀನು ನಿನ್ನ ಪರಿ ಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿ ಸುವದಿಲ್ಲವೆಂದು ಬೇರೊಂದು ಕೀರ್ತನೆಯಲ್ಲಿಯೂ ಹೇಳುತ್ತಾನೆ. ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು. ಆದರೆ ದೇವರು ಎಬ್ಬಿಸಿದಾತನು ಕೊಳೆಯುವ ಅವಸ್ಥೆಯನ್ನು ನೋಡಲೇ ಇಲ್ಲ.
- Luke 24:46 ಲೂಕನು 24:46ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ
- Jonah 1:17 ಯೋನ 1:17ಆದರೆ ಕರ್ತನು ಯೋನನನ್ನು ನುಂಗುವ ಹಾಗೆ ದೊಡ್ಡ ವಿಾನನ್ನು ಸಿದ್ಧಮಾಡಿದ್ದನು; ಯೋನನು ಆ ವಿಾನಿನ ಹೊಟ್ಟೆಯಲ್ಲಿ ಮೂರು ಹಗಲು ಮೂರು ರಾತ್ರಿಯು ಇದ್ದನು.
- Psalm 2:7 ಕೀರ್ತನೆಗಳು 2:7ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
- 1 Corinthians 15:16–21 1 ಕೊರಿಂಥದವರಿಗೆ 15:16–21ಸತ್ತವರು ಏಳಲಿಲ್ಲವಾದರೆ ಕ್ರಿಸ್ತನು ಎಬ್ಬಿಸಲ್ಪಡಲಿಲ್ಲ. ಕ್ರಿಸ್ತನು ಎಬ್ಬಿಸಲ್ಪಡಲಿಲ್ಲವಾದರೆ ನಿಮ್ಮ ನಂಬಿಕೆಯು ವ್ಯರ್ಥವಾಗಿದೆ; ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ. ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆ ಹೋದವರೂ ನಾಶವಾದರು. ಈ ಜೀವದಲ್ಲಿ ಮಾತ್ರ ನಾವು ಕ್ರಿಸ್ತನಲ್ಲಿ ನಿರೀಕ್ಷೆಯಿಟ್ಟುಕೊಂಡವ ರಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ನಿರ್ಭಾಗ್ಯರೇ ಸರಿ. ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು. ಮನುಷ್ಯನ ಮೂಲಕ ಮರಣವುಂಟಾದ ಕಾರಣ ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನ ವುಂಟಾಗುವದು.
- Hebrews 13:20 ಇಬ್ರಿಯರಿಗೆ 13:20ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
- Acts 2:23–33 ಅಪೊಸ್ತಲರ ಕೃತ್ಯಗಳು 2:23–33ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ. ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು. ದಾವೀದನು ಆತನ ವಿಷಯವಾಗಿ-- ನಾನು ಕರ್ತನನ್ನು ನನ್ನ ಎದುರಿನಲ್ಲಿ ಯಾವಾಗಲೂ ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ. ಆದದರಿಂದ ನನ್ನ ಹೃದಯವು ಹರ್ಷಿಸಿತು, ನನ್ನ ನಾಲಿಗೆಯು ಉಲ್ಲಾಸ ಗೊಂಡಿತು; ಇದಲ್ಲದೆ ನನ್ನ ಶರೀರವು ಸಹ ನಿರೀಕ್ಷೆಯಲ್ಲಿ ನೆಲೆಯಾಗಿರುವದು; ಯಾಕಂ ದರೆ--ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವ ದಿಲ್ಲ. ನಿನ್ನ ಪರಿಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ. ನೀನು ಜೀವಮಾರ್ಗ ಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿ ಎಂದು ಹೇಳು ತ್ತಾನೆ. ಜನರೇ, ಸಹೋದರರೇ, ಮೂಲಪಿತೃವಾದ ದಾವೀದನ ವಿಷಯವಾಗಿ ನಿಮ್ಮೊಂದಿಗೆ ಧಾರಾಳವಾಗಿ ಮಾತನಾಡುತ್ತೇನೆ. ಅವನು ಸತ್ತು ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿದೆ. ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು. ಆತನ ಆತ್ಮವು ಪಾತಾಳದಲ್ಲಿ ಬಿಡಲ್ಪಡಲಿಲ್ಲ ವೆಂತಲೂ ಆತನ ಶರೀರವು ಕೊಳೆಯಲಿಲ್ಲವೆಂತಲೂ ಕ್ರಿಸ್ತನ ಪುನರುತ್ಥಾನದ ವಿಷಯವಾಗಿ ಅವನು ಇದನ್ನು ಮುಂದಾಗಿ ನೋಡಿ ಹೇಳಿದನು; ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ. ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ.