1 Corinthians · chapter 15 · verse 42
1 Corinthians 15:42 in Kannada
ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರ ವಾಗಿರುವದು. ದೇಹವು ಲಯಾವಸ್ಥೆಯಲ್ಲಿ ಬಿತ್ತಲ್ಪಡು ತ್ತದೆ. ನಿರ್ಲಯಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ.
Sattavarigaaguva punarutthaanavu ade prakaara vaagiruvadu. Dehavu layaavastheyalli bittalpadu ttade. Nirlayaavastheyalli ebbisalpaduttade.
1 Corinthians 15:42 in English
- King James Version (KJV)
- So also [is] the resurrection of the dead. It is sown in corruption; it is raised in incorruption:
- World English Bible (WEB)
- So also is the resurrection of the dead. The body is sown perishable; it is raised imperishable.
- American Standard Version (ASV)
- So also is the resurrection of the dead. It is sown in corruption; it is raised in incorruption:
- Bible in Basic English (BBE)
- So is it with the coming back from the dead. It is planted in death; it comes again in life:
- Darby Translation (DBY)
- Thus also [is] the resurrection of the dead. It is sown in corruption, it is raised in incorruptibility.
- Webster's Bible (WBS)
- So also [is] the resurrection of the dead. It is sown in corruption, it is raised in incorruption:
- Young's Literal Translation (YLT)
- So also [is] the rising again of the dead: it is sown in corruption, it is raised in incorruption;
Read in context
- 40ಇದಲ್ಲದೆ ಆಕಾಶದ ದೇಹಗಳು ಮತ್ತು ಭೂಮಂಡಲದ ದೇಹಗಳು ಇವೆ;ಆದರೆ ಆಕಾಶದ ಮಹಿಮೆ ಒಂದು ವಿಧ ಮತ್ತು ಭೂಮಂಡಲದ ಮಹಿಮೆ ಮತ್ತೊಂದು ವಿಧ.
- 41ಸೂರ್ಯನ ಮಹಿಮೆ ಒಂದು ವಿಧ, ಚಂದ್ರನ ಮಹಿಮೆ ಮತ್ತೊಂದು ವಿಧ, ನಕ್ಷತ್ರಗಳ ಮಹಿಮೆ ಇನ್ನೊಂದು ವಿಧ ಮಹಿಮೆಯಲ್ಲಿ ಒಂದು ನಕ್ಷತ್ರಕ್ಕೂ ಇನ್ನೊಂದು ನಕ್ಷತ್ರಕ್ಕೂ ಹೆಚ್ಚು ಕಡಿಮೆಯುಂಟಷ್ಟೆ.
- 42ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರ ವಾಗಿರುವದು. ದೇಹವು ಲಯಾವಸ್ಥೆಯಲ್ಲಿ ಬಿತ್ತಲ್ಪಡು ತ್ತದೆ. ನಿರ್ಲಯಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ.
- 43ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಎಬ್ಬಿಸಲ್ಪಡುತ್ತದೆ; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ.
- 44ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಆತ್ಮಿಕದೇಹವಾಗಿ ಎಬ್ಬಿಸಲ್ಪಡುತ್ತದೆ; ಪ್ರಾಕೃತದೇಹವಿರುವದಾದರೆ ಆತ್ಮಿಕ ದೇಹವೂ ಇರುವದು.
Cross references
- Daniel 12:3 ದಾನಿಯೇಲನು 12:3ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು;
- Matthew 13:43 ಮತ್ತಾಯನು 13:43ತರುವಾಯ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
- Philippians 3:20–21 ಫಿಲಿಪ್ಪಿಯವರಿಗೆ 3:20–21ನಾವಾದರೊ ಪರಲೋಕ ನಿವಾಸಿಗಳು; ಅಲ್ಲಿಂದಲೇ ರಕ್ಷಕನು ಬರುವದನ್ನು ಎದುರು ನೋಡುತ್ತಾ ಇದ್ದೇವೆ; ಆತನೇ ಕರ್ತನಾದ ಯೇಸು ಕ್ರಿಸ್ತನು.ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು. ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
- Romans 8:21 ರೋಮಾಪುರದವರಿಗೆ 8:21ಸೃಷ್ಟಿಯು ತಾನೇ ದೇವರ ಮಕ್ಕಳ ಮಹಿಮೆಯ ಸ್ವಾತಂತ್ರ್ಯತೆಯಲ್ಲಿ ಸೇರುವಂತೆ ನಾಶನದ ದಾಸತ್ವದಿಂದ ಬಿಡುಗಡೆ ಹೊಂದುವದು.
- 1 Peter 1:4 1 ಪೇತ್ರನು 1:4ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.
- 1 Corinthians 15:50–54 1 ಕೊರಿಂಥದವರಿಗೆ 15:50–54ಸಹೋದರರೇ, ನಾನು ಹೇಳುವದೇನಂದರೆ-- ಮಾಂಸವು ರಕ್ತವು ದೇವರ ರಾಜ್ಯಕ್ಕೆ ಬಾಧ್ಯವಾಗ ಲಾರವು; ಇಲ್ಲವೆ ಲಯವಾಗುವದು ನಿರ್ಲಯತ್ವಕ್ಕೆ ಬಾಧ್ಯವಾಗುವದಿಲ್ಲ. ಇಗೋ, ಮರ್ಮವಾಗಿದ್ದ ಒಂದು ಸಂಗತಿಯನ್ನು ನಿಮಗೆ ತಿಳಿಸುತ್ತೇನೆ-- ನಾವೆಲ್ಲರೂ ನಿದ್ರೆಹೋಗುವದಿಲ್ಲ, ಆದರೆ ನಾವೆ ಲ್ಲರೂ ಮಾರ್ಪಡುವೆವು. ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು. ಲಯ ವಾಗುವಂಥದ್ದು (ಈ ದೇಹವು) ನಿರ್ಲಯತ್ವವನ್ನು ಧರಿಸಿಕೊಳ್ಳುವದೂ ಮರಣಾಧೀನವಾಗಿರುವಂಥ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವದೂ ಅವಶ್ಯ. ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು, ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು; ಆಗ ಬರೆದಿರುವ ಮಾತು ನೆರವೇರುವದು, ಆ ಮಾತು ಏನಂದರೆ--ಜಯವು ಮರಣವನ್ನು ನುಂಗಿತು ಎಂಬದೇ.
- Acts 2:31 ಅಪೊಸ್ತಲರ ಕೃತ್ಯಗಳು 2:31ಆತನ ಆತ್ಮವು ಪಾತಾಳದಲ್ಲಿ ಬಿಡಲ್ಪಡಲಿಲ್ಲ ವೆಂತಲೂ ಆತನ ಶರೀರವು ಕೊಳೆಯಲಿಲ್ಲವೆಂತಲೂ ಕ್ರಿಸ್ತನ ಪುನರುತ್ಥಾನದ ವಿಷಯವಾಗಿ ಅವನು ಇದನ್ನು ಮುಂದಾಗಿ ನೋಡಿ ಹೇಳಿದನು;
- Acts 2:27 ಅಪೊಸ್ತಲರ ಕೃತ್ಯಗಳು 2:27ಯಾಕಂ ದರೆ--ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವ ದಿಲ್ಲ. ನಿನ್ನ ಪರಿಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ.
- Romans 1:23 ರೋಮಾಪುರದವರಿಗೆ 1:23ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು.
- Psalm 49:14 ಕೀರ್ತನೆಗಳು 49:14ಅವರು ಕುರಿ ಗಳಂತೆ ಸಮಾಧಿಯಲ್ಲಿ ಹಾಕಲ್ಪಡುತ್ತಾರೆ; ಮರಣವು ಅವರನ್ನು ತಿನ್ನುತ್ತದೆ; ಯಥಾರ್ಥರು ಬೆಳಿಗ್ಗೆ ಅವರ ಮೇಲೆ ಆಳುವರು; ಅವರಿಗೆ ನಿವಾಸವಿರದ ಹಾಗೆ ಸಮಾಧಿಯಲ್ಲಿ ಅವರ ರೂಪವು ಕ್ಷಯಿಸುವದು.
- Psalm 16:10 ಕೀರ್ತನೆಗಳು 16:10ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
- Acts 13:34–37 ಅಪೊಸ್ತಲರ ಕೃತ್ಯಗಳು 13:34–37ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು. ಅದಕ್ಕನುಸಾರವಾಗಿ ಆತನು--ನೀನು ನಿನ್ನ ಪರಿ ಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿ ಸುವದಿಲ್ಲವೆಂದು ಬೇರೊಂದು ಕೀರ್ತನೆಯಲ್ಲಿಯೂ ಹೇಳುತ್ತಾನೆ. ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು. ಆದರೆ ದೇವರು ಎಬ್ಬಿಸಿದಾತನು ಕೊಳೆಯುವ ಅವಸ್ಥೆಯನ್ನು ನೋಡಲೇ ಇಲ್ಲ.