1 Corinthians · chapter 15 · verse 5
1 Corinthians 15:5 in Kannada
ತರುವಾಯ ಆತನು ಕೇಫನಿಗೂ ಆಮೇಲೆ ಹನ್ನೆರಡು ಮಂದಿಗೂ ಕಾಣಿಸಿ ಕೊಂಡನು.
Taruvaaya aatanu kephanigoo aamele hanneradu mandigoo kaanisi kondanu.
1 Corinthians 15:5 in English
- King James Version (KJV)
- And that he was seen of Cephas, then of the twelve:
- World English Bible (WEB)
- and that he appeared to Cephas, then to the twelve.
- American Standard Version (ASV)
- and that he appeared to Cephas; then to the twelve;
- Bible in Basic English (BBE)
- And he was seen by Cephas; then by the twelve;
- Darby Translation (DBY)
- and that he appeared to Cephas, then to the twelve.
- Webster's Bible (WBS)
- And that he was seen by Cephas, then by the twelve:
- Young's Literal Translation (YLT)
- and that he appeared to Cephas, then to the twelve,
Read in context
- 3ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು.
- 4ಹೂಣಲ್ಪಟ್ಟನು; ಬರಹದ ಪ್ರಕಾರವೇ ಆತನು ಮೂರನೆಯ ದಿನದಲ್ಲಿ ತಿರಿಗಿ ಎದ್ದುಬಂದನು.
- 5ತರುವಾಯ ಆತನು ಕೇಫನಿಗೂ ಆಮೇಲೆ ಹನ್ನೆರಡು ಮಂದಿಗೂ ಕಾಣಿಸಿ ಕೊಂಡನು.
- 6ಇದಾದ ಮೇಲೆ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಆತನು ಕಾಣಿಸಿ ಕೊಂಡನು; ಇದರಲ್ಲಿ ಹೆಚ್ಚು ಜನರು ಇಂದಿನವರೆಗೂ ಇದ್ದಾರೆ; ಆದರೆ ಕೆಲವರು ನಿದ್ರೆಹೋಗಿದ್ದಾರೆ.
- 7ತರುವಾಯ ಆತನು ಯಾಕೋಬನಿಗೂ ಆಮೇಲೆ ಅಪೊಸ್ತಲರೆಲ್ಲರಿಗೂ ಕಾಣಿಸಿಕೊಂಡನು.
Cross references
- Mark 16:14 ಮಾರ್ಕನು 16:14ತರುವಾಯ ಊಟಕ್ಕೆ ಕೂತಿದ್ದ ಹನ್ನೊಂದು ಮಂದಿಗೆ ಆತನು ಕಾಣಿಸಿಕೊಂಡು ತಾನು ಎದ್ದು ಬಂದಮೇಲೆ ತನ್ನನ್ನು ನೋಡಿದವರನ್ನು ನಂಬಲಿಲ್ಲ ವಾದ ಕಾರಣ ಅವರ ಅಪನಂಬಿಕೆಗೂ ಹೃದಯದ ಕಾಠಿಣ್ಯಕ್ಕೂ ಆತನು ಅವರನ್ನು ಗದರಿಸಿದನು.
- John 20:19–26 ಯೋಹಾನನು 20:19–26ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು. ಆತನು ಹೀಗೆ ಹೇಳಿದ ಮೇಲೆ ತನ್ನ ಕೈಗಳನ್ನೂ ಪಕ್ಕೆಯನ್ನೂ ಅವರಿಗೆ ತೋರಿಸಿದನು; ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು. ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು. ಆತನು ಇದನ್ನು ಹೇಳಿ ಅವರ ಮೇಲೆ ಊದಿ ಅವರಿಗೆ--ನೀವು ಪರಿಶುದ್ಧಾತ್ಮನನ್ನು ಹೊಂದಿಕೊಳ್ಳಿರಿ; ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ ಅವು ಅವರಿಗೆ ಕ್ಷಮಿಸಲ್ಪಡುವವು; ಯಾರ ಪಾಪಗಳನ್ನು ನೀವು ಉಳಿ ಸುತ್ತೀರೋ ಅವು ಅವರಿಗೆ ಉಳಿಯುತ್ತವೆ ಎಂದು ಹೇಳಿದನು. ಆದರೆ ಯೇಸು ಬಂದಾಗ ಹನ್ನೆರಡು ಮಂದಿ ಯಲ್ಲಿ ಒಬ್ಬನಾದ ದಿದುಮನೆಂದು ಕರೆಯಲ್ಪಟ್ಟ ತೋಮನು ಅವರ ಸಂಗಡ ಇರಲಿಲ್ಲ. ಆದದರಿಂದ ಬೇರೆ ಶಿಷ್ಯರು ಅವನಿಗೆ--ನಾವು ಕರ್ತನನ್ನು ನೋಡಿ ದ್ದೇವೆ ಎಂದು ಹೇಳಿದರು. ಆದರೆ ಅವನು ಅವ ರಿಗೆ--ನಾನು ಆತನ ಕೈಗಳಲ್ಲಿ ಮೊಳೆಗಳ ಗುರುತನ್ನು ನೋಡಿ ಆ ಮೊಳೆಗಳ ಗುರುತಿನಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಾನು ನ ತಿರಿಗಿ ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು--ನಿಮಗೆ ಸಮಾಧಾನ ವಾಗಲಿ ಅಂದನು.
- Acts 1:2–14 ಅಪೊಸ್ತಲರ ಕೃತ್ಯಗಳು 1:2–14ಆತನು ಮೇಲಕ್ಕೆ ಎತ್ತಲ್ಪಟ್ಟ ದಿವಸದ ವರೆಗೆ ತಾನು ಮಾಡುವದಕ್ಕೂ ಬೋಧಿಸುವದಕ್ಕೂ ಪ್ರಾರಂಭಿಸಿದ್ದೆಲ್ಲವನ್ನು ನಾನು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದೆನು. ಆತನು ಶ್ರಮೆಯನ್ನನುಭವಿಸಿದ ಮೇಲೆ ದೃಢವಾದ ಅನೇಕ ಪ್ರಮಾಣಗಳಿಂದ ತಾನು ಜೀವಂತನಾಗಿ ದ್ದನೆಂದು ಅಪೊಸ್ತಲರಿಗೆ ತನ್ನನ್ನು ತೋರಿಸಿಕೊಂಡು ನಾಲ್ವತ್ತು ದಿವಸಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯಕ್ಕೆ ಸಂಬಂಧಪಟ್ಟ ವಿಷಯಗಳನ್ನು ಮಾತನಾಡುತ್ತಿದ್ದನು. ಆತನು ಅವರೊಂದಿಗೆ ಕೂಡಿಕೊಂಡಿದ್ದಾಗ--ನೀವು ಯೆರೂಸಲೇಮಿನಿಂದ ಹೊರಟುಹೋಗದೆ ನನ್ನಿಂದ ಕೇಳಿದ ತಂದೆಯ ವಾಗ್ದಾನಕೋಸ್ಕರ ಕಾಯ ಬೇಕೆಂದು ಅವರಿಗೆ ಅಪ್ಪಣೆಕೊಟ್ಟನು. ಯಾಕಂದರೆ ಯೋಹಾನನು ನಿಜವಾಗಿಯೂ ನೀರಿನಿಂದ ಬಾಪ್ತಿಸ್ಮ ಮಾಡಿಸಿದನು; ಆದರೆ ನೀವು ಇನ್ನು ಸ್ವಲ್ಪ ದಿವಸ ಗಳಲ್ಲಿಯೇ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಹೇಳಿದನು. ಅವರು ಕೂಡಿಬಂದಾಗ ಆತ ನಿಗೆ--ಕರ್ತನೇ, ಈ ಸಮಯದಲ್ಲಿಯೇ ನೀನು ಇಸ್ರಾ ಯೇಲ್ಯರಿಗೆ ರಾಜ್ಯವನ್ನು ಪುನಃ ಸ್ಥಾಪಿಸುವಿಯೋ ಎಂದು ಕೇಳಿದರು. ಆತನು ಅವರಿಗೆ--ತಂದೆಯು ತನ್ನ ಸ್ವಂತ ಅಧಿಕಾರದಲ್ಲಿ ಇಟ್ಟುಕೊಂಡಿರುವ ಸಮಯ ಗಳನ್ನೂ ಕಾಲಗಳನ್ನೂ ತಿಳಿದುಕೊಳ್ಳುವದು ನಿಮಗೆ ಸಂಬಂಧಪಟ್ಟದ್ದಲ್ಲ. ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು. ಇವುಗಳನ್ನು ಹೇಳಿದ ಮೇಲೆ ಅವರು ನೋಡುತ್ತಿರುವಾಗ ಆತನು ಮೇಲಕ್ಕೆ ಎತ್ತಲ್ಪಟ್ಟನು; ಮೋಡವು ಅವರ ದೃಷ್ಟಿಗೆ ಮರೆಮಾಡಿ ಆತನನ್ನು ಸ್ವೀಕರಿಸಿತು. ಆತನು ಮೇಲಕ್ಕೆ ಹೋಗು ತ್ತಿರಲು ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರು ವಾಗ ಇಗೋ, ಬಿಳೀವಸ್ತ್ರಧಾರಿಗಳಾದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತುಕೊಂಡರು. ಅವರು--ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ದೃಷ್ಟಿಸುತ್ತಾ ನಿಂತಿದ್ದೀರಿ? ನಿಮ್ಮಿಂದ ಪರಲೋಕಕ್ಕೆ ಎತ್ತಲ್ಪಟ್ಟ ಈ ಯೇಸುವು ಯಾವ ರೀತಿಯಿಂದ ಪರಲೋಕದೊಳಗೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು. ತರುವಾಯ ಅವರು ಯೆರೂಸಲೇಮಿ ನಿಂದ ಸಬ್ಬತ್ ದಿನದ ಪ್ರಯಾಣದಷ್ಟು ದೂರವಿದ್ದ ಎಣ್ಣೇಮರಗಳ ತೋಪು ಎಂದು ಕರೆಯಲ್ಪಟ್ಟ ಗುಡ್ಡ ದಿಂದ ಯೆರೂಸಲೇಮಿಗೆ ಹಿಂದಿರುಗಿದರು. ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು. ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆ ವಿಜ್ಞಾ ಪನೆಗಳಲ್ಲಿ ನಿರತರಾಗಿದ್ದರು. ಅವರೊಂದಿಗೆ ಸ್ತ್ರೀಯರೂ ಯೇಸುವಿನ ತಾಯಿಯಾದ ಮರಿಯಳೂ ಆತನ ಸಹೋದರರೂ ಇದ್ದರು.
- 1 Corinthians 1:12 1 ಕೊರಿಂಥದವರಿಗೆ 1:12ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.
- Luke 24:34–49 ಲೂಕನು 24:34–49ಅವರು--ಕರ್ತನು ನಿಜವಾಗಿಯೂ ಎದ್ದಿದ್ದಾನೆ ಮತ್ತು ಆತನು ಸೀಮೋನನಿಗೆ ಕಾಣಿಸಿಕೊಂಡಿದ್ದಾನೆ ಎಂದು ಹೇಳಿ ದರು. ಆಗ ಅವರು ದಾರಿಯಲ್ಲಿ ನಡೆದವುಗಳನ್ನೂ ರೊಟ್ಟಿ ಮುರಿಯುವದರಲ್ಲಿ ಅವರು ಹೇಗೆ ಆತನ ಗುರುತು ಹಿಡಿದರೆಂದೂ ಹೇಳಿದರು. ಅವರು ಹೀಗೆ ಮಾತನಾಡುತ್ತಿರುವಾಗ ಯೇಸು ತಾನೇ ಅವರ ಮಧ್ಯದಲ್ಲಿ ನಿಂತು ಅವರಿಗೆ--ನಿಮಗೆ ಸಮಾಧಾನವಾಗಲಿ ಅಂದನು. ಆದರೆ ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದು ಭೂತವೆಂದು ಭಾವಿಸಿದರು. ಆದರೆ ಆತನು ಅವರಿಗೆ--ಯಾಕೆ ನೀವು ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಆಲೋಚನೆಗಳು ಹುಟ್ಟುವದು ಯಾಕೆ? ನನ್ನ ಕೈಗಳನ್ನು ಮತ್ತು ನನ್ನ ಕಾಲುಗಳನ್ನು ನೋಡಿರಿ; ನಾನೇ ಅಲ್ಲವೇ; ನನ್ನನ್ನು ಮುಟ್ಟಿ ನೋಡಿರಿ, ಯಾಕಂದರೆ ನೀವು ನೋಡುವಂತೆ ನನಗಿರುವ ಮಾಂಸ ಮತ್ತು ಎಲುಬುಗಳು ಭೂತಕ್ಕೆ ಇಲ್ಲ ಅಂದನು. ಹೀಗೆ ಆತನು ಮಾತನಾಡಿದಾಗ ತನ್ನ ಕೈಗಳನ್ನು ಮತ್ತು ತನ್ನ ಕಾಲುಗಳನ್ನು ಅವರಿಗೆ ತೋರಿಸಿದನು. ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರು ವಾಗ ಆತನು ಅವರಿಗೆ--ನಿಮ್ಮಲ್ಲಿ ಆಹಾರವೇನಾದರೂ ಇದೆಯೋ ಎಂದು ಕೇಳಿದನು. ಅವರು ಆತನಿಗೆ ಒಂದು ತುಂಡು ಸುಟ್ಟವಿಾನನ್ನು ಮತ್ತು ಒಂದು ಜೇನು ಹುಟ್ಟನ್ನು ಕೊಟ್ಟರು. ಆತನು ತಕ್ಕೊಂಡು ಅವರ ಮುಂದೆ ತಿಂದನು. ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು. ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು. ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ. ಇವುಗಳ ವಿಷಯವಾಗಿ ನೀವು ಸಾಕ್ಷಿಗಳಾ ಗಿದ್ದೀರಿ. ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು.
- John 1:42 ಯೋಹಾನನು 1:4242ಆಗ ಅಂದ್ರೆಯನು ಸೀಮೋನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. ಯೇಸು ಅವನನ್ನು ನೋಡಿ--ನೀನು ಯೋನನ ಮಗನಾದ ಸೀಮೋನನು, ನೀನು ಕೇಫನೆಂದು ಕರೆಯಲ್ಪಡುವಿ ಅಂದನು. (ಕೇಫ ಅಂದರೆ ಕಲ್ಲು ಎಂದರ್ಥ).
- Acts 10:41 ಅಪೊಸ್ತಲರ ಕೃತ್ಯಗಳು 10:41ದೇವರು ಎಲ್ಲರಿಗೆ ತೋರ್ಪಡಿ ಸದೆ ಆತನು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾಗಿರುವ ನಮಗೆ ಆತನನ್ನು ತೋರ್ಪಡಿಸಿ ದನು. ಆತನು ಸತ್ತವರೊಳಗಿಂದ ಎದ್ದು ಬಂದ ಮೇಲೆ ನಾವು ಆತನ ಸಂಗಡ ತಿಂದು ಕುಡಿದೆವು.
- 1 Corinthians 9:5 1 ಕೊರಿಂಥದವರಿಗೆ 9:5ಸಹೋದರಿಯಾಗಿ ರುವ ಹೆಂಡತಿಯನ್ನು ಕರಕೊಂಡು ಸಂಚರಿಸುವದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ ಕರ್ತನ ಸಹೋದರ ರಂತೆಯೂ ಕೇಫನಂತೆಯೂ ನಮಗೆ ಅಧಿಕಾರ ವಿಲ್ಲವೇ?
- 1 Corinthians 3:22 1 ಕೊರಿಂಥದವರಿಗೆ 3:22ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ ಲೋಕವಾಗಲಿ ಜೀವವಾಗಲಿ ಮರಣವಾಗಲಿ ಈಗಿನ ಸಂಗತಿ ಗಳಾಗಲಿ ಮುಂದಣ ಸಂಗತಿಗಳಾಗಲೀ ಸಮಸ್ತವೂ ನಿಮ್ಮವೇ;ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.