1 Corinthians · chapter 15 · verse 55
1 Corinthians 15:55 in Kannada
ಓ ಮರಣವೇ, ನಿನ್ನ ಕೊಂಡಿಯೆಲ್ಲಿ? ಓ ಸಮಾಧಿಯೇ ನಿನ್ನ ಜಯವೆಲ್ಲಿ?
O maranave, ninna kondiyelli? O samaadhiye ninna jayavelli?
1 Corinthians 15:55 in English
- King James Version (KJV)
- O death, where [is] thy sting? O grave, where [is] thy victory?
- World English Bible (WEB)
- “Death, where is your sting? Hades, where is your victory?”
- American Standard Version (ASV)
- O death, where is thy victory? O death, where is thy sting?
- Bible in Basic English (BBE)
- O death, where is your power? O death, where are your pains?
- Darby Translation (DBY)
- Where, O death, [is] thy sting? where, O death, thy victory?
- Webster's Bible (WBS)
- O death, where [is] thy sting? O grave, where [is] thy victory?
- Young's Literal Translation (YLT)
- where, O Death, thy sting? where, O Hades, thy victory?'
Read in context
- 53ಲಯ ವಾಗುವಂಥದ್ದು (ಈ ದೇಹವು) ನಿರ್ಲಯತ್ವವನ್ನು ಧರಿಸಿಕೊಳ್ಳುವದೂ ಮರಣಾಧೀನವಾಗಿರುವಂಥ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವದೂ ಅವಶ್ಯ.
- 54ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು, ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು; ಆಗ ಬರೆದಿರುವ ಮಾತು ನೆರವೇರುವದು, ಆ ಮಾತು ಏನಂದರೆ--ಜಯವು ಮರಣವನ್ನು ನುಂಗಿತು ಎಂಬದೇ.
- 55ಓ ಮರಣವೇ, ನಿನ್ನ ಕೊಂಡಿಯೆಲ್ಲಿ? ಓ ಸಮಾಧಿಯೇ ನಿನ್ನ ಜಯವೆಲ್ಲಿ?
- 56ಮರಣದ ಕೊಂಡಿ ಪಾಪವೇ; ಪಾಪದ ಬಲವು ನ್ಯಾಯಪ್ರಮಾಣವೇ.
- 57ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
Cross references
- Hosea 13:14 ಹೋಶೇಯ 13:14ನಾನು ಸಮಾಧಿಯ ಶಕ್ತಿಯಿಂದ ಅವರನ್ನು ಈಡು ಕೊಟ್ಟು ವಿಮೋಚಿಸುವೆನು; ಮರಣದಿಂದ ಅವರನ್ನು ಬಿಡಿಸುವೆನು. ಓ ಮರಣವೇ, ನಾನು ನಿನ್ನ ಬಾಧೆಗ ಳಾಗಿರುವೆನು; ಓ ಸಮಾಧಿಯೇ, ನಾನು ನಿನ್ನ ನಾಶನ ವಾಗಿದ್ದೇನೆ; ಪಶ್ಚಾತ್ತಾಪವು ನನ್ನ ಕಣ್ಣುಗಳಿಂದ ಮರೆ ಯಾಗಿದೆ.
- Psalm 89:48 ಕೀರ್ತನೆಗಳು 89:48ಮರಣವನ್ನು ನೋಡದೆ ಬದುಕುವಂಥ, ಸಮಾಧಿಯ ವಶದಿಂದ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಂಥ, ಪುರುಷನು ಯಾರು ಸೆಲಾ.
- Romans 5:14 ರೋಮಾಪುರದವರಿಗೆ 5:14ಆದರೂ ಆದಾಮನಿಂದ ಮೋಶೆಯವರೆಗೂ ಮರಣದ ಆಳಿಕೆಯು ನಡೆಯುತ್ತಿತ್ತು. ಆದಾಮನ ಆ ಅತಿಕ್ರಮಣಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಿಗೆ ಸೂಚನೆ ಯಾಗಿದ್ದಾನೆ.
- Acts 2:27 ಅಪೊಸ್ತಲರ ಕೃತ್ಯಗಳು 2:27ಯಾಕಂ ದರೆ--ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವ ದಿಲ್ಲ. ನಿನ್ನ ಪರಿಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ.
- Psalm 49:8–15 ಕೀರ್ತನೆಗಳು 49:8–15ಅವನು ದೇವರಿಗೆ ಹಣವನ್ನು (ಈಡು) ಕೊಟ್ಟು ಅದರಿಂದ ವಿಮೋಚಿಸಲಾರನು. ಅವರ ಪ್ರಾಣದ ವಿಮೋಚನೆಯು ಅಮೂಲ್ಯ ವಾಗಿದೆ; ಅದು ಯುಗಯುಗಕ್ಕೂ ನಿಲ್ಲುವದು. ಜ್ಞಾನಿಗಳು ಸಾಯುವರು; ಹುಚ್ಚನು ಪಶುಪ್ರಾಯನು ಕೂಡ ನಾಶವಾಗಿ ಬೇರೆಯವರಿಗೆ ತಮ್ಮ ಆಸ್ತಿಯನ್ನು ಬಿಡುವದನ್ನು ಅವನು ನೋಡುತ್ತಾನೆ. ತಮ್ಮ ಮನೆಗಳು ಯುಗಯುಗಕ್ಕೂ ತಮ್ಮ ನಿವಾಸಗಳು ತಲತಲಾಂತರಕ್ಕೂ ಇರಬೇಕೆಂದು ಅಂತರ್ಯದಲ್ಲಿ ಯೋಚಿಸಿ ಭೂಮಿಗಳಿಗೆ ತಮ್ಮ ಹೆಸರುಗಳನ್ನು ಇಡು ತ್ತಾರೆ. ಮನುಷ್ಯನು ಘನವುಳ್ಳವನಾದರೂ ಸ್ಥಿರವಿಲ್ಲ; ಅವನು ನಾಶವಾಗುವ ಪಶುಗಳ ಹಾಗೆ ಇದ್ದಾನೆ. ಅವರ ಈ ಮಾರ್ಗವು ಅವರ ಹುಚ್ಚುತನ ವಾಗಿದೆ; ಆದರೆ ಅವರ ಸಂತಾನದವರು ಅವರ ಮಾತುಗಳನ್ನು ಮೆಚ್ಚುತ್ತಾರೆ. ಸೆಲಾ. ಅವರು ಕುರಿ ಗಳಂತೆ ಸಮಾಧಿಯಲ್ಲಿ ಹಾಕಲ್ಪಡುತ್ತಾರೆ; ಮರಣವು ಅವರನ್ನು ತಿನ್ನುತ್ತದೆ; ಯಥಾರ್ಥರು ಬೆಳಿಗ್ಗೆ ಅವರ ಮೇಲೆ ಆಳುವರು; ಅವರಿಗೆ ನಿವಾಸವಿರದ ಹಾಗೆ ಸಮಾಧಿಯಲ್ಲಿ ಅವರ ರೂಪವು ಕ್ಷಯಿಸುವದು. ಆದರೆ ದೇವರು ನನ್ನ ಪ್ರಾಣವನ್ನು ಸಮಾಧಿಯ ಬಲದಿಂದ ವಿಮೋಚನೆ ಮಾಡುವನು, ಆತನು ನನ್ನನ್ನು ಅಂಗೀಕರಿಸುವನು. ಸೆಲಾ.
- Ecclesiastes 2:15–16 ಪ್ರಸಂಗಿ 2:15–16ಆಗ ನಾನು ನನ್ನ ಹೃದಯದಲ್ಲಿ --ಮೂಢನಿಗೆ ಸಂಭವಿಸುವಂತೆ ನನಗೂ ಸಂಭವಿಸು ತ್ತದೆ. ಇದರಿಂದ ಯಾಕೆ ನಾನು ಹೆಚ್ಚು ಜ್ಞಾನದಿಂದ ಇದ್ದೇನೆ ಎಂದು ಅಂದುಕೊಂಡೆನು. ಆಗ ನಾನು ಇದೂ ವ್ಯರ್ಥವೆಂದು ನನ್ನ ಹೃದಯದಲ್ಲಿ ಅಂದು ಕೊಂಡೆನು. ಮೂಢನಿಗಿಂತ ಜ್ಞಾನವಂತನ ಜ್ಞಾಪ ಕವು ಎಂದಿಗೂ ಇರುವದಿಲ್ಲ; ಈಗ ಇರುವದು ಬರುವ ದಿವಸಗಳಲ್ಲಿ ಮರೆಯಲ್ಪಡುತ್ತದೆ. ಮೂಢನಂತೆ ಜ್ಞಾನಿಯೂ ಸಾಯುವದು ಹೇಗೆ?
- Acts 9:5 ಅಪೊಸ್ತಲರ ಕೃತ್ಯಗಳು 9:5ಅವನು--ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು--ನೀನು ಹಿಂಸೆಪಡಿಸುವ ಯೇಸುವೇ ನಾನು; ಮುಳ್ಳು ಗೋಲುಗಳನ್ನು ಒದೆಯುವದು ನಿನಗೆ ಕಷ್ಠವಾಗಿದೆ ಅಂದನು.
- Ecclesiastes 9:5–6 ಪ್ರಸಂಗಿ 9:5–6ಬದುಕಿರುವವರು ತಾವು ಸಾಯುತ್ತೇವೆಂದು ತಿಳಿದಿ ದ್ದಾರೆ; ಆದರೆ ಸತ್ತವರಿಗೆ ಏನೂ ತಿಳಿಯದು. ಇಲ್ಲವೆ ಅವರಿಗೆ ಇನ್ನು ಮೇಲೆ ಪ್ರತಿಫಲವೇನೂ ಇರದು. ಅವರ ಜ್ಞಾಪಕವು ಮರೆತುಹೋಗಿದೆ. ಅವರ ಪ್ರೀತಿಯೂ ದ್ವೇಷವೂ ಹೊಟ್ಟೇಕಿಚ್ಚೂ ಸಹ ಈಗ ಅಳಿದು ಹೋಗಿವೆ. ಸೂರ್ಯನ ಕೆಳಗೆ ಆಗುವ ಯಾವ ದರಲ್ಲೂ ಎಂದಿಗೂ ಅವರಿಗೆ ಪಾಲು ಇಲ್ಲ.
- Revelation 20:13–14 ಪ್ರಕಟನೆ 20:13–14ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು. ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
- Ecclesiastes 8:8 ಪ್ರಸಂಗಿ 8:8ಆತ್ಮವನ್ನು ಹಿಡಿ ಯುವ ಶಕ್ತಿ ಯಾವ ಮನುಷ್ಯನಿಗೂ ಇಲ್ಲ; ಹಾಗೆಯೇ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇರುವದಿಲ್ಲ. ಯುದ್ಧದಿಂದ ಬಿಡುಗಡೆಯೂ ಹೇಗೆ ಇಲ್ಲವೋ ಹಾಗೆಯೇ ದುಷ್ಟನಿಗೆ ಅದರಿಂದ ಬಿಡು ಗಡೆಯೇ ಇಲ್ಲ.
- Luke 16:23 ಲೂಕನು 16:23ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.
- Job 18:13–14 ಯೋಬನು 18:13–14ಅವನ ಚರ್ಮದ ಬಲವನ್ನು ತಿನ್ನುವನು; ಮರಣದ ಚೊಚ್ಟಲ ಮಗನು ಅವನ ಬಲವನ್ನು ತಿನ್ನುವನು. ಅವನ ಭರವಸವು ಅವನ ಗುಡಾರದೊಳಗಿಂದ ಕೀಳಲ್ಪಡುವುದು; ಅದು ಅವ ನನ್ನು ದಿಗಿಲುಗಳ ಅರಸನ ಬಳಿಗೆ ನಡಿಸುವದು.