1 Corinthians · chapter 15 · verse 56
1 Corinthians 15:56 in Kannada
ಮರಣದ ಕೊಂಡಿ ಪಾಪವೇ; ಪಾಪದ ಬಲವು ನ್ಯಾಯಪ್ರಮಾಣವೇ.
Maranada kondi paapave; paapada balavu nyaayapramaanave.
1 Corinthians 15:56 in English
- King James Version (KJV)
- The sting of death [is] sin; and the strength of sin [is] the law.
- World English Bible (WEB)
- The sting of death is sin, and the power of sin is the law.
- American Standard Version (ASV)
- The sting of death is sin; and the power of sin is the law:
- Bible in Basic English (BBE)
- The pain of death is sin; and the power of sin is the law:
- Darby Translation (DBY)
- Now the sting of death [is] sin, and the power of sin the law;
- Webster's Bible (WBS)
- The sting of death [is] sin; and the strength of sin [is] the law.
- Young's Literal Translation (YLT)
- and the sting of the death [is] the sin, and the power of the sin the law;
Read in context
- 54ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು, ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು; ಆಗ ಬರೆದಿರುವ ಮಾತು ನೆರವೇರುವದು, ಆ ಮಾತು ಏನಂದರೆ--ಜಯವು ಮರಣವನ್ನು ನುಂಗಿತು ಎಂಬದೇ.
- 55ಓ ಮರಣವೇ, ನಿನ್ನ ಕೊಂಡಿಯೆಲ್ಲಿ? ಓ ಸಮಾಧಿಯೇ ನಿನ್ನ ಜಯವೆಲ್ಲಿ?
- 56ಮರಣದ ಕೊಂಡಿ ಪಾಪವೇ; ಪಾಪದ ಬಲವು ನ್ಯಾಯಪ್ರಮಾಣವೇ.
- 57ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
- 58ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
Cross references
- Romans 4:15 ರೋಮಾಪುರದವರಿಗೆ 4:15ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ;
- Galatians 3:10–13 ಗಲಾತ್ಯದವರಿಗೆ 3:10–13ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ. ಇದಲ್ಲದೆ ನ್ಯಾಯಪ್ರಮಾಣದಿಂದ ಯಾವನೂ ದೇವರ ಸನ್ನಿಧಿಯಲ್ಲಿ ನೀತಿವಂತ ನಾಗುವದಿಲ್ಲವೆಂಬದು ಸ್ಪಷ್ಟವಾಗಿದೆ. ಯಾಕಂದರೆ-- ನೀತಿವಂತನು ನಂಬಿಕೆಯಿಂದಲೇ ಬದುಕುವನು ಎಂಬದು. ನ್ಯಾಯಪ್ರಮಾಣಕ್ಕೆ ನಂಬಿಕೆಯು ಆಧಾರ ವಲ್ಲ. ಆದರೆ--ಅದರ ಕ್ರಿಯೆಗಳನ್ನು ಮಾಡುವವನೇ ಅವುಗಳ ಮೂಲಕ ಬದುಕುವನು ಎಂಬದೇ. ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
- Romans 6:23 ರೋಮಾಪುರದವರಿಗೆ 6:23ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
- Romans 7:5–13 ರೋಮಾಪುರದವರಿಗೆ 7:5–13ನಾವು ಶರೀರದಲ್ಲಿದ್ದಾಗ ಪಾಪಗಳ ಇಚ್ಛೆಗಳು ನ್ಯಾಯಪ್ರಮಾಣದಿಂದಲೇ ಮರಣಕ್ಕೆ ಫಲಫಲಿಸುವ ದಕ್ಕಾಗಿ ನಮ್ಮ ಅಂಗಗಳಲ್ಲಿ ಯತ್ನಿಸುತ್ತಿದ್ದವು. ಈಗಲಾದರೋ ನಮ್ಮನ್ನು ಹಿಡುಕೊಂಡಿದ್ದ ನ್ಯಾಯಪ್ರಮಾಣದ ಪಾಲಿಗೆ ನಾವು ಸತ್ತಕಾರಣ ಅದರಿಂದ ವಿಮುಕ್ತರಾಗಿದ್ದೇವೆ; ಹೀಗೆ ನಾವು ಅಕ್ಷರದ ಹಳೇ ರೀತಿಯಲ್ಲಿ ಆತನನ್ನು ಸೇವಿಸದೆ ಆತ್ಮನಿಂದ ಹೊಸ ರೀತಿಯಲ್ಲಿಯೇ ಸೇವಿಸುತ್ತೇವೆ. ಹಾಗಾದರೆ ನಾವು ಏನು ಹೇಳೋಣ? ನ್ಯಾಯ ಪ್ರಮಾಣವು ಪಾಪವೋ? ಹಾಗೆ ಎಂದಿಗೂ ಅಲ್ಲ; ನ್ಯಾಯಪ್ರಮಾಣದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಿರಲಿಲ್ಲ. ಯಾಕಂದರೆ--ನೀನು ಆಶಿಸಬಾರದು ಎಂದು ನ್ಯಾಯಪ್ರಮಾಣವು ಹೇಳ ದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯು ತ್ತಿರಲಿಲ್ಲ. ಆದರೆ ಪಾಪವು ಈ ಆಜ್ಞೆಯಿಂದ ಅನುಕೂಲ ಹೊಂದಿ ಸಕಲ ವಿಧವಾದ ದುರಾಶೆಯನ್ನು ನನ್ನಲ್ಲಿ ಹುಟ್ಟಿಸಿತು. ನ್ಯಾಯಪ್ರಮಾಣವು ಇಲ್ಲದಿರು ವಾಗ ಪಾಪವು ಸತ್ತದ್ದಾಗಿದೆ. ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು. ಜೀವಿಸುವದಕ್ಕಾಗಿರುವ ಆಜ್ಞೆಯೇ ಮರಣಕ್ಕಾಯಿತೆಂದು ನಾನು ಕಂಡುಕೊಂಡೆನು. ಹೇಗಂದರೆ ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ ಅದರ ಮೂಲಕವೇ ನನ್ನನು ಕೊಂದಿತು; ಹೀಗಿರಲಾಗಿ ನ್ಯಾಯಪ್ರಮಾಣವು ಪರಿ ಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದ್ದು ಸರಿ. ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ; ಆದರೆ ಪಾಪವು ಹಿತವಾದದ್ದರ ಮೂಲಕ ನನ್ನಲ್ಲಿ ಮರಣವನ್ನು ಉಂಟುಮಾಡಿದ್ದರಿಂದ ಅದು ಪಾಪವೇ ಎಂದು ಕಾಣಿಸಿಕೊಂಡಿತು. ಹೀಗೆ ಆಜ್ಞೆಯ ಮೂಲಕ ಪಾಪವು ಅತ್ಯಧಿಕವಾದ ಪಾಪವಾಗಿ ತೋರಿಬಂತು.
- John 8:24 ಯೋಹಾನನು 8:24ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.
- Romans 5:12–13 ರೋಮಾಪುರದವರಿಗೆ 5:12–13ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು. (ನ್ಯಾಯಪ್ರಮಾಣವು ಕೊಡಲ್ಪಡುವ ತನಕ ಪಾಪವು ಲೋಕದಲ್ಲಿತ್ತು; ಆದರೆ ನ್ಯಾಯಪ್ರಮಾಣ ವಿಲ್ಲದಿರುವಾಗ ಪಾಪವು ಲೆಕ್ಕಕ್ಕೆ ಬರುವದಿಲ್ಲ.
- Romans 5:20 ರೋಮಾಪುರದವರಿಗೆ 5:20ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
- John 8:21 ಯೋಹಾನನು 8:21ಯೇಸು ತಿರಿಗಿ ಅವರಿಗೆ--ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪ ಗಳಲ್ಲಿ ಸಾಯುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.
- Hebrews 9:27 ಇಬ್ರಿಯರಿಗೆ 9:27ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
- Romans 5:15 ರೋಮಾಪುರದವರಿಗೆ 5:15ಆದರೆ ಆ ಅಪರಾಧವು ಇದ್ದಂತೆ ಉಚಿತವಾದ ದಾನವು ಇರುವದಿಲ್ಲ; ಹೇಗಂದರೆ ಆ ಒಬ್ಬನ ಅಪ ರಾಧದಿಂದ ಎಲ್ಲಾ ಮನುಷ್ಯರು ಸತ್ತವರಾಗಿದ್ದರೆ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದಾದ ದಾನವೂ ಅನೇಕರಿಗೆ ಹೇರಳವಾಗಿ ದೊರೆಯುವದು ಮತ್ತೂ ನಿಶ್ಚಯವಲ್ಲವೇ.
- Romans 5:17 ರೋಮಾಪುರದವರಿಗೆ 5:17ಒಬ್ಬನ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳಿದ್ದರೆ ಕೃಪೆಯನ್ನೂ ನೀತಿಯ ದಾನವನ್ನೂ ಹೇರಳವಾಗಿ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬನ ಮೂಲಕ ಜೀವದಲ್ಲಿ ಆಳುವದು ಮತ್ತೂ ನಿಶ್ಚಯವಲ್ಲವೇ).
- Romans 3:19–20 ರೋಮಾಪುರದವರಿಗೆ 3:19–20ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು. ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.