1 Corinthians · chapter 15 · verse 7
1 Corinthians 15:7 in Kannada
ತರುವಾಯ ಆತನು ಯಾಕೋಬನಿಗೂ ಆಮೇಲೆ ಅಪೊಸ್ತಲರೆಲ್ಲರಿಗೂ ಕಾಣಿಸಿಕೊಂಡನು.
Taruvaaya aatanu yaakobanigoo aamele apostalarellarigoo kaanisikondanu.
1 Corinthians 15:7 in English
- King James Version (KJV)
- After that, he was seen of James; then of all the apostles.
- World English Bible (WEB)
- Then he appeared to James, then to all the apostles,
- American Standard Version (ASV)
- then he appeared to James; then to all the apostles;
- Bible in Basic English (BBE)
- Then he was seen by James; then by all the Apostles.
- Darby Translation (DBY)
- Then he appeared to James; then to all the apostles;
- Webster's Bible (WBS)
- After that he was seen by James; then by all the apostles.
- Young's Literal Translation (YLT)
- afterwards he appeared to James, then to all the apostles.
Read in context
- 5ತರುವಾಯ ಆತನು ಕೇಫನಿಗೂ ಆಮೇಲೆ ಹನ್ನೆರಡು ಮಂದಿಗೂ ಕಾಣಿಸಿ ಕೊಂಡನು.
- 6ಇದಾದ ಮೇಲೆ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಆತನು ಕಾಣಿಸಿ ಕೊಂಡನು; ಇದರಲ್ಲಿ ಹೆಚ್ಚು ಜನರು ಇಂದಿನವರೆಗೂ ಇದ್ದಾರೆ; ಆದರೆ ಕೆಲವರು ನಿದ್ರೆಹೋಗಿದ್ದಾರೆ.
- 7ತರುವಾಯ ಆತನು ಯಾಕೋಬನಿಗೂ ಆಮೇಲೆ ಅಪೊಸ್ತಲರೆಲ್ಲರಿಗೂ ಕಾಣಿಸಿಕೊಂಡನು.
- 8ಕಟ್ಟಕಡೆಗೆ ದಿನ ತುಂಬದೆ ಹುಟ್ಟಿದವನಂತಿರುವ ನನಗೂ ಕಾಣಿಸಿ ಕೊಂಡನು.
- 9ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ. ಯಾಕಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿ ದ್ದರಿಂದ ಆಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ.
Cross references
- Luke 24:50 ಲೂಕನು 24:50ಆತನು ಅವರನ್ನು ಬೇಥಾನ್ಯದವರೆಗೆ ನಡಿಸಿ ಕೊಂಡು ಹೋಗಿ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದನು.
- Acts 1:2–12 ಅಪೊಸ್ತಲರ ಕೃತ್ಯಗಳು 1:2–12ಆತನು ಮೇಲಕ್ಕೆ ಎತ್ತಲ್ಪಟ್ಟ ದಿವಸದ ವರೆಗೆ ತಾನು ಮಾಡುವದಕ್ಕೂ ಬೋಧಿಸುವದಕ್ಕೂ ಪ್ರಾರಂಭಿಸಿದ್ದೆಲ್ಲವನ್ನು ನಾನು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದೆನು. ಆತನು ಶ್ರಮೆಯನ್ನನುಭವಿಸಿದ ಮೇಲೆ ದೃಢವಾದ ಅನೇಕ ಪ್ರಮಾಣಗಳಿಂದ ತಾನು ಜೀವಂತನಾಗಿ ದ್ದನೆಂದು ಅಪೊಸ್ತಲರಿಗೆ ತನ್ನನ್ನು ತೋರಿಸಿಕೊಂಡು ನಾಲ್ವತ್ತು ದಿವಸಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯಕ್ಕೆ ಸಂಬಂಧಪಟ್ಟ ವಿಷಯಗಳನ್ನು ಮಾತನಾಡುತ್ತಿದ್ದನು. ಆತನು ಅವರೊಂದಿಗೆ ಕೂಡಿಕೊಂಡಿದ್ದಾಗ--ನೀವು ಯೆರೂಸಲೇಮಿನಿಂದ ಹೊರಟುಹೋಗದೆ ನನ್ನಿಂದ ಕೇಳಿದ ತಂದೆಯ ವಾಗ್ದಾನಕೋಸ್ಕರ ಕಾಯ ಬೇಕೆಂದು ಅವರಿಗೆ ಅಪ್ಪಣೆಕೊಟ್ಟನು. ಯಾಕಂದರೆ ಯೋಹಾನನು ನಿಜವಾಗಿಯೂ ನೀರಿನಿಂದ ಬಾಪ್ತಿಸ್ಮ ಮಾಡಿಸಿದನು; ಆದರೆ ನೀವು ಇನ್ನು ಸ್ವಲ್ಪ ದಿವಸ ಗಳಲ್ಲಿಯೇ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಹೇಳಿದನು. ಅವರು ಕೂಡಿಬಂದಾಗ ಆತ ನಿಗೆ--ಕರ್ತನೇ, ಈ ಸಮಯದಲ್ಲಿಯೇ ನೀನು ಇಸ್ರಾ ಯೇಲ್ಯರಿಗೆ ರಾಜ್ಯವನ್ನು ಪುನಃ ಸ್ಥಾಪಿಸುವಿಯೋ ಎಂದು ಕೇಳಿದರು. ಆತನು ಅವರಿಗೆ--ತಂದೆಯು ತನ್ನ ಸ್ವಂತ ಅಧಿಕಾರದಲ್ಲಿ ಇಟ್ಟುಕೊಂಡಿರುವ ಸಮಯ ಗಳನ್ನೂ ಕಾಲಗಳನ್ನೂ ತಿಳಿದುಕೊಳ್ಳುವದು ನಿಮಗೆ ಸಂಬಂಧಪಟ್ಟದ್ದಲ್ಲ. ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು. ಇವುಗಳನ್ನು ಹೇಳಿದ ಮೇಲೆ ಅವರು ನೋಡುತ್ತಿರುವಾಗ ಆತನು ಮೇಲಕ್ಕೆ ಎತ್ತಲ್ಪಟ್ಟನು; ಮೋಡವು ಅವರ ದೃಷ್ಟಿಗೆ ಮರೆಮಾಡಿ ಆತನನ್ನು ಸ್ವೀಕರಿಸಿತು. ಆತನು ಮೇಲಕ್ಕೆ ಹೋಗು ತ್ತಿರಲು ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರು ವಾಗ ಇಗೋ, ಬಿಳೀವಸ್ತ್ರಧಾರಿಗಳಾದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತುಕೊಂಡರು. ಅವರು--ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ದೃಷ್ಟಿಸುತ್ತಾ ನಿಂತಿದ್ದೀರಿ? ನಿಮ್ಮಿಂದ ಪರಲೋಕಕ್ಕೆ ಎತ್ತಲ್ಪಟ್ಟ ಈ ಯೇಸುವು ಯಾವ ರೀತಿಯಿಂದ ಪರಲೋಕದೊಳಗೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು. ತರುವಾಯ ಅವರು ಯೆರೂಸಲೇಮಿ ನಿಂದ ಸಬ್ಬತ್ ದಿನದ ಪ್ರಯಾಣದಷ್ಟು ದೂರವಿದ್ದ ಎಣ್ಣೇಮರಗಳ ತೋಪು ಎಂದು ಕರೆಯಲ್ಪಟ್ಟ ಗುಡ್ಡ ದಿಂದ ಯೆರೂಸಲೇಮಿಗೆ ಹಿಂದಿರುಗಿದರು.
- Luke 24:33 ಲೂಕನು 24:33ಅವರು ಅದೇ ಗಳಿಗೆಯಲ್ಲಿ ಯೆರೂಸಲೇಮಿಗೆ ಹಿಂದಿರುಗಿಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರೊಂದಿಗಿದ್ದವರೂ ಒಟ್ಟಾಗಿ ಕೂಡಿ ಕೊಂಡಿರುವದನ್ನು ಅವರು ಕಂಡರು.
- Acts 12:17 ಅಪೊಸ್ತಲರ ಕೃತ್ಯಗಳು 12:17ಅವನು ಸುಮ್ಮನಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರ ರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟು ಹೋದನು.
- Luke 24:36 ಲೂಕನು 24:36ಅವರು ಹೀಗೆ ಮಾತನಾಡುತ್ತಿರುವಾಗ ಯೇಸು ತಾನೇ ಅವರ ಮಧ್ಯದಲ್ಲಿ ನಿಂತು ಅವರಿಗೆ--ನಿಮಗೆ ಸಮಾಧಾನವಾಗಲಿ ಅಂದನು.