1 Corinthians · chapter 3 · verse 16
1 Corinthians 3:16 in Kannada
ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?
Neevu devara aalayavaagiddeerendoo devara aatmanu nimmalli vaasamaaduttaanendoo nimage gottillavo?
1 Corinthians 3:16 in English
- King James Version (KJV)
- Know ye not that ye are the temple of God, and [that] the Spirit of God dwelleth in you?
- World English Bible (WEB)
- Don’t you know that you are God’s temple and that God’s Spirit lives in you?
- American Standard Version (ASV)
- Know ye not that ye are a temple of God, and [that] the Spirit of God dwelleth in you?
- Bible in Basic English (BBE)
- Do you not see that you are God's holy house, and that the Spirit of God has his place in you?
- Darby Translation (DBY)
- Do ye not know that ye are [the] temple of God, and [that] the Spirit of God dwells in you?
- Webster's Bible (WBS)
- Know ye not that ye are the temple of God, and [that] the Spirit of God dwelleth in you?
- Young's Literal Translation (YLT)
- have ye not known that ye are a sanctuary of God, and the Spirit of God doth dwell in you?
Read in context
- 14ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ದೊರೆಯುವದು;
- 15ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವದು; ತಾನಾದರೋ ರಕ್ಷಣೆ ಹೊಂದುವನು. ಆದರೂ ಬೆಂಕಿಯೊಳಗಿಂದ ತಪ್ಪಿಸಿ ಕೊಂಡವನ ಹಾಗಿರುವನು.
- 16ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?
- 17ಯಾವನಾದರೂ ದೇವರ ಆಲಯವನ್ನು ಹೊಲೆಮಾಡಿದರೆ ದೇವರು ಅವನನ್ನು ನಾಶಮಾಡುವನು; ಯಾಕಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.
- 18ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ.
Cross references
- 1 Corinthians 6:19 1 ಕೊರಿಂಥದವರಿಗೆ 6:19ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
- Ezekiel 36:27 ಯೆಹೆಜ್ಕೇಲನು 36:27ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
- 2 Corinthians 6:16 2 ಕೊರಿಂಥದವರಿಗೆ 6:16ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
- Romans 8:11 ರೋಮಾಪುರದವರಿಗೆ 8:11ಯೇಸುವನ್ನು ಸತ್ತವ ರೊಳಗಿಂದ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿ ದ್ದರೆ ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯ ದೇಹಗಳನ್ನು ಸಹ ಬದುಕಿಸುವನು.
- Ephesians 2:21–22 ಎಫೆಸದವರಿಗೆ 2:21–22ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ. ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- Romans 8:9 ರೋಮಾಪುರದವರಿಗೆ 8:9ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ.
- John 14:17 ಯೋಹಾನನು 14:17ಆತನು ಸತ್ಯದ ಆತ್ಮನೇ; ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದ ರಿಂದ ಆತನನ್ನು ಹೊಂದಲಾರದು. ಆದರೆ ನೀವು ಆತನನ್ನು ಬಲ್ಲಿರಿ. ಯಾಕಂದರೆ ಆತನು ನಿಮ್ಮೊಂದಿಗೆ ವಾಸಿಸುತ್ತಾನೆ ಮತ್ತು ನಿಮ್ಮೊಳಗಿರುವನು.
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- 2 Timothy 1:14 2 ತಿಮೊಥೆಯನಿಗೆ 1:14ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ನಿನಗೆ ಒಪ್ಪಿಸಲ್ಪಟ್ಟ ಆ ಒಳ್ಳೇದನ್ನು ನೀನು ಕಾಪಾಡು.
- 1 John 4:15–16 1 ಯೋಹಾನನು 4:15–16ಯೇಸು ದೇವರ ಮಗನಾಗಿ ದ್ದಾನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ. ನಮ್ಮ ಕಡೆಗಿರುವ ದೇವರ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ, ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾನೆ; ಪ್ರೀತಿಯಲ್ಲಿ ನೆಲೆ ಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ಮತ್ತು ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
- Hebrews 3:6 ಇಬ್ರಿಯರಿಗೆ 3:6ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.
- 1 John 4:12 1 ಯೋಹಾನನು 4:12ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ ಮತ್ತು ಆತನ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.