1 Corinthians · chapter 3 · verse 9
1 Corinthians 3:9 in Kannada
ನಾವು ದೇವರ ಜೊತೆ ಕೆಲಸದವರು; ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.
Naavu devara jote kelasadavaru; neevu devara holavoo devara kattadavoo aagiddeeri.
1 Corinthians 3:9 in English
- King James Version (KJV)
- For we are labourers together with God: ye are God’s husbandry, [ye are] God’s building.
- World English Bible (WEB)
- For we are God’s fellow workers. You are God’s farming, God’s building.
- American Standard Version (ASV)
- For we are God’s fellow-workers: ye are God’s husbandry, God’s building.
- Bible in Basic English (BBE)
- For we are workers with God: you are God's planting, God's building.
- Darby Translation (DBY)
- For we are God's fellow-workmen; ye are God's husbandry, God's building.
- Webster's Bible (WBS)
- For we are laborers together with God: ye are God's husbandry, [ye are] God's building.
- Young's Literal Translation (YLT)
- for of God we are fellow-workmen; God's tillage, God's building ye are.
Read in context
- 7ಹೀಗಿರಲಾಗಿ ನೆಡುವವ ನಾಗಲಿ ನೀರು ಹೊಯ್ಯುವವನಾಗಲಿ ವಿಶೇಷವಾ ದವನಲ್ಲ, ಬೆಳೆಸುವ ದೇವರೇ ವಿಶೇಷವಾದವನು.
- 8ನೆಡುವವನೂ ನೀರು ಹೊಯ್ಯುವವನೂ ಒಂದೇ ಆಗಿದ್ದಾರೆ; ಆದರೂ ಪ್ರತಿಯೊಬ್ಬನಿಗೆ ಅವನವನ ಕಷ್ಟಕ್ಕೆ ತಕ್ಕಹಾಗೆ ಕೂಲಿಯು ದೊರೆಯುವದು.
- 9ನಾವು ದೇವರ ಜೊತೆ ಕೆಲಸದವರು; ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.
- 10ದೇವರು ನನಗೆ ಕೃಪೆಯನ್ನು ಕೊಟ್ಟ ಪ್ರಕಾರ ನಾನು ಪ್ರವೀಣಶಿಲ್ಪಿಯಂತೆ ಆಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ; ಪ್ರತಿಯೊಬ್ಬನು ತಾನು ಅದರ ಮೇಲೆ ಹೇಗೆ ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು.
- 11ಹಾಕಿರುವ ಅಸ್ತಿವಾರವು ಯೇಸು ಕ್ರಿಸ್ತನೇ; ಆ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.
Cross references
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- Ephesians 2:20–22 ಎಫೆಸದವರಿಗೆ 2:20–22ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು; ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ. ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- 2 Corinthians 6:1 2 ಕೊರಿಂಥದವರಿಗೆ 6:1ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
- 1 Corinthians 3:16 1 ಕೊರಿಂಥದವರಿಗೆ 3:16ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?
- Mark 16:20 ಮಾರ್ಕನು 16:20ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.
- Ephesians 2:10 ಎಫೆಸದವರಿಗೆ 2:10ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
- Matthew 9:37 ಮತ್ತಾಯನು 9:37ಆಗ ಆತನು ತನ್ನ ಶಿಷ್ಯ ರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ.ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು.
- Isaiah 61:11 ಯೆಶಾಯ 61:11ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
- 1 Corinthians 3:6 1 ಕೊರಿಂಥದವರಿಗೆ 3:6ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು.
- John 4:35–38 ಯೋಹಾನನು 4:35–38ನೀವು--ಸುಗ್ಗಿಯು ಬರುವದಕ್ಕೆ ಇನ್ನೂ ನಾಲ್ಕು ತಿಂಗಳುಗಳು ಇವೆಯೆಂದು ಹೇಳುತ್ತೀರಲ್ಲವೋ? ಮತ್ತು--ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ, ಯಾಕಂದರೆ ಅವು ಈಗಾ ಗಲೇ ಬೆಳ್ಳಗಾಗಿ ಕೊಯ್ಲಿಗೆ ಬಂದವೆ ಎಂದು ನಾನು ನಿಮಗೆ ಹೇಳುತ್ತೇನೆ. ಕೊಯ್ಯುವವನು ಕೂಲಿಯನ್ನು ಹೊಂದಿ ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳು ತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಾಗಿ ಸಂತೋಷಿಸುವರು. ಬಿತ್ತುವವನೊಬ್ಬನು, ಕೊಯ್ಯು ವವನು ಮತ್ತೊಬ್ಬನು ಎಂದು ಹೇಳುವ ಮಾತು ಇದ ರಲ್ಲಿ ಸತ್ಯವಾಗಿದೆ. ನೀವು ಕಷ್ಟಪಡದಂಥ ಬೆಳೆಯನ್ನು ಕೊಯ್ಯುವದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು. ಬೇರೊಬ್ಬರು ಕಷ್ಟ ಪಟ್ಟರು ನೀವು ಅವರ ಕಷ್ಟದಲ್ಲಿ ಸೇರಿಕೊಂಡಿದ್ದೀರಿ ಅಂದನು.
- 1 Corinthians 6:19 1 ಕೊರಿಂಥದವರಿಗೆ 6:19ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
- John 15:1–8 ಯೋಹಾನನು 15:1–8ನಾನೇ ನಿಜವಾದ ದ್ರಾಕ್ಷೇ ಬಳ್ಳಿ ನನ್ನ ತಂದೆ ವ್ಯವಸಾಯಗಾರನು. ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ. ನಾನು ನಿಮಗೆ ಹೇಳಿದ ಮಾತಿನ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ. ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ. ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ. ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು. ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನಿಮಗೆ ಬೇಕಾದದ್ದನ್ನು ಬೇಡಿಕೊಳ್ಳಿರಿ, ನಿಮಗೆ ಅದು ದೊರೆ ಯುವದು. ನೀವು ಬಹಳ ಫಲವನ್ನು ಕೊಡುವ ದರಿಂದ ನನ್ನ ತಂದೆಗೆ ಮಹಿಮೆ ಉಂಟಾಗುವದು; ಹೀಗೆ ನೀವು ನನ್ನ ಶಿಷ್ಯರಾಗುವಿರಿ.