1 Corinthians · chapter 5 · verse 2
1 Corinthians 5:2 in Kannada
ಆದರೆ ಇಂಥ ಕೆಲಸ ಮಾಡಿದವನನ್ನು ನೀವು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕದೆಯೂ ದುಃಖಪಡದೆಯೂ ಉಬ್ಬಿಕೊಂಡ ವರಾಗಿಯೇ ಇದ್ದೀರಿ.
Aadare intha kelasa maadidavanannu neevu nimma madhyadolaginda tegeduhaakadeyoo duhkhapadadeyoo ubbikonda varaagiye iddeeri.
1 Corinthians 5:2 in English
- King James Version (KJV)
- And ye are puffed up, and have not rather mourned, that he that hath done this deed might be taken away from among you.
- World English Bible (WEB)
- You are arrogant, and didn’t mourn instead, that he who had done this deed might be removed from among you.
- American Standard Version (ASV)
- And ye are puffed up, and did not rather mourn, that he that had done this deed might be taken away from among you.
- Bible in Basic English (BBE)
- And in place of feeling sorrow, you are pleased with yourselves, so that he who has done this thing has not been sent away from among you.
- Darby Translation (DBY)
- And ye are puffed up, and ye have not rather mourned, in order that he that has done this deed might be taken away out of the midst of you.
- Webster's Bible (WBS)
- And ye are puffed up, and have not rather mourned, that he who hath done this deed might be taken away from among you.
- Young's Literal Translation (YLT)
- and ye are having been puffed up, and did not rather mourn, that he may be removed out of the midst of you who did this work,
Read in context
- 1ನಿಮ್ಮಲ್ಲಿ ಜಾರತ್ವವಿದೆಯೆಂದು ಸಾಧಾರಣ ವಾಗಿ ಹೇಳಲ್ಪಟ್ಟಿದೆ; ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.
- 2ಆದರೆ ಇಂಥ ಕೆಲಸ ಮಾಡಿದವನನ್ನು ನೀವು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕದೆಯೂ ದುಃಖಪಡದೆಯೂ ಉಬ್ಬಿಕೊಂಡ ವರಾಗಿಯೇ ಇದ್ದೀರಿ.
- 3ನಾನಂತೂ ದೇಹದಿಂ ದೂರವಾಗಿದ್ದರೂ ಆತ್ಮದಿಂದ ಹತ್ತಿರದಲ್ಲಿದ್ದು ಇಂಥ ಕಾರ್ಯಮಾಡಿದವನನ್ನು ಕುರಿತು ನಿಜವಾಗಿ ಆಗಲೇ ಹತ್ತಿರವಿದ್ದವನಂತೆ ತೀರ್ಪುಮಾಡಿದ್ದೇನೆ.
- 4ನೀವೂ ನನ್ನಾತ್ಮವೂ ಕರ್ತನಾದ ಯೇಸುವಿನ ಸಾಮರ್ಥ್ಯ ಸಹಿತ ಒಟ್ಟುಗೂಡಿ ಬಂದಿರಲಾಗಿ
Cross references
- Revelation 2:20–22 ಪ್ರಕಟನೆ 2:20–22ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ. ಇಗೋ, ನಾನು ಅವಳನ್ನು ಹಾಸಿಗೆಯಲ್ಲಿಯೂ ಅವಳೊಂದಿಗೆ ವ್ಯಭಿಚಾರ ಮಾಡಿದವರು ತಮ್ಮ ಕೃತ್ಯಗಳಿ ಗಾಗಿ ಮಾನಸಾಂತರಪಡದಿದ್ದರೆ ಅವರನ್ನು ಮಹಾಸಂಕ ಟದಲ್ಲಿಯೂ ಹಾಕುವೆನು.
- 2 Corinthians 7:7–11 2 ಕೊರಿಂಥದವರಿಗೆ 7:7–11ಅವನ ಬರುವಿಕೆಯಿಂದಮಾತ್ರವಲ್ಲದೆ ಅವನು ನಿಮ್ಮ ಯಥಾರ್ಥವಾದ ಹಂಬಲ, ನಿಮ್ಮ ಗೋಳಾಟ, ನನ್ನ ಕಡೆಗಿರುವ ನಿಮ್ಮ ಆಸಕ್ತಿಯ ಮನಸ್ಸು ಮತ್ತು ತಾನು ನಿಮ್ಮಲ್ಲಿ ಹೊಂದಿದ ಆದರಣೆ ಇವುಗಳನ್ನು ನಮಗೆ ತಿಳಿಸಿದಾಗ ನಾನು ಹೆಚ್ಚಾಗಿ ಸಂತೋಷಪಟ್ಟೆನು. ನಾನು ಪತ್ರದಿಂದ ನಿಮ್ಮನ್ನು ದುಃಖಪಡಿಸಿದಕ್ಕೆ ನನಗೆ ವ್ಯಸನವಾದರೂ ನಾನು ಪಶ್ಚಾತ್ತಾಪಪಡು ವದಿಲ್ಲ, ಯಾಕಂದರೆ ಆ ಪತ್ರಿಕೆಯು ನಿಮ್ಮನ್ನು ದುಃಖ ಪಡಿಸಿದಾಗ್ಯೂ ಅದು ಸ್ವಲ್ಪ ಕಾಲಕ್ಕೆ ಎಂದು ನಾನು ತಿಳಿಯುತ್ತೇನೆ. ಆದರೂ ನಿಮಗೆ ದುಃಖವಾಯಿತೆಂದು ನಾನು ಸಂತೋಷಪಡದೆ ನೀವು ದುಃಖಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಈಗ ಸಂತೋಷ ಪಡುತ್ತೇನೆ; ಯಾಕಂದರೆ ನೀವು ದೇವರ ಚಿತ್ತಾನುಸಾರ ವಾಗಿ ದುಃಖಿಸಿದ್ದರಿಂದ ನಮ್ಮಿಂದ ಯಾವದರಲ್ಲಿಯೂ ನೀವು ನಷ್ಟಪಡಲಿಲ್ಲವಲ್ಲಾ. ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ. ಯಾಕಂದರೆ ದೇವರ ಚಿತ್ತಾನುಸಾರವಾದ ಈ ದುಃಖವು ನಿಮ್ಮಲ್ಲಿ ಎಂಥ ಎಚ್ಚರಿಕೆಯನ್ನೂ ಎಂಥ ನಿರ್ದೋಷತ್ವವನ್ನೂ ಎಂಥ ರೋಷವನ್ನೂ ಎಂಥ ಭಯವನ್ನೂ ಎಂಥ ಅಧಿಕವಾದ ಹಂಬಲವನ್ನೂ ಎಂಥ ಆಸಕ್ತಿಯನ್ನೂ ಎಂಥ ಪ್ರತಿಕಾರವನ್ನೂ ಹುಟ್ಟಿಸಿತೆಂದು ನೋಡಿರಿ. ಇದರಲ್ಲಿ ನೀವೆಲ್ಲಾ ನಿರ್ದೋಷಿಗಳೆಂದು ತೋರಿಸಿಕೊಂ
- 1 Corinthians 5:13 1 ಕೊರಿಂಥದವರಿಗೆ 5:13ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.
- 2 Corinthians 12:21 2 ಕೊರಿಂಥದವರಿಗೆ 12:21ಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
- Ezekiel 9:6 ಯೆಹೆಜ್ಕೇಲನು 9:6ವೃದ್ಧ ಯುವಕ ಯುವತಿ ಯರನ್ನು ಎಳೆಕೂಸುಗಳನ್ನು ಮತ್ತು ಹೆಂಗಸರನ್ನು ಸಂಪೂರ್ಣವಾಗಿ ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ ಅವನ ಹತ್ತಿರ ಹೋಗ ಬೇಡಿರಿ; ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ ಅಂದಾಗ, ಅವರು ಆಲಯದ ಮುಂದಿದ್ದ ಹಿರಿಯರಿಂದ ಪ್ರಾರಂಭಿಸಿದರು.
- Ezekiel 9:4 ಯೆಹೆಜ್ಕೇಲನು 9:4ಕರ್ತನು ಅವನಿಗೆ ಹೇಳಿದ್ದೇನಂದರೆ--ಯೆರೂ ಸಲೇಮಿನ ಪಟ್ಟಣದ ಮಧ್ಯೆ ಹಾದುಹೋಗಿ ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು ಅಂದನು.
- Ezra 9:2–6 ಎಜ್ರನು 9:2–6ಏನಂದರೆ, ಅವರು ತಮಗೂ ತಮ್ಮ ಕುಮಾರರಿಗೂ ಅವರ ಕುಮಾರ್ತೆಯರನ್ನು ತಕ್ಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ; ನಿಶ್ಚಯವಾಗಿ ಪ್ರಧಾನರ, ಅಧಿಕಾರಸ್ಥರ ಕೈ ಈ ಅಕೃತ್ಯದಲ್ಲಿ ಮುಖ್ಯವಾಗಿದೆ ಎಂದು ಹೇಳಿದರು. ನಾನು ಈ ಕಾರ್ಯವನ್ನು ಕೇಳಿದಾಗ ನನ್ನ ವಸ್ತ್ರವನ್ನೂ ನನ್ನ ನಿಲುವಂಗಿಯನ್ನೂ ಹರಿದು ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕಿತ್ತು ಭ್ರಮೆಗೊಂಡು ಕುಳಿತಿದ್ದೆನು. ಆಗ ಸೆರೆಯಾಗಿ ಒಯ್ಯಲ್ಪಟ್ಟು ತಿರುಗಿ ಬಂದವರ ಅಪರಾಧಕ್ಕೋಸ್ಕರ ಇಸ್ರಾಯೇಲ್ ದೇವರ ಮಾತುಗಳಿಗೆ ಹೆದರಿಕೊಂಡಿದ್ದ ಮನುಷ್ಯರೆಲ್ಲರೂ ನನ್ನ ಬಳಿಗೆ ಕೂಡಿ ಬಂದರು. ಆದರೆ ನಾನು ಸಾಯಂಕಾಲದ ಬಲಿಯನ್ನು ಅರ್ಪಿಸುವ ವರೆಗೆ ಭ್ರಮೆಗೊಂಡು ಕುಳಿತುಕೊಂಡಿದ್ದೆನು; ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ ನಾನು ನನ್ನ ಭಾರದಿಂದೆದ್ದು ನನ್ನ ವಸ್ತ್ರವನ್ನೂ ನನ್ನ ನಿಲುವಂಗಿ ಯನ್ನೂ ಹರಿದುಕೊಂಡವನಾಗಿ ನನ್ನ ಮೊಣಕಾಲು ಗಳನ್ನೂರಿ ನನ್ನ ಕೈಗಳನ್ನು ನನ್ನ ದೇವರಾಗಿರುವ ಕರ್ತನ ಮುಂದೆ ಚಾಚಿ ಹೇಳಿದ್ದೇನಂದರೆ-- ನನ್ನ ದೇವರೇ, ನಾನು ನನ್ನ ಮುಖವನ್ನು ನಿನ್ನ ಮುಂದೆ ಎತ್ತುವಹಾಗೆ ಲಜ್ಜೆಯಿಂದ ನಾಚಿಕೆಪಡು ತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಯ ಮೇಲೆ ಹೆಚ್ಚಿದವು; ನಮ್ಮ ಅಪರಾಧವು ಆಕಾಶದ ಪರ್ಯಂತರ ಬೆಳೆಯಿತು.
- 2 Kings 22:19 2 ಅರಸುಗಳು 22:19ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ವಿರೋಧವಾಗಿ ಅವರು ನಾಶವೂ ಶಾಪವೂ ಆಗುವದೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ನಿನ್ನನ್ನು ಕರ್ತನ ಮುಂದೆ ತಗ್ಗಿಸಿ ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದನ್ನು ನಾನೇ ಕೇಳಿದ್ದೇನೆಂದು ಕರ್ತನು ಹೇಳುತ್ತಾನೆ.ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.
- Jeremiah 13:17 ಯೆರೆಮೀಯ 13:17ಆದರೆ ನೀವು ಅದನ್ನು ಕೇಳದೆ ಹೋದರೆ ನನ್ನ ಪ್ರಾಣವು ನಿಮ್ಮ ಗರ್ವದ ನಿಮಿತ್ತ ಅಂತರಂಗದ ಸ್ಥಳಗಳಲ್ಲಿ ಅಳು ವದು. ನನ್ನ ಆತ್ಮವು ಬಹಳವಾಗಿ ದುಃಖಿಸುವದು; ಕಣ್ಣೀರು ಬಹಳವಾಗಿ ಸುರಿಸುವದು; ಕರ್ತನ ಮಂದೆಯು ಸೆರೆಯಾಗಿ ಒಯ್ಯಲ್ಪಟ್ಟಿದೆ.
- Psalm 119:136 ಕೀರ್ತನೆಗಳು 119:136ಅವರು ನಿನ್ನ ನ್ಯಾಯಪ್ರಮಾಣವನ್ನು ಕೈ ಕೊಳ್ಳದ ನಿಮಿತ್ತ ಹೊಳೆಗಳಂತೆ ನನ್ನ ಕಣ್ಣೀರು ಹರಿಯುತ್ತದೆ.
- Ezra 10:1–6 ಎಜ್ರನು 10:1–6ಎಜ್ರನು ಪ್ರಾರ್ಥಿಸಿ ಅರಿಕೆಮಾಡಿ ಅಳುತ್ತಾ ದೇವರ ಆಲಯದ ಮುಂದೆ ಬಿದ್ದಿರಲು ಇಸ್ರಾಯೇಲ್ಯರಲ್ಲಿ ಸ್ತ್ರೀಯರೂ ಪುರುಷರೂ ಮಕ್ಕಳೂ ಮಹಾ ದೊಡ್ಡ ಕೂಟವಾಗಿ ಅವನ ಬಳಿಯಲ್ಲಿ ಕೂಡಿಕೊಂಡರು. ಜನರು ಬಹಳವಾಗಿ ಅತ್ತರು. ಆಗ ಎಲಾಮನ ಕುಮಾರರಲ್ಲಿ ಒಬ್ಬನಾದ ಯೆಹೀಯೇಲನ ಮಗನಾದ ಶೆಕೆನ್ಯನು ಎಜ್ರನಿಗೆ ಪ್ರತ್ತ್ಯುತ್ತರವಾಗಿ--ನಾವು ದೇಶದ ಜನಗಳಲ್ಲಿ ಅನ್ಯ ಸ್ತ್ರೀಯರನ್ನು ತೆಗೆದು ಕೊಂಡದ್ದರಿಂದ ನಮ್ಮ ದೇವರಿಗೆ ವಿರೋಧವಾಗಿ ಅಕೃತ್ಯಮಾಡಿದ್ದೇವೆ. ಆದಾಗ್ಯೂ ಈಗ ಈ ಕಾರ್ಯವನ್ನು ಕುರಿತು ಇಸ್ರಾಯೇಲ್ಯರಲ್ಲಿ ನಿರೀಕ್ಷೆ ಉಂಟು. ಆದ ಕಾರಣ ನನ್ನ ಒಡೆಯನ ಯೋಚನೆಯ ಪ್ರಕಾರವಾ ಗಿಯೂ ನಮ್ಮ ದೇವರ ಆಜ್ಞೆಗೆ ನಡುಗುವವರ ಯೋಚ ನೆಯ ಪ್ರಕಾರವಾಗಿಯೂ ಆ ಸಮಸ್ತ ಸ್ತ್ರೀಯರನ್ನೂ ಅವರಿಂದ ಹುಟ್ಟಿದವರನ್ನೂ ಹೊರಡಿಸಿ ಬಿಡಲು ನಮ್ಮ ದೇವರ ಸಂಗಡ ಒಡಂಬಡಿಕೆ ಮಾಡೋಣ; ಇದು ನ್ಯಾಯಪ್ರಮಾಣದ ಪ್ರಕಾರ ಮಾಡಲ್ಪಡಲಿ. ನೀನು ಏಳು; ಯಾಕಂದರೆ ಈ ಕಾರ್ಯ ನಿನಗೆ ಸಂಬಂಧಿಸಿದೆ. ನಾವು ನಿನ್ನ ಸಂಗಡ ಇರುವೆವು; ಧೈರ್ಯದಿಂದಿರು, ಅದನ್ನು ಮಾಡು ಅಂದರು. ಆಗ ಎಜ್ರನು ಎದ್ದು, ಪ್ರಧಾನಯಾಜಕರೂ ಲೇವಿಯರೂ ಸಮಸ್ತ ಇಸ್ರಾ ಯೇಲ್ಯರೂ ಈ ಮಾತಿನ ಪ್ರಕಾರವಾಗಿ ಮಾಡಲು ಅವರು ಆಣೆ ಇಡುವ ಹಾಗೆ ಮಾಡಿದನು. ಅವರು ಆಣೆ ಇಟ್ಟರು. ಎಜ್ರನು ದೇವರ ಆಲಯದ ಮುಂದಿ ನಿಂದ ಎದ್ದು ಎಲ್ಯಾಷೀಬಿನ ಮಗನಾದ ಯೆಹೋಹಾ ನಾನನ ಕೊಠಡಿಯಲ್ಲಿ ಪ್ರವೇಶಿಸಿ ಅಲ್ಲಿಗೆ ಬಂದಾಗ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಇದ್ದನು; ಯಾಕಂದರೆ ಸೆರೆಯಾಗಿ ಒಯ್ಯಲ್ಪಟ್ಟವರ ಅಕೃತ್ಯಕ್ಕೋಸ್ಕರ ದುಃಖಿಸಿದನು.
- Numbers 25:6 ಅರಣ್ಯಕಾಂಡ 25:6ಇಗೋ, ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬನು ಬಂದು ಮೋಶೆಗೂ ಸಭೆಯ ಗುಡಾರದ ಮುಂದೆ ಅಳುತ್ತಿರುವ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಕಾಣುವ ಹಾಗೆ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್ ಸ್ತ್ರೀಯನ್ನು ತಂದನು.
Original words (Greek)
- And · G2532καί kaí
- ye · G5210ὑμεῖς hymeîs
- are · G2075ἐστέ esté
- up · G5448φυσιόω physióō
- and · G2532καί kaí
- have · G3996πενθέω penthéō
- not · G3780οὐχί ouchí
- rather · G3123μᾶλλον mâllon
- mourned · G3996πενθέω penthéō
- that · G2443ἵνα hína
- done · G4160ποιέω poiéō
- this · G5124τοῦτο toûto
- deed · G2041ἔργον érgon
- away · G1808ἐξαίρω exaírō
- from · G1537ἐκ ek
- among · G3319μέσος mésos
- you · G5216ὑμῶν hymōn