1 Corinthians · chapter 6 · verse 17
1 Corinthians 6:17 in Kannada
ಆದರೆ ಕರ್ತನನ್ನು ಸೇರಿಕೊಳ್ಳುವವನು ಒಂದೇ ಆತ್ಮವಾಗಿದ್ದಾನೆ.
Aadare kartanannu serikolluvavanu onde aatmavaagiddaane.
1 Corinthians 6:17 in English
- King James Version (KJV)
- But he that is joined unto the Lord is one spirit.
- World English Bible (WEB)
- But he who is joined to the Lord is one spirit.
- American Standard Version (ASV)
- But he that is joined unto the Lord is one spirit.
- Bible in Basic English (BBE)
- But he who is united to the Lord is one spirit.
- Darby Translation (DBY)
- But he that [is] joined to the Lord is one Spirit.
- Webster's Bible (WBS)
- But he that is joined to the Lord is one spirit.
- Young's Literal Translation (YLT)
- And he who is joined to the Lord is one spirit;
Read in context
- 15ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳನ್ನು ನಾನು ತೆಗೆದುಬಿಟ್ಟು ಸೂಳೆಯ ಅಂಗಗಳಾಗ ಮಾಡಬಹುದೋ? ಹಾಗೆ ಎಂದಿಗೂ ಆಗಬಾರದು.
- 16ಏನು? ಸೂಳೆಯನ್ನು ಸೇರಿಕೊಳ್ಳುವವನು ಅವಳೊಂದಿಗೆ ಒಂದೇ ದೇಹ ವಾಗಿದ್ದಾನೆಂಬದು ನಿಮಗೆ ತಿಳಿಯದೋ? ಇಬ್ಬರು ಒಂದೇ ಶರೀರವಾಗಿರುವರೆಂದು ಆತನು ಹೇಳು ತ್ತಾನಲ್ಲಾ.
- 17ಆದರೆ ಕರ್ತನನ್ನು ಸೇರಿಕೊಳ್ಳುವವನು ಒಂದೇ ಆತ್ಮವಾಗಿದ್ದಾನೆ.
- 18ಜಾರತ್ವಕ್ಕೆ ದೂರವಾಗಿ ಓಡಿಹೋಗಿರಿ. ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹಕ್ಕೆ ಹೊರತಾಗಿವೆ. ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪವನ್ನು ಮಾಡುತ್ತಾನೆ.
- 19ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
Cross references
- John 17:21–23 ಯೋಹಾನನು 17:21–23ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ. ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರುವಂತೆ ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ. ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ (ಇರುವಂತೆ) ಅವರೂ ಒಂದಾಗಿ ಪರಿಪೂರ್ಣರಾಗಿ ರುವರು; ನೀನು ನನ್ನನ್ನು ಕಳುಹಿಸಿದ್ದೀ ಎಂತಲೂ ನನ್ನನ್ನು ಪ್ರೀತಿ ಮಾಡಿದಂತೆ ಅವರನ್ನು ನೀನು ಪ್ರೀತಿಮಾಡಿದ್ದೀ ಎಂತಲೂ ಲೋಕವು ತಿಳಿದುಕೊಳ್ಳುವದು.
- Galatians 2:20 ಗಲಾತ್ಯದವರಿಗೆ 2:20ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
- 1 Corinthians 12:13 1 ಕೊರಿಂಥದವರಿಗೆ 12:13ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ.
- Ephesians 4:3–4 ಎಫೆಸದವರಿಗೆ 4:3–4ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿ ಕೊಳ್ಳುವದಕ್ಕೆ ಆಸಕ್ತರಾಗಿರ್ರಿ. ನಿಮ್ಮ ಕರೆಯುವಿಕೆಯ ಒಂದೇ ನಿರೀಕ್ಷೆಯಲ್ಲಿ ನೀವು ಕರೆಯಲ್ಪಟ್ಟಂತೆಯೇ ದೇಹವು ಒಂದೇ, ಆತ್ಮನು ಒಬ್ಬನೇ,
- John 3:6 ಯೋಹಾನನು 3:6ಶರೀರದಿಂದ ಹುಟ್ಟಿದ್ದು ಶರೀ ರವೇ; ಆತ್ಮನಿಂದ ಹುಟ್ಟಿದ್ದು ಆತ್ಮವೇ.
- Ephesians 5:30 ಎಫೆಸದವರಿಗೆ 5:30ನಾವು ಆತನ ದೇಹದ ಅಂಗಗಳೂ ಮಾಂಸವೂ ಎಲುಬುಗಳೂ ಆಗಿದ್ದೇವೆ.
- Philippians 2:5 ಫಿಲಿಪ್ಪಿಯವರಿಗೆ 2:5ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿ ಇರಲಿ.