1 Corinthians · chapter 7 · verse 19
1 Corinthians 7:19 in Kannada
ಸುನ್ನತಿಯಾದರೂ ಏನೂ ಇಲ್ಲ, ಸುನ್ನತಿಯಾಗದ್ದಿದರೂ ಏನೂ ಇಲ್ಲ; ಆದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಆಗಿದೆ.
Sunnatiyaadaroo enoo illa, sunnatiyaagaddidaroo enoo illa; aadare devara aajnyegalannu anusarisi nadeyuvade aagide.
1 Corinthians 7:19 in English
- King James Version (KJV)
- Circumcision is nothing, and uncircumcision is nothing, but the keeping of the commandments of God.
- World English Bible (WEB)
- Circumcision is nothing, and uncircumcision is nothing, but what matters is keeping God’s commandments.
- American Standard Version (ASV)
- Circumcision is nothing, and uncircumcision is nothing; but the keeping of the commandments of God.
- Bible in Basic English (BBE)
- Circumcision is nothing, and its opposite is nothing, but only doing the orders of God is of value.
- Darby Translation (DBY)
- Circumcision is nothing, and uncircumcision is nothing; but keeping God's commandments.
- Webster's Bible (WBS)
- Circumcision is nothing, and uncircumcision is nothing, but the keeping of the commandments of God.
- Young's Literal Translation (YLT)
- the circumcision is nothing, and the uncircumcision is nothing — but a keeping of the commands of God.
Read in context
- 17ದೇವರು ಒಬ್ಬೊಬ್ಬನಿಗೆ ಹೇಗೆ ಹಂಚಿಕೊಟ್ಟನೋ ಮತ್ತು ಕರ್ತನು ಒಬ್ಬೊಬ್ಬನನ್ನು ಹೇಗೆ ಕರೆದನೋ ಅದಕ್ಕೆ ತಕ್ಕಂತೆ ನಡೆಯಲಿ; ಹೀಗೆ ನಾನು ಎಲ್ಲಾ ಸಭೆಗಳಲ್ಲಿಯೂ ನೇಮಕಮಾಡುತ್ತೇನೆ.
- 18ಸುನ್ನತಿ ಯಲ್ಲಿದ್ದು ಕರೆಯಲ್ಪಟ್ಟವನು ಯಾವನಾದರೂ ಇದ್ದಾನೋ? ಅವನು ಸುನ್ನತಿ ಇಲ್ಲದವನಂತಾಗ ಬಾರದು; ಸುನ್ನತಿ ಇಲ್ಲದೆ ಕರೆಯಲ್ಪಟ್ಟವನು ಯಾವ ನಾದರೂ ಇದ್ದಾನೋ? ಅವನು ಸುನ್ನತಿ ಮಾಡಿಸಿ ಕೊಳ್ಳಬಾರದು.
- 19ಸುನ್ನತಿಯಾದರೂ ಏನೂ ಇಲ್ಲ, ಸುನ್ನತಿಯಾಗದ್ದಿದರೂ ಏನೂ ಇಲ್ಲ; ಆದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಆಗಿದೆ.
- 20ದೇವರು ಕರೆದಾಗ ಪ್ರತಿಯೊಬ್ಬನು ಯಾವ ಸ್ಥಿತಿಯಲ್ಲಿದ್ದನೋ ಆ ಸ್ಥಿತಿಯಲ್ಲಿಯೇ ಇರಬೇಕು.
- 21ಕರೆಯಲ್ಪಟ್ಟಾಗ ನೀನು ದಾಸನಾಗಿದ್ದೀಯೋ? ಅದಕ್ಕೆ ಚಿಂತಿಸಬೇಡ. ಆದರೆ ನೀನು ಸ್ವತಂತ್ರ ನಾಗುವದಾದರೆ ಅದು ಉತ್ತಮ.
Cross references
- Galatians 5:6 ಗಲಾತ್ಯದವರಿಗೆ 5:6ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
- Galatians 6:15 ಗಲಾತ್ಯದವರಿಗೆ 6:15ಕ್ರಿಸ್ತ ಯೇಸುವಿನಲ್ಲಿ ಸುನ್ನತಿಯಾಗುವದರಿಂದ ಏನೂ ಪ್ರಯೋಜನವಿಲ್ಲ, ಸುನ್ನತಿಯಾಗದೆ ಇರುವದ ರಿಂದಲೂ ಏನೂ ಪ್ರಯೋಜನವಿಲ್ಲ; ಆದರೆ ಹೊಸ ಸೃಷ್ಟಿಯೇ ಬೇಕು.
- 1 John 2:3–4 1 ಯೋಹಾನನು 2:3–4ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆಯು ವದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳು ಕೊಳ್ಳುತ್ತೇವೆ. ಒಬ್ಬನು--ನಾನು ಆತನನ್ನು ಬಲ್ಲೆನೆಂದು ಹೇಳಿ ಆತನ ಆಜ್ಞೆಗಳನ್ನು ಕೈಕೊಳ್ಳದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ; ಸತ್ಯವು ಅವನಲ್ಲಿ ಇಲ್ಲ.
- Romans 2:25–29 ರೋಮಾಪುರದವರಿಗೆ 2:25–29ನೀನು ನ್ಯಾಯಪ್ರಮಾಣವನ್ನು ಕೈಕೊಂಡರೆ ಸುನ್ನತಿಯು ನಿಜವಾಗಿಯೂ ಪ್ರಯೋಜನವಾದದ್ದೇ. ಆದರೆ ನೀನು ನ್ಯಾಯಪ್ರಮಾಣವನ್ನು ವಿಾರುವದಾದರೆ ನಿನ್ನ ಸುನ್ನತಿಯು ಸುನ್ನತಿ ಅಲ್ಲ. ಆದದರಿಂದ ಸುನ್ನತಿಯಿಲ್ಲದವನು ನ್ಯಾಯ ಪ್ರಮಾಣದ ನೀತಿಯನ್ನು ಕೈಕೊಂಡರೆ ಸುನ್ನತಿಯಿಲ್ಲದವನಾದ ಅವನಿಗೆ ಅದು ಸುನ್ನತಿಯೆಂದು ಎಣಿಸಲ್ಪಡುವದಿಲ್ಲವೋ? ಸ್ವಾಭಾವಿಕವಾಗಿ ಸುನ್ನತಿಯಿಲ್ಲದವನಾಗಿದ್ದು ನ್ಯಾಯಪ್ರಮಾಣ ವನ್ನು ನೆರವೇರಿಸುವದಾದರೆ ನ್ಯಾಯಪ್ರಮಾಣವೂ ಸುನ್ನತಿಯೂ ಇದ್ದು ನ್ಯಾಯಪ್ರಮಾಣವನ್ನು ವಿಾರಿ ನಡೆಯುವ ನಿನಗೆ ಅವನು ತೀರ್ಪು ಮಾಡುವ ದಿಲ್ಲವೋ? ಹೊರಗೆ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಹೊರಗೆ ಶರೀರದಲ್ಲಿ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು. ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
- 1 John 3:22–24 1 ಯೋಹಾನನು 3:22–24ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ. ಆತನ ಆಜ್ಞೆ ಯಾವದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಆತನು ನಮಗೆ ಆಜ್ಞೆಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು. ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
- Colossians 3:11 ಕೊಲೊಸ್ಸೆಯವರಿಗೆ 3:11ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.
- Revelation 22:14 ಪ್ರಕಟನೆ 22:14ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.
- 1 Corinthians 8:8 1 ಕೊರಿಂಥದವರಿಗೆ 8:8ಆದರೆ ಆಹಾರವು ನಮ್ಮನ್ನು ದೇವರಿಗೆ ಮೆಚ್ಚಿಕೆಯಾದವರನ್ನಾಗಿ ಮಾಡಲಾರದು; ಯಾಕಂದರೆ ನಾವು ತಿಂದರೆ ನಮ ಗೇನೂ ಹೆಚ್ಚಾಗುವದಿಲ್ಲ; ಇಲ್ಲವೆ ನಾವು ತಿನ್ನದಿದ್ದರೆ ನಮಗೇನೂ ಕಡಿಮೆಯಿಲ್ಲ.
- Jeremiah 7:22–23 ಯೆರೆಮೀಯ 7:22–23ನಾನು ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ ದಿನದಲ್ಲಿ ದಹನ ಬಲಿಗಳ ಮತ್ತು ಬಲಿಗಳ ಕುರಿತು ಅವರ ಸಂಗಡ ಮಾತಾಡಲಿಲ್ಲ, ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ. ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.
- Matthew 5:19 ಮತ್ತಾಯನು 5:19ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು.
- Romans 3:30 ರೋಮಾಪುರದವರಿಗೆ 3:30ದೇವರು ಒಬ್ಬನೇ ಆಗಿರಲಾಗಿ ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸು ವದಕ್ಕೆ ಅವರ ನಂಬಿಕೆಯಿಂದಲೇ. ಸುನ್ನತಿಯಿಲ್ಲ ದವರನ್ನು ಹಾಗೆಯೇ ನಿರ್ಣಯಿಸುವದು ನಂಬಿಕೆಯ ಮೂಲಕವೇ.ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
- Galatians 3:28 ಗಲಾತ್ಯದವರಿಗೆ 3:28ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.