1 Corinthians · chapter 9 · verse 21
1 Corinthians 9:21 in Kannada
(ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು.
(naanu devara nyaayapramaanavilladava nantalla, kristana nyaayapramaanakke olagaadavane;) nyaayapramaanavilladavarannu sampaadisikollu vadakkaagi avarige nyaayapramaanavilladava nanteyoo aadenu.
1 Corinthians 9:21 in English
- King James Version (KJV)
- To them that are without law, as without law, (being not without law to God, but under the law to Christ,) that I might gain them that are without law.
- World English Bible (WEB)
- to those who are without law, as without law (not being without law toward God, but under law toward Christ), that I might win those who are without law.
- American Standard Version (ASV)
- to them that are without law, as without law, not being without law to God, but under law to Christ, that I might gain them that are without law.
- Bible in Basic English (BBE)
- To those without the law I was as one without the law, not as being without law to God, but as under law to Christ, so that I might give the good news to those without the law.
- Darby Translation (DBY)
- to those without law, as without law, (not as without law to God, but as legitimately subject to Christ,) in order that I might gain [those] without law.
- Webster's Bible (WBS)
- To them that are without law, as without law, (being not without law to God, but under the law to Christ,) that I might gain them that are without law.
- Young's Literal Translation (YLT)
- to those without law, as without law — (not being without law to God, but within law to Christ) — that I might gain those without law;
Read in context
- 19ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ.
- 20ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ
- 21(ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು.
- 22ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ.
- 23ನಾನು ನಿಮ್ಮೊಂದಿಗೆ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಸುವಾರ್ತೆ ಗೋಸ್ಕರವೇ ಇದನ್ನು ಮಾಡುತ್ತೇನೆ.
Cross references
- Romans 2:12 ರೋಮಾಪುರದವರಿಗೆ 2:12ನ್ಯಾಯ ಪ್ರಮಾಣವಿಲ್ಲದೆ ಪಾಪ ಮಾಡಿದವರೆಲ್ಲರೂ ನ್ಯಾಯ ಪ್ರಮಾಣವಿಲ್ಲದೆ ನಾಶವಾಗುವರು; ನ್ಯಾಯಪ್ರಮಾಣ ವುಳ್ಳವರಾಗಿದ್ದು ಪಾಪ ಮಾಡಿದವರು ನ್ಯಾಯಪ್ರಮಾ ಣದಿಂದಲೇ ತೀರ್ಪು ಹೊಂದುವರು.
- Romans 2:14 ರೋಮಾಪುರದವರಿಗೆ 2:14ನ್ಯಾಯಪ್ರಮಾಣವಿಲ್ಲದ ಅನ್ಯಜನರು ನ್ಯಾಯಪ್ರಮಾಣದಲ್ಲಿರುವವುಗಳನ್ನು ಸ್ವಾಭಾವಿಕವಾಗಿ ಕೈಕೊಳ್ಳುವಾಗ ನ್ಯಾಯಪ್ರಮಾಣವಿಲ್ಲದ ಇವರು ತಮಗೆ ತಾವೇ ನ್ಯಾಯಪ್ರಮಾಣವಾಗಿದ್ದಾರೆ.
- Galatians 3:2 ಗಲಾತ್ಯದವರಿಗೆ 3:2ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ಆತ್ಮನನ್ನು ಹೊಂದಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ? ಇಲ್ಲವೆ ಕೇಳಿ ನಂಬಿದ್ದ ರಿಂದಲೋ?
- Matthew 5:17–20 ಮತ್ತಾಯನು 5:17–20ನ್ಯಾಯಪ್ರಮಾಣವನ್ನಾಗಲೀ ಪ್ರವಾದನೆಗಳ ನ್ನಾಗಲೀ ಹಾಳುಮಾಡುವದಕ್ಕಾಗಿ ನಾನು ಬಂದೆ ನೆಂದು ನೆನಸಬೇಡಿರಿ, ಹಾಳುಮಾಡುವದಕ್ಕಾಗಿ ಅಲ್ಲ; ಆದರೆ ನೆರವೇರಿಸುವದಕ್ಕಾಗಿ ಬಂದೆನು. ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು. ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ.
- 1 Corinthians 7:19–22 1 ಕೊರಿಂಥದವರಿಗೆ 7:19–22ಸುನ್ನತಿಯಾದರೂ ಏನೂ ಇಲ್ಲ, ಸುನ್ನತಿಯಾಗದ್ದಿದರೂ ಏನೂ ಇಲ್ಲ; ಆದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಆಗಿದೆ. ದೇವರು ಕರೆದಾಗ ಪ್ರತಿಯೊಬ್ಬನು ಯಾವ ಸ್ಥಿತಿಯಲ್ಲಿದ್ದನೋ ಆ ಸ್ಥಿತಿಯಲ್ಲಿಯೇ ಇರಬೇಕು. ಕರೆಯಲ್ಪಟ್ಟಾಗ ನೀನು ದಾಸನಾಗಿದ್ದೀಯೋ? ಅದಕ್ಕೆ ಚಿಂತಿಸಬೇಡ. ಆದರೆ ನೀನು ಸ್ವತಂತ್ರ ನಾಗುವದಾದರೆ ಅದು ಉತ್ತಮ. ಯಾವನು ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನಿಂದ ಸ್ವತಂತ್ರನು; ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದು ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.
- Galatians 5:13–14 ಗಲಾತ್ಯದವರಿಗೆ 5:13–14ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ನ್ಯಾಯಪ್ರಮಾಣವೆಲಾ ನೆರವೇರುತ್ತದೆ.
- Titus 2:2–12 ತೀತನಿಗೆ 2:2–12ಹೇಗೆಂದರೆ, ವೃದ್ಧರು ಸ್ವಸ್ಥಚಿತ್ತರಾಗಿರುವವರೂ ಗೌರವವುಳ್ಳವರೂ ಜಿತೇಂದ್ರಿಯರೂ ನಂಬಿಕೆ ಪ್ರೀತಿ ತಾಳ್ಮೆ ಇವುಗಳಲ್ಲಿ ಸ್ವಸ್ಥತೆಯುಳ್ಳವರೂ ಆಗಿರಬೇಕೆಂದು ಹೇಳು. ಅದೇ ಪ್ರಕಾರ ವೃದ್ಧಸ್ತ್ರೀಯರು ನಡತೆಯಲ್ಲಿ ಪರಿಶುದ್ಧತೆಗೆ ತಕ್ಕ ಹಾಗೆ ಇರುವವರಾಗಿದ್ದು ಸುಳ್ಳಾಗಿ ದೂರುವವರೂ ಹೆಚ್ಚಾಗಿ ಮದ್ಯಪಾನ ಮಾಡುವವರೂ ಆಗಿರದೆ ಇದಲ್ಲದೆ ದೇವರ ವಾಕ್ಯವು ದೂಷಿಸಲ್ಪ ಡದಂತೆ ಯೌವನ ಸ್ತ್ರೀಯರು ಸ್ವಸ್ಥಚಿತ್ತರೂ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ ವಿವೇಕವುಳ್ಳವರೂ ಪತಿವ್ರತೆಯರೂ ಮನೆಯನ್ನು ನೋಡಿಕೊಳ್ಳುವವರೂ ಒಳ್ಳೆಯವರೂ ತಮ್ಮ ಗಂಡಂದಿ ರಿಗೆ ವಿಧೇಯರೂ ಆಗಿರಬೇಕೆಂದು ಅವರಿಗೆ ಹೇಳು. ಹಾಗೆಯೇ ಯೌವನಸ್ಥರು ಸ್ವಸ್ಥಚಿತ್ತರಾಗಿರಬೇಕೆಂದು ಅವರನ್ನು ಎಚ್ಚರಿಸು. ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯಗಳ ಮಾದರಿಯಾಗಿ ತೋರಿಸಿಕೊಂಡು ಬೋಧನೆಯಲ್ಲಿ ನಿರ್ಮಲತ್ವವನ್ನೂ ಗೌರವವನ್ನೂ ಯಥಾರ್ಥತೆಯನ್ನೂ ಖಂಡಿಸಲಾಗದಂಥ ಸ್ವಸ್ಥವಾದ ಮಾತನ್ನೂ ತೋರಿಸು; ಇದರಿಂದ ವಿರೋಧಪಕ್ಷ ದವನು ನಿಮ್ಮ ವಿಷಯದಲ್ಲಿ ಕೆಟ್ಟದ್ದು ಹೇಳುವದಕ್ಕೆ ಯಾವದೂ ಇಲ್ಲದೆ ನಾಚಿಕೆಪಡುವನು. ಸೇವಕರು ತಮ್ಮ ಸ್ವಂತ ಯಾಜಮಾನರಿಗೆ ವಿಧೇಯರಾಗಿದ್ದು ಎಲ್ಲವು ಗಳಲ್ಲಿ ಅವರನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡುತ್ತಾ ಎದುರು ಮಾತನ್ನಾಡದೆ ಯಾವದನ್ನೂ ಕದ್ದಿಟ್ಟು ಕೊಳ್ಳದೆ ಪೂರಾ ನಂಬಿಗಸ್ತರೆಂದು ತೋರಿಸಿಕೊಂಡು ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯ ಗಳಲ್ಲಿ ಅಲಂಕಾರವಾಗಿರಬೇಕೆಂದು ಎಚ್ಚರಿಸು. ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು. ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ.
- Galatians 2:12–14 ಗಲಾತ್ಯದವರಿಗೆ 2:12–14ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು. ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟಮಾಡಿದರು; ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು. ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ
- Galatians 5:22–23 ಗಲಾತ್ಯದವರಿಗೆ 5:22–23ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ.
- Acts 16:4 ಅಪೊಸ್ತಲರ ಕೃತ್ಯಗಳು 16:4ಅವರು ಪಟ್ಟಣಗಳಲ್ಲಿ ಸಂಚಾರ ಮಾಡುತ್ತಾ ಯೆರೂಸಲೇಮಿನಲ್ಲಿದ್ದ ಅಪೊಸ್ತಲರಿಂದಲೂ ಹಿರಿಯ ರಿಂದಲೂ ನೇಮಿಸಲ್ಪಟ್ಟ ವಿಧಿಗಳನ್ನು ಅನುಸರಿಸುವಂತೆ ಅವರಿಗೆ ಒಪ್ಪಿಸಿದರು.
- Romans 7:22 ರೋಮಾಪುರದವರಿಗೆ 7:22ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ.
- Galatians 2:3–4 ಗಲಾತ್ಯದವರಿಗೆ 2:3–4ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಬಲಾತ್ಕಾರ ಮಾಡ ಲಿಲ್ಲ. ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋ ದರರು ನಮ್ಮನ್ನು ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯ ವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.