1 John · chapter 1 · verse 4
1 John 1:4 in Kannada
ನಿಮ್ಮ ಸಂತೋಷವು ಪರಿಪೂರ್ಣ ವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತೇವೆ.
Nimma santoshavu paripoorna vaagabekendu naavu ivugalannu bareyutteve.
1 John 1:4 in English
- King James Version (KJV)
- And these things write we unto you, that your joy may be full.
- World English Bible (WEB)
- And we write these things to you, that our joy may be fulfilled.
- American Standard Version (ASV)
- and these things we write, that our joy may be made full.
- Bible in Basic English (BBE)
- And we are writing these things to you so that our joy may be made complete.
- Darby Translation (DBY)
- And these things write we to you that your joy may be full.
- Webster's Bible (WBS)
- And these things we write to you, that your joy may be full.
- Young's Literal Translation (YLT)
- and these things we write to you, that your joy may be full.
Read in context
- 2(ಆ ಜೀವವು ಪ್ರತ್ಯಕ್ಷವಾಯಿತು, ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ).
- 3ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು.
- 4ನಿಮ್ಮ ಸಂತೋಷವು ಪರಿಪೂರ್ಣ ವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತೇವೆ.
- 5ನಾವು ಆತನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವದಂದರೆ--ದೇವರು ಬೆಳಕಾಗಿದ್ದಾನೆ; ಆತನಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ ಎಂಬದೇ.
- 6ನಾವು ಆತನ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುವವರಲ್ಲ.
Cross references
- John 15:11 ಯೋಹಾನನು 15:11ನನ್ನ ಆನಂದವು ನಿಮ್ಮಲ್ಲಿರುವ ಹಾಗೆಯೂ ನಿಮ್ಮ ಆನಂದವು ಸಂಪೂರ್ಣವಾಗುವ ಹಾಗೆಯೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.
- John 16:24 ಯೋಹಾನನು 16:24ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಬೇಡಿಕೊಳ್ಳಲಿಲ್ಲ; ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.
- 2 John 1:12 2 ಯೋಹಾನನು 1:12ನಿಮಗೆ ಬರೆಯುವದಕ್ಕೆ ನನಗೆ ಅನೇಕ ವಿಷಯಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆಯುವದಕ್ಕೆ ನನಗೆ ಮನಸ್ಸಿಲ್ಲ. ಆದರೆ ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾ ಮುಖಿಯಾಗಿ ಮಾತನಾಡುವೆನೆಂದು ನಂಬುತ್ತೇನೆ; ಆಗ ನಮ್ಮ ಸಂತೋಷವು ಪರಿಪೂರ್ಣವಾಗುವದು.ಆಯಲ್ಪಟ್ಟ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ. ಆಮೆನ್.
- 2 Corinthians 1:24 2 ಕೊರಿಂಥದವರಿಗೆ 1:24ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.
- Habakkuk 3:17–18 ಹಬಕ್ಕೂಕ 3:17–18ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ ನಾನು ಕರ್ತನಲ್ಲಿ ಸಂತೋಷಿ ಸುವೆನು, ನನ್ನ ರಕ್ಷಣೆಯ ದೇವರಲ್ಲಿ ಉಲ್ಲಾಸಪಡು ವೆನು.ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
- Ephesians 3:19 ಎಫೆಸದವರಿಗೆ 3:19ಜ್ಞಾನಕ್ಕೆ ವಿಾರುವ ಕ್ರಿಸ್ತನ ಪ್ರೀತಿ ಯನ್ನು ತಿಳಿದುಕೊಂಡು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆಯೂ ನಿಮಗೆ ದಯ ಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.
- John 3:29 ಯೋಹಾನನು 3:29ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು.
- Philippians 1:25–26 ಫಿಲಿಪ್ಪಿಯವರಿಗೆ 1:25–26ಆದದರಿಂದ ನಿಮಗೆ ನಂಬಿಕೆಯಲ್ಲಿ ಅಭಿವೃದ್ಧಿಯೂ ಸಂತೋಷವೂ ಉಂಟಾಗುವದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿ ದ್ದೇನೆ. ಹೀಗೆ ನಾನು ತಿರಿಗಿ ನಿಮ್ಮ ಬಳಿಗೆ ಬರುವದರಿಂದ ನನ್ನ ವಿಷಯವಾದ ನಿಮ್ಮ ಸಂತೋಷವು ಯೇಸು ಕ್ರಿಸ್ತನಲ್ಲಿ ನಮಗೆ ಅತ್ಯಧಿಕವಾಗಿರುವದು.
- Isaiah 61:10 ಯೆಶಾಯ 61:10ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.