1 John · chapter 2 · verse 23
1 John 2:23 in Kannada
ಯಾವನು ಮಗನನ್ನು ಅಲ್ಲಗಳೆ ಯುವನೋ ಅವನು ತಂದೆಗೆ ಸೇರಿದವನಲ್ಲ; ಯಾವನು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಗೂ ಸೇರಿದವನಾಗಿದ್ದಾನೆ.
Yaavanu maganannu allagale yuvano avanu tandege seridavanalla; yaavanu maganannu oppikolluvano avanu tandegoo seridavanaagiddaane.
1 John 2:23 in English
- King James Version (KJV)
- Whosoever denieth the Son, the same hath not the Father: [[but] he that acknowledgeth the Son hath the Father also].
- World English Bible (WEB)
- Whoever denies the Son doesn’t have the Father. He who confesses the Son has the Father also.
- American Standard Version (ASV)
- Whosoever denieth the Son, the same hath not the Father: he that confesseth the Son hath the Father also.
- Bible in Basic English (BBE)
- He who has no belief in the Son has not the Father: he who makes clear his belief in the Son has the Father.
- Darby Translation (DBY)
- Whoever denies the Son has not the Father either; he who confesses the Son has the Father also.
- Webster's Bible (WBS)
- Whoever denieth the Son, the same hath not the Father: [but] he that acknowledgeth the Son hath the Father also.
- Young's Literal Translation (YLT)
- every one who is denying the Son, neither hath he the Father, [he who is confessing the Son hath the Father also.]
Read in context
- 21ನೀವು ಸತ್ಯವನ್ನು ತಿಳಿಯದವರೆಂತಲ್ಲ, ನೀವು ಅದನ್ನು ತಿಳಿದಿರು ವದರಿಂದಲೂ ಯಾವ ಸುಳ್ಳೂ ಸತ್ಯಕ್ಕೆ ಸಂಬಂಧವಾದ ದ್ದಲ್ಲವೆಂದು ನೀವು ತಿಳಿದವರಾಗಿರುವದರಿಂದಲೂ ನಿಮಗೆ ಬರೆದೆನು.
- 22ಯೇಸುವು ಕ್ರಿಸ್ತನೆಂದು ಅಲ್ಲಗಳೆಯುವವನೇ ಹೊರತು ಸುಳ್ಳುಗಾರನು ಯಾರು? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನೇ ಕ್ರಿಸ್ತವಿರೋಧಿ ಯಾಗಿದ್ದಾನೆ.
- 23ಯಾವನು ಮಗನನ್ನು ಅಲ್ಲಗಳೆ ಯುವನೋ ಅವನು ತಂದೆಗೆ ಸೇರಿದವನಲ್ಲ; ಯಾವನು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಗೂ ಸೇರಿದವನಾಗಿದ್ದಾನೆ.
- 24ನೀವಂತೂ ಯಾವದನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿ ರುತ್ತೀರಿ.
- 25ನಿತ್ಯಜೀವದ ವಾಗ್ದಾನವೇ ಆತನು ನಮಗೆ ಮಾಡಿದ ವಾಗ್ದಾನವಾಗಿದೆ.
Cross references
- 1 John 4:15 1 ಯೋಹಾನನು 4:15ಯೇಸು ದೇವರ ಮಗನಾಗಿ ದ್ದಾನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.
- John 8:19 ಯೋಹಾನನು 8:19ತರುವಾಯ ಅವರು ಆತನಿಗೆ--ನಿನ್ನ ತಂದೆ ಎಲ್ಲಿ ಅಂದರು. ಅದಕ್ಕೆ ಯೇಸು ಪ್ರತ್ಯುತ್ತರ ವಾಗಿ--ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ನೀವು ಅರಿತಿಲ್ಲ; ನೀವು ನನ್ನನ್ನು ಅರಿತುಕೊಂಡಿದ್ದರೆ ನನ್ನ ತಂದೆಯನ್ನು ಸಹ ಅರಿತುಕೊಳ್ಳುತ್ತಿದ್ದಿರಿ ಅಂದನು.
- John 5:23 ಯೋಹಾನನು 5:23ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.
- John 10:30 ಯೋಹಾನನು 10:30ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
- 2 John 1:9–11 2 ಯೋಹಾನನು 1:9–11ಕ್ರಿಸ್ತನ ಬೋಧನೆಯಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿ ಸುವವನಿಗೆ ದೇವರಿಲ್ಲ; ಕ್ರಿಸ್ತನ ಬೋಧನೆಯಲ್ಲಿ ನೆಲೆ ಗೊಂಡಿರುವವನಿಗೆ ತಂದೆಯೂ ಮಗನೂ ಇದ್ದಾರೆ. ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ. ಅವನಿಗೆ ವಂದನೆ ಎಂದು ಹೇಳುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.
- John 15:23–24 ಯೋಹಾನನು 15:23–24ನನ್ನನ್ನು ದ್ವೇಷಮಾಡುವವನು ನನ್ನ ತಂದೆಯನ್ನು ಸಹ ದ್ವೇಷಮಾಡುತ್ತಾನೆ. ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ.
- 1 John 5:1 1 ಯೋಹಾನನು 5:1ಯೇಸುವು ಕ್ರಿಸ್ತನಾಗಿದ್ದಾನೆಂದು ನಂಬುವ ಯಾವನಾದರೂ ದೇವರಿಂದ ಹುಟ್ಟಿದವನಾಗಿದ್ದಾನೆ; ತನ್ನನ್ನು ಹುಟ್ಟಿಸಿದಾತನನ್ನು ಪ್ರೀತಿ ಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನನ್ನು ಸಹ ಪ್ರೀತಿಸುತ್ತಾನೆ.
- John 14:9–10 ಯೋಹಾನನು 14:9–10ಯೇಸು ಅವನಿಗೆ--ಫಿಲಿಪ್ಪನೇ, ನಾನು ನಿಮ್ಮ ಸಂಗಡ ಇಷ್ಟು ಕಾಲ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲವೋ? ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ; ಹಾಗಾದರೆ ತಂದೆಯನ್ನು ನಮಗೆ ತೋರಿಸು ಎಂದು ನೀನು ಹೇಳುವದು ಹೇಗೆ? ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವದಿಲ್ಲ; ಆದರೆ ನನ್ನಲ್ಲಿ ವಾಸಿಸುತ್ತಿರುವ ತಂದೆಯೇ ಆ ಕಾರ್ಯಗಳನ್ನು ಮಾಡುತ್ತಾನೆ.
- Luke 10:22 ಲೂಕನು 10:22ಎಲ್ಲವುಗಳು ನನ್ನ ತಂದೆಯಿಂದ ನನಗೆ ಒಪ್ಪಿಸಲ್ಪಟ್ಟಿವೆ; ತಂದೆಯ ಹೊರತು ಯಾರೂ ಮಗನನ್ನು ಅರಿಯರು. ಮಗನೂ ತಾನು ಯಾರಿಗೆ ತಂದೆಯನ್ನು ಪ್ರಕಟಮಾಡುವನೋ ಅವನೂ ಅಲ್ಲದೆ ಆತನನ್ನು (ತಂದೆಯನ್ನು) ಯಾರೂ ಅರಿತವರಲ್ಲ.
- Matthew 11:27 ಮತ್ತಾಯನು 11:27ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ
- 1 John 2:22 1 ಯೋಹಾನನು 2:22ಯೇಸುವು ಕ್ರಿಸ್ತನೆಂದು ಅಲ್ಲಗಳೆಯುವವನೇ ಹೊರತು ಸುಳ್ಳುಗಾರನು ಯಾರು? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನೇ ಕ್ರಿಸ್ತವಿರೋಧಿ ಯಾಗಿದ್ದಾನೆ.